ಸರ್ಕಾರಿ ಗೌರವಗಳೊಂದಿಗೆ ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ.ಸರೋಜಾದೇವಿ ಅವರ ಅಂತ್ಯಕ್ರಿಯೆ ಹುಟ್ಟೂರು ಚನ್ನಪಟ್ಟಣದ ದಶಾವರದಲ್ಲಿ ತಾಯಿಯ ಸಮಾಧಿ ಪಕ್ಕವೇ ಸಕಲ ಸರ್ಕಾರಿ ಗೌರವದೊಂದಿಗೆ, ಒಕ್ಕಲಿಗ ಸಂಪ್ರದಾಯದಂತೆ ನೆರವೇರಿದೆ.
ಬೆಂಗಳೂರಿನಲ್ಲಿ ಮಂಗಳವಾರ ಬೆಳಿಗ್ಗೆ ಸಾರ್ವಜನಿಕ ದರ್ಶನದ ನಂತರ ಪಾರ್ಥಿವ ಶರೀರವನ್ನು ಮೆರವಣಿಗೆ ಮೂಲಕ ಸರೋಜಾದೇವಿ ಅವರ ತವರೂರು ದಶಾವರಕ್ಕೆ ಮೆರವಣಿಗೆ ಮೂಲಕ ತರಲಾಯಿತು. ಬಳಿಕ ಪಲ್ಲಕ್ಕಿಯಲ್ಲಿಟ್ಟು ಅವರ ಪಾರ್ಥೀವ ಶರೀರವನ್ನು ತಂದು ಅಂತ್ಯಸಂಸ್ಕಾರ ಮಾಡಲಾಯಿತು.
ಸರೋಜಾದೇವಿ ಬರೆದ ವ್ಹಿಲ್ ಪ್ರಕಾರ, ಗಂಡ ಹರ್ಷ ಸಮಾಧಿ ಪಕ್ಕವೇ ಕೊಡಿಗೇಹಳ್ಳಿಯ ತೋಟದ ಮನೆಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಬೇಕಿತ್ತು. ಆದರೆ ಸರೋಜಾದೇವಿ ತೋಟದ ಪಕ್ಕ ಅಪಾರ್ಟ್‌ಮೆಂಟ್‌ಗಳು ತಲೆ ಎತ್ತಿರುವುದರಿಂದ ಚನ್ನಪಟ್ಟಣದ ದಶಾವರದ ಗ್ರಾಮದಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ.
ಬೆಳಗ್ಗೆ 10 ಗಂಟೆಯವರೆಗೆ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ನಂತರ ಪಾರ್ಥಿವ ಶರೀರವನ್ನು ಚನ್ನಪಟ್ಟಣಕ್ಕೆ ಕೊಂಡೊಯ್ದು, ಚನ್ನಪಟ್ಟಣದ ಗಾಂಧಿ ಭವನದ ಬಳಿ ಸಾರ್ವಜನಿಕ ದರ್ಶನದ ಬಳಿಕ ಹುಟ್ಟೂರಿಗೆ ತರಲಾಯಿತು.
ಬೆಳಿಗ್ಗೆ ಮಾಹಿತಿ ನೀಡಿದ್ದ ಪುತ್ರ ಗೌತಮ್, ಪತಿ ಪಕ್ಕದಲ್ಲೇ ಅಂತ್ಯ ಸಂಸ್ಕಾರ ಮಾಡಬೇಕು ಎಂಬ ಆಸೆಯನ್ನು ಅಮ್ಮ ವ್ಯಕ್ತಪಡಿಸಿದ್ದರು. ಆದರೆ ಆ ಜಾಗ ಈಗ ಲೇಔಟ್, ಅಪಾರ್ಟ್ಮೆಂಟ್ ಆಗಿದೆ. ಹೀಗಾಗಿ ಅಲ್ಲಿ ಅಂತ್ಯ ಸಂಸ್ಕಾರ ಮಾಡಲು ಸಾಧ್ಯವಿಲ್ಲ. ದಶವಾರ ಅವರು ಹುಟ್ಟಿದ ಜಾಗ. ಅವರ ತಾಯಿಯನ್ನು ಅಲ್ಲೇ ಮಣ್ಣು ಮಾಡಲಾಗಿದೆ. ಹಾಗಾಗಿ ಅಲ್ಲೇ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿಸಿದ್ದರು.