ಬೆಂಗಳೂರು
ಬೆಂಗಳೂರಿನಲ್ಲಿ ಇಟಲಿ ರಾಯಭಾರಿ ಕಚೇರಿಗೆ ಬಾಂಬ್ ಬೆದರಿಕೆ
ಬೆಂಗಳೂರಿನಲ್ಲಿ ಆಗಾಗ ಹುಸಿ ಬಾಂಬ್ ಕರೆಗಳು ಸದ್ದು ಮಾಡುತ್ತಿದ್ದು, ಹಲಸೂರು ಬಳಿ ಇರುವ ಇಟಲಿ ರಾಯಭಾರಿ ಕಚೇರಿಗೆ ಇ-ಮೇಲ್ ಮೂಲಕ ಕಿಡಿಗೇಡಿಗಳು ಬಾಂಬ್ ಬೆದರಿಕೆ ಹಾಕಿದ್ದಾರೆ. ಜನವರಿ 30ರಂದು ಬಂದಿದ್ದ ಬೆದರಿಕೆ ಮೇಲ್ ಬಂದಿದ್ದು, 5 ಆರ್‌ಡಿಎಕ್ಸ್ ಬಾಂಬ್ ಬ್ಲಾಸ್ಟ್ ಮಾಡುತ್ತೇವೆ ಎಂದು ಬೆದರಿಕೆ ಒಡ್ಡಿದ್ದಾರೆ. ಇಟಾಲಿಯನ್ ಕಾನ್ಸುಲೇಟ್‌ನ ಸೆಕ್ಯೂರಿಟಿ ಮ್ಯಾನೇಜರ್ ಜಿಯೋಡೊಮೆನಿಕ್ ಒ ಮಿಲಾನೋ ಎಂಬವರು ಹಲಸೂರು ಪೊಲೀಸರಿಗೆ ದೂರು ನೀಡಿದ್ದಾರೆ. ಹಲಸೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ
ಅಮಿತ್ ಶಾ ಆಪ್ತನೆಂದು ಹೇಳುತ್ತ ವಂಚಿಸುತ್ತಿದ್ದವನ ವಿರುದ್ಧ ಈಗ ರಾಜ್ಯಪಾಲರ ಕಚೇರಿ ಕೇಸ್ ದಾಖಲು
ಕೇಂದ್ರ ಸಚಿವ ಅಮಿತ್ ಶಾ ಅವರ ಆಪ್ತ ಎಂದು ಹೇಳಿಕೊಂಡು ವಂಚಿಸುತ್ತಿದ್ದ ಸುಜಯೇಂದ್ರ ಎಂಬಾತನ ವಿರುದ್ಧ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರದೀಪ್ ಅವರು ನೀಡಿದ ದೂರಿನ ಅನ್ವಯ ವಿಧಾನಸೌಧ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಪ್ರಕರಣದ ತನಿಖೆಯನ್ನು ವಿಧಾನಸೌಧ ಠಾಣೆಯಿಂದ ಕೇಸನ್ನು ವಿಜಯನಗರ
ಲಂಚ ಸ್ವೀಕರಿಸುವಾಗ ಲೋಕಾಯುಕ್ತಕ್ಕೆ ಸಿಕ್ಕಿಬಿದ್ದ ಇನ್ಸ್ಪೆಕ್ಟರ್ ಗೋವಿಂದರಾಜು ಅಮಾನತು
ಕೆಲವು ದಿನಗಳ ಹಿಂದೆ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದು, ರಂಪಾಟ ನಡೆಸಿದ ಬೆಂಗಳೂರಿನ ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಗೋವಿಂದರಾಜು ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಿ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ. ಭ್ರಷ್ಟಾಚಾರ ಮತ್ತು
ಹೊಸಕೋಟೆಯಲ್ಲಿ ಪ್ರಿಯಕರನಿಗಾಗಿ ಗಂಡನನ್ನೇ ಹತ್ಯೆ ಮಾಡಿದ ಹೆಂಡತಿ
ಬೆಂಗಳೂರು ಹೊಸಕೋಟೆ ತಾಲೂಕಿನ ಸಿದ್ದೇನಹಳ್ಳಿ ಗ್ರಾಮದಲ್ಲಿ ಕೆಲವು ದಿನಗಳ ಹಿಂದೆ ನಡೆದ ವ್ಯಕ್ತಿಯ ಕೊಲೆ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಕೊಲೆ ಆರೋಪಿ ಹೆಂಡತಿಯೇ ಎಂಬುದನ್ನು ಪತ್ತೆ ಹಚ್ಚಿದ್ದಾರೆ. ಪ್ರಿಯಕರನಿಗಾಗಿ ಹೆಂಡತಿಯೇ ಗಂಡನನ್ನು ಹತ್ಯೆ ಮಾಡಿ ಅಪಘಾತವೆಂದು ನಂಬಿಸಿದ್ದ ಈ ಪ್ರಕರಣದ
ನಮ್ಮ ಮೆಟ್ರೊ ಟಿಕೆಟ್ ದರ ಶೇ5 ಹೆಚ್ಚಳಕ್ಕೆ ಬಿಎಂಆರ್‌ಸಿಎಲ್ ಬೋರ್ಡ್ ಸಮ್ಮತಿ
ನಮ್ಮ ಮೆಟ್ರೋ ಟಿಕೆಟ್ ದರವನ್ನು ಶೇ5ರಷ್ಟು ಹೆಚ್ಚಿಸಲು ಬಿಎಂಆರ್‌ಸಿಎಲ್ ಬೋರ್ಡ್ ಸಮ್ಮತಿಸಿದ್ದು, ಜಾರಿಗೆ ಬರಲು ರಾಜ್ಯ ಸರ್ಕಾರದ ಅನುಮತಿ ಸಿಗಬೇಕಿದೆ. ಕಳೆದ ವರ್ಷ ಮೆಟ್ರೋ ಟಿಕೆಟ್ ದರ ಏರಿಕೆಯಿಂದ ಬೇಸತ್ತಿರುವ ಪ್ರಯಾಣಿಕರು ಮತ್ತೆ ಹೆಚ್ಚಳಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈಗ ಬಿಎಂಆರ್‌ಸಿಎಲ್
ಮಹಡಿಯಿಂದ ಬಿದ್ದು ಬಾಲಕ ಸಾವು: ಮದ್ಯ ಕುಡಿಸಿದ ಕಂಪೆನಿ ವಿರುದ್ಧ ದೂರು
ಬೆಂಗಳೂರಿನಲ್ಲಿ ಡಾ. ವಿಷ್ಣುವರ್ಧನ್ ರಸ್ತೆಯ ಅಪಾರ್ಟ್‌ಮೆಂಟ್‌ನ ನಿವಾಸಿ, 15 ವರ್ಷದ ಬಾಲಕ 7ನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ ಪ್ರಕರಣ ಸಂಬಂಧ ಪೋಷಕರು ಸ್ಥಳೀಯ ಕಂಪೆನಿ ಬಾಲಕನಿಗೆ ಮದ್ಯ ಕುಡಿಸಿರುವುದರಿಂದ ಈ ದುರಂತ ಸಂಭವಿಸಿರುವುದಾಗಿ ಆರೋಪಿಸಿದ್ದಾರೆ. ಸ್ಥಳೀಯ ಕಂಪೆನಿಯು ಬಾಲಕರಿಗೆ ಮದ್ಯ ನೀಡಿದೆ
ಬೆಂಗಳೂರಿನಲ್ಲಿ ಯುವಕನ ಅಡ್ಡಗಟ್ಟಿ ಬೈಕ್ ಸಮೇತ ಹಣ ದರೋಡೆ
ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಸಕಲವಾರ ರಸ್ತೆಯಲ್ಲಿ ಯುವಕನನ್ನು ಅಡ್ಡಗಟ್ಟಿ ಬೈಕ್ ಸಂಏತ ಹಣ ದರೋಡೆ ಮಾಡಿರುವ ಘಟನೆ ನಡೆದಿದೆ. ಭಾನುವಾರ ಸಂಜೆ ಲಾಂಗ್‌ನಿಂದ ಹಲ್ಲೆ ನಡೆಸಿ ಯುವಕನ ಬೈಕ್ ಜೊತೆ 31 ಲಕ್ಷದ 38 ಸಾವಿರ ರೂ. ದರೋಡೆ ಮಾಡಲಾಗಿದೆ.
ಕನಕಪುರದಲ್ಲಿ ಅಡುಗೆ ಅನಿಲ ಸೋರಿಕೆ: ಗಾಯಗೊಂಡಿದ್ದ ಕುಟುಂಬದ ಸಾವು
ಕನಕಪುರ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅನಿಲ ಸೋರಿಕೆಯಾಗಿ ಸಂಭವಿಸಿದ್ದ ಅಗ್ನಿ ಆಕಸ್ಮಿಕದಲ್ಲಿ ಗಾಯಗೊಂಡಿದ್ದ ಒಂದೇ ಕುಟುಂಬದ ಮೂವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ತಂದೆ ಸಿದ್ದರಾಜು (55), ತಾಯಿ ಚಂದ್ರಮ್ಮ (50), ಮಗ ಪ್ರಶಾಂತ್ (22) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕನಕಪುರ
ಯಾರೇ ವಿಭಜಿಸಲು ಪ್ರಯತ್ನಿಸಿದರೂ ಬ್ಯಾರಿಗಳು ಅಸ್ಮಿತೆ, ಒಗ್ಗಟ್ಟು ಉಳಿಸಿಕೊಂಡು ಹೋಗಬೇಕು: ಸಿಎಂ
ಬ್ಯಾರಿಗಳನ್ನು ಯಾರೇ ವಿಭಜಿಸಲು ಪ್ರಯತ್ನಿಸಿದರೂ ತಮ್ಮ ಅಸ್ಮಿತೆಯನ್ನು, ಒಗ್ಗಟ್ಟನ್ನು ಉಳಿಸಿಕೊಂಡು ಹೋಗಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಬ್ಯಾರಿಸ್ ಸೆಂಟ್ರಲ್ ಕಮಿಟಿ ಬೆಂಗಳೂರು ವತಿಯಿಂದ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದಬೃಹತ್ ಬ್ಯಾರಿ ಕೂಟ -2026 ಉದ್ಘಾಟಿಸಿ ಮಾತನಾಡಿದರು. ತುಳು ಮತ್ತು ಬ್ಯಾರಿ ಭಾಷೆಗೆ
ಶ್ರೀಮಂತರ ಮನೆಗಳಲ್ಲಿ ಕೆಲಸಕ್ಕೆ ಸೇರಿ ದರೋಡೆ ಮಾಡುವ ನೇಪಾಳ ಗ್ಯಾಂಗ್
ಶ್ರೀಮಂತರ ಮನೆಗಳಲ್ಲಿ ಕೆಲಸಕ್ಕೆ ಸೇರಿ ಆ ಮನೆಯನ್ನು ದರೋಡೆ ಮಾಡುವ ನೇಪಾಳದ ಗ್ಯಾಂಗ್ ಸಕ್ರಿಯವಾಗಿರುವುದನ್ನು ಬೆಂಗಳೂರು ಪೊಲೀಸರು ಪತ್ತೆಹಚ್ಚಿದ್ದಾರೆ. ಮಾರತ್ತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೆಲವು ದಿನಗಳ ಹಿಂದೆ ಉದ್ಯಮಿಯೊಬ್ಬರ ಮನೆಯಲ್ಲಿ ನಡೆದಿದ್ದ 18 ಕೋಟಿ ರೂ. ದರೋಡೆ ಪ್ರಕರಣದ ತನಿಖೆ




