Menu

ಗಣೇಶ ಪ್ರತಿಷ್ಠಾಪನೆ-ವಿಸರ್ಜನೆಗೆ ಬಿಬಿಎಂಪಿ ವಿಶೇಷ ಮಾರ್ಗಸೂಚಿ

Ganesh Chathurthi BBMP

ಗಣೇಶ ಚತುರ್ಥಿ ಪ್ರಯುಕ್ತ ಗಣೇಶನ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನೆಗೆ ಬಿಬಿಎಂಪಿ ವಿಶೇಷ ಮಾರ್ಗಸೂಚಿ ಪ್ರಕಟಿಸಿ, ಎಲ್ಲ ಅಗತ್ಯ ವ್ಯವಸ್ಥೆಗಳನ್ನು ಕೈಗೊಂಡಿದೆ. ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲು ಅಗತ್ಯವಿರುವ ಅನುಮತಿ ಪಡೆಯಲು ಬಿಬಿಎಂಪಿ ಏಕಗವಾಕ್ಷಿ ಕೇಂದ್ರಗಳು ಕಾರ್ಯಾಚರಿಸುತ್ತಿವೆ. ನಗರದಾದ್ಯಂತ ಒಟ್ಟು 75 ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ.

ನಗರದ ಒಟ್ಟು 41 ಕೆರೆ ಅಂಗಳಗಳಲ್ಲಿ ಶಾಶ್ವತ ಹಾಗೂ ತಾತ್ಕಾಲಿಕ ಕಲ್ಯಾಣಿ ನಿರ್ಮಿಸಲಾಗಿದ್ದು, ಸಾರ್ವಜನಿಕರು ಗಣೇಶ ವಿಸರ್ಜನೆ ಮಾಡಲು ವ್ಯವಸ್ಥೆ ಕಲ್ಪಿಸಲಾಗಿದೆ. 489 ತಾತ್ಕಾಲಿಕ ಸಂಚಾರಿ ವಾಹನಗಳನ್ನು ನಿಯೋಜಿಸಲಾಗಿದೆ. ಪ್ರತಿಯೊಂದು ವಾರ್ಡ್ ಮಟ್ಟದಲ್ಲಿಯೂ ಸಂಚಾರಿ ಕಲ್ಯಾಣಿ ವ್ಯವಸ್ಥೆ ಮಾಡಲಾಗಿದ್ದು, ಮೂರ್ತಿ ವಿಸರ್ಜನೆಗೆ ತೊಂದರೆ ಆಗದಂತೆ ನೋಡಿಕೊಳ್ಳಲಾಗಿದೆ.

ವಿಸರ್ಜನೆ ಮೇಲ್ವಿಚಾರಣೆಗಾಗಿ ಬಿಬಿಎಂಪಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿದೆ ಹೆಚ್ಚಿನ ಮಾಹಿತಿಗಾಗಿ ಬಿಬಿಎಂಪಿ ವೆಬ್‌ಸೈಟ್‌ನಲ್ಲಿ ವಿವರಗಳು ಲಭ್ಯವಿದ್ದು, ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕವೂ ಮಾಹಿತಿ ಪಡೆಯಬಹುದು.
ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯಲ್ಲಿ ಬರುವ ಹೇರೋಹಳ್ಳಿ ಕೆರೆಯ ಕಲ್ಯಾಣಿಯಲ್ಲಿ ಈ ಬಾರಿ ವಿಸರ್ಜನೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ.

ಯಡಿಯೂರು ಕೆರೆಯಲ್ಲಿ ಗಣೇಶ ವಿಸರ್ಜನೆಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. 2025ರ ಆಗಸ್ಟ್ 27ರಿಂದ ಸೆಪ್ಟೆಂಬರ್ 17ರವರೆಗೆ ಸಾರ್ವಜನಿಕರು ಪರಿಸರ ಸ್ನೇಹಿ ಹಾಗೂ ಮಣ್ಣಿನಿಂದ ತಯಾರಿಸಲಾದ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಿಕೊಳ್ಳಬಹುದು. ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ಬಳಕೆ ಮಾಡಲು ನಾಗರಿಕರಿಗೆ ಬಿಬಿಎಂಪಿ ಮನವಿ ಮಾಡಿದೆ. ಪ್ಲಾಸ್ಟರ್ ಆಫ್ ಪ್ಯಾರಿಸ್ ಅಥವಾ ರಾಸಾಯನಿಕ ಬಣ್ಣಗಳಿಂದ ತಯಾರಿಸಿದ ಮೂರ್ತಿಗಳನ್ನು ಬಳಸದಂತೆ ಸೂಚಿಸಲಾಗಿದೆ.

Related Posts

Leave a Reply

Your email address will not be published. Required fields are marked *