ಬಿಬಿಎಂಪಿ ಕಸ ಸಾಗಣೆ ಲಾರಿಗೆ ಅಕ್ಕ-ತಂಗಿ ಬಲಿ
ಬಿಬಿಎಂಪಿ ಕಸ ಸಾಗಣೆ ಲಾರಿ ಹರಿದು ಅಕ್ಕ-ತಂಗಿ ಇಬ್ಬರು ಮೃತಪಟ್ಟಿರುವ ಘಟನೆ ಥಣಿಸಂದ್ರ ಮುಖ್ಯ ರಸ್ತೆಯ ಸಾರಾಯಿಪಾಳ್ಯ ಬಳಿ ನಡೆದಿದೆ. ಗೋವಿಂದಪುರದ ನಾಜಿಯಾ ಸುಲ್ತಾನ (30), ನಾಜಿಯಾ ಇರ್ಫಾನ (32) ಮೃತರು. ಅಪಘಾತ ನಡೆಸಿದ ಲಾರಿ ಚಾಲಕ ಗಡಿಲಿಂಗನನ್ನು ಪೊಲೀಸರು ಬಂಧಿಸಿದ್ದಾರೆ. ಥಣಿಸಂದ್ರ ಮುಖ್ಯರಸ್ತೆಯ ಸಾರಾಯಿಪಾಳ್ಯದ ಬಳಿ ಮಧ್ಯಾಹ್ನ ಬಿಬಿಎಂಪಿ ಕಸದ ಲಾರಿ ತೆರಳುತ್ತಿದ್ದಾಗ ಸ್ಕೂಟರ್ ನಲ್ಲಿ ಬರುತ್ತಿದ್ದ ಸಹೋದರಿಯರು ಕಸದ ಲಾರಿಯನ್ನು ಎಡಗಡೆಯಿಂದ ಓವರ್ ಟೇಕ್ ಮಾಡಲು ಮುಂದಾಗಿದ್ದಾರೆ,
ಎಂಎಲ್ಸಿ ಹೆಸರಿನಲ್ಲಿ ಗಣ್ಯರಿಗೆ ವಿಷಪೂರಿತ ಸ್ವೀಟ್ ಬಾಕ್ಸ್
ವಿಧಾನಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಅವರ ಹೆಸರಿನಲ್ಲಿ ಹೊಸವರ್ಷಕ್ಕೆ ಶುಭಾಶಯ ಕೋರಿ ಶಿವಮೊಗ್ಗ ನಗರದ ಮೂವರು ಗಣ್ಯರಿಗೆ ವಿಷಪೂರಿತ ಸ್ವೀಟ್ ಬಾಕ್ಸ್ಗಳನ್ನು ಕೊರಿಯರ್ ಮೂಲಕ ಕಳುಹಿಸಿರುವ ಪ್ರಕರಣ ಬಯಲಾಗಿದೆ. ಕೊರಿಯರ್ ಮೂಲಕ ಭದ್ರಾವತಿಯಿಂದ ಪಾರ್ಸೆಲ್ ಕಳುಹಿಸಲಾಗಿತ್ತು. ಒಬ್ಬರು ಸ್ವೀಟ್ ಬಾಯಲ್ಲಿ
ಮುಡಾ ಹಗರಣದ ಕೆಸರೆ ಗ್ರಾಮಕ್ಕೆ ಸಿದ್ದರಾಮಯ್ಯ ಹೆಸರು ಇಡಿ: ಎಚ್.ಡಿ. ಕುಮಾರಸ್ವಾಮಿ ವ್ಯಂಗ್ಯ
ಮೈಸೂರು: ರಸ್ತೆಗೆ ತಮ್ಮ ಹೆಸರು ನಾಮಕರಣ ಮಾಡುವ ವಿಷಯ ವಿವಾದದ ಸ್ವರೂಪ ಪಡೆದುಕೊಂಡರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಜಾಣಮೌನಕ್ಕೆ ಶರಣಾಗಿದ್ದಾರೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದ್ದಾರೆ. ಮೈಸೂರಿನಲ್ಲಿ ಶನಿವಾರ ದಿಶಾ ಸಭೆಗೂ
ಕ್ಯಾನ್ಸರ್ ಗೆದ್ದ ನಟ ಶಿವರಾಜ್ ಕುಮಾರ್ ಅಮೆರಿಕದ ಆಸ್ಪತ್ರೆಯಿಂದ ಡಿಸ್ಚಾರ್ಜ್
ನಟ ಶಿವರಾಜ್ ಕುಮಾರ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆ ಯಶಸ್ವಿಯಾದ ನಂತರ ಇದೀಗ ಅಮೆರಿಕದ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಡಿಸೆಂಬರ್ ಕೊನೆಯ ವಾರದಲ್ಲಿ ಮೂತ್ರಕೋಶದಲ್ಲಿ ಕಾಣಿಸಿಕೊಂಡಿದ್ದ ಕ್ಯಾನ್ಸರ್ ಗಡ್ಡೆ ಶಸ್ತ್ರಚಿಕಿತ್ಸೆಗೆ ತೆರಳಿದ್ದ ಶಿವರಾಜ್ ಕುಮಾರ್ ಇದೀಗ ಅಮೆರಿಕದ ಮಿಯಾಮಿ ಕ್ಯಾನ್ಸರ್ ಇನ್ಸಿಟಿಟ್ಯೂಟ್ ನಿಂದ ಬಿಡುಗಡೆ
ಸಮಸ್ಯೆಗಳನ್ನು ಆತ್ಮ ವಿಶ್ವಾಸದಿಂದ ಎದುರಿಸಿದಾಗ ಯಶಸ್ಸಿನತ್ತ ಸಾಗಲು ಸಾಧ್ಯ: ರಾಮ್ ಪ್ರಸಾತ್ ಮನೋಹರ್
ಬೆಂಗಳೂರು: ಸಮಸ್ಯೆ ಎದುರಾದಾಗ ವಿಮುಖರಾಗದೇ ಆತ್ಮವಿಶ್ವಾಸ ಮತ್ತು ಛಲದಿಂದ ಎದುರಿಸಿದರೆ ಯಶಸ್ಸಿನ ಹಾದಿ ಸುಗಮವಾಗಲಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಜಲಮಂಡಳಿ ಅಧ್ಯಕ್ಷ ಡಾ. ವಿ. ರಾಮ್ ಪ್ರಸಾತ್ ಮನೋಹರ್ ಹೇಳಿದ್ದಾರೆ. ನಗರದ ಸೌಂದರ್ಯ ಸೆಂಟ್ರಲ್ ಶಾಲೆಯಲ್ಲಿ ಕರ್ನಾಟಕದ ಪರಂಪರೆಯನ್ನು
ಹಿರಿಯ ಅಣು ವಿಜ್ಞಾನಿ ಆರ್.ಚಿದಂಬರಂ ಇನ್ನಿಲ್ಲ
ಸ್ಮೈಲಿಂಗ್ ಬುದ್ದ ಖ್ಯಾತಿಯ ಹಿರಿಯ ಅಣು ವಿಜ್ಞಾನಿ ಆರ್.ಚಿದಂಬರಂ ಮುಂಬೈನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ಆರ್.ಚಿದಂಬರಂ 1974 ಮತ್ತು 1998ರಲ್ಲಿ ಪೋರ್ಖಾಣು ಅಣು ಬಾಂಬ್ ಸ್ಫೋಟ ಪ್ರಯೋಗದ ಹಿಂದಿನ ಪ್ರಮುಖ ಪಾತ್ರ ವಹಿಸಿದ್ದರು. ಭಾರತ ಅಣು
ಗುತ್ತಿಗೆದಾರರ ಹಣ ಕಾಂಗ್ರೆಸ್ ಡೈವರ್ಟ್: ಸಂಘದ ಅಧ್ಯಕ್ಷ ಸುಭಾಷ ಪಾಟೀಲ್ ಆಕ್ರೋಶ
ಧಾರವಾಡ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ಅವಧಿಯಲ್ಲಿ ಬಿಜೆಪಿ ಶೇ . 40 ಕಮಿಷನ್ ಪಡೆಯುತ್ತಿದೆ ಎಂಬ ಆರೋಪ ಮಾಡಿದ್ದ ಗುತ್ತಿಗೆದಾರರು ಇದೀಗ ತಮ್ಮ ಬಾಕಿ ಬಿಲ್ ಪಡೆದುಕೊಳ್ಳಲು ಪರದಾಡುತ್ತಿದ್ದಾರೆ . ಈ ಕುರಿತು ಉತ್ತರ ಕರ್ನಾಟಕ ಸಿವಿಲ್ ಗುತ್ತಿಗೆದಾರರ ಸಂಘದ
ಸಿಡ್ನಿ ಟೆಸ್ಟ್: ಭಾರತಕ್ಕೆ ಅಲ್ಪ ಮೇಲುಗೈ ತಂದ ಪಂತ್ ಅಬ್ಬರ!
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ೫ನೇ ಹಾಗೂ ಅಂತಿಮ ಪಂದ್ಯದ ೨ನೇ ದಿನದಾಟದಲ್ಲಿ 15 ವಿಕೆಟ್ ಗಳು ಪತನಗೊಂಡಿದ್ದು, ಭಾರತ ಮೊದಲ ಇನಿಂಗ್ಸ್ ನಲ್ಲಿ ಅಲ್ಪ ಮೇಲುಗೈ ಸಾಧಿಸಿದೆ. ಸಿಡ್ನಿಯಲ್ಲಿ ನಡೆಯುತ್ತಿರುವ ಪಂದ್ಯದ ಎರಡನೇ ದಿನವಾದ ಶನಿವಾರ
ಬಾಣಂತಿಯರ ಸರಣಿ ಸಾವು ಖಂಡಿಸಿ ಬಿಜೆಪಿ ಪ್ರತಿಭಟನೆ
ಶಿವಮೊಗ್ಗ: ರಾಜ್ಯದೆಲ್ಲೆಡೆ ಬಾಣಂತಿಯರ ಸರಣಿ ಸಾವು ಸಂಭವಿಸಿದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರುತ್ತಿರುವ ರಾಜ್ಯದ ಜನವಿರೋಧಿ ಕಾಂಗ್ರೆಸ್ ಸರ್ಕಾರದ ಧೋರಣೆಯನ್ನು ಖಂಡಿಸಿ ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ರಾಜ್ಯಾದ್ಯಂತ ನಿರಂತರವಾಗಿ ಬಡಕುಟುಂಬಗಳ ತಾಯಂದಿರು ಹಾಗೂ ಹಸುಗೂಸುಗಳ ಸಾವು ನೋವುಗಳಿಗುತ್ತಿದ್ದರೂ, ಜನಸಾಮಾನ್ಯರು
ರಂಗ ಪರಿಷೆ ಅರ್ಥಪೂರ್ಣವಾಗಿ ನಡೆಸಿ: ಸಿಎಂ ಸಿದ್ದರಾಮಯ್ಯ ಸಲಹೆ
ಬೆಂಗಳೂರು: ರಂಗ ಪರಿಷೆ ಅರ್ಥಪೂರ್ಣವಾಗಿ ನಡೆಸಿ. ರಂಗಭೂಮಿಯ ಸಮಗ್ರ ಮಾಹಿತಿ ಬೆರಳ ತುದಿಯಲ್ಲಿ ಸಿಗುವಂತಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದರು. ಕರ್ನಾಟಕ ನಾಟಕ ಅಕಾಡೆಮಿಯ ವೆಬ್ ಸೈಟ್ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಅಕಾಡೆಮಿಗಳು ಸಕ್ರಿಯವಾಗಿ ಕೆಲಸ ಮಾಡಬೇಕು. ಬದುಕು ಪೂರ್ಣ ಆಗಲು




