ಮನಮೋಹನ್ ಸಿಂಗ್ ನಿಂದಿಸಿದ್ದ ಪಾಕ್ ಪ್ರಧಾನಿಗೆ ಮೋದಿ ತರಾಟೆ!
ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ನಿಂದಿಸಿದ್ದ 2013ರಲ್ಲಿ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಅವರನ್ನು ನರೇಂದ್ರ ಮೋದಿ ಸಾರ್ವಜನಿಕವಾಗಿಯೇ ಟೀಕಿಸಿದ್ದರು. ನ್ಯೂಯಾರ್ಕ್ನಲ್ಲಿ ಭಾರತ ಮತ್ತು ಪಾಕಿಸ್ತಾನ ಪತ್ರಕರ್ತರ ಜತೆಗೆ ನಡೆಸಿದ ಸಭೆಯಲ್ಲಿ ಷರೀಫ್ ಅವರು ಪ್ರಧಾನಿ ಸಿಂಗ್ ಅವರನ್ನು `ಹಳ್ಳಿಯ ಮಹಿಳೆ’ (ದೆಹತಿ ಔರತ್) ಎಂದು ಬಣ್ಣಿಸಿದ್ದರು ಎಂದು ವರದಿಯಾಗಿತ್ತು. ಮಾಧ್ಯಮಗಳಲ್ಲಿಈ ವರದಿ ಪ್ರಕಟವಾದ ಬಳಿಕ ಬಿಜೆಪಿಯ ವಿಕಾಸ್ ರ್ಯಾಲಿ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಮೋದಿ, ನನ್ನ ದೇಶದ ಪ್ರಧಾನಿಯನ್ನು ಹಳ್ಳಿಯ
ದೇಶಕ್ಕೆ ಮನಮೋಹನ್ ಸಿಂಗ್ ಕೊಟ್ಟ ಕೊಡುಗೆ ಚಿರಸ್ಮರಣೀಯ: ಹೆಚ್.ಡಿ.ಕುಮಾರಸ್ವಾಮಿ
ನವದೆಹಲಿ: ನಮ್ಮನ್ನು ಅಗಲಿದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಅಂತಿಮ ನಮನ ಸಲ್ಲಿಸಿದರು. ಸಂಸತ್ ಅಧಿವೇಶನ ಮುಗಿದ ನಂತರ ತಮ್ಮ ಲೋಕಸಭೆ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸಿದ್ದ ಕೇಂದ್ರ ಸಚಿವರು; ಮನಮೋಹನ್
ಆರ್ಥಿಕವಾಗಿ ಭೀಕರ ಸ್ಥಿತಿಯಲ್ಲಿದ್ದ ದೇಶವನ್ನು ಸರಿದಾರಿಗೆ ತಂದ ಮನಮೋಹನ್ ಸಿಂಗ್: ಹೆಚ್.ಡಿ.ದೇವೇಗೌಡ
ಬೆಂಗಳೂರು: ನಮ್ಮ ದೇಶ ಆರ್ಥಿಕವಾಗಿ ಭೀಕರ ಪರಿಸ್ಥಿತಿಯಲ್ಲಿದ್ದಾಗ ಹಣಕಾಸು ಸಚಿವರಾಗಿ ಬಂದ ಡಾ.ಮನಮೋಹನ್ ಸಿಂಗ್ ಅವರು ಸಮರ್ಥವಾಗಿ ಕೆಲಸ ಮಾಡಿದರು ಹಾಗೂ ಅರ್ಥ ವ್ಯವಸ್ಥೆಯನ್ನು ಸರಿದಾರಿಗೆ ತಂದರು ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದರು. ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ
ಎಲ್ಲಾ ವರ್ಗದ ಜನರನ್ನು ಕಾಪಾಡಿದ ಶ್ರೇಷ್ಠ ಆರ್ಥಿಕ ತಜ್ಞ ಮನಮೋಹನ್ ಸಿಂಗ್: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಳಗಾವಿ: ಮನಮೋಹನ್ ಸಿಂಗ್ ಅವರು ಈ ದೇಶದ ಶ್ರೇಷ್ಠ ಪ್ರಧಾನ ಮಂತ್ರಿ. ದೇಶದ ಎಲ್ಲಾ ವರ್ಗದ ಜನರನ್ನು ಕಾಪಾಡಿದ ನಿಜವಾದ ಆರ್ಥಿಕ ತಜ್ಞ ಹಾಗೂ ಕ್ರಾಂತಿಕಾರಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅಭಿಪ್ರಾಯಪಟ್ಟರು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ
ಮನಮೋಹನ್ ಸಿಂಗ್ ಅವರಿಗೆ ಹುಬ್ಬಳ್ಳಿಯೊಂದಿಗೆ ಹತ್ತಿರದ ನಂಟಿದೆ: ಬಸವರಾಜ ಬೊಮ್ಮಾಯಿ
ಗದಗ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರಿಗೆ ಹುಬ್ಬಳ್ಳಿಯೊಂದಿಗೆ ಹತ್ತಿರದ ನಂಟಿದೆ. ಅವರ ಕೊ ಬ್ರದರ್ ಹಾಗೂ ಅವರ ಪತ್ನಿಯ ಸಹೋದರಿ ಹುಬ್ಬಳ್ಳಿಯಲ್ಲಿ ಇರುವುದು ವಿಶೇಷ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಗದಗನಲ್ಲಿ ಮಾಧ್ಯಮಗಳೊಂದಿಗೆ
ನವಭಾರತದ ಚಾಣಕ್ಯ ಅಸ್ತಂಗತ: ಸಭಾಧ್ಯಕ್ಷ ಯುಟಿ ಖಾದರ್ ಶೋಕ
ನವಭಾರತಕ್ಕೆ ಆರ್ಥಶಾಸ್ತ್ರ ಬರೆದ ಶ್ರೇಷ್ಠ ಆರ್ಥಿಕತಜ್ಞ ಮತ್ತು ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಅಗಲಿಕೆ ಭಾರತದ ಮಾತ್ರವಲ್ಲ, ಜಗತ್ತಿನ ಆರ್ಥಿಕತೆಗೂ ತುಂಬಲಾರದ ನಷ್ಟವಾಗಿದೆ ಎಂದು ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಎಂದು ಸಂತಾಪ ಸೂಚಿಸಿದ್ದಾರೆ. 1991ರ ಆರ್ಥಿಕ
ಮನಮೋಹನ್ ಸಿಂಗ್ ಭಾರತದ ಆರ್ಥಿಕತೆಯ ಹರಿಕಾರ: ಸಚಿವ ಡಾಕ್ಟರ್ ಎಂಸಿ ಸುಧಾಕರ್
ಭಾರತದ ಸದೃಢ ಆರ್ಥಿಕತೆಯ ಹರಿಕಾರ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ನಿಧನ ದಿಂದ ದೇಶ ಒಬ್ಬ ಅಪ್ರತಿಮ ಅರ್ಥಶಾಸ್ತ್ರಜ್ಞ ಹಾಗೂ ಆಡಳಿತಗಾರರನ್ನು ಕಳೆದುಕೊಂಡಂತಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾಕ್ಟರ್ ಎಂ ಸಿ ಸುಧಾಕರ್ ಕಂಬನಿ ಮಿಡಿದಿದ್ದಾರೆ. ಪ್ರಧಾನಿ
ಜೈ ಸಂವಿಧಾನ ಸಮಾವೇಶ ರದ್ದು: ಡಿಸಿಎಂ ಡಿಕೆ ಶಿವಕುಮಾರ್
ಬೆಳಗಾವಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಶುಕ್ರವಾರ ನಡೆಯಬೇಕಿದ್ದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ರದ್ದು ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಬೆಳಗಾವಿಯ ಸರ್ಕಿಟ್ ಹೌಸ್ ಅಲ್ಲಿ ಗುರುವಾರ ರಾತ್ರಿ
ದೇಶ ಕಂಡ ಮಹಾನ್ ಆರ್ಥಿಕ ತಜ್ಞ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನಕ್ಕೆ ಡಿಕೆ ಶಿವಕುಮಾರ್ ಸಂತಾಪ
ಬೆಳಗಾವಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ಮನಮೋಹನ್ ಸಿಂಗ್ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ತುಂಬಾ ನೋವಾಗಿದೆ. ಮನಮೋಹನ್ ಸಿಂಗ್ ಕೇವಲ ರಾಜಕಾರಣಿ ಅಲ್ಲ. ಅವರೊಬ್ಬ ದೇಶ ಹಾಗೂ ಈ ಜಗತ್ತು
ದೇಣಿಗೆ ಸಂಗ್ರಹದಲ್ಲಿ ಬಿಜೆಪಿ ನಂ.1, ಕಾಂಗ್ರೆಸ್ ಹಿಂದಿಕ್ಕಿದ ಬಿಆರ್ ಎಸ್!
ದೇಣಿಗೆ ಪಡೆಯುವ ರಾಜಕೀಯ ಪಕ್ಷಗಳ ಪಟ್ಟಿಯಲ್ಲಿ ಬಿಜೆಪಿ ಅಗ್ರಸ್ಥಾನ ಕಾಯ್ದುಕೊಂಡಿದ್ದರೆ, ಕಾಂಗ್ರೆಸ್ ಹಿಂದಿಕ್ಕಿದ ಕೆಸಿ ಚಂದ್ರಶೇಖರ್ ನೇತೃತ್ವದ ಬಿಆರ್ ಎಸ್ ಪಕ್ಷ ಎರಡನೇ ಸ್ಥಾನಕ್ಕೆ ಲಗ್ಗೆ ಹಾಕಿದೆ. 2023-24ನೇ ಸಾಲಿನಲ್ಲಿ ರಾಜಕೀಯ ಪಕ್ಷಗಳಿಗೆ 20 ಸಾವಿರ ಕೋಟಿ ರೂ. ದೇಣಿಗೆ ಮೊತ್ತ



