Menu

ಗುತ್ತಿಗೆದಾರರಿಂದ ಲಂಚ: ಪಿಡಬ್ಲ್ಯುಡಿ ಎಂಜಿನಿಯರ್‌ ಲೋಕಾಯುಕ್ತ ಬಲೆಗೆ

ವಿಜಯನಗರ ಜಿಲ್ಲೆಯ ಹೊಸಪೇಟೆಯ ಪಿಡಬ್ಲ್ಯುಡಿ ಕಚೇರಿಯಲ್ಲಿ ಗುತ್ತಿಗೆದಾರರಿಂದ ಲಂಚ ಸ್ವೀಕರಿಸುತ್ತಿದ್ದಾಗ ಲೋಕೋಪಯೋಗಿ ಇಲಾಖೆ ಎಕ್ಸಿಕ್ಯೂಟಿವ್ ಎಂಜಿನಿಯರ್ ದೇವದಾಸ್ ಮತ್ತು ಅಕೌಂಟೆಂಟ್ ಮಾರುತಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಕಾಮಗಾರಿ ಬಿಲ್ ಮಂಜೂರು ಮಾಡಲು ಒಂದು ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗ ಈ ಕಾರ್ಯಾಚರಣೆ ನಡೆದಿದೆ. ಹೂವಿನ ಹಡಗಲಿಯ ಮಹೇಶ್ ಹಲಗೇರಿ ಎಂಬ ಗುತ್ತಿಗೆದಾರರು ಲೋಕೋಪಯೋಗಿ ಇಲಾಖೆಯ ಕಾಮಗಾರಿ ಟೆಂಡರ್ ಪಡೆದು ಕೆಲಸ ಪೂರ್ಣಗೊಳಿಸಿದ್ದರು. ಆದರೆ ಬಿಲ್ ಬಿಡುಗಡೆ ಮಾಡಲು ದೇವದಾಸ್

ಕಾರಿನ ಇಎಂಐಗಾಗಿ ದೊಡ್ಡಮ್ಮ ಕೆಲಸಕ್ಕಿದ್ದ ಬೆಂಗಳೂರಿನ ಮನೆಯಲ್ಲೆ ಕಳವುಗೈದು ಅರೆಸ್ಟ್‌ ಆದ ಯುವಕ

ಕಾರಿನ ಇಎಂಐ ಕಟ್ಟಲು ಹಣಕ್ಕಾಗಿ ಯುವಕನೊಬ್ಬ ದೊಡ್ಡಮ್ಮ ಕೆಲಸ ಮಾಡುತ್ತಿದ್ದ ಬೆಂಗಳೂರಿನ ಬಸವನಗುಡಿಯಲ್ಲಿರುವ ಮನೆಯಲ್ಲೇ ಕಳ್ಳತನ ಮಾಡಿ ಈಗ ಅರೆಸ್ಟ್‌ ಆಗಿದ್ದಾನೆ. ಉತ್ತರಹಳ್ಳಿ ನಿವಾಸಿ ಶರತ್ ಕುಮಾರ್ (31) ಬಂಧಿತ ಆರೋಪಿ. ಬಸವನಗುಡಿಯ ತ್ಯಾಗರಾಜನಗರದ ಮನೆಯೊಂದರಲ್ಲಿ ಆರೋಪಿಯ ದೊಡ್ಡಮ್ಮ 25 ವರ್ಷಗಳಿಂದ ಕೆಲಸ

ಮುಂಬೈ ಉದ್ಯಮಿಗೆ ನಾಲ್ಕು ಕೋಟಿ ವಂಚಿಸಿದ ಉಡುಪಿ ದಂಪತಿ

ಉಡುಪಿ ಮೂಲದ ದಂಪತಿ ಮುಂಬೈ ಉದ್ಯಮಿಗೆ ನಾಲ್ಕು ಕೋಟಿ ರೂಪಾಯಿಗೂ ಹೆಚ್ಚಿನ ವಂಚನೆ ಆರೋಪ ಕೇಳಿಬಂದಿದೆ. ಉಡುಪಿ ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿ, ನ್ಯಾಯಾಲಯದಿಂದ ತಡೆಯಾಜ್ಞೆ ಪಡೆದಿದ್ದ ಪ್ರಕರಣವನ್ನು ಮಂಗಳೂರು ಪೊಲೀಸ್ ಆಯುಕ್ತರು ಮರು ತನಿಖೆಗೆ ಆದೇಶಿಸಿದ್ದಾರೆ. ಹರಾಜಿಗೆ ಬಂದ ಫ್ಲ್ಯಾಟ್,

ಹಾವೇರಿಯ ಯುವಕನ ವಂಚಿಸಿ ಮದುವೆಯಾದ ಎರಡು ಮಕ್ಕಳ ತಾಯಿ

ಇಬ್ಬರು ಮಕ್ಕಳ ತಾಯಿಯಾಗಿರುವ ವಿವಾಹಿತ ಮಹಿಳೆಯೊಬ್ಬಳು ಈ ಬಗ್ಗೆ ಯಾವುದೇ ಸುಳಿವು ನೀಡದೆ ಯುವಕನಿಗೆ ಮೋಸ ಮಾಡಿ ಆತನನ್ನು ಮದುವೆಯಾಗಿರುವ ಘಟನೆ ಹಾವೇರಿಯ ರಾಣೆಬೆನ್ನೂರು ತಾಲೂಕಿನ ತುಮ್ಮಿನಕಟ್ಟಿ ಗ್ರಾಮದಲ್ಲಿ ನಡೆದಿದೆ. ವಂಚಕ ಮಹಿಳೆ ಯುವಕನ ಮದುವೆಯಾಗಿದ್ದಲ್ಲದೆ 2.5 ಲಕ್ಷ ರೂಪಾಯಿ ವಧು

ನಂದಿನಿಗೆ ಸುಧಾ ರಾಣಿ ಪ್ರಚಾರ ರಾಯಭಾರಿ

ನಂದಿನಿ ಉತ್ಪನ್ನಗಳಿಗೆ ಪ್ರಚಾರ ರಾಯಭಾರಿಯಾಗಿ ನಟಿ ಶ್ರೀಮತಿ ಸುಧಾ ರಾಣಿ ಆಯ್ಕೆಯಾಗಿದ್ದು, ಬಮೂಲ್‌ ಕುಟುಂಬಕ್ಕೆ ಅವರನ್ನು ಪ್ರೀತಿಯಿಂದ ಸ್ವಾಗತಿಸುವುದಾಗಿ ಬಮೂಲ್‌ ಅಧ್ಯಕ್ಷ ಡಿಕೆ ಸುರೇಶ್‌ ಹೇಳಿದ್ದಾರೆ. ನಂಬಿಕೆಯ ಮೇಲೆ ನಿರ್ಮಿತವಾದ ನಂದಿನಿಯು ರೈತರ ಮೇಲಿನ ಬದ್ಧತೆ, ಶುದ್ಧ ಹಾಗೂ ಗುಣಮಟ್ಟದ ಪೌಷ್ಟಿಕ

ಕೆನಡಾ ಶಾಲೆಯಲ್ಲಿ ಗುಂಡಿನ ಘರ್ಜನೆ: ಹತ್ತು ಮಂದಿ ಸಾವು

ಕೆನಡಾದ ಬ್ರಿಟಿಷ್ ಕೊಲಂಬಿಯಾ ಶಾಲೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಗನ್ ಮ್ಯಾನ್ ಸೇರಿದಂತೆ 10 ಮಂದಿ ಪ್ರಾಣ ಕಳೆದುಕೊಂಡಿದ್ದು, 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶಂಕಿತ ಗನ್‌ಮ್ಯಾನ್‌ ಹಾಗೂ ಇತರ ಆರು ಮಂದಿ ಶಾಲಾ ಆವರಣದಲ್ಲೇ

ರಾಜ್ಯ ಬಜೆಟ್‌ನಲ್ಲಿ ಮತ್ತಷ್ಟು ಗ್ಯಾರಂಟಿ ಸ್ಕೀಂ?

ರಾಜ್ಯದ ಮುಂಬರುವ ಹಣಕಾಸು ಸಾಲಿನ ಬಜೆಟ್‌ನಲ್ಲಿ ಒಂದಷ್ಟು ಗ್ರಾಮೀಣರಿಗೆ ಮತ್ತು ಕೆಲವಷ್ಟು ಗ್ರೇಟರ್ ಬೆಂಗಳೂರು ಅಥಾರಿಟಿ ವ್ಯಾಪ್ತಿಯೊಳಗೆ ವಾಸವಾಗಿರುವ ಪ್ರಜೆಗಳಿಗೆ ನೆರವಾಗುವಂತಹ ಜನಪ್ರಿಯ ಯೋಜನೆಗಳು ಆದ್ಯತೆ ಪಡೆದುಕೊಳ್ಳುವ ಸಾಧ್ಯತೆಗಳನ್ನು ತಳ್ಳಿಹಾಕಲಾಗದು. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಆಯ-ವ್ಯಯ ಮಂಡನೆಯ ದಿನವನ್ನು ಘೋಷಿಸುವುದಾಗಿ ಹೇಳಿದ್ದಾರೆ.

ಹಿರಿಯ ಪತ್ರಕರ್ತ,ಮಾಜಿ ಎಂಎಲ್‌ಸಿ ಪಿ.ರಾಮಯ್ಯ ಇನ್ನಿಲ್ಲ

ಹಿರಿಯ ಪತ್ರಕರ್ತ ಹಾಗೂ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ (93 ) ನಿಧನರಾಗಿದ್ದಾರೆ . ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ  ಅವರು ಅಂಗಾಂಗ ವೈಫಲ್ಯದಿಂದಾಗಿ ಮಂಗಳವಾರ ರಾತ್ರಿ  ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ಡಾ. ಬಾಲಜಿ  ಮಾಹಿತಿ ನೀಡಿದ್ದಾರೆ. ಅವರಿಗೆ  ಇಬ್ಬರು

24 ಕೊಲೆ ಕೇಸ್‌: ಬಿಹಾರ ಆರೋಪಿಗಳಾದ ತಂದೆ, ಮಗ ಬೆಂಗಳೂರಿನಲ್ಲಿ ಅರೆಸ್ಟ್‌

24 ಕೊಲೆ ಪ್ರಕರಣಗಳಲ್ಲಿ ಆರೋಪಿಗಳಾಗಿರುವ ಬಿಹಾರದ ಅಪ್ಪ ಮಗನನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. 40ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳಲ್ಲಿ  ಬೇಕಾಗಿದ್ದ ಆರೋಪಿಗಳು ಒಂದು ವರ್ಷದಿಂದ ಬೆಂಗಳೂರಿನಲ್ಲಿ ಅಡಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳನ್ನು ಮಣಿಕ್ ಸಿಂಗ್ ಹಾಗೂ ಆತನ ತಂದೆ ಮನೋಜ್

ಶೇಷಾದ್ರಿಪುರಂ ರಸ್ತೆಯಲ್ಲಿ ನವಜಾತ ಶಿಶು ಶವ ಪತ್ತೆ

ಬೆಂಗಳೂರಿನ ಶೇಷಾದ್ರಿಪುರಂ ರೈಲ್ವೆ ಪ್ಯಾರ್ಲೆಲ್‌  ರಸ್ತೆ ಬದಿಯ ಕಸದ ತೊಟ್ಟಿಯಲ್ಲಿ ನವಜಾತ ಗಂಡು ಶಿಶುವಿನ ಶವ ಪತ್ತೆಯಾಗಿದೆ. ಮಗುವಿನ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಶೇಷಾದ್ರಿಪುರಂ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳ ವೀಡಿಯೊಗಳನ್ನು