ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಸದ ಲಾರಿಗೆ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ೧೦ ವರ್ಷದ ಬಾಲಕ ಮೃತಪಟ್ಟ ಘಟನೆ ಥಣಿಸಂಧ್ರ ರೈಲ್ವೆ ಟ್ರ‍್ಯಾಕ್ ಬಳಿ ಸಂಭವಿವಿಸಿದೆ.
ಬೈಕ್ ಗೆ ಕಸದ ಲಾರಿ ಡಿಕ್ಕಿ ಹೊಡೆದ ಪರಿಣಾಮ ೧೦ ವರ್ಷದ ಬಾಲಕ ಐಮಾನ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಅಪಘಾತದಲ್ಲಿ ಬಾಲಕ ಮೃತಪಟ್ಟ ಸುದ್ದಿ ಹರಡುತ್ತಿದ್ದಂತೆ ರೊಚ್ಚಿಗೆದ್ದ ಸ್ಥಳೀಯರು ಕಸದ ಲಾರಿಗೆ ಬೆಂಕಿ ಹೆಚ್ಚಿ ಆಕ್ರೋಶ ಹೊರಹಾಕಿದ್ದಾರೆ.
ಬಿಬಿಎಂಪಿ ಕಸದ ಲಾರಿಗೆ ಥಣಿಸಂದ್ರದಲ್ಲಿ ಇದು 4ನೇ ಬಲಿಯಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಯಲಹಂಕ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಕಳೆದ ಮೂರು ತಿಂಗಳ ಹಿಂದೆಯಷ್ಟೇ ಧಣಿಸಂದ್ರ ಮುಖ್ಯರಸ್ತೆಯಲ್ಲಿ ಬಿಬಿಎಂಪಿ ಕಸದ ಲಾರಿಗೆ ಇಬ್ಬರು ಮಹಿಳೆಯರು ಬಲಿಯಾಗಿದ್ದ ಘಟನೆ ನಡೆದಿತ್ತು.