ಬೇಸಿಗೆ ಅವಧಿಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿರ್ವಹಿಸಲು ಅನುಕೂಲವಾಗುವಂತೆ ಮುಂಬೈ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಲ್ ಮತ್ತು ಬೆಂಗಳೂರು ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ನಡುವೆ ವಿಶೇಷ ಎಕ್ಸ್ ಪ್ರೆಸ್ ರೈಲುಗಳು ಸಂಚರಿಸಲಿವೆ.
ರೈಲು ಸಂಖ್ಯೆ 01013/01014 ಸಿಎಸ್ಎಂಟಿ ಮುಂಬೈ-ಎಸ್ಎಂವಿಟಿ ಬೆಂಗಳೂರು-ಸಿಎಸ್ಎಂಟಿ ಮುಂಬೈ ವಿಶೇಷ ಎಕ್ಸ್‌ಪ್ರೆಸ್, ರೈಲು ಸಂಖ್ಯೆ 01013 ಸಿಎಸ್ಎಂಟಿ ಮುಂಬೈ – ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ ಏಪ್ರಿಲ್ 5, 12, 19, 26 ಮತ್ತು ಮೇ 3, 10, 17, 24, 31 ಹಾಗೂ ಜೂನ್ 7, 14, 21, 28 (ಶನಿವಾರ) ರಂದು ಸಿಎಸ್ಎಂಟಿ ಮುಂಬೈನಿಂದ 00:30 ಗಂಟೆಗೆ ಹೊರಟು, ಅದೇ ದಿನ 23:55 ಗಂಟೆಗೆ ಎಸ್ಎಂವಿಟಿ ಬೆಂಗಳೂರು ನಿಲ್ದಾಣಕ್ಕೆ ತಲುಪಲಿದೆ.
ರೈಲು ಸಂಖ್ಯೆ 01014 ಎಸ್ಎಂವಿಟಿ ಬೆಂಗಳೂರು – ಸಿಎಸ್ಎಂಟಿ ಮುಂಬೈ ವಿಶೇಷ ಎಕ್ಸ್‌ಪ್ರೆಸ್ ಏಪ್ರಿಲ್ 6, 13, 20, 27 ಮತ್ತು ಮೇ 4, 11, 18, 25 ಹಾಗೂ ಜೂನ್ 1, 8, 15, 22, 29 (ಭಾನುವಾರ) ರಂದು ಎಸ್ಎಂವಿಟಿ ಬೆಂಗಳೂರಿನಿಂದ 04:40 ಗಂಟೆಗೆ ಹೊರಟು, ಮರುದಿನ 04:05 ಗಂಟೆಗೆ ಸಿಎಸ್ಎಂಟಿ ಮುಂಬೈ ತಲುಪಲಿದೆ.
ಈ ರೈಲು ಎರಡೂ ದಿಕ್ಕುಗಳಲ್ಲಿ ದಾದರ್, ಥಾಣೆ, ಕಲ್ಯಾಣ್, ಲೋನಾವಾಲ, ಪುಣೆ, ಸತಾರಾ, ಕರಾಡ್, ಸಾಂಗ್ಲಿ, ಮಿರಜ್, ಕುಡಚಿ, ರಾಯಬಾಗ್, ಘಟಪ್ರಭಾ, ಬೆಳಗಾವಿ, ಲೋಂಡಾ, ಧಾರವಾಡ, ಎಸ್ಎಸ್ಎಸ್ ಹುಬ್ಬಳ್ಳಿ, ಎಸ್ಎಂಎಂ ಹಾವೇರಿ, ರಾಣಿಬೆನ್ನೂರು, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.
ಈ ರೈಲಿನಲ್ಲಿ 22 ಬೋಗಿಗಳಿದ್ದು, 1-ಎಸಿ ಟು ಟೈರ್, 5-ಎಸಿ ತ್ರಿ ಟೈರ್, 10-ಸ್ಲೀಪರ್ ಕ್ಲಾಸ್, 4-ಜನರಲ್ ಸೆಕೆಂಡ್ ಕ್ಲಾಸ್ ಮತ್ತು 2-ಎಸ್‌ಎಲ್‌ಆರ್‌ಡಿ ಬೋಗಿಗಳು ಸೇರಿವೆ. ಮುಂಗಡ ಬುಕ್ಕಿಂಗ್ ಮತ್ತು ಆಗಮನ/ನಿರ್ಗಮನ ಸಮಯ ಗಳ ಕುರಿತು ವಿವರಗಳಿಗಾಗಿ ಅಧಿಕೃತ ರೈಲ್ವೆ ವೆಬ್‌ಸೈಟ್‌ಗೆ ಭೇಟಿ ನೀಡಬಹುದು ಅಥವಾ ಹತ್ತಿರದ ರೈಲ್ವೆ ಬುಕಿಂಗ್ ಕೌಂಟರ್‌ಗಳನ್ನು ಸಂಪರ್ಕಿಸಬಹುದು.