Menu

ಮುಡಾ ಹಗರಣ: ಲೋಕಾಯುಕ್ತ ಪೊಲೀಸ್‌ ತನಿಖೆ ಮುಂದುವರಿಸಲು ಕೋರ್ಟ್‌ ಆದೇಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಮುಡಾ ಹಗರಣ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ಬಿ ರಿಪೋರ್ಟ್​​ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ತಕರಾರು ಅರ್ಜಿಯ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು, ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ಬಿ ರಿಪೋರ್ಟ್ ಕುರಿತ ಆದೇಶ ಸದ್ಯಕ್ಕಿಲ್ಲ. ತನಿಖೆ ಮುಂದುವರಿಸುವಂತೆ ಸೂಚನೆ ನೀಡಿದೆ. ಲೋಕಾಯುಕ್ತ ಪೊಲೀಸರಿಗೆ ನ್ಯಾ. ಸಂತೋಷ್ ಗಜಾನನ ಭಟ್ ಅವರಿದ್ದ ಪೀಠವು ಈ ನಿರ್ದೇಶನವನ್ನು ನೀಡಿದೆ. ಜಾರಿ

ಹುಬ್ಬಳ್ಳಿ ಬಾಲಕಿಯ ಕೊಲೆ ಪ್ರಕರಣದ ಆರೋಪಿಯ ಎನ್ಕೌಂಟರ್ ಮಾಡಿದ ಪಿಎಸ್ಐ ಅನ್ನಪೂರ್ಣಗೆ ಪ್ರಶಸ್ತಿ ನೀಡಲು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಶಿಫಾರಸು

ಹುಬ್ಬಳ್ಳಿಯಲ್ಲಿ ಬಾಲಕಿಯ ಕೊಲೆ ಪ್ರಕರಣದ ಆರೋಪಿಯನ್ನು ಎನ್ಕೌಂಟರ್ ಮಾಡಿದ ಪಿಎಸ್ಐ ಅನ್ನಪೂರ್ಣ ಅವರಿಗೆ ಅತ್ಯುನ್ನತ ಪದಕ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಪರಮೇಶ್ವರ್ ಅವರಿಗೆ ಶಿಫಾರಸು ಮಾಡುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಬೆಟಗೇರಿಯಲ್ಲಿ ನವ ವಿವಾಹಿತೆಯ ಆತ್ಮಹತ್ಯೆ

ಗದಗ ಜಿಲ್ಲೆಯ ಬೆಟಗೇರಿ ಶರಣ ಬಸವೇಶ್ವರ ನಗರದಲ್ಲಿ ಡೆತ್‌ನೋಟ್ ಬರೆದಿಟ್ಟು ನವ ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪೂಜಾ ಅಮರೇಶ ಅಯ್ಯನಗೌಡರ್(27) ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ. ಅತ್ತೆ ಶಶಿಕಲಾ, ಬಾವ ವೀರನಗೌಡ ಹಾಗೂ ಮಾವ ನಿತ್ಯ ಕಿರುಕುಳ

ಶಿಶುಗಳ ಕಳ್ಳಸಾಗಣೆ ನಡೆದರೆ ಆಸ್ಪತ್ರೆಗಳ ಪರವಾನಗಿ ಅಮಾನತು: ಸುಪ್ರೀಂ

ಆಸ್ಪತ್ರೆಯಿಂದ ನವಜಾತ ಶಿಶುಗಳ ಕಳ್ಳಸಾಗಣೆ ನಡೆದರೆ ಅಂತಹ ಆಸ್ಪತ್ರೆಗಳ ಪರವಾನಗಿಯನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ಮಕ್ಕಳ ಕಳ್ಳಸಾಗಣೆ ತಡೆಗಟ್ಟಲು ಮತ್ತು ಮಕ್ಕಳ ಕಳ್ಳಸಾಗಣೆ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ನಿಭಾಯಿಸಲು ರಾಜ್ಯಗಳು ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ನಿಗದಿಪಡಿಸಿದೆ.

ಭಕ್ತಿ, ಜ್ಞಾನದ ಸಂಗಮವೇ ಬಿಜಿಎಸ್: ಡಿಸಿಎಂ ಶಿವಕುಮಾರ್

“ಬಿ ಎಂದರೆ ಭಕ್ತಿ, ಜಿ ಎಂದರೆ ಜ್ಞಾನ, ಎಸ್ ಎಂದರೆ ಸಂಗಮ. ಹೀಗಾಗಿ ಭಕ್ತಿ, ಜ್ಞಾನದ ಸಂಗಮವೇ ಬಿಜಿಎಸ್” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಹಾಲಕ್ಷ್ಮಿ ಲೇಔಟ್ ನಲ್ಲಿರುವ ಆದಿಚುಂಚನಗಿರಿ ಮಠದ ಆವರಣದಲ್ಲಿ ಶ್ರೀ ಅಭಯ ಆಂಜನೇಯ ಸ್ವಾಮಿ, ಶ್ರೀ

ಎಐ, ಕ್ವಾಂಟಂ, ಸೈಬರ್ ಸೆಕ್ಯುರಿಟಿ ಸಹಕಾರಕ್ಕೆ ಬವೇರಿಯಾ ಜತೆ ರಾಜ್ಯದ ಒಡಂಬಡಿಕೆ

ಎಐ, ಕ್ವಾಂಟಂ ತಂತ್ರಜ್ಞಾನ, ಬಿಟಿ, ಸ್ಮಾರ್ಟ್ ಸಿಟಿ, ಉನ್ನತ ಶಿಕ್ಷಣ ಮತ್ತು ಸುಸ್ಥಿರ ಕೃಷಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರದ ಉದ್ದೇಶದಿಂದ ಜರ್ಮನಿಯ ಬವೇರಿಯಾ ಪ್ರಾಂತ್ಯ ಮತ್ತು ರಾಜ್ಯ ಸರಕಾರಗಳು  ಒಡಂಬಡಿಕೆಗೆ ಅಂಕಿತ ಹಾಕಿದವು. ರಾಜ್ಯ ಸರಕಾರದ ಪರವಾಗಿ ಬೃಹತ್

ಅವರವರ ಸಮಾಜ ರಕ್ಷಣೆ ಮಾಡಿಕೊಳ್ಳಲು ಹೊರಟಿದ್ದಾರೆ: ಡಿ.ಕೆ.ಶಿವಕುಮಾರ್

“ವೀರಶೈವ ಮಹಾಸಭಾದವರು ಅವರ ಸಮಾಜ ರಕ್ಷಣೆ ಮಾಡಿಕೊಳ್ಳಲು ಹೊರಟಿದ್ದು, ಅವರನ್ನು ನಾವು ಏಕೆ ಟೀಕೆ ಮಾಡಬೇಕು. ಪ್ರಜಾಪ್ರಭುತ್ವ, ಸಂವಿಧಾನದ ಪ್ರಕಾರವಾಗಿ ಅವರುಗಳು ತಮ್ಮ ನಿಲುವುಗಳನ್ನು ಪ್ರತಿಪಾದನೆ ಮಾಡಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಾತಿಗಣತಿ ಬಗ್ಗೆ

ಇದು ಜಾತಿಗಣತಿಯೋ, ದ್ವೇಷಗಣತಿಯೋ: ಹೆಚ್‌ಡಿಕೆ ಪ್ರಶ್ನೆ

ಜಾತಿಗಣತಿ ವರದಿಯದ್ದು ಎನ್ನಲಾದ ಅಂಕಿ ಅಂಶಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಇದು ಜಾತಿಗಣತಿಯೋ.. ದ್ವೇಷಗಣತಿಯೋ..? ಎಂದು ಪ್ರಶ್ನೆ ಮಾಡಿದ್ದಾರೆ. ಹಿಂದೆ ಜಾತಿ ಗಣತಿ ವರದಿಯನ್ನು ವಿರೋಧಿಸಿದ್ದ ಡಿಸಿಎಂ ಡಿಕೆಶಿ ಈಗ ಯೂಟರ್ನ್ ಹೊಡೆದಿರುವ ಬಗ್ಗೆ

ಕುರ್ಚಿಗೆ ಕಂಟಕ ಬಂದಾಗಲೆಲ್ಲಾ ಜಾತಿ ಜನಗಣತಿ ವರದಿ ಎಂಬ ಮಂಕು ಬೂದಿ: ಸಿಎಂ ವಿರುದ್ಧ ಆರ್‌. ಅಶೋಕ್‌ ಟೀಕೆ

ಸಂಕಟ ಬಂದಾಗ ವೆಂಕಟರಮಣ ಎಂಬಂತೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಕುರ್ಚಿಗೆ ಕಂಟಕ ಬಂದಾಗಲೆಲ್ಲಾ ಜಾತಿ ಜನಗಣತಿ ವರದಿ ಎಂಬ ಮಂಕು ಬೂದಿ ಎರಚಿ ಜನರ ಗಮನ ಬೇರೆಡೆ ಸೆಳೆಯುವ ಪ್ರಯತ್ನ ಮಾಡೋ ಕುತಂತ್ರ ಈಗ ಗುಟ್ಟಾಗಿ ಏನು ಉಳಿದಿಲ್ಲ ಎಂದು

ಎನ್ ಡಿಎ ಮೈತ್ರಿಕೂಟದಿಂದ ಹೊರಬಂದ ಮಾಜಿ ಕೇಂದ್ರ ಸಚಿವ ಪಶುಪತಿ!

ಪಾಟ್ನಾ: ರಾಷ್ಟ್ರೀಯ ಡೆಮಾಕ್ರೆಟಿಕ್ ಅಲಯನ್ಸ್ (ಎನ್ ಡಿಎ) ಮೈತ್ರಿಕೂಟದಿಂದ ಮಾಜಿ ಕೇಂದ್ರ ಸಚಿವ ಪಶುಪತಿ ಪಾರಸ್ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಲೋಕಜನಶಕ್ತಿ ಪಾರ್ಟಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಘೋಷಿಸಿದ್ದಾರೆ. ಸೋಮವಾರ ಪಾಟ್ನಾದಲ್ಲಿ ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಲೋಕಜನಶಕ್ತಿ