Menu

ದರ್ಶನ್‌ ಸೇರಿ 7ಆರೋಪಿಗಳ ಜಾಮೀನು ರದ್ದು ಕೋರಿ ಸುಪ್ರೀಂಗೆ ಪೊಲೀಸ್‌ ಮನವಿ

Actor Darshan

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಸೇರಿ ಏಳು ಮಂದಿ ಆರೋಪಿಗಳ ಜಾಮೀನು ರದ್ದು ಕೋರಿ ನಗರ ಪೊಲೀಸರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ರಾಜ್ಯ ಸರ್ಕಾರದ ಪರವಾಗಿ ಸುಪ್ರೀಂ ಕೋರ್ಟ್‌ ಹಿರಿಯ ವಕೀಲರಾದ ಅನಿಲ್ ಸಿ.ನಿಶಾನಿ ಮತ್ತು ಸಿದ್ದಾರ್ಥ್ ಲೂತ್ರಾ , ಈ ಏಳು ಆರೋಪಿಗಳ ಜಾಮೀನು ರದ್ದು ಕೋರಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ಏಕೆ ಆರೋಪಿಗಳ ಜಾಮೀನು ರದ್ದು ಮಾಡಬೇಕು ಎಂಬುದಕ್ಕೆ ಕಾರಣವನ್ನು ಮೇಲ್ಮನವಿಯಲ್ಲಿ ಉಲ್ಲೇಖಿಸಿದ್ದಾರೆ. ಒಂದು ವೇಳೆ ಸುಪ್ರೀಂ ಕೋರ್ಟ್ ಹೈಕೋರ್ಟ್ ಆದೇಶ ರದ್ದುಗೊಳಿಸಿದರೆ ಆರೋಪಿಗಳು ಮತ್ತೆ ಜೈಲು ಸೇರಬೇಕಾಗುತ್ತದೆ.

ಆರೋಪಿಗಳಾದ ನಟ ದರ್ಶನ್, ಪವಿತ್ರಾಗೌಡ, ಆರ್.ನಾಗರಾಜ್, ಅನುಕುಮಾರ್, ಲಕ್ಷ್ಮಣ್, ಜಗದೀಶ್ ಮತ್ತು ಪ್ರದೇಷ್‌ಗೆ ಹೈಕೋರ್ಟ್ ಡಿ.13ರಂದು ಷರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು. ಇದೀಗ ಹೈಕೋರ್ಟ್ ಜಾಮೀನು ಆದೇಶ ರದ್ದು ಕೋರಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿರುವುದರಿಂದ ಆತಂಕ ಎದುರಾಗಿದೆ. ಆರೋಪಿಗಳಿಗೆ ಜಾಮೀನು ರದ್ದು ಭೀತಿ ಎದುರಾಗಿದೆ.

ರೇಣುಕಾಸ್ವಾಮಿಯನ್ನು ಜೂ.8ರ ರಾತ್ರಿ ಪಟ್ಟಣಗೆರೆಯ ಶೆಡ್‌ನಲ್ಲಿ ಹಿಂಸೆ ನೀಡಿ ಕೊಲೆ ಮಾಡಲಾಗಿತ್ತು, ಜೂನ್.9ರಂದು ಸುಮ್ಮನಹಳ್ಳಿಯ ರಾಜಕಾಲುವೆ ಬಳಿ ರೇಣುಕಾಸ್ವಾಮಿ ಮೃತದೇಹ ಪತ್ತೆಯಾಗಿತ್ತು. ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದರು.

Related Posts

Leave a Reply

Your email address will not be published. Required fields are marked *