Thursday, January 30, 2025
Menu

ನಟ ಸೈಫ್ ಹತ್ಯೆಗೆ ಯತ್ನಿಸಿದ್ದ ಬಾಂಗ್ಲಾದೇಶಿ ಅರೆಸ್ಟ್‌

ನಟ ಸೈಫ್ ಅಲಿ ಖಾನ್ ಹತ್ಯೆಗೆ ಯತ್ನಿಸಿ ಹಲವು ಬಾರಿ ಚಾಕುವಿನಿಂದ ಇರಿದಾತ ಬಾಂಗ್ಲಾದೇಶಿ ಎಂಬ ಅನುಮಾನವಿದೆ ಎಂದು ಮುಂಬೈ ಮಹಾನಗರ ವಿಭಾಗ-9ರ ಡಿಸಿಪಿ ದೀಕ್ಷಿತ್ ಗೆಡಾಮ್ ಮಾಹಿತಿ ನೀಡಿದ್ದಾರೆ. ಚಾಕು ಇರಿದ ವ್ಯಕ್ತಿಯನ್ನು ಘಟನೆ ನಡೆದ 70 ಗಂಟೆ ಬಳಿಕ ಮುಂಬೈ ಪೊಲೀಸರು ಭಾನುವಾರ ಥಾಣೆಯಲ್ಲಿ ಬಂಧಿಸಿದ್ದಾರೆ.

ಬಂಧಿತ ಆರೋಪಿ ಭಾರತೀಯನಲ್ಲ ಬದಲಿಗೆ ಬಾಂಗ್ಲಾದೇಶಿ ಎಂಬ ಅನುಮಾನವಿದೆ ಎಂದು ದೀಕ್ಷಿತ್ ಹೇಳಿದ್ದು, ಆತನ ಬಳಿ ಭಾರತಕ್ಕೆ ಸಂಬಂಧಿಸಿದ ಯಾವುದೇ ಆಧಾರ್ ಕಾರ್ಡ್ ಅಥವಾ ಇನ್ನಿತರ ದಾಖಲೆಗಳು ಪತ್ತೆಯಾಗಿಲ್ಲ. ತನ್ನ ಹೆಸರು ವಿಜಯ್ ದಾಸ್ ಎಂದು ಹೇಳಿಕೊಂಡಿರುವುದಾಗಿ ಹೇಳಿದ್ದಾರೆ. ಆತನ ಮೂಲ ಹೆಸರು ಬೇರೆಯದೇ ಇದೆಯೆಂಬ ಅನುಮಾನ ಪೊಲೀಸರದು.

ಆರೋಪಿಯನ್ನು ನ್ಯಾಯಾಧೀಶರ ಮುಂದೆಹಾಜರುಪಡಿಸಿ ನಂತರ ವಶಕ್ಕೆ ಪಡೆಯಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆರೋಪಿ ಮುಂಬೈನ ಪಬ್ ಒಂದರಲ್ಲಿ ಕೆಲಸ ಮಾಡುತ್ತಿದ್ದ, ಬಾಂಗ್ಲಾದೇಶದಿಂದ ಅಕ್ರಮವಾಗಿ ಬಂದಿರುವ ಈತ ಹೆಸರು ಬದಲಾವಣೆ ಮಾಡಿಕೊಂಡು ಓಡಾಡುತ್ತಿದ್ದ ಎಂಬ ಮಾಹಿತಿ ಲಭಿಸಿದೆ ಎನ್ನಲಾಗಿದೆ.

Related Posts

Leave a Reply

Your email address will not be published. Required fields are marked *