ಬೆಂಗಳೂರು
ರಂಗ ಪರಿಷೆ ಅರ್ಥಪೂರ್ಣವಾಗಿ ನಡೆಸಿ: ಸಿಎಂ ಸಿದ್ದರಾಮಯ್ಯ ಸಲಹೆ
ಬೆಂಗಳೂರು: ರಂಗ ಪರಿಷೆ ಅರ್ಥಪೂರ್ಣವಾಗಿ ನಡೆಸಿ. ರಂಗಭೂಮಿಯ ಸಮಗ್ರ ಮಾಹಿತಿ ಬೆರಳ ತುದಿಯಲ್ಲಿ ಸಿಗುವಂತಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದರು. ಕರ್ನಾಟಕ ನಾಟಕ ಅಕಾಡೆಮಿಯ ವೆಬ್ ಸೈಟ್ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಅಕಾಡೆಮಿಗಳು ಸಕ್ರಿಯವಾಗಿ ಕೆಲಸ ಮಾಡಬೇಕು. ಬದುಕು ಪೂರ್ಣ ಆಗಲು ಕಲೆ, ಸಾಂಸ್ಕೃತಿಕ ಚಟುವಟಿಕೆಗಳು ಅಗತ್ಯ. ಈ ದಿಕ್ಕಿನಲ್ಲಿ ಎಲ್ಲಾ ಅಕಾಡೆಮಿಗಳು ಕಾರ್ಯ ನಿರ್ವಹಿಸಬೇಕು ಎಂದರು. ಏನೇ ಹೊಸ ಪ್ರಯತ್ನ ಮಾಡಿದರೂ ಸರ್ಕಾರ ಬೆಂಬಲವಾಗಿ ನಿಲ್ಲುತ್ತದೆ. ಅಕಾಡೆಮಿಗೆ ಅಗತ್ಯವಾದ
ಪ್ರೊ.ಮುಜಾಫರ್ ಅಸ್ಸಾದಿ, ಜಿ.ಸಿ.ಬಯ್ಯಾರೆಡ್ಡಿಗೆ ಸಿಎಂ ಸಂತಾಪ
ಚಿಂತಕ, ಲೇಖಕ ಪ್ರೊ.ಮುಜಾಫರ್ ಅಸ್ಸಾದಿ (63) ಮತ್ತು ಸಿಪಿಐ(ಎಂ) ನಾಯಕ ಮತ್ತು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷ ಜಿ.ಸಿ.ಬಯ್ಯಾರೆಡ್ಡಿ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಈ ಇಬ್ಬರು ಸಮಾಜಮುಖಿ ಗಣ್ಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದಾರೆ. ಮುಜಾಫರ್ ಅಸ್ಸಾದಿ
ಬೀದಿ ಬದಿ ವ್ಯಾಪಾರ ರಸ್ತೆಗಳ ಗುರುತಿಸಲು ತುಷಾರ್ ಗಿರಿನಾಥ್ ಸೂಚನೆ
ಬೆಂಗಳೂರು ಪಶ್ಚಿಮ ವಲಯ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರ ಮಾಡಲು ಅವಕಾಶವಿರುವ ರಸ್ತೆಗಳನ್ನು ಮಾರ್ಗಸೂಚಿಯ ಅನುಸಾರ ಗುರುತಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಪಶ್ಚಿಮ ವಲಯ ವ್ಯಾಪ್ತಿಯಲ್ಲಿ “ಮುಖ್ಯ ಆಯುಕ್ತರ ನಡೆ ವಲಯದ ಕಡೆ”ಯಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು
ಚಾಲಕನ ತಪ್ಪಿಗೆ ಕ್ಷಮೆ ಕೇಳಿದ ‘ನಮ್ಮ ಯಾತ್ರಿ ಆ್ಯಪ್’
‘ನಮ್ಮ ಯಾತ್ರಿ ಆ್ಯಪ್’ ಆಟೋ ಚಾಲಕ ಪ್ರಯಾಣಿಕ ಮಹಿಳೆಯನ್ನು ನಿಗದಿತ ಜಾಗದ ಬದಲು ಬೇರೆ ಕಡೆ ಕರೆದೊಯುವಾಗ ಆಕೆ ಆಟೊದಿಂದ ಜಿಗಿದು ಅಪಾಯದಿಂದ ಪಾರಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ‘ನಮ್ಮ ಯಾತ್ರಿ ಆ್ಯಪ್’ ಕ್ಷಮೆ ಯಾಚಿಸಿದೆ. ಗುರುವಾರ ರಾತ್ರಿ ಹೆಬ್ಬಾಳದ ವೀರಣ್ಣಪಾಳ್ಯ ಬಳಿ
ಗಂಡಸರಿಗೆ ಬರೆ ಹಾಕುವ ಕಾಂಗ್ರೆಸ್ ಸರಕಾರ: ಛಲವಾದಿ ನಾರಾಯಣಸ್ವಾಮಿ
ಬೆಂಗಳೂರು: ಸರಕಾರಿ ಬಸ್ ಪ್ರಯಾಣ ದರ ಏರಿಕೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಗರದ ಮೆಜೆಸ್ಟಿಕ್ ನ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಬಿಜೆಪಿ ವತಿಯಿಂದ ವಿನೂತನ ಮಾದರಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಕೆಲವು ಕಾರ್ಯಕರ್ತರು ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಯವರ
ಬಸ್ ಟಿಕೆಟ್ ದರ ಹೆಚ್ಚಳ ವಿರುದ್ಧ ಬಿಜೆಪಿ ಪ್ರತಿಭಟನೆ
ರಾಜ್ಯ ಸರ್ಕಾರ ಬಸ್ ಟಿಕೆಟ್ ದರ ಏರಿಕೆ ಮಾಡಿರುವುದರ ವಿರುದ್ಧ ವಿಧಾನಸಭೆ ಪ್ರತಿಪಕ್ಷದ ನಾಯಕಆರ್. ಅಶೋಕ್ ಹಾಗೂ ಬಿಜೆಪಿ ನಾಯಕರು ಮೆಜೆಸ್ಟಿಕ್‌ನಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಅಶೋಕ್ ಅವರು ಪ್ರಯಾಣಿಕರಿಗೆ ಹೂ ನೀಡಿ ರಾಜ್ಯ ಸರ್ಕಾರ ಬಸ್ ಟಿಕೆಟ್ ದರ
ಬೆಂಗಳೂರಿನ ಬೈಕ್ ಶೋ ರೂಮ್ ನಲ್ಲಿ ಬೆಂಕಿ ಅವಘಡ: 50ಕ್ಕೂ ಹೆಚ್ಚು ಬೈಕ್ ಭಸ್ಮ
ಬೆಂಗಳೂರಿನ ಹೊರವಲಯದ ಮಹದೇವಪುರ ಬಳಿಯ ಬೈಕ್ ಶೋರೂಂವೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ ಐವತ್ತು ದ್ವಿಚಕ್ರ ವಾಹನಗಳು ಸುಟ್ಟು ಭಸ್ಮವಾಗಿವೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ನಿನ್ನೆ ರಾತ್ರಿ ಈ ಅವಘಡ ಸಂಭವಿಸಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ.
ಎಂಜಿ ರಸ್ತೆ ಸುತ್ತಮುತ್ತ 15 ಮೆ. ಟನ್ ತ್ಯಾಜ್ಯ ಸಂಗ್ರಹ!
ಬೆಂಗಳೂರು: ನಗರದ ಪೂರ್ವ ವಲಯ ವ್ಯಾಪ್ತಿಯ ಎಂ.ಜಿ ರಸ್ತೆಯ ಸುತ್ತಮುತ್ತಲಿನ ರಸ್ತೆ/ಪ್ರದೇಶಗಳಲ್ಲಿ ಹೊಸ ವರ್ಷಾರಣೆಯ ಸಂದರ್ಭದಲ್ಲಿ ರಸ್ತೆಗಳಲ್ಲಿ ಬಿದ್ದಿದ್ದ ಸುಮಾರು 15 ಮೆಟ್ರಿಕ್ ಟನ್ ತ್ಯಾಜ್ಯ-ಅನುಪಯುಕ್ತ ವಸ್ತುಗಳನ್ನು ಸಂಗ್ರಹಿಸಲಾಗಿದೆ. ಪೂರ್ವ ವಲಯ ಆಯುಕ್ತರಾದ ಸ್ನೇಹಲ್, ಬಿ.ಎಸ್.ಡಬ್ಲ್ಯೂ.ಎಂ.ಎಲ್ ನ ಮುಖ್ಯ ಪ್ರಧಾನ ವ್ಯವಸ್ಥಾಪಕರಾದ ಬಸವರಾಜ್
ಹೊಸ ವರ್ಷಾಚರಣೆ ವೇಳೆ ಮಾಸ್ಕ್ ಧರಿಸುವಂತಿಲ್ಲ, ಸೀಟಿ ಹೊಡೆಯುವಂತಿಲ್ಲ!
ಬೆಂಗಳೂರಿನಲ್ಲಿ ಮಧ್ಯರಾತ್ರಿ 2 ಗಂಟೆಯವರೆಗೆ ಹೊಸ ವರ್ಷ ಆಚರಿಸಲು ಗಡುವು ನೀಡಲಾಗಿದೆ ಎಂದು ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಬಿಡುಗಡೆ ಮಾಡಿ ಅವರು ಮಾತನಾಡಿದರು. ಹೊಸ ವರ್ಷಾಚರಣೆಗೆ ಬೆಂಗಳೂರಿನ ಎಂಜಿ ರಸ್ತೆ, ಇಂದಿರಾನಗರ,
ಐಶ್ವರ್ಯಾ ಗೌಡ ವಿರುದ್ಧ ಮಾಜಿ ಸಂಸದ ಡಿಕೆ ಸುರೇಶ್ ದೂರು
ಬೆಂಗಳೂರು: ತಮ್ಮ ಹೆಸರು ದುರುಪಯೋಗ ಮಾಡಿಕೊಂಡು ಹಲವಾರು ಜನರಿಗೆ ಚಿನ್ನಾಭರಣ ಹಾಗೂ ಹಣ ವಂಚನೆ ಮಾಡುತ್ತಿರುವ ಐಶ್ವರ್ಯಾ ಗೌಡ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಈ




