ಬೆಂಗಳೂರು-ಕಾಮಕ್ಯ ಎಕ್ಸ್ ಪ್ರೆಸ್ ರೈಲಿನ 11 ಬೋಗಿಗಳು ಒಡಿಶಾದ ಕಟಕ್ ನಲ್ಲಿ ಹಳಿ ತಪ್ಪಿದ್ದರಿಂದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಬೆಂಗಳೂರಿನಿಂದ ಹೊರಟು ಒಡಿಶಾದ ಗುವಾಹತಿಗೆ ಸಂಚರಿಸುತ್ತಿದ್ದ ರೈಲು ಕಟಕ್ ನ ನೆರ್ಗುಂಡಿ ರೈಲು ನಿಲ್ದಾಣದ ಸಮೀಪ ಹಳಿ ತಪ್ಪಿದೆ. ಘಟನೆಯಲ್ಲಿ 8 ಮಂದಿ ಗಾಯಗೊಂಡಿದ್ದಾರೆ.
ರೈಲು ಹಳಿ ತಪ್ಪಲು ಕಾರಣ ತಿಳಿದು ಬಂದಿಲ್ಲ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿದೆ. ಹಳಿ ತಪ್ಪಿದ್ದರಿಂದ ಮೂರು ರೈಲುಗಳ ಮಾರ್ಗವನ್ನು ಬದಲಾಯಿಸಲಾಗಿದೆ. ತನಿಖೆಗೆ ಆದೇಶಿಸಲಾಗಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ತಿಳಿಸಿದ್ದಾರೆ.