ಬೆಂಗಳೂರು
ಬೆಂಗಳೂರು ನಗರ ಮೂಲ ಸೌಕರ್ಯ ಅಭಿವೃದ್ಧಿಗೆ 1.5 ಲಕ್ಷ ಕೋಟಿ ರೂ. ಹೂಡಿಕೆ: ಡಿಕೆ ಶಿವಕುಮಾರ್
ಬೆಂಗಳೂರು ನಗರದ ಜನಸಂಖ್ಯೆ ಮುಂದಿನ 20 ರಿಂದ 25 ವರ್ಷಗಳಲ್ಲಿನ ದ್ವಿಗುಣಗೊಳ್ಳಲಿದ್ದು, ನಗರದ ಮೂಲ ಸೌಕರ್ಯ ಕೊರತೆ ನಿವಾರಿಸಲು 1.5 ಲಕ್ಷ ಕೋಟಿ ರೂ ವೆಚ್ಚ ಮಾಡಲು ತೀರ್ಮಾನಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರಕಟಿಸಿದ್ದಾರೆ. ನಗರದ ಅರಮನೆ ಮೈದಾನದಲ್ಲಿ ಶ್ರೀ ಮಹಾವೀರ್ ಜೈನ್ ಶಿಕ್ಷಣ ಸಂಘದ ಬಿಬಿಯುಎಲ್ ಜೈನ ವಿದ್ಯಾಲಯ 40 ವರ್ಷ ಪೂರೈಸಿದ ಮತ್ತು ಸಿಬಿ ಭಂಡಾರಿ ಜೈನ್ ಕಾಲೇಜಿನ 25 ವರ್ಷಾಚರಣೆ ಸಮಾರಂಭದಲ್ಲಿ ಮಾತನಾಡಿದ ಅವರು,
ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ: ಮುಖ್ಯಮಂತ್ರಿ
ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ ಇದ್ದಂತೆ. ಕಲಾವಿದರು,ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆಯನ್ನು ಕಲ್ಪಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕರ್ನಾಟಕ ಚಿತ್ರಕಲಾ ಪರಿಷತ್ತು ವತಿಯಿಂದ ಬೆಂಗಳೂರಿನ ಕುಮಾರ ಕೃಪಾ ರಸ್ತೆಯಲ್ಲಿರುವ ಕರ್ನಾಟಕ ಚಿತ್ರಕಲಾ ಪರಿಷತ್ತು ಆವರಣದಲ್ಲಿ ಆಯೋಜಿಸಲಾಗಿದ್ದ 23 ನೇ ಚಿತ್ರ ಸಂತೆ
ಬೆಂಗಳೂರಿನಲ್ಲಿ ವಿಶೇಷ ಚೇತನ ಮಗುವಿಗೆ ವಿಷ ನೀಡಿದ ತಂದೆ
ಚಿಕಿತ್ಸೆ ಕೊಡಿಸಲು ಹಣವಿಲ್ಲವೆಂದು ತಂದೆಯು ವಿಷ ನೀಡಿ ವಿಶೇಷ ಚೇತನ ಮಗುವನ್ನು ಸಾಯಿಸಲು ಮುಂದಾಗಿರುವ ಕ್ರೂರ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವಿಶೇಷ ಚೇತನ ಮಗನ ಚಿಕಿತ್ಸೆಗಾಗಿ ಅಲೆದು ಬೇಸತ್ತಿದ್ದ ತಂದೆ, ವಿಷ ನೀಡಿ ಸಾಯಿಸಲು ಮುಂದಾಗಿದ್ದು, ಮಗುವೀಗ ಸಾವು -ಬದುಕಿನ ಹೋರಾಟದಲ್ಲಿದೆ.
ಬಿಹಾರದಲ್ಲಿ ಗನ್ ಖರೀದಿಸಿ ತರಬೇತಿ ಪಡೆದು ಬೆಂಗಳೂರಲ್ಲಿ ಪತ್ನಿಯ ಕೊಲೆಗೈದ ಪತಿ
ಪತ್ನಿ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಆರೋಪಿಸಿ ಬೆಂಗಳೂರಿನಲ್ಲಿ ಪತ್ನಿಯನ್ನು ಗುಂಡಿಕ್ಕಿ ಕೊಲೆ ಮಾಡಿದ್ದ ಪತಿ ಬಾಲಮುರುಗನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕೆಲವು ದಿನಗಳ ಹಿಂದೆ ಮಾಗಡಿ ರಸ್ತೆ, ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿ ನಡೆದಿದ್ದ ಮಹಿಳೆಯ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ
ಬೆಂಗಳೂರಿನಲ್ಲಿ 53 ಎಕರೆ ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ ಸಂಪುಟದ ಸಮ್ಮತಿ: ಈಶ್ವರ ಖಂಡ್ರೆ
ಬೆಂಗಳೂರಿನಲ್ಲಿ ಅರಣ್ಯ ಇಲಾಖೆ 153 ಎಕರೆಯಲ್ಲಿ ಅಭಿವೃದ್ಧಿ ಪಡಿಸಲುದ್ದೇಶಿಸಿರುವ ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ
ಇಂದಿನಿಂದ ಒಂದು ವಾರ ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ
ಬೆಂಗಳೂರು ನಗರದ 66/11 ಕೆ.ವಿ ಹೆಣ್ಣೂರು ರೋಡ್ ಉಪ-ಕೇಂದ್ರದ ವ್ಯಾಪ್ತಿಯ ಹಲವಾರು ಪ್ರದೇಶಗಳಲ್ಲಿ ಇಂದಿನಿಂದ ಒಂದು ವಾರ ವಿದ್ಯುತ್ ವ್ಯತ್ಯಯ ಇರುತ್ತದೆ. ಕೆಪಿಟಿಸಿಎಲ್ ತುರ್ತು ನಿರ್ವಹಣಾ ಕಾಮಗಾರಿಯನ್ನು ಕೈಗೊಂಡಿದ್ದು, ಇಂದಿನಿಂದ ಜನವರಿ 10ರವರೆಗೆ ಮಧ್ಯಂತರವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು
ನೈಸ್ ವಿರುದ್ದ ಕ್ರಮ: ಡಿಕೆಶಿ ಹೇಳಿಕೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸಂತಸ
ಡಿಸಿಎಂ ಡಿ.ಕೆ. ಶಿವಕುಮಾರ್ ನೈಸ್ ರೋಡ್ ವಿಚಾರದ ಬಗ್ಗೆ ಕಠಿಣವಾಗಿ ಮಾತಾಡಿದ್ದಾರೆ. ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವುದು ಅನಿವಾರ್ಯ, ಅವರದ್ದು ಅತಿಯಾಗಿದೆ ಎಂದು ಡಿಎಂಸಿ ಹೇಳಿದ್ದಾರೆ. ಡಿಕೆಶಿ ಹಾಗೆ ಹೇಳಿದ್ದು ತುಂಬಾ ಸಂತೋಷ. ಅವರು ಕ್ರಮ ಕೈಗೊಂಡರೆ ಬಹಳ ಸಂತೋಷ ಎಂದು
ಹೊಸ ವರ್ಷದಂದು ಅದಮ್ಯ ಚೇತನದಿಂದ ಸಂಕಲ್ಪ, ಸ್ಟೀಲ್ ಡಬ್ಬಿ, ಬಾಟಲ್ ವಿತರಣೆ
ಬೆಂಗಳೂರು: ಅದಮ್ಯ ಚೇತನ ಮತ್ತು ಅನಂತಕುಮಾರ ಪ್ರತಿಷ್ಠಾನದ ವತಿಯಿಂದ ಲಾಲ್ ಬಾಗ್ ರಸ್ತೆಯಲ್ಲಿರುವ ಅನಂತಸ್ಮೃತಿ ವನದಲ್ಲಿ ನಾಡು-ನುಡಿಗಾಗಿ ಸಂಕಲ್ಪ ಕಾರ್ಯಕ್ರಮ ಮತ್ತು ಸಾಮೂಹಿಕ ವಂದೇ ಮಾತರಂ ಗಾಯನ ಕಾರ್ಯಕ್ರಮ ಜನವರಿ 1 ರಂದು ನಡೆಯಿತು. ಅನಂತಕುಮಾರ ಪ್ರತಿಷ್ಠಾನದ ಟ್ರಸ್ಟಿ ಪ್ರದೀಪಕುಮಾರ, ನೆರೆದಿದ್ದ
ಉಗ್ರ ನಸೀರ್‌ಗೆ ಜೈಲಿನಲ್ಲಿ ನೆರವು: ಮೂವರ ವಿರುದ್ಧ ಎನ್‌ಐಎ ಹೆಚ್ಚುವರಿ ಚಾರ್ಜ್ ಶೀಟ್
ಉಗ್ರ ನಸೀರ್‌ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ನೆರವು ಪ್ರಕರಣದಲ್ಲಿ ಮೂವರು ಆರೋಪಿಗಳ ವಿರುದ್ಧ ಎನ್‌ಐಎ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಸಿದೆ. ಸಿಎಆರ್ ಕಾನ್ಸ್ಟೇಬಲ್ ಚಾಂದ್ ಪಾಷಾ, ಅನಿಸಾ ಫಾತಿಮಾ, ಜೈಲಿನಲ್ಲಿ ಮನೋವೈದ್ಯನಾಗಿದ್ದ ಡಾ ನಾಗರಾಜ್ ವಿರುದ್ಧ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಪರಾರಿಯಾಗಿದ್ದ
ಬೊಮ್ಮಾಯಿ, ಬಿಎಸ್‌ವೈ, ಡಿವಿಎಸ್ ಅವಧಿಯಲ್ಲೇ ಮನೆಗಳಿದ್ದವು: ಕೋಗಿಲು ಸಂತ್ರಸ್ತರ ಪರ “ದುಡಿಯೋ ಜನರ ವೇದಿಕೆ”
ಕೋಗಿಲು ಅಕ್ರಮ ಮನೆಗಳ ತೆರವು ಕಾರ್ಯಾಚರಣೆ ವಿಚಾರದಲ್ಲಿ “ದುಡಿಯೋ ಜನರ ವೇದಿಕೆ”ಯ ಸಾಮಾಜಿಕ ಕಾರ್ಯಕರ್ತರು ನಿರಾಶ್ರಿತಗೊಂಡವರ ಬೆಂಬಲಕ್ಕೆ ನಿಂತಿದ್ದು, 2012ರಲ್ಲಿ ಫಕೀರ್ ಲೇಔಟ್‌ನಲ್ಲಿ ಮನೆಗಳಿದ್ದ ಗೂಗಲ್ ಚಿತ್ರಗಳನ್ನು ಬಿಡುಗಡೆ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರದಡಿ ಇಲ್ಲಿ ಮನೆಗಳು ನಿರ್ಮಾಣಗೊಂಡಿರುವುದಲ್ಲ. ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ




