ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಆತ್ಮಹತ್ಯೆ ಮಾಡಿಕೊಂಡವರ ಕುಟುಂಬಕ್ಕೆ ಆರ್. ಅಶೋಕ್ ಸಾಂತ್ವನ
ಮೈಕ್ರೋ ಫೈನಾನ್ಸ್ ಹಾವಳಿಯಿಂದ ಕೊನ್ನಾಪುರದಲ್ಲಿ ತಾಯಿ-ಮಗ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದ ಹಿನ್ನೆಲೆಯಲ್ಲಿ ಪ್ರತಿಪಕ್ಷ ನಾಯಕ ಆರ್. ಅಶೋಕ್ ಸ್ಥಳಕ್ಕೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. 2018ರಲ್ಲಿ ಉಜ್ಜೀವನ್ ಬ್ಯಾಂಕ್ ನಲ್ಲಿ ಪ್ರೇಮಾ ಎಂಬವರು 6 ಲಕ್ಷ ರೂ. ಸಾಲ ಪಡೆದಿದ್ದು, ಮೂರು ತಿಂಗಳ ಕಂತು ಕಟ್ಟದ ಹಿನ್ನೆಲೆಯಲ್ಲಿ ಮನೆ ಸೀಜ್ ಮಾಡಲಾಗಿತ್ತು. ಇದರಿಂದ ಮನನೊಂದು ಪ್ರೇಮಾ ಆತ್ಮಹತ್ಯೆ ಮಾಡಿಕೊಂಡಿದ್ದರು. ತಾಯಿ ಸಾವಿನಿಂದ ನೊಂದ ಮಗ ರಂಜಿತ್ ಕೂಡ ಕೆರೆಗೆ
ಕ್ರೀಡಾಂಗಣಗಳು-ಗರಡಿ ಮನೆಗಳು ಹೆಚ್ಚಾಗಿರುವುದು ಆರೋಗ್ಯಕರ ಊರಿನ ಲಕ್ಷಣ: ಕೆವಿಪಿ
ಯಾವುದೇ ಊರಲ್ಲಿ ಆಸ್ಪತ್ರೆ-ಮೆಡಿಕಲ್ ಶಾಪ್ ಗಳಿಗಿಂತ ಕ್ರೀಡಾಂಗಣಗಳು-ಗರಡಿ ಮನೆಗಳು ಹೆಚ್ಚಾಗಿದ್ದರೆ ಅದು ಆರೋಗ್ಯಕರ ಊರಿನ ಲಕ್ಷಣ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಹೇಳಿದ್ದಾರೆ. ಹಾಸನದ ಅರಕಲಗೂಡಿನಲ್ಲಿ ಶ್ರೀ ರಾಘವೇಂದ್ರ ಯೂತ್ ಆಂಡ್ ಸ್ಪೋರ್ಟ್ಸ್ ಕ್ಲಬ್ ಆಯೋಜಿಸಿದ್ದ “ಸಿದ್ದರಾಮಯ್ಯ ಕಪ್” ಸೀಸನ್
ಆಸಾರಾಂನ ಬೆಂಬಲಿಗರ ಪುಂಡಾಟಿಕೆ: ಡಿಸ್ಕವರಿ ಚಾನೆಲ್ಗೆ ರಕ್ಷಣೆ ಒದಗಿಸಲು ರಾಜ್ಯಗಳಿಗೆ ಸುಪ್ರೀಂ ಆದೇಶ
ನವದೆಹಲಿ: ಡಿಸ್ಕವರಿ ಚಾನೆಲ್ನ ಸಿಬ್ಬಂದಿ ಮತ್ತು ಕಚೇರಿಗಳಿಗೆ ಸೂಕ್ತ ಭದ್ರತೆ ಒದಗಿಸುವಂತೆ ಪೊಲೀಸರಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಸ್ವಯಂಘೋಷಿತ ಬಾಬಾ ಅಸಾರಾಂ ಬಾಪು ಅವರ ಬೆಂಬಲಿಗರು ಬೆದರಿಕೆ ಹಾಕುತ್ತಿರುವ ಹಿನ್ನೆಲೆಯಲ್ಲ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ. ಜನವರಿ 25ರಂದು
ವಿಶ್ವ ಆರೋಗ್ಯ ಸಂಸ್ಥೆಯಿಂದ ಹೊರನಡೆದ ಅರ್ಜೆಂಟೀನಾ
ಅಮರಿಕ ಬೆನ್ನಲ್ಲೇ ವಿಶ್ವ ಆರೋಗ್ಯ ಸಂಸ್ಥೆಯಿಂದ ಅರ್ಜೆಂಟೀನಾ ಕೂಡ ಹೊರ ಬಂದಿದೆ. ಈ ಮೂಲಕ ಅಮೆರಿಕ ಹಾದಿ ಹಿಡಿದಿದೆ. ಕೋವಿಡ್ -19 ಸಾಂಕ್ರಾಮಿಕ ರೋಗದ ನಿರ್ವಹಣೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಎಡವಿದೆ ಎಂಬ ನೆಪ ನೀಡಿ ಅರ್ಜೆಂಟೀನ ಈ ನಿರ್ಧಾರ ಕೈಗೊಂಡಿದೆ.
ಕುಮಾರಸ್ವಾಮಿ ಕುಟುಂಬದ ಅತಿಕ್ರಮಿತ ಭೂಮಿ ಮರಳಿಸಲು ಕೋರ್ಟ್ ಮೊರೆ: ಎಸ್.ಆರ್. ಹೀರೇಮಠ
ರಾಮನಗರ ತಾಲೂಕಿನ ಬಿಡದಿ ಹೋಬಳಿಯ ಕೇತನಾಗನಹಳ್ಳಿಯಲ್ಲಿ 71.39 ಎಕರೆ ಗೋಮಾಳ ಜಮೀನನ್ನು ಕೇಂದ್ರ ಸಚಿವ ಕುಮಾರಸ್ವಾಮಿ ಹಾಗೂ ಅವರ ಸಂಬಂಧಿ ಸಾವಿತ್ರಮ್ಮ, ಮಂಜುನಾಥ, ಡಿ.ಸಿ.ತಮ್ಮಣ್ಣ ಹಾಗೂ ಕುಟುಂಬದವರು ಅತಿಕ್ರಮಣ ಮಾಡಿಕೊಂಡಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಎಸ್. ಆರ್. ಹಿರೇಮಠ ಹೇಳಿದರು ನಗರದ
ಮೆಟ್ರೋ ಪ್ರಯಾಣ ದರದಲ್ಲಿ ಹಸ್ತಕ್ಷೇಪ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು: ಮೆಟ್ರೋ ಪ್ರಯಾಣ ದರ ಹೆಚ್ಚಳದ ಬಗ್ಗೆ ಬಿಎಂಆರ್ ಸಿಎಲ್ ತೀರ್ಮಾನ ಮಾಡುತ್ತದೆ. ಇದಕ್ಕಾಗಿ ನ್ಯಾಯಮೂರ್ತಿ ನೇತೃತ್ವದಲ್ಲಿ ಕೇಂದ್ರದ ಸಮಿತಿ ರಚಿಸಲಾಗಿದ್ದು, ಸರ್ಕಾರ ಇದರಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಬೆಂಗಳೂರು ಅಭಿವೃದ್ದಿಗೆ ಸಂಬಂಧಿಸಿದ ಇಲಾಖೆಗಳು, ಪ್ರಾಧಿಕಾರದ ಅಧಿಕಾರಿಗಳ
ಕರ್ನಾಟಕದಲ್ಲಿ ಅತ್ಯಂತ ಭ್ರಷ್ಟ ಸರಕಾರ ಇದೆ: ರಾಜ್ಯಸಭೆಯಲ್ಲಿ ಗುಡುಗಿದ ಹೆಚ್.ಡಿ.ದೇವೇಗೌಡ
ನವದೆಹಲಿ: ರಾಜ್ಯಸಭೆಯಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು; ಕರ್ನಾಟಕದಲ್ಲಿ ಇರುವುದು ಅತ್ಯಂತ ಭ್ರಷ್ಟ ಸರಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯಸಭೆಯಲ್ಲಿ ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಚರ್ಚೆಯಲ್ಲಿ ಗುರುವಾರ ಪಾಲ್ಗೊಂಡು ಅವರು ಮಾತನಾಡಿದರು. ಲೋಕಸಭೆಯಲ್ಲಿ ಬಿಜೆಪಿಗೆ
ಬ್ಯಾಂಕ್ ಗೆ ವಂಚನೆ: ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ 3 ವರ್ಷ ಶಿಕ್ಷೆ!
ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಕೃಷ್ಣಯ್ಯ ಶೆಟ್ಟಿ ಸೇರಿದಂತೆ ನಾಲ್ವರಿಗೆ ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕ್ ಗೆ ವಂಚಿಸಿದ ಪ್ರಕರಣದಲ್ಲಿ ತಲಾ 3 ವರ್ಷ ಶಿಕ್ಷೆ ಹಾಗೂ 7.75 ಲಕ್ಷ ರೂ. ದಂಡ ವಿಧಿಸಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ
ಆದಾಯಕ್ಕಿಂತ ಹೆಚ್ಚು ಆಸ್ತಿ ಜನಪ್ರತಿನಿಧಿಗಳ ವಿಚಾರಣೆ ಲೋಕಾಗೆ ನಿರ್ದೇಶನ: ಅರ್ಜಿ ವಜಾ
ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಜನಪ್ರತಿನಿಧಿಗಳ ಆಸ್ತಿಗಳು ಮತ್ತು ಅದಕ್ಕೆ ಸಂಬಂಧಿಸಿದ ಮೂಲಗಳ ಕುರಿತು ಲೋಕಾಯುಕ್ತ ಸಂಸ್ಥೆಯಿಂದ ವಿಚಾರಣೆ ನಡೆಸುವುದಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ವಿಧಾನಸಭೆ ಮತ್ತು ವಿಧಾನಪರಿಷತ್ ಸದಸ್ಯರು ಹಾಗೂ ಸಂಸದರ
ಕುಮಾರಸ್ವಾಮಿ ಮೊದಲು ಮೇಕೆದಾಟಿಗೆ ಅನುಮತಿ ಕೊಡಿಸಲಿ: ಡಿಕೆ ಶಿವಕುಮಾರ್
ಬೆಂಗಳೂರು: ಮೇಕೆದಾಟು ಅಣೆಕಟ್ಟಿಗೆ ಅನುಮತಿಯನ್ನು ಒಂದೇ ದಿನದಲ್ಲಿ ಕೊಡಿಸುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದರಲ್ಲ, ಮೊದಲು ಈ ಕೆಲಸವನ್ನು ಮಾಡಲಿ, ಆಮೇಲೆ ಮಾತಾಡಲಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗೆ ಶಿವಕುಮಾರ್ ಅವರು ಗುರುವಾರ ಉತ್ತರಿಸಿದ




