ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಬಹಿರಂಗ ಹೇಳಿಕೆ ನೀಡುತ್ತಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಛಾಟಿಸಲಾಗಿದೆ.
ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು 6 ವರ್ಷಗಳ ಕಾಲ ಬಿಜೆಪಿಯಿಂದ ಉಚ್ಛಾಟನೆಗೊಳಿಸಿ ಆದೇಶ ಹೊರಡಿಸಿದೆ.
ಫೆಬ್ರವರಿ ರಂದು ನೋಟೀಸ್ ಜಾರಿ ಮಾಡಿದ್ದ ಬಿಸಿಸಿಐ ಶಿಸ್ತು ಸಮಿತಿ 72 ಗಂಟೆಯೊಳಗೆ ಉತ್ತರ ನೀಡುವಂತೆ ಸೂಚನೆ ನೀಡಿತ್ತು. ತಮ್ಮ ಹೇಳಿಕೆಗಳನ್ನು ಸಮರ್ಥಿಸಿಕೊಂಡಿದ್ದ ಯತ್ನಾಳ್, ಯಡಿಯೂರಪ್ಪ ಮತ್ತು ಅವರ ಕುಟುಂಬದ ವಿರುದ್ಧ ದೂರುಗಳನ್ನು ನೀಡಿದ್ದರು.