Tuesday, September 29, 2026
Menu

ಬೆಂಗಳೂರಲ್ಲಿ ಆಟೊ ಪ್ರಯಾಣ ದರ ಏರಿಕೆಯ ಬಿಸಿ

ಆಟೋರಿಕ್ಷಾ ಪ್ರಯಾಣ ದರ ಏರಿಕೆ ಮಾಡುವಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ಆಟೋ ಚಾಲಕ ಸಂಘಟನೆಗಳು ಮನವಿ ಮಾಡಿವೆ. ಒಂದು ಕಿಲೋಮೀಟರ್​​ಗೆ 5 ರೂಪಾಯಿ, ಎರಡು ಕಿಲೋಮೀಟರ್​ಗೆ 10 ರೂಪಾಯಿ ಏರಿಕೆ ಮಾಡುವಂತೆ ಮಾಡಿವೆ. ಬಸ್‌ ಟಿಕೆಟ್‌ ದರ ಏರಿಕೆಯಿಂದ ಕಂಗೆಟ್ಟ ಜನರಿಗೆ ಈಗ ಆಟೊ ಪ್ರಯಾಣದರ ಹೆಚ್ಚಳದ ಬಿಸಿ ತಾಗಲಿದೆ. ಆಟೋ ಪ್ರಯಾಣ ದರ ಕಿಲೋಮೀಟರ್​ಗೆ 30 ರೂಪಾಯಿ ಇದೆ, ಇದೀಗ 40 ರೂಪಾಯಿಗೆ ಏರಿಕೆ ಮಾಡುವಂತೆ ಮನವಿ ಮಾಡಿವೆ.

ಬಿಬಿಎಂಪಿ ಕಸ ಸಾಗಣೆ ಲಾರಿಗೆ ಅಕ್ಕ-ತಂಗಿ ಬಲಿ

ಬಿಬಿಎಂಪಿ ಕಸ ಸಾಗಣೆ ಲಾರಿ ಹರಿದು ಅಕ್ಕ-ತಂಗಿ ಇಬ್ಬರು ಮೃತಪಟ್ಟಿರುವ ಘಟನೆ ಥಣಿಸಂದ್ರ ಮುಖ್ಯ ರಸ್ತೆಯ ಸಾರಾಯಿಪಾಳ್ಯ ಬಳಿ ನಡೆದಿದೆ. ಗೋವಿಂದಪುರದ ನಾಜಿಯಾ ಸುಲ್ತಾನ (30), ನಾಜಿಯಾ ಇರ್ಫಾನ (32) ಮೃತರು. ಅಪಘಾತ ನಡೆಸಿದ ಲಾರಿ ಚಾಲಕ ಗಡಿಲಿಂಗನನ್ನು ಪೊಲೀಸರು ಬಂಧಿಸಿದ್ದಾರೆ.

ಸಮಸ್ಯೆಗಳನ್ನು ಆತ್ಮ ವಿಶ್ವಾಸದಿಂದ ಎದುರಿಸಿದಾಗ ಯಶಸ್ಸಿನತ್ತ ಸಾಗಲು ಸಾಧ್ಯ: ರಾಮ್‌ ಪ್ರಸಾತ್‌ ಮನೋಹರ್‌

ಬೆಂಗಳೂರು: ಸಮಸ್ಯೆ ಎದುರಾದಾಗ ವಿಮುಖರಾಗದೇ ಆತ್ಮವಿಶ್ವಾಸ ಮತ್ತು ಛಲದಿಂದ ಎದುರಿಸಿದರೆ ಯಶಸ್ಸಿನ ಹಾದಿ ಸುಗಮವಾಗಲಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಜಲಮಂಡಳಿ ಅಧ್ಯಕ್ಷ ಡಾ. ವಿ. ರಾಮ್‌ ಪ್ರಸಾತ್‌ ಮನೋಹರ್‌ ಹೇಳಿದ್ದಾರೆ. ನಗರದ ಸೌಂದರ್ಯ ಸೆಂಟ್ರಲ್‌ ಶಾಲೆಯಲ್ಲಿ ಕರ್ನಾಟಕದ ಪರಂಪರೆಯನ್ನು

ರಂಗ ಪರಿಷೆ ಅರ್ಥಪೂರ್ಣವಾಗಿ ನಡೆಸಿ: ಸಿಎಂ ಸಿದ್ದರಾಮಯ್ಯ ಸಲಹೆ

ಬೆಂಗಳೂರು: ರಂಗ ಪರಿಷೆ ಅರ್ಥಪೂರ್ಣವಾಗಿ ನಡೆಸಿ. ರಂಗಭೂಮಿಯ ಸಮಗ್ರ ಮಾಹಿತಿ ಬೆರಳ ತುದಿಯಲ್ಲಿ ಸಿಗುವಂತಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದರು. ಕರ್ನಾಟಕ ನಾಟಕ ಅಕಾಡೆಮಿಯ ವೆಬ್ ಸೈಟ್ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಅಕಾಡೆಮಿಗಳು ಸಕ್ರಿಯವಾಗಿ ಕೆಲಸ ಮಾಡಬೇಕು. ಬದುಕು ಪೂರ್ಣ ಆಗಲು

ಪ್ರೊ.ಮುಜಾಫರ್‌ ಅಸ್ಸಾದಿ, ಜಿ.ಸಿ.ಬಯ್ಯಾರೆಡ್ಡಿಗೆ ಸಿಎಂ ಸಂತಾಪ

ಚಿಂತಕ, ಲೇಖಕ ಪ್ರೊ.ಮುಜಾಫರ್‌ ಅಸ್ಸಾದಿ (63) ಮತ್ತು ಸಿಪಿಐ(ಎಂ) ನಾಯಕ ಮತ್ತು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷ ಜಿ.ಸಿ.ಬಯ್ಯಾರೆಡ್ಡಿ ಅವರು  ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ  ನಿಧನರಾಗಿದ್ದಾರೆ. ಈ ಇಬ್ಬರು ಸಮಾಜಮುಖಿ ಗಣ್ಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದಾರೆ. ಮುಜಾಫರ್‌ ಅಸ್ಸಾದಿ

ಬೀದಿ ಬದಿ ವ್ಯಾಪಾರ ರಸ್ತೆಗಳ ಗುರುತಿಸಲು ತುಷಾರ್ ಗಿರಿನಾಥ್ ಸೂಚನೆ

ಬೆಂಗಳೂರು ಪಶ್ಚಿಮ ವಲಯ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರ ಮಾಡಲು ಅವಕಾಶವಿರುವ ರಸ್ತೆಗಳನ್ನು ಮಾರ್ಗಸೂಚಿಯ ಅನುಸಾರ ಗುರುತಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಪಶ್ಚಿಮ ವಲಯ ವ್ಯಾಪ್ತಿಯಲ್ಲಿ “ಮುಖ್ಯ ಆಯುಕ್ತರ ನಡೆ ವಲಯದ ಕಡೆ”ಯಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು

ಚಾಲಕನ ತಪ್ಪಿಗೆ ಕ್ಷಮೆ ಕೇಳಿದ ‘ನಮ್ಮ ಯಾತ್ರಿ ಆ್ಯಪ್’

‘ನಮ್ಮ ಯಾತ್ರಿ ಆ್ಯಪ್’ ಆಟೋ ಚಾಲಕ ಪ್ರಯಾಣಿಕ ಮಹಿಳೆಯನ್ನು ನಿಗದಿತ ಜಾಗದ ಬದಲು ಬೇರೆ ಕಡೆ ಕರೆದೊಯುವಾಗ ಆಕೆ ಆಟೊದಿಂದ ಜಿಗಿದು ಅಪಾಯದಿಂದ ಪಾರಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ‘ನಮ್ಮ ಯಾತ್ರಿ ಆ್ಯಪ್’ ಕ್ಷಮೆ ಯಾಚಿಸಿದೆ. ಗುರುವಾರ ರಾತ್ರಿ ಹೆಬ್ಬಾಳದ ವೀರಣ್ಣಪಾಳ್ಯ ಬಳಿ

ಗಂಡಸರಿಗೆ ಬರೆ ಹಾಕುವ ಕಾಂಗ್ರೆಸ್ ಸರಕಾರ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಸರಕಾರಿ ಬಸ್ ಪ್ರಯಾಣ ದರ ಏರಿಕೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಗರದ ಮೆಜೆಸ್ಟಿಕ್ ನ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಬಿಜೆಪಿ ವತಿಯಿಂದ ವಿನೂತನ ಮಾದರಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಕೆಲವು ಕಾರ್ಯಕರ್ತರು ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಯವರ

ಬಸ್‌ ಟಿಕೆಟ್‌ ದರ ಹೆಚ್ಚಳ ವಿರುದ್ಧ ಬಿಜೆಪಿ ಪ್ರತಿಭಟನೆ

ರಾಜ್ಯ ಸರ್ಕಾರ ಬಸ್ ಟಿಕೆಟ್‌  ದರ ಏರಿಕೆ ಮಾಡಿರುವುದರ  ವಿರುದ್ಧ ವಿಧಾನಸಭೆ ಪ್ರತಿಪಕ್ಷದ ನಾಯಕಆರ್. ಅಶೋಕ್ ಹಾಗೂ ಬಿಜೆಪಿ ನಾಯಕರು ಮೆಜೆಸ್ಟಿಕ್‌ನಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಅಶೋಕ್‌ ಅವರು ಪ್ರಯಾಣಿಕರಿಗೆ ಹೂ ನೀಡಿ ರಾಜ್ಯ ಸರ್ಕಾರ ಬಸ್‌ ಟಿಕೆಟ್‌ ದರ

ಬೆಂಗಳೂರಿನ ಬೈಕ್ ಶೋ ರೂಮ್ ನಲ್ಲಿ ಬೆಂಕಿ ಅವಘಡ: 50ಕ್ಕೂ ಹೆಚ್ಚು ಬೈಕ್ ಭಸ್ಮ

ಬೆಂಗಳೂರಿನ ಹೊರವಲಯದ ಮಹದೇವಪುರ ಬಳಿಯ ಬೈಕ್ ಶೋರೂಂವೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ ಐವತ್ತು ದ್ವಿಚಕ್ರ ವಾಹನಗಳು ಸುಟ್ಟು ಭಸ್ಮವಾಗಿವೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ನಿನ್ನೆ ರಾತ್ರಿ ಈ ಅವಘಡ ಸಂಭವಿಸಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ.