Menu

ಬೆಂಗಳೂರು ರಸ್ತೆ ಕಾಮಗಾರಿ: ತಡೆಗೋಡೆ ಕುಸಿದು ಕಾರ್ಮಿಕ ಸಾವು, ಹಲವರಿಗೆ ಗಾಯ

ಬೆಂಗಳೂರಿನ ಕಂಠೀರವ ಸ್ಟುಡಿಯೊ ಮುಂಭಾಗ ಹಾಗೂ ಡಾ.ರಾಜ್‌ಕುಮಾರ್‌ ಪುಣ್ಯಭೂಮಿ ಬಳಿ ನಡೆಯುತ್ತಿದ್ದ ರಸ್ತೆ ಕಾಮಗಾರಿ ವೇಳೆ ಅಂಡರ್‌ಪಾಸ್‌ ನಿರ್ಮಿಸಲು ತೋಡಿದ್ದ ಗುಂಡಿಯ ಮಣ್ಣಿನ ತಡೆಗೋಡೆ ಕುಸಿದು ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ.

ಈ ದುರಂತದಲ್ಲಿ ಹಲವು ಕಾರ್ಮಿಕರು ಮನ್ಣಿನಡಿ ಸಿಲುಕಿಕೊಂಡಿದ್ದಾರೆ. ಅಂಡರ್‌ಪಾಸ್ ಕಾಮಗಾರಿಗಾಗಿ ರಸ್ತೆಯಲ್ಲಿ 20 ಅಡಿ ಆಳದವರೆಗೆ ಮಣ್ಣನ್ನು ತೋಡಲಾಗಿತ್ತು. ಎಂದಿನಂತೆ ಕಾರ್ಮಿಕರು ಕಾಮಗಾರಿಯಲ್ಲಿ ತೊಡಗಿಸಿಕೊಂಡಿದ್ದಾಗ ಮೇಲಿಂದ ಏಕಾಏಕಿ ಮಣ್ಣಿನ ತಡೆಗೋಡೆ ಕುಸಿದುಬಿದ್ದಿದೆ.

ಸಿಬ್ಬಂದಿ ಹಾಗೂ ಸಾರ್ವಜನಿಕರು ಮಣ್ಣಿನಡಿಯಲ್ಲಿ ಸಿಲುಕಿದ್ದ ಮೂವರು ಕಾರ್ಮಿಕರನ್ನು ಸುರಕ್ಷಿತವಾಗಿ ಹೊರತೆಗೆದಿದ್ದಾರೆ. ರಕ್ಷಣಾ ಕಾರ್ಯ ಮುಂದುವರಿದಿದೆ. ಪೊಲೀಸರು ಹಾಗೂ ಹೆಚ್ಚುವರಿ ಅಗ್ನಿಶಾಮಕ ದಳದ ಸಿಬ್ಬಂದಿ ಮಣ್ಣಿನಡಿ ಇನ್ನೂ ಯಾರಾದರೂ ಸಿಲುಕಿದ್ದಾರೆಯೇ ಎಂಬ ನಿಟ್ಟಿನಲ್ಲಿ ಕಾರ್ಯಾಚರಣೆ ಕೈಗೊಂಡಿದೆ.

ವಾಹನ ಓವರ್‌ಟೇಕ್‌ ಜಗಳ: ಕೆನ್ನೆಗೆ ಬಿದ್ದ ಹೊಡೆತಕ್ಕೆ ಯುವಕ ಸಾವು
ಕಲಬುರಗಿಯ ಸೇಡಂನ ಉಡಗಿ ಗ್ರಾಮದಲ್ಲಿ ವಾಹನ ಓವರ್‌ಟೇಕ್ ಮಾಡುವ ವಿಚಾರಕ್ಕೆ ಆರಂಭವಾದ ಜಗಳ ಯುವಕನ ಸಾವಿನಲ್ಲಿ ಅಂತ್ಯ ಕಂಡಿದೆ. ಉಡಗಿ ಗ್ರಾಮದ ಭಾಗ್ಯವಂತ (24) ಮೃತ ಯುವಕ.

ವಾಹನ ಓವರ್‌ಟೇಕ್ ಮಾಡುವ ವಿಚಾರದಲ್ಲಿ ಭಾಗ್ಯವಂತ ಹಾಗೂ ಜೆಸಿಬಿ ಚಾಲಕ ನಬೀ ನಡುವೆ ಜಗಳ ಆರಂಭವಾಗಿತ್ತು, ಭಾಗ್ಯವಂತ ನಬೀ ಅವರ ಶರ್ಟ್‌ನ ಕಾಲರ್ ಹಿಡಿದಿದ್ದಾನೆ. ಕೋಪಗೊಂಡ ನಬೀ ಭಾಗ್ಯವಂತನ ಕೆನ್ನೆಗೆ ಜೋರಾಗಿ ಹೊಡೆದಿದ್ದಾನೆ. ಆತ ಅಲ್ಲೇ ಕುಸಿದು ಬಿದ್ದು ಮೃತಪಟ್ಟಿದ್ದಾನೆ. ಸೇಡಂ ಪೊಲೀಸರು ಆರೋಪಿ ನಬೀಯನ್ನು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Posts

Leave a Reply

Your email address will not be published. Required fields are marked *