ಬೆನ್ನು ನೋವಿದ್ದರೂ ಡ್ಯೂಟಿ ಬದಲಿಸಲಿಲ್ಲ ಎಂದು ಬೆಳಗಾವಿ ಕೆಎಸ್‌ಆರ್‌ಟಿಸಿ ಘಟಕದ ಮೆಕ್ಯಾನಿಕ್ ಬಸ್‌ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅಳ್ನಾವರ್ ಬೆಳಗಾವಿ ಬಸ್‌ನಲ್ಲಿ ಮೆಕ್ಯಾನಿಕ್ ಆತ್ಮಹತ್ಯೆ ಮಾಡಿಕೊಂಡಿದ್ದು, ಆತನನ್ನು ಕೇಶವ ಕಮಡೊಳಿ (57) ಎಂದು ಗುರುತಿಸಲಾಗಿದೆ. ಬೆಳಗಾವಿಯ ಹಳೆ ಗಾಂಧಿ ನಗರದ ನಿವಾಸಿ ಕೇಶವ್ ಬಸ್ ವಾಶಿಂಗ್‌ನಲ್ಲಿ ಬಸ್‌ಗಳ ಪಂಚರ್ ತೆಗೆಯುವ ಕೆಲಸ ಮಾಡುತ್ತಿದ್ದರು.
ಅವರಿಗೆ ಬೆನ್ನು ನೋವಿದ್ದರೂ ಪಂಚರ್ ತೆಗೆಯುವ ಕೆಲಸವನ್ನು ಅಧಿಕಾರಿಗಳು ಹಚ್ಚಿದ್ದರು ಎನ್ನಲಾಗಿದೆ. ಈ ಬಗ್ಗೆ ಡಿಪೋ ಮ್ಯಾನೇಜರ್ ಲಿಂಗರಾಜ್ ಲಾಠಿ, ಸಹಾಯಕ ಕಾರ್ಯ ಅಧೀಕ್ಷಕ ಅನಿಲ್ ಬಾಂದೇಕರ್‌ಗೆ ಕುಟುಂಬಸ್ಥರು ಮನವಿ ಮಾಡಿದ್ದರು ಎನ್ನಲಾಗಿದೆ. ಕೆಲಸದ ಒತ್ತಡ ತಡೆದಕೊಳ್ಳಲಾಗದೆ ಕೇಶವ ಆತ್ಮಹತ್ಯೆ ಮಾಡಿದಕೊಂಡಿದ್ದಾರೆ ಎಂದು ಅಧಿಕಾರಿಗಳ ವಿರುದ್ಧ ಮೃತ ಕೇಶವ್ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ. ಸ್ಥಳಕ್ಕೆ ಮಾರ್ಕೆಟ್ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.