Menu

ಮುಜರಾಯಿ ದೇವಾಯಲಗಳಲ್ಲಿ ಪ್ಲಾಸ್ಟಿಕ್ ನಿಷೇಧ: ರಾಜ್ಯ ಸರ್ಕಾರ ಮಹತ್ವದ ಘೋಷಣೆ

ramalinga reddy

ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ನೀರಿನ ಬಾಟಲ್‌ ಸೇರಿದಂತೆ ಎಲ್ಲಾ ಬಗೆಯ ಪ್ಲಾಸ್ಟಿಕ್‌ ಬಳಕೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಈ ಆದೇಶ ಆಗಸ್ಟ್ 15ರಿಂದ ಜಾರಿಗೆ ಬರಲಿದೆ.

ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಸೋಮವಾರ ಮುಜರಾಯಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಪ್ರಕಟಿಸಿದರು.

ಆಗಸ್ಟ್ 15 ರಿಂದ ಪ್ಲಾಸ್ಟಿಕ್‌ ಮುಕ್ತ ದೇವಾಲಯ ಪ್ರಾರಂಭ ಮಾಡುತ್ತಿದ್ದೇವೆ. ದೇವಾಲಯಗಳಲ್ಲಿ ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್‌ ಬಳಕೆ ಮಾಡಬಾರದು ಎಂದು ಸೂಚಿಸಿದರು.

ಈ ಆದೇಶ ಜಾರಿಗೆ 2 ತಿಂಗಳು ಸಮಯ ಕೊಡಲಾಗಿದ್ದು, ಈಗಾಗಲೇ ಪ್ಲಾಸ್ಟಿಕ್‌ ಪದಾರ್ಥಗಳು ತೆಗೆದುಕೊಂಡಿದ್ದರೆ ಅದನ್ನು ಬಳಕೆ ಮಾಡಬಹುದು. ಆಗಸ್ಟ್ 15 ರಿಂದ ದೇವಾಲಯಗಳಲ್ಲಿ ಪ್ಲಾಸ್ಟಿಕ್‌ ಬಳಕೆಗೆ ಅವಕಾಶ ಇರುವುದಿಲ್ಲ ಎಂದು ಹೇಳಿದರು.

ಆನ್​ಲೈನ್​ ಬುಕ್ಕಿಂಗ್

ಅಲ್ಲದೇ ಬಹುಮುಖ್ಯವಾಗಿ ಬೇರೆ ರಾಜ್ಯದಲ್ಲಿ ಇರುವ ಭವನಗಳ ರೂಮ್‌ ಬುಕ್ಕಿಂಗ್‌ ಅನ್ನು ಆನ್‌ಲೈನ್‌ ಮೂಲಕ ಜಾರಿ ಮಾಡಲು ವ್ಯವಸ್ಥೆ ರೂಪಿಸಲು ರಾಮಲಿಂಗರೆಡ್ಡಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದು ಜಾರಿಗೆ ಬಂದರೆ, ಬೇರೆ ರಾಜ್ಯಗಳಲ್ಲಿರುವ ಕರ್ನಾಟಕದ ಭವನಗಳನ್ನು ಆನ್​ ಲೈನ್​ ಮೂಲಕವೇ ಬುಕ್ಕಿಂಗ್ ಮಾಡಿಕೊಂಡು ಹೋಗಬಹುದು.

ಸಭೆಯ ಮುಖ್ಯಾಂಶಗಳು

  • ಮುಜರಾಯಿ ವ್ಯಾಪ್ತಿಯ ದೇವಾಲಯಗಳ ಮಾಹಿತಿಯನ್ನು 3 ತಿಂಗಳ ಒಳಗೆ ಕೊಡಬೇಕು. 3 ತಿಂಗಳ ಒಳಗೆ ಬಾಕಿ ಇರುವ 20 ಸಾವಿರ ಎಕರೆ ದೇವಾಲಯ ಜಮೀನು ಇಂಡೀಕರಣ ಆಗಬೇಕು.
  •  ಗ್ರಾಮಾಂತರ ಮತ್ತು ನಗರ ಭಾಗದಲ್ಲಿ ಇರುವ ಮುಜರಾಯಿ ದೇವಾಲಯಗಳ ಆಸ್ತಿಗಳನ್ನ ಪ್ರತ್ಯೇಕ ಸರ್ವೆ ಮಾಡಬೇಕು. ದೇವಸ್ಥಾನ ಹೆಸರಿನಲ್ಲಿ ಖಾತೆ, ಆಸ್ತಿ ಪತ್ರ ದಾಖಲೆಗಳು ಸರಿಯಾಗಿ ಇರದಿದ್ದರೆ ಎಲ್ಲಾ ದೇವಾಲಯದ ಜಾಗ 3 ತಿಂಗಳ ಒಳಗಡೆ ಸರ್ವೆ ಮಾಡಿ ನೋಟಿಫಿಕೇಶನ್ ಮಾಡಲು ಸೂಚನೆ.
  • ಅರ್ಚಕರಿಗೆ ತಸ್ತೀಕ್ ನೇರ ವರ್ಗಾವಣೆ(DBT) ಮೂಲಕ ನೀಡಲು ಕ್ರಮ. ಈಗ 25 ಸಾವಿರ ಅರ್ಚಕರ ಪೈಕಿ 14 ಸಾವಿರ ಅರ್ಚಕರು ಮಾಹಿತಿ ಕೊಟ್ಟಿದ್ದಾರೆ. ಉಳಿದವರು ಬೇಗ ಮಾಹಿತಿ ಕೊಟ್ಟರೆ ಅವರಿಗೂ DBT ಮೂಲಕ ತಸ್ತೀಕ್ ನೀಡಲು ಕ್ರಮ.
  • 31 ಜಿಲ್ಲೆಗಳಲ್ಲಿ ಧಾರ್ಮಿಕ ಪರಿಷತ್ ರಚನೆಗೆ ಕ್ರಮಕ್ಕೆ ಸೂಚನೆ ನೀಡಲಾಗಿದೆ. 8 ಜಿಲ್ಲೆಯಲ್ಲಿ ಮಾತ್ರ ಧಾರ್ಮಿಕ ಪರಿಷತ್ ರಚನೆಯಾಗಿದ್ದು ಉಳಿದ ಕಡೆ ಶೀಘ್ರವೇ ಮಾಡಬೇಕು.
  • ಬೇರೆ ಬೇರೆ ರಾಜ್ಯದಲ್ಲಿ ಇರೋ ಮುಜರಾಯಿ ಇಲಾಖೆ ವಸತಿ ಭವನಗಳಲ್ಲಿ 3 ಸ್ಟಾರ್ ಸೌಲಭ್ಯ ಗಳನ್ನು ನೀಡಲು ನಿರ್ಧಾರ. ತಿರುಪತಿ, ತುಳಿಜಾಪುರ, ಪಂಡರಾಪುರ, ಸೇರಿ ಹಲವು ಕಡೆ ಭವನಗಳನ್ನು ನಿರ್ಮಾಣಕ್ಕೆ ಅಗತ್ಯ ಕ್ರಮ ತೆಗೆದುಕೊಳ್ಳುವುದು.
  • ಬೇರೆ ರಾಜ್ಯದಲ್ಲಿ ಇರುವ ಭವನಗಳ ರೂಮ್‌ ಬುಕ್ಕಿಂಗ್‌ ಅನ್ನು ಆನ್‌ಲೈನ್‌ ಮೂಲಕ ಜಾರಿ ಮಾಡಲು ವ್ಯವಸ್ಥೆ ರೂಪಿಸಲು ಸೂಚನೆ.
  • ಹೊಸ ಪ್ರಾಧಿಕಾರಗಳ ಸಮಗ್ರ ಯೋಜನೆಗೆ ಕ್ರಮವಹಿಸಲಾಗಿದೆ. ಹುಲಿಗೆಮ್ಮ, ಮಲೆ ಮಹದೇಶ್ವರ, ಘಾಟಿ ಸುಬ್ರಮಣ್ಯ, ರೇಣುಕಾ ಎಲ್ಲಮ್ಮ, ಚಾಮುಂಡೇಶ್ವರಿ ದೇವಾಲಯ ಅಭಿವೃದ್ಧಿ ಪ್ರಾಧಿಕಾರ ಮಾಸ್ಟರ್ ಪ್ಲ್ಯಾನ್ ಮಾಡಲು ನಿರ್ಧಾರ.
  • ಚಾಮುಂಡೇಶ್ವರಿ ಬೆಟ್ಟದಲ್ಲಿ ಒತ್ತುವರಿ ಆಗಿದ್ದ 11 ಎಕರೆ ಜಾಗವನ್ನು ತೆರವು ಮಾಡಲಾಗಿದೆ. ಉಳಿದ ಜಾಗ ತೆರವುಗೊಳಿಸಲು ಸೂಚನೆ.
  • ಕಳೆದ 3 ತಿಂಗಳಲ್ಲಿ 1,253 ದೇವಾಲಯಗಳನ್ನು ಗುರುತಿಸಲಾಗಿದೆ. 11,332 ಆಸ್ತಿ ಗುರುತಿಸಿ ನಮೂದಿಸಲಾಗಿದೆ. ಹೊರರಾಜ್ಯಗಳಲ್ಲಿ ವಸತಿ ಗೃಹಗಳನ್ನು ನಿರ್ಮಿಸಲು ಯೋಜನೆ. ತಿರುಪತಿಯ ಗಾಂಧಿ ರಸ್ತೆಯಲ್ಲಿರುವ ಜಾಗದಲ್ಲಿ ವಸತಿಗೃಹ, ವಸತಿಗೃಹ ಸಂಕೀರ್ಣ ನಿರ್ಮಾಣ ಮಾಡಲು ಸೂಚಿಸಲಾಗಿದೆ.
  • ದೇವಾಲಯದ ಅರ್ಚಕರ ಮಕ್ಕಳಿಗೆ ಅರ್ಚಕರ 249 ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಲಾಗಿದೆ. ಅರ್ಚಕರ ಮಕ್ಕಳ ವಿದ್ಯಾರ್ಥಿ ವೇತನಕ್ಕೆ 34,37,000 ರೂ.
  • ಮರಣಹೊಂದಿದ 7 ಅರ್ಚಕರ ಕುಟುಂಬಕ್ಕೆ ಪರಿಹಾರ ನೀಡಿದ್ದೇವೆ. ಮರಣೋತ್ತರ ಪರಿಹಾರ 14 ಲಕ್ಷ ರೂಪಾಯಿ ನೀಡಲಾಗಿದೆ.

Related Posts

Leave a Reply

Your email address will not be published. Required fields are marked *