ಬೆಂಗಳೂರು
ಬಿಬಿಎಂಪಿ, ಬೆಸ್ಕಾಂ, ಆರೋಗ್ಯಾಧಿಕಾರಿ ಸೇರಿ 10 ಅಧಿಕಾರಿಗಳಿಗೆ ಲೋಕಾಯುಕ್ತ ದಾಳಿ!
ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವಿವಿಧ ಇಲಾಖೆಗಳ 10 ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಬಿಬಿಎಂಪಿ, ಬೆಸ್ಕಾಂ, ಆರೋಗ್ಯ, ತೆರಿಗೆ ಇಲಾಖೆ ಸೇರಿದಂತೆ ರಾಜ್ಯದ ವಿವಿಧ ಇಲಾಖೆಗಳ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಮಂಗಳವಾರ ಬೆಳಿಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ , ಕಲಬುರಗಿ, ರಾಯಚೂರು, ಗದಗ, ಹಾಗೂ ಚಿತ್ರದುರ್ಗದಲ್ಲಿ ದಾಳಿ


