Menu

ಚಿಕ್ಕಮಗಳೂರಲ್ಲಿ ಶವವಾಗಿ ಪತ್ತೆಯಾದ ಬೆಂಗಳೂರಿನ ಯುವ ಜೋಡಿ

ಚಿಕ್ಕಮಗಳೂರು ತಾಲೂಕಿನ ದಾಸರಹಳ್ಳಿ ಗ್ರಾಮದಲ್ಲಿ ಬೆಂಗಳೂರಿನ ಯುವಕ ಹಾಗೂ ಯುವತಿಯ ಶವಗಳು ಅನುಮಾನಾಸ್ಪದವಾಗಿ ಪತ್ತೆಯಾಗಿವೆ. ಯುವತಿ ಕಾರಿನಲ್ಲಿ ಮೃತಪಟ್ಟ ಸ್ಥಿತಿಯಲ್ಲಿದ್ದರೆ ಯುವಕನ ಮೃತದೇಹ ಕಾರು ನಿಂತ ಜಾಗದ ಪಕ್ಕದ ಮರದಲ್ಲಿ ಪತ್ತೆಯಾಗಿದೆ.

ಮೃತ ಯುವಜೋಡಿಯ ವಯಸ್ಸು ಅಂದಾಜು 25-30ರ ಒಳಗಿದ್ದು, ಈ ಸಾವಿನ ಸುತ್ತ ಅನುಮಾನಗಳು ಹುಟ್ಟಿಕೊಂಡಿವೆ. ಯುವತಿಯ ಕುತ್ತಿಗೆಯಲ್ಲಿ ಕತ್ತು ಹಿಸುಕಿರುವ ಗುರುತು ಇದೆ. ಯುವಕ ಕಾರು ನಿಂತ ಜಾಗದ ಪಕ್ಕದ ಮರಕ್ಕೆ ವೇಲ್‌ನಿಂದ ನೇಣು ಬಿಗಿದುಕೊಂಡಿದ್ದಾನೆ. ವೇಲ್ ಕುಣಿಕೆಗೆ ಕೊರಳೊಡ್ಡಿ ಜಿಗಿದರೆ ವೇಲ್ ತುಂಡಾಗುವ ಸಾಧ್ಯತೆಯೂ ಇದ್ದರೂ ಯುವಕನ ಶವ ನೇತಾಡುತ್ತಿರುವುದು ಶಂಕಾಸ್ಪದವಾಗಿದೆ. ರಸ್ತೆ ಬದಿಯ ಪಕ್ಕದ ಚರಂಡಿಗೆ ಕಾರಿನ ಎರಡು ಚಕ್ರಗಳು ಇಳಿದಿದ್ದು ಏಕೆ, ಹೇಗೆ ಇಳಿಯಿತು ಎಂಬ ಪ್ರಶ್ನೆಗಳನ್ನು ಹುಟ್ಟು ಹಾಕಿದೆ.

ಕಾರು ಮೂಲತಃಬೆಂಗಳೂರು ನೋಂದಣಿ ಸಂಖ್ಯೆ ಹೊಂದಿದ್ದು, ಎಲ್ಲೋ ಬೋರ್ಡ್ ಇದೆ. ಮೃತ ಯುವಕ ಡ್ರೈವರ್ ಇರಬಹುದು ಎಂದು ಅಂದಾಜಿಸಲಾಗಿದ್ದು, ಬೆಂಗಳೂರಿನ ಮಾಗಡಿಯವನು ಎಂದು ತಿಳಿದು ಬಂದಿದೆ. ಯುವತಿ ಎಲ್ಲಿಯವಳು ಎಂಬ ಮಾಹಿತಿ ಲಭ್ಯವಾಗಿಲ್ಲ. ಸ್ಥಳಕ್ಕೆ ಗ್ರಾಮಾಂತರ‌ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related Posts

Leave a Reply

Your email address will not be published. Required fields are marked *