Menu

ದರ್ಶನ್‌ ಬೆಂಗಳೂರಿಂದ ಹೊರ ಹೋಗ್ಬಹುದು ಎಂದ ಹೈಕೋರ್ಟ್‌

ನಟ ದರ್ಶನ್‌ಗೆ ಬೆಂಗಳೂರು ಬಿಟ್ಟು ಹೋಗದಂತೆ ಇದ್ದ ಷರತ್ತನ್ನು ಕೋರ್ಟ್‌ ಸಡಿಲಿಸಿದೆ. ವಿದೇಶಕ್ಕೆ ಹೋಗುವುದಾದರೆ ಮಾತ್ರ ಕೋರ್ಟ್ ಅನುಮತಿ ಬೇಕು ಎಂದು ಹೈಕೋರ್ಟ್‌ ಏಕಸದಸ್ಯ ಪೀಠ ಆದೇಶ ಮಾಡಿದೆ. ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ದರ್ಶನ್ ಮನವಿಗೆ ಸ್ಪಂದಿಸಿದ ಹೈಕೋರ್ಟ್ ಈ ಸಡಿಲಿಕೆ ನೀಡಿದೆ. ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಈ ಆದೇಶ ಪ್ರಕಟಿಸಿದ್ದಾರೆ. ಇದರಿಂದ ದರ್ಶನ್‌ಗೆ ಮಾತ್ರವಲ್ಲದೆ ಅವರನ್ನು ನಂಬಿ ಬಂಡವಾಳ ಹೂಡಿದ್ದ ನಿರ್ಮಾಪಕರಿಗೆ ನಿರಾಳತೆ ಸಿಕ್ಕಂತಾಗಿದೆ. ದರ್ಶನ್‌ ವಿದೇಶಕ್ಕೆ ಹೋಗಲು

ಮೈಸೂರು ಒಡೆಯರ್‌ ಕುಟುಂಬಕ್ಕೆ 3,400 ಕೋಟಿ ರೂ.ನೀಡಿ: ರಾಜ್ಯಕ್ಕೆ ಸುಪ್ರೀಂ ನಿರ್ದೇಶನ

ಬಳ್ಳಾರಿ ಮತ್ತು ಜಯಮಹಲ್‌ ರಸ್ತೆಗಳ ವಿಸ್ತರಣೆಗೆಂದು ಸ್ವಾಧೀನಪಡಿಸಿಕೊಂಡಿರುವ ಬೆಂಗಳೂರಿನ ಅರಮನೆ ಮೈದಾನದ 15.7 ಎಕರೆ ಜಾಗಕ್ಕೆ ಒಂದು ವಾರ ದೊಳಗೆ 3,400 ಕೋಟಿ ರೂ. ಮೊತ್ತದ ಟಿಡಿಆರ್ (ಅಭಿವೃದ್ಧಿ ಹಕ್ಕು ವರ್ಗಾವಣೆ) ಪ್ರಮಾಣಪತ್ರವನ್ನು ಸಲ್ಲಿಸುವಂತೆ ಸುಪ್ರೀಂಕೋರ್ಟ್‌ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಮರೆವಿನ ಕಾಯಿಲೆ ಆಲ್‌ಝೈಮರ್ ನಿಯಂತ್ರಿಸುವ ಅಣಬೆ ತಳಿ ಅಭಿವೃದ್ಧಿ

ಮೆದುಳಿನ ನರಕೋಶಗಳು ನಿಷ್ಕ್ರಿಯಗೊಂಡು ಉಂಟಾಗುವ ಮರೆವಿನ ಕಾಯಿಲೆ ‘ಆಲ್‌ಝೈಮರ್’ ನಿಯಂತ್ರಿಸುವ ಔಷಧೀಯ ಗುಣವುಳ್ಳ ಲಯನ್ಸ್‌ಮೇನ್‌’ ಹೆಸರಿನ ಅಣಬೆಯನ್ನು ಭಾರತೀಯ ತೋಟಗಾರಿಕೆ ಸಂಶೋಧನಾ ಕೇಂದ್ರ (ಐಐಎಚ್‌ಆರ್‌) ಅಭಿವೃದ್ಧಿಪಡಿಸಿದೆ. ‘ಲಯನ್ಸ್‌ಮೇನ್‌’ ಅಣಬೆ ಮೆದುಳಿನ ನರಕೋಶಗಳು ಸತ್ತಾಗ ಮೆದುಳು ಮತ್ತು ನರ ಮಂಡಲದ ಮೇಲೆ ಪರಿಣಾಮ

ಸೆಕ್ಸ್‌ ನಿರಾಕರಿಸಿದ ಮಹಿಳೆ, ಮಗುವನ್ನು ಕೊಂದಾತನಿಗೆ ಜೀವಾವಧಿ ಶಿಕ್ಷೆ

ಹೊಸಪೇಟೆ ಮೂಲದ ಪ್ರಶಾಂತ್ ಎಂಬಾತ ಲೈಂಗಿಕ ಸಂಪರ್ಕಕ್ಕೆ ಸಹಕರಿಸದಿದ್ದಕ್ಕೆ ಚಾಕುವಿನಿಂದ ಚುಚ್ಚಿ ಮಹಿಳೆಯನ್ನು ಸಾಯಿಸಿ, ನಾಲ್ಕು ವರ್ಷದ ಮಗುವನ್ನು ಕೊಂದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಗೆ ಗುರಿಯಾಗಿದ್ದಾನೆ. ಪ್ರಕರಣದ ವಿಚಾರಣೆ ನಡೆಸಿದ ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸೆಷನ್ಸ್‌ ನ್ಯಾಯಾಲಯ ಅಪರಾಧಿಗೆ

ಹೆಬ್ಬಾಳದಲ್ಲಿ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಮಹಿಳೆ ಸಾವು

ಹೆಬ್ಬಾಳ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಮೃತ ಮಹಿಳೆಯನ್ನು ನಾಗೇನಹಳ್ಳಿ ನಿವಾಸಿ ಲಿಂಗಮ್ಮ ಎಂದು ಗುರುತಿಸಲಾಗಿದೆ. ಮಹಿಳೆ ಬಸ್ ಇಳಿದು ರಸ್ತೆ ದಾಟುವಾಗ ವೇಗವಾಗಿ ಬಂದಿದ್ದ ಬಿಎಂಟಿಸಿ ಬಸ್ ಡಿಕ್ಕಿಯಾಗಿತ್ತು. ಮಹಿಳೆ ಗಂಭೀರ ಗಾಯಗೊಂಡಿದ್ದು,

ಸಾಹಿತ್ಯದ ಓದು ಮನುಷ್ಯನನ್ನು ಹೆಚ್ಚು ಮಾನವೀಯಗೊಳಿಸುತ್ತದೆ: ಸಿಎಂ

ಬೆಂಗಳೂರು: ಪುಸ್ತಕ ಮತ್ತು ಸಾಹಿತ್ಯದ ಓದು ಮನುಷ್ಯನನ್ನು ಹೆಚ್ಚೆಚ್ಚು ಮಾನವೀಯಗೊಳಿಸುತ್ತದೆ. ಆದ್ದರಿಂದ ಓದುವ ಅಭ್ಯಾಸ ಹೆಚ್ಚಿಸಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ವಿಧಾನಸೌಧದಲ್ಲಿ ಪ್ರಪ್ರಥಮ ಬಾರಿಗೆ ಆಯೋಜಿಸಲಾಗಿರುವ ಪುಸ್ತಕ ಮೇಳವನ್ನು ಉದ್ಘಾಟಿಸಿ ಮಾತನಾಡಿದರು. ವಿಧಾನಸೌಧದಲ್ಲಿ ಓದುಗರ, ಸಾಹಿತ್ಯಾಸಕ್ತರ ಹಬ್ಬ. ಇದನ್ನು

ಲಲಿತ ಕಲೆಗಳ ಮಹಾ ಪೋಷಕಿ ವಿಮಲಾ ರಂಗಾಚಾರ್ ನಿಧನ

ಬೆಂಗಳೂರಿನ ಹಿರಿಯ ಚೇತನ ಹಾಗೂ ನೃತ್ಯ ಮತ್ತು ಲಲಿತ ಕಲೆಗಳ ಮಹಾ ಪೋಷಕರಾಗಿದ್ದ ವಿಮಲಾ ರಂಗಾಚಾರ್ (96 ) ಮಂಗಳವಾರ ಬೆಂಗಳೂರಿನಲ್ಲಿ ನಿಧನರಾದರು. ಬೆಂಗಳೂರಿನ ಮಲ್ಲೇಶ್ವರ ಶಿಕ್ಷಣ ಸಂಸ್ಥೆಯ ಸ್ಥಾಪಕ ಸದಸ್ಯರು ಹಾಗೂ ಮಾಜಿ ಅಧ್ಯಕ್ಷರಾಗಿದ್ದ ಅವರು ಬೆಂಗಳೂರಿನಲ್ಲಿ ಹಲವಾರು ಲಲಿತ ಕಲಾ

ಬೆಂಗಳೂರಿನಲ್ಲಿ ಮಾರ್ಚ್‌ 1ರಿಂದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ

ಮಾರ್ಚ್ 1ರಿಂದ 16ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ(BIFFes)ಆರಂಭವಾಗಲಿದ್ದು, 60 ದೇಶಗಳಿಂದ 200ಕ್ಕೂ ಹೆಚ್ಚು ಚಲನಚಿತ್ರ ಪ್ರದರ್ಶನಗೊಳ್ಳಲಿವೆ. ‘ಸರ್ವ ಜನಾಂಗದ ಶಾಂತಿಯ ತೋಟ’ ಎಂಬ ಥೀಮ್‌ನಡಿಯಲ್ಲಿ ಚಲನಚಿತ್ರೋತ್ಸವ ನಡೆಯಲಿದೆ ಎಂದು ಚಿತ್ರೋತ್ಸವ ಸಮಿತಿ ಅಧ್ಯಕ್ಷೆ ಬಿ.ಬಿ.ಕಾವೇರಿ ಹೇಳಿದ್ದಾರೆ. ಮಾರ್ಚ್ 1 ರ ಸಂಜೆ

ನಾಡಿನ ದೇಗುಲಗಳಲ್ಲಿ ಶಿವರಾತ್ರಿ ಸಂಭ್ರಮಾಚರಣೆ

ದೇಶ, ರಾಜ್ಯಾದ್ಯಂತ ಇಂದು ಶಿವರಾತ್ರಿ ಸಂಭ್ರಮ ಮನೆ ಮಾಡಿದೆ. ಮುಂಜಾನೆಯಿಂದಲೇ ಶಿವನ ದೇವಾಲಯಗಳಲ್ಲಿ ರುದ್ರಾಭಿಷೇಕ ಸೇರಿದಂತೆ ವಿಶೇಷ ಅಭಿಷೇಕ, ಪೂಜೆಗಳು ನಡೆಯುತ್ತಿವೆ. ಬೆಂಗಳೂರಿನ ಮಲ್ಲೇಶ್ವರದ ಕಾಡು ಮಲ್ಲೇಶ್ವರ, ಹನುಮಂತನಗರದ ಗವಿ ಗಂಗಾಧರೇಶ್ವರ ದೇಗುಲದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದು ಶಿವನಿಗೆ ವಿಶೇಷ

ಡಿನೋಟಿಫಿಕೇಷನ್ ಪ್ರಕರಣ: ಸಚಿವ ಹೆಚ್‌ಡಿಕೆ ಅರ್ಜಿ ವಜಾಗೊಳಿಸಿದ ಸುಪ್ರೀಂ

ಹಲಗೆವಡೇರಹಳ್ಳಿಯಲ್ಲಿ ಬಿಡಿಎ ಸ್ವಾಧೀನಪಡಿಸಿಕೊಂಡಿದ್ದ ಜಮೀನು ಡಿನೋಟಿಷಿಕೇಷನ್ ಸಂಬಂಧ ಕುಮಾರಸ್ವಾಮಿ ವಿರುದ್ಧದ ಪ್ರಕರಣದಲ್ಲಿ ಲೋಕಾಯುಕ್ತ ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಹೈಕೋರ್ಟ್​ ರದ್ದುಗೊಳಿಸಿದ್ದನ್ನು ಪ್ರಶ್ನಿಸಿ ಕುಮಾರಸ್ವಾಮಿ ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿಗಳಾದ ದೀಪಂಕರ್ ದತ್ತಾ