Menu

ಬ್ಯಾಂಕ್ ಗೆ ವಂಚನೆ: ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ 3 ವರ್ಷ ಶಿಕ್ಷೆ!

ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಕೃಷ್ಣಯ್ಯ ಶೆಟ್ಟಿ ಸೇರಿದಂತೆ ನಾಲ್ವರಿಗೆ ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕ್ ಗೆ ವಂಚಿಸಿದ ಪ್ರಕರಣದಲ್ಲಿ ತಲಾ 3 ವರ್ಷ ಶಿಕ್ಷೆ ಹಾಗೂ 7.75 ಲಕ್ಷ ರೂ. ದಂಡ ವಿಧಿಸಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಗಜಾನನ ಭಟ್ ಅವರನ್ನೊಳಗೊಂಡ ಪೀಠ ಗುರುವಾರ ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್ ಬಿಐ) ಗೆ ವಂಚಿಸಿದ ಪ್ರಕರಣದಲ್ಲಿ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ, ಶ್ರೀನಿವಾಸು, ಮುನಿರಾಜು, ಎಂಟಿವಿ ರೆಡ್ಡಿ ಅವರನ್ನು ದೋಷಿ ಎಂದು ಘೋಷಿಸಿತು.

ನಾಲ್ವರು ಅಪರಾಧಿಗಳಿಗೆ ತಲಾ 3 ವರ್ಷ ಶಿಕ್ಷೆ ಹಾಗೂ 7.75 ಲಕ್ಷ ರೂ. ದಂಡ ವಿಧಿಸಿದೆ. ಇದರಲ್ಲಿ ಕೃಷ್ಣಯ್ಯ ಶೆಟ್ಟಿ ಅವರಿಗೆ ಪ್ರತ್ಯೇಕವಾಗಿ 5.25 ಲಕ್ಷ ರೂ. ದಂಡ ವಿಧಿಸಲಾಗಿದೆ.

21 ವರ್ಷ ಹಿಂದಿನ ಪ್ರಕರಣ ಇದಾಗಿದ್ದು, ಆರೋಪಿಗಳು ವಂಚಿಸಿದ ಮೊತ್ತವನ್ನು ಬ್ಯಾಂಕ್ ಗೆ ಹಿಂತಿರುಗಿಸಿದ ಕಾರಣ ಪ್ರಕರಣ ಮಹತ್ವ ಕಳೆದುಕೊಂಡಿದೆ. ಆದರೆ ವಂಚನೆ ಮಾಡಿರುವುದು ವಿಚಾರಣೆ ವೇಳೆ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಕನಿಷ್ಠ ೩ ವರ್ಷ ಶಿಕ್ಷೆ ವಿಧಿಸಲಾಗಿದೆ ಎಂದು ನ್ಯಾಯಮೂರ್ತಿಗಳು ತಿಳಿಸಿದರು.

ಇದೇ ವೇಳೆ 3 ವರ್ಷ ಶಿಕ್ಷೆಗೆ ಒಳಪಟ್ಟರೆ ಜಾಮೀನು ಪಡೆಯುವ ಅವಕಾಶ ಇರುವುದರಿಂದ ಶಿಕ್ಷೆಯನ್ನು ಅಮಾನತಿನಲ್ಲಿಟ್ಟು ಮೇಲ್ಮನವಿಗೆ ಅವಕಾಶ ನೀಡಬೇಕು ಎಂದು ಕೃಷ್ಣಯ್ಯ ಶೆಟ್ಟಿ ಪರ ವಕೀಲ ನರೇಂದ್ರ ನಾಯಕ್ ಮನವಿ ಮಾಡಿದರು. ಈ ಹಿನ್ನೆಲೆಯಲ್ಲಿ ಶಿಕ್ಷೆ ಜಾರಿಗೆ ೧ ತಿಂಗಳು ಅಮಾನತಿನಲ್ಲಿಟ್ಟು ಆದೇಶ ಹೊರಡಿಸಿದ್ದಾರೆ.

ನಕಲಿ ದಾಖಲೆಗಳನ್ನು ಸೃಷ್ಟಿಸಿ ಎಸ್ ಬಿಐ ಬ್ಯಾಂಕ್ಗೆ ವಂಚಿಸಿದ ಆರೋಪದ ಮೇಲೆ ಕೃಷ್ಣಯ್ಯ ಶೆಟ್ಟಿ ಮತ್ತು ಇತರ ಆರೋಪಿಗಳ ವಿರುದ್ಧ ದೂರು ದಾಖಲಾಗಿತ್ತು. ಇದು ಬ್ಯಾಂಕ್ ವಂಚನೆ ಪ್ರಕರಣವಾಗಿದ್ದರಿಂದ ಸಿಬಿಐ ಸ್ವಯಂಪ್ರೇರಿತ ದೂರು ದಾಖಲು ಮಾಡಿಕೊಂಡಿತ್ತು.
ತಮ್ಮ ವಿರುದ್ಧ ದಾಖಲಾಗಿದ್ದ ವಂಚನೆ ಪ್ರಕರಣವನ್ನು ತನಿಖೆ ನಡೆಸುತ್ತಿರುವ ಸಿಬಿಐ ತನಿಖೆಯನ್ನು ರದ್ದುಪಡಿಸಬೇಕೆಂದು ಕೃಷ್ಣಯ್ಯ ಶೆಟ್ಟಿ ಹಾಗೂ ಇತರರು ಹೈಕೋರ್ಟ್ ಮೆಟ್ಟಿಲೇರಿದ್ದರು.

ಇದೊಂದು ಗಂಭೀರ ಪ್ರಕರಣವಾಗಿರುವುದರಿಂದ ನೀವು ವಿಶೇಷ ನ್ಯಾಯಾಲಯದಲ್ಲೇ ಇದನ್ನು ಇತ್ಯರ್ಥಗೊಳಿಸಬೇಕೆಂದು ಹೈಕೋರ್ಟ್ ಏಕಸದಸ್ಯ ಪೀಠದ ನ್ಯಾಯಮೂರ್ತಿ ಆನಂದ ಭೈರಾರೆಡ್ಡಿ ಅವರು ಸೂಚಿಸಿ ತನಿಖೆ ಮುಂದುವರೆಸಲು ಆದೇಶಿಸಿದರು.

ಕಳೆದ ಡಿಸೆಂಬರ್ ತಿಂಗಳಿನಲ್ಲಿ ಕೃಷ್ಣಯ್ಯ ಶೆಟ್ಟಿ ಹಾಗೂ ಇತರ ಆರೋಪಿಗಳ ವಿರುದ್ಧ ಸಿಬಿಐ ತನಿಖೆಗೆ ಆದೇಶ ನೀಡಿದ್ದರೂ ಆರೋಪಿಗಳನ್ನು ಬಂಧಿಸದಂತೆ ನಿರ್ಬಂಧ ವಿಧಿಸಿತ್ತು.

ಏನಿದು ಪ್ರಕರಣ?

ಕಳೆದ 1993ರಲ್ಲಿ ಬಾಲಾಜಿಕೃಪಾ ಎಂಟರ್ಪ್ರೈಸಸ್ನ ಮಾಲೀಕರಾಗಿದ್ದ ಕೃಷ್ಣಯ್ಯ ಶೆಟ್ಟಿ ಸಾರ್ವಜನಿಕ ಉದ್ದಿಮೆಗಳ ನೌಕರರಿಗೆ ಗೃಹ ನಿರ್ಮಾಣಕ್ಕೆ ಸಾಲ ಕೊಡಿಸುವುದಾಗಿ ಹೇಳಿ ವಂಚನೆ ನಡೆಸಿದ್ದರು. ಬಿಟಿಎಸ್, ಕೆಎಸ್ಆರ್ಟಿಸಿ, ಬಿಎಸ್ಎನ್ಎಲ್, ಐಟಿಐ, ಎಚ್ಎಎಲ್, ಬಿಇಎಂಎಲ್, ಎಡಿಇ ಸಂಸ್ಥೆಗಳ 181 ಮಂದಿಗೆ 7.17 ಕೋಟಿ ರೂ.ಬ್ಯಾಂಕ್ ಸಾಲ ನಕಲಿ ದಾಖಲೆ ಸೃಷ್ಟಿಸಿ ಪಡೆದ ಆರೋಪವನ್ನು ಎದುರಿಸುತ್ತಿದ್ದಾರೆ.

ಮುಖ್ಯ ವಿಚಕ್ಷಣೆ ದಳದ ಮುಖ್ಯಸ್ಥ ಆರ್.ಡಿ.ನಾಯ್ಡು ನೀಡಿರುವ ದೂರು ಆಧರಿಸಿ, ಸಿಬಿಐ ತನಿಖೆ ಕೈಗೆತ್ತಿಕೊಂಡಿತ್ತು.ಬ್ಯಾಂಕ್ ಖಾತೆಗಳು, ಸಾಲ ವಿತರಣೆಯಾದ ಮಾಹಿತಿ ಕಲೆ ಹಾಕಿ ಸಿಬಿಐ ಚಾರ್ಜ್ಶೀಟ್ ಸಿದ್ಧಪಡಿಸಿತ್ತು.
ಅಂದಿನ ಮುಖ್ಯ ವಿಚಕ್ಷಣೆ ದಳದ ಮುಖ್ಯಸ್ಥ ಆರ್.ಡಿ.ನಾಯ್ಡು ನೀಡಿರುವ ದೂರು ಆಧರಿಸಿ, ಸಿಬಿಐ ತನಿಖೆ ಕೈಗೆತ್ತಿಕೊಂಡಿತ್ತು. ಬ್ಯಾಂಕ್ ಖಾತೆಗಳು, ಸಾಲ ವಿತರಣೆಯಾದ ಮಾಹಿತಿ ಕಲೆ ಹಾಕಿ ಸಿಬಿಐ ಚಾರ್ಜ್ಶೀಟ್ ಹಾಕಿತ್ತು.

ಸುಳ್ಳು ವೇತನ ರಸೀದಿ:

ಸಾಲ ಕೊಡಿಸುವಾಗ ನೌಕರರಲ್ಲದವರನ್ನು ನೌಕರರೆಂದು ಸುಳ್ಳು ವೇತನ ರಸೀದಿ, ಪ್ರಮಾಣಪತ್ರ ಕೊಟ್ಟು 263 ಪ್ರಕರಣಗಳಲ್ಲಿ 15.61 ಕೋಟಿ ಸಾಲ ಪಡೆದಿದ್ದು, 33 ಪ್ರಕರಣಗಳಲ್ಲಿ 1.47 ಕೋಟಿ ರೂ.ಬಾಕಿ ಪಾವತಿ ಮಾಡಬೇಕಿದೆ.

181 ಮಂದಿ ಬೇನಾಮಿ ಹೆಸರಲ್ಲಿ ಯೋಜನೆಯ ಲಾಭ ಪಡೆದಿದ್ದಾರೆ. ಬೆಂಗಳೂರು ಗ್ರಾಮಾಂತರ ನಗರ ಶಾಖೆಯ ಎಸ್ಬಿಎಂನ ವ್ಯವಸ್ಥಾಪಕ ಎಂ.ಟಿ.ವಿ.ರೆಡ್ಡಿ ಇದರಲ್ಲಿ ಶಾಮೀಲಾಗಿದ್ದು,ಒಂದು ಸಾಲ ಬಿಡುಗಡೆಗೆ 20 ಸಾವಿರ ರೂ. ಹಣ ಪಡೆದಿದ್ದಕ್ಕೆ ಸಾಕ್ಷ್ಯ ದೊರೆತಿದೆ.

ನಾಗವಾರದ ಬಳಿ ನಿವೇಶನ ಎಂದು ತೋರಿಸಿದ್ದ ಜಾಗ ಮೊದಲೇ ಕೆಐಎಡಿಬಿಗೆ ಸೇರಿದ್ದಾಗಿತ್ತು. ಇದು ವಂಚನೆಗೆ ಕಾರಣ ಎಂದು ಸಿಬಿಐ ಚಾರ್ಜ್ ಶೀಟ್ ಸುದೀರ್ಫ ಮಾಹಿತಿ ನೀಡಿತ್ತು.

ಬೆಂಗಳೂರು ಉತ್ತರ ತಾಲ್ಲೂಕಿನ ನಾಗವಾರ ಗ್ರಾಮದ ಸರ್ವೇ ನಂಬರ್ 98ರಲ್ಲಿ 3 ಎಕರೆಗೂ ಹೆಚ್ಚಿನ ಜಾಗದಲ್ಲಿ ಲೇ ಔಟ್ ನಿರ್ಮಾಣಕ್ಕಾಗಿ ಸಾಲ ಪಡೆಯಲಾಗಿತ್ತು. ಈ ಪ್ರದೇಶದಲ್ಲಿ ಗೃಹ ನಿರ್ಮಾಣ ಯೋಜನೆಗೆ ಕೃಷ್ಣಯ್ಯ ಶೆಟ್ಟಿ ಬಾಲಾಜಿ ಎಂಟರ್ಪ್ರೈಸಸ್ ಹೆಸರಿನಲ್ಲಿ 2003ರಿಂದ 2008ರವರೆಗೆ ಚಾಲ್ತಿ ಖಾತೆಯಲ್ಲಿ ಎಸ್ಬಿಎಂನಿಂದ ಸಾಲ ಪಡೆದಿದ್ದಾರೆ. ಇದಕ್ಕಾಗಿ ಅವರು ತೊಟ್ಟಿ ದಾಖಲೆ ಸೃಷ್ಟಿಸಿದ್ದಾರೆ ಎಂಬುದು ಸಿಬಿಐ ಆರೋಪವಾತ್ತು.

ಚಾರ್ಜ್ ಶೀಟ್ ನಲ್ಲಿ ಏನಿದೆ?

ಸಾಲ ಕೊಡಿಸುವಾಗ ನೌಕರರಲ್ಲದವರನ್ನು ನೌಕರರೆಂದು ಸುಳ್ಳು ವೇತನ ರಸೀದಿ, ಪ್ರಮಾಣಪತ್ರ ನೀಡಿದ್ದಾರೆ. 263 ಪ್ರಕರಣಗಳಲ್ಲಿ 15.61 ಕೋಟಿ ಸಾಲ ಪಡೆದಿದ್ದು, 33 ಪ್ರಕರಣಗಳಲ್ಲಿ 1.47 ಕೋಟಿ ರೂ.ಬಾಕಿ ಪಾವತಿ ಮಾಡಬೇಕಿದೆ. ಬೇನಾಮಿ ಹೆಸರಲ್ಲಿ ಯೋಜನೆಯ ಲಾಭ ಪಡೆದವರು 181 ಮಂದಿ. ಬೆಂಗಳೂರಿನ ಗಾಂಧಿನಗರ ಶಾಖೆಯ ಎಸ್ಬಿಎಂನ ವ್ಯವಸ್ಥಾಪಕ ಎಂ.ಟಿ.ವಿ.ರೆಡ್ಡಿ ಶಾಮೀಲಾಗಿದ್ದು, ಒಂದು ಸಾಲ ಬಿಡುಗಡೆಗೆ 20 ಸಾವಿರ ರೂ. ಪಡೆದದ್ದಕ್ಕೆ ಸಾಕ್ಷ್ಯ ದೊರೆತಿದೆ. ನಾಗವಾರದ ಬಳಿ ನಿವೇಶನ ಎಂದು ತೋರಿಸಿದ್ದ ಜಾಗ ಮೊದಲೇ ಕೆಐಎಡಿಬಿಗೆ ಸ್ವಾನವಾಗಿತ್ತು. ಇದು ವಂಚನೆ ನಡೆಯಲು ಕಾರಣ ಎಂಬ ಮಾಹಿತಿ ಚಾರ್ಜ್ ಶೀಟ್ ನಲ್ಲಿದೆ.

ಕೃಷ್ಣಯ್ಯ ಶೆಟ್ಟಿ, ಇತರ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ 120ಬಿ, 409, 419, 420, 467, 471 ಹಾಗೂ ಸಿಆರ್ಪಿಸಿ ಸೆಕ್ಷನ್ 13(1)ಡಿ, 13(2)ರಡಿ ಮೊಕದ್ದಮೆ ದಾಖಲಿಸಿದೆ.

Related Posts

Leave a Reply

Your email address will not be published. Required fields are marked *