Menu

ತಿರುಪತಿ ಕಾಲ್ತುಳಿತದಲ್ಲಿ ಬಳ್ಳಾರಿ ಮಹಿಳೆ ಸಾವು

ತಿರುಪತಿ-ತಿರುಮಲದಲ್ಲಿ ಸಂಭವಿಸಿರುವ ಕಾಲ್ತುಳಿತದಲ್ಲಿ ಮೃತಪಟ್ಟವರಲ್ಲಿ ಬಳ್ಳಾರಿ ಮೂಲದ ಓರ್ವ ಮಹಿಳೆ ಸೇರಿ ಕೂಡ ಸೇರಿದ್ದಾರೆ. ಬಳ್ಳಾರಿಯ ನಿರ್ಮಲಾ (50) ಮೃತಪಟ್ಟವರು.

ಉಳಿದಂತೆ ಮೃತರಲ್ಲಿ ವಿಶಾಖಪಟ್ಟಣದ ರಜನಿ (47), ಲಾವಣ್ಯ (40), ಶಾಂತಿ (34) ಆಂಧ್ರದ ನರಸೀಪಟ್ಟಣಂ ನಿವಾಸಿ ಬೊದ್ದೇಟಿ ನಾಯ್ಡುಬಾಬು ಹಾಗೂ ತಮಿಳುನಾಡಿನ ಸೇಲಂ ನಿವಾಸಿ ಮಲ್ಲಿಕಾ ಎಂದು ಗುರುತು ಪತ್ತೆಯಾಗಿದೆ.

ಗಾಯಾಳುಗಳಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ. ರುಯಾ ಹಾಗೂ ಸ್ವಿಮ್ಸ್​​ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 32 ಜನರು ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ​

ವೈಕುಂಠ ಏಕಾದಶಿ ಪ್ರಯುಕ್ತ ತಿರುಪತಿಯ ವಿಷ್ಣು ನಿವಾಸಂನಲ್ಲಿ ಶುಕ್ರವಾರದಿಂದ 10 ದಿನಗಳ ಕಾಲ ವೈಕುಂಠ ದ್ವಾರ ಸರ್ವದರ್ಶನಕ್ಕಾಗಿ ಟೋಕನ್ ವಿತರಣೆಯ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿದೆ.

Related Posts

Leave a Reply

Your email address will not be published. Required fields are marked *