Menu

ಬ್ಯಾಡ್ಮಿಂಟನ್ ತಾರೆಗಳಾದ ಸೈನಾ- ಕಶ್ಯಪ್ ದಾಂಪತ್ಯ ಅಂತ್ಯ

saina nehwal

ಹೈದರಾಬಾದ್: ಒಲಿಂಪಿಕ್ಸ್‌ ಕಂಚಿನ ಪದಕ ವಿಜೇತೆ ಸೈನಾ ನೆಹ್ವಾಲ್‌ ಮತ್ತು ಪಾರುಪಳ್ಳಿ ಕಶ್ಯಪ್ ದಂಪತಿ ಪರಸ್ಪರ ಬೇರ್ಪಡುವ ನಿರ್ಧಾರವನ್ನು ಪ್ರಕಟಿಸಿದ್ದಾರೆ.

35 ವರ್ಷ ವಯಸ್ಸಿನ ಸೈನಾ ಸೋಮವಾರ ಬೆಳಿಗ್ಗೆ ಇನ್‌ಸ್ಟಾಗ್ರಾಮ್‌ನಲ್ಲಿ ಜೀವನವು ಕೆಲವೊಮ್ಮೆ ನಮ್ಮನ್ನು ವಿಭಿನ್ನ ದಿಕ್ಕುಗಳಲ್ಲಿ ಕರೆದೊಯ್ಯುತ್ತದೆ. ಸಾಕಷ್ಟು ಆಲೋಚನೆಯ ನಂತರ ನಾವಿಬ್ಬರು ಬೇರೆಯಾಗಲು ನಿರ್ಧರಿಸಿದ್ದೇವೆ ಎಂದು ಪೋಸ್ಟ್ ಮಾಡುವ ಮೂಲಕ ವಿಚ್ಛೇದನವನ್ನು ಘೋಷಿಸಿದ್ದಾರೆ.

ನೆನಪುಗಳಿಗೆ ನಾನು ಕೃತಜ್ಞನಾಗಿದ್ದೇನೆ ಮತ್ತು ಮುಂದುವರಿಯಲು ಉತ್ತಮವಾದದ್ದನ್ನು ಮಾತ್ರ ಬಯಸುತ್ತೇನೆ. ಈ ಸಮಯದಲ್ಲಿ ನಮ್ಮ ಖಾಸಗಿತನವನ್ನು ಗೌರವಿಸುತ್ತೀರಿ ಎಂದು ಭಾವಿಸುತ್ತೇನೆ ಎಂದು ಸೈನಾ ಹೇಳಿಕೊಂಡಿದ್ದಾರೆ.

ನೆಹ್ವಾಲ್ ಒಲಿಂಪಿಕ್ಸ್‌ ಕಂಚಿನ ಪದಕ ಮತ್ತು ವಿಶ್ವದ ನಂ. 1 ಶ್ರೇಯಾಂಕ ಪಡೆದಿದ್ದರೆ ಪರುಪಳ್ಳಿ ಕಶ್ಯಪ್ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನ ಗೆದಿದ್ದರು. ಒಂದು ದಶಕಕ್ಕೂ ಹೆಚ್ಚು ಕಾಲ ಗೆಳೆಯರಾಗಿದ್ದ ಇವರು 2018 ರಲ್ಲಿ ಮದುವೆಯಾಗಿದ್ದರು. ಕ್ರೀಡೆಯಿಂದ ನಿವೃತ್ತರಾದ ನಂತರ ಕಶ್ಯಪ್ ಈಗ ತರಬೇತಿ ನೀಡುತ್ತಿದ್ದರೆ ಸೈನಾ ನೆಹ್ವಾಲ್‌ ಇನ್ನೂ ನಿವೃತ್ತಿ ಹೇಳಿಲ್ಲ.

2018ರಲ್ಲಿ ಬ್ಯಾಡ್ಮಿಂಟನ್‌ ಆಟಗಾರನಾಗಿದ್ದ ಕಶ್ಯಪ್ ಅವರನ್ನು ಸೈನಾ ವಿವಾಹವಾಗಿದ್ದರು. 2019 ರ ರಾಷ್ಟ್ರೀಯ ಚಾಂಪಿಯನ್‌ಶಿಪ್‌ನಲ್ಲಿ ನೆಹ್ವಾಲ್ ಪಿವಿ ಸಿಂಧು ಅವರನ್ನು ಸೋಲಿಸಿದಾಗ ಮೈದಾನದಲ್ಲಿ ಕಶ್ಯಪ್ ಅವರು ಮಾರ್ಗದರ್ಶನ ನೀಡಿದ್ದರು.

Related Posts

Leave a Reply

Your email address will not be published. Required fields are marked *