ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಬಳ್ಳಾರಿಯಲ್ಲಿ ಶಾಸಕ ಜನಾರ್ಧನ ರೆಡ್ಡಿ ನಿವಾಸದ ಎದುರು ಗುಂಪುಗಳ ನಡುವೆ ನಡೆದ ಗಲಾಟೆ ವೇಳೆ ಫೈರಿಂಗ್‌ಗೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ ಎಂಬವರು ಬಲಿಯಾದ ಬಳಿಕ ಶಾಸಕ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿಯ ಖಾಸಗಿ ಗನ್‌ಮ್ಯಾನ್‌ಗಳು ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗಿದೆ.
ಗಲಾಟೆ ವೇಳೆ ಸತೀಶ್ ರೆಡ್ಡಿ ಗನ್‌ಮ್ಯಾನ್‌ಗಳು ಗುಂಡು ಹಾರಿಸಿದ್ದರು. ಜನಾರ್ದನ ರೆಡ್ಡಿ ಹಾಗೂ ಸತೀಶ್ ರೆಡ್ಡಿಗೆ ಸಂಬಂಧಿಸಿದ ಗನ್‌ಮ್ಯಾನ್‌ಗಳಿಂದ ಪೊಲೀಸರು 5 ಗನ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಅದಾದ ಬಳಿಕ ಸತೀಶ್ ರೆಡ್ಡಿಯ ನಾಲ್ವರು ಖಾಸಗಿ ಗನ್‌ಮ್ಯಾನ್‌ಗಳು ನಾಪತ್ತೆಯಾಗಿದ್ದಾರೆ.
ಮೃತ ವ್ಯಕ್ತಿಗೆ ತಗುಲಿರುವ ಗುಂಡು ಪೊಲೀಸರದ್ದಲ್ಲ, ಖಾಸಗಿ ವ್ಯಕ್ತಿಗಳದ್ದು ಎಂದು ಎಸ್‌ಪಿ ಈಗಾಗಲೇ ಸ್ಪಷ್ಟಪಡಿಸಿದ್ದರು. ಸಂಬಂಧಿಸಿದ ವಿಡಿಯೋಗಳ ಪರಿಶೀಲಿಸಿದಾಗ ಸತೀಶ್ ರೆಡ್ಡಿ ಗನ್‌ಮ್ಯಾನ್‌ಗಳು ಫೈರಿಂಗ್ ಮಾಡಿರುವುದು ಪತ್ತೆಯಾಗಿದ್ದು, ಯಾರ ಮೃತನಿಗೆ ತಗುಲಿದೆ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಶಾಸಕ ನಾರಾ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಎಎಸ್‌ಪಿ ರವಿಕುಮಾರ್ ಹಾಗೂ ಬ್ರೂಸ್‌ಪೇಟೆ ಠಾಣೆ ಪೊಲೀಸರು ಜನಾರ್ದನ ರೆಡ್ಡಿ ಮನೆಗೆ ಬಂದು ದೂರು ಸ್ವೀಕರಿಸಿದ್ದರು. ಶಾಸಕ ಜನಾರ್ದನ ರೆಡ್ಡಿ, ಸೋಮಶೇಖರ್ ರೆಡ್ಡಿ, ಮಾಜಿ ಸಚಿವ ಶ್ರೀರಾಮುಲು, ಅಲಿಖಾನ್, ದಮ್ಮೂರ ಶೇಖರ್, ಮೋತ್ಕರ್ ಶ್ರೀನಿವಾಸ್, ಪ್ರಕಾಶ್ ರೆಡ್ಡಿ, ರಮಣ, ಪಾಲನ್ನ, ದಿವಾಕರ್ ಹಾಗೂ ಮಾರುತಿ ಪ್ರಸಾದ್ ವಿರುದ್ಧ ಬ್ರೂಸ್‌ಪೇಟೆ ಠಾಣೆಯಲ್ಲಿ ಈ ಮೊದಲೇ ಎಫ್‌ಐಆರ್ ದಾಖಲಾಗಿದೆ.
ಇಂದು ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬಳ್ಳಾರಿಯ ಹವಂಬಾವಿ ನಗರದಲ್ಲಿರುವ ಜನಾರ್ದನ ರೆಡ್ಡಿ ಮನೆ ಎದುರು ಬ್ಯಾನರ್ ಅಳವಡಿಸಲು ಗುಂಪು ಮುಂದಾಗಿತ್ತು. ಈ ವೇಳೆ ಗಲಾಟೆಯಾಗಿ ಶಾಸಕ ಭರತ್ ರೆಡ್ಡಿ ಬೆಂಬಲಿ ಗರು ಹಾಗೂ ಜನಾರ್ದನ ರೆಡ್ಡಿ ಬೆಂಬಲಿಗರು ಕಲ್ಲು ತೂರಾಟ ನಡೆಸಿದ್ದರು. ಮಾಜಿ ಸಚಿವ ಶ್ರೀರಾಮುಲು ಹಾಗೂ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಬಂದಿದ್ದರು. ಗಲಾಟೆ ತೀವ್ರಗೊಂಡಾಗ ಪೊಲೀಸರು ಲಾಠಿ ಚಾರ್ಜ್ ಮಾಡಿ ದ್ದರು. ಖಾಸಗಿ ಗನ್‌ಮ್ಯಾನ್‌ಗಳು ಕೂಡ ಫೈರಿಂಗ್ ಮಾಡಿದ್ದರು.


