ಬೆಂಗಳೂರು
ಆನೇಕಲ್ ತಾಲೂಕಿನ ಹೆಬ್ಬಗೋಡಿ ಕನ್ನಡ ಶಾಲೆಗೆ ಸಚಿವ ಸಂತೋಷ್ ಲಾಡ್ ನೆರವು
ಬೆಂಗಳೂರು ದಕ್ಷಿಣ ಜಿಲ್ಲೆ ಆನೇಕಲ್ ತಾಲೂಕಿನ ಹೆಬ್ಬಗೋಡಿಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ ಕ್ರೀಡಾ ಪರಿಕರಗಳನ್ನು ನೀಡಲಾಗಿದೆ. ಶಾಲೆಯಲ್ಲಿ ಕ್ರೀಡಾ ಪರಿಕರಗಳು ಇಲ್ಲದೆ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿರುವ ಶಾಲೆಯ ಹಳೆಯ ವಿದ್ಯಾರ್ಥಿಯೊಬ್ಬರು ಸಂತೋಷ್ ಲಾಡ್ ಫೌಂಡೇಶನ್‌ಗೆ ಮನವಿ ಮಾಡಿಕೊಂಡಿದ್ದರು. ಇದಕ್ಕೆ ಸ್ಪಂದಿಸಿರುವ ಫೌಂಡೇಶನ್ ಶಾಲೆಗೆ ಮಕ್ಕಳಿಗೆ ಅಗತ್ಯವಾಗಿ ಬೇಕಾದ ಎಲ್ಲಾ ಸಾಮಗ್ರಿ ಗಳನ್ನು ನೀಡಿ ಅನುಕೂಲ ಮಾಡಿಕೊಟ್ಟಿದೆ. ನೂರು ವರ್ಷ ಹಳೆಯ ಈ ಶಾಲೆಯಲ್ಲಿ
ಲೈಟ್ ಆಫ್ ವಿಚಾರಕ್ಕೆ ಜಗಳ ಕೊಲೆಯಲ್ಲಿ ಅಂತ್ಯ
ಬೆಂಗಳೂರು: ಕಚೇರಿಯ ಲೈಟ್ ಆಫ್ ಮಾಡುವ ವಿಚಾರಕ್ಕೆ ರಾತ್ರಿ ಪಾಳಿಯಲ್ಲಿದ್ದ ಕೆಲಸಗಾರರ ನಡುವೆ ಆರಂಭವಾದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ವಿಂದರಾಜನಗರದಲ್ಲಿ ಸಂಭವಿಸಿದೆ. ಭೀಮೇಶ್ ಬಾಬು (41)ಕೊಲೆಯಾದವರು, ಕೃತ್ಯ ನಡೆಸಿದ ಸೋಮಲ ವಂಶಿ (24)ಯನ್ನು ಬಂಧಿಸಿ ಮುಂದಿನ ತನಿಖೆಯನ್ನು ಕೈಗೊಳ್ಳಲಾಗಿದೆ.
ಬೆಂಗಳೂರಿನಲ್ಲಿ ಪ್ರತ್ಯೇಕ ಅಪಘಾತದಲ್ಲಿ ಮೂವರು ಸಾವು
ಬೆಂಗಳೂರು ನಗರದ ಎಲೆಕ್ಟ್ರಾನಿಕ್ ಸಿಟಿ, ಪೀಣ್ಯ ಹಾಗೂ ಎಚ್ಎಸ್ಆರ್ ಲೇಔಟ್ ನಲ್ಲಿ ಸಂಭವಿಸಿದ ಮೂರು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಮೂವರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. \ಎಲೆಕ್ಟ್ರಾನಿಕ್ ಸಿಟಿಯ ಕೂಡ್ಲು ಗೇಟ್ ಬಳಿ ಟೆಂಪೋ ಟ್ರಾವೆಲರ್ ಆಟೋ ಗೆ ಡಿಕ್ಕಿ ಹೊಡೆದು
ಆರ್. ಅಶೋಕ್ ನೇತೃತ್ವದಲ್ಲಿ ಟನಲ್ ರಸ್ತೆ ಸಮಿತಿ ರಚನೆಗೆ ಸಿದ್ಧ: ಡಿಕೆ ಶಿವಕುಮಾರ್
ಬೆಂಗಳೂರು: ಟನಲ್ ರಸ್ತೆ ವಿಚಾರವಾಗಿ ವಿಪಕ್ಷ ಪಕ್ಷದ ನಾಯಕ ಆರ್. ಅಶೋಕ್ ಅವರ ನೇತೃತ್ವದಲ್ಲಿಯೇ ಸಮಿತಿ ರಚನೆ ಮಾಡಲು ನಾನು ತಯಾರಿದ್ದೇನೆ. ಅವರು ಸೂಚಿಸಿದ ಕಡೆಯೇ ಲಾಲ್ ಬಾಗ್ ಬಳಿ ಪ್ರವೇಶ- ನಿರ್ಗಮನ ತಾಣ ರೂಪಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ದಕ್ಷಿಣ ಬೆಂಗಳೂರಿನಲ್ಲಿ ತಲೆ ಎತ್ತಲಿದೆ ವೈಷ್ಣವಿ ಎಟಿ-ಒನ್ ಕೃಷ್ಣ ಬೃಂದಾವನ
ಬೆಂಗಳೂರು: ಪ್ರಮುಖ ರಿಯಲ್ ಎಸ್ಟೇಟ್ ಡೆವಲಪರ್ ವೈಷ್ಣವಿ ಗ್ರೂಪ್ ಸಮಗ್ರ ಮತ್ತು ನೆಮ್ಮದಿಯ ಜೀವನ ಮರು ವ್ಯಾಖ್ಯಾನಿಸುವ ಅಲ್ಟ್ರಾ-ಐಷಾರಾಮಿ ವಸತಿ ಯೋಜನೆಯಾದ ವೈಷ್ಣವಿ ಎಟಿ-ಒನ್ ಕೃಷ್ಣ ಬೃಂದಾವನ ಚಾಲನೆ ಘೋಷಿಸಿದೆ. ಅತೀ ಸೂಕ್ಷ್ಮ ಮಾರುಕಟ್ಟೆಯಾದ ದಕ್ಷಿಣ ಬೆಂಗಳೂರಿನ ಅತ್ಯಂತ ಉನ್ನತಮಟ್ಟದ ಬಡಾವಣೆಗಳಲ್ಲಿ
ಸಹಾಯ ನೆಪದಲ್ಲಿ ಮಹಿಳೆ ಮೇಲೆ ದೌರ್ಜನ್ಯ: ಪ್ರೊ. ಬಿಸಿ ಮೈಲಾರಪ್ಪ ಅರೆಸ್ಟ್
ಗಂಡನನ್ನು ಕಳೆದುಕೊಂಡು ಸಂಕಷ್ಟದಲ್ಲಿದ್ದ ಮಹಿಳೆಗೆ ಸಹಾಯ ಮಾಡುವ ನೆಪದಲ್ಲಿ ಹಲ್ಲೆ ನಡೆಸಿದ ಆರೋಪ ಮೇಲೆ ಬೆಂಗಳೂರು ವಿಶ್ವವಿದ್ಯಾಲಯದ ಮಾಜಿ ನಿರ್ದೇಶಕ ಹಾಗೂ ಪ್ರಾಧ್ಯಾಪಕ ಪ್ರೊ. ಬಿ.ಸಿ.ಮೈಲಾರಪ್ಪ ಅವರನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಬಸವೇಶ್ವರ ನಗರ ಠಾಣೆ ಪೊಲೀಸರು 37 ವರ್ಷದ ಮಹಿಳೆ ನೀಡಿದ
GBA ನಿಂದ ಮನೆ ಮುಂದೆ ಕಸ ಸುರಿಯೋ ಅಭಿಯಾನ
ರಸ್ತೆ ಬದಿ ಕಸ ಎಸೆಯುವವರ ಮನೆ ಮುಂದೆ ಕಸ ಸುರಿದು ಜಾಗೃತಿ ಮೂಡಿಸಲು GBA ಮುಂದಾಗಿದ್ದು, ರಸ್ತೆ ಬದಿಯಲ್ಲಿ ಕದ್ದು ಕಸ ಎಸೆದು ಹೋಗುವವರ ವೀಡಿಯೊ ಚಿತ್ರೀಕರಿಸಿರುವ ಮಾರ್ಷಲ್‌ಗಳು ಅದೇ ವ್ಯಕ್ತಿಗಳ ಮನೆ ಮುಂದೆ ಕಸ ಸುರಿದು ಜಾಗೃತಿ ಹುಟ್ಟು ಹಾಕುವ
ದೇವನಹಳ್ಳಿಯಲ್ಲಿ ಕುಟುಂಬ ಆತ್ಮಹತ್ಯೆ ಯತ್ನ, ಇಬ್ಬರ ಸಾವು, ಇಬ್ಬರ ಸ್ಥಿತಿ ಗಂಭೀರ
ಬೆಂಗಳೂರಿನ ದೇವನಹಳ್ಳಿಯ ಹೆಗ್ಗನಹಳ್ಳಿಯಲ್ಲಿ ಪೌರೋಹಿತ್ಯ ಮಾಡ್ಕೊಂಡಿದ್ದ ಕುಮಾರಪ್ಪ ಎಂಬವರ ಇಡೀ ಕುಟುಂಬ ಆತ್ಮಹತ್ಯೆಗೆ ಯತ್ನಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ. 60 ವರ್ಷದ ಕುಮಾರಪ್ಪ, ಪತ್ನಿ 55 ವರ್ಷದ ರಮಾ ಮತ್ತು ಗಂಡು ಮಕ್ಕಳಾದ ಅಕ್ಷಯ್ ಹಾಗೂ ಅರುಣ್ ಸಾಮೂಹಿಕವಾಗಿ
ಬೆಂಗಳೂರಿನಲ್ಲಿ ಸ್ನೇಹಿತರೊಂದಿಗೆ ಸೇರಿ ಅಪ್ರಾಪ್ತ ವಯಸ್ಕ ಮಗಳಿಂದ ತಾಯಿಯ ಕೊಲೆ
ಬೆಂಗಳೂರಿನ ಸುಬ್ರಹ್ಮಣ್ಯಪುರದ ಸರ್ಕಲ್ ಮಾರಮ್ಮಾ ದೇವಸ್ಥಾನದ ಬಳಿ ಅಪ್ರಾಪ್ತ ವಯಸ್ಕ ಮಗಳು ಸ್ನೇಹಿತರೊಂದಿಗೆ ಸೇರಿ ತನ್ನ ತಶಯಿಯನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಉಸಿರುಗಟ್ಟಿಸಿ ಕೊಲೆ ಮಾಡಿ ನೇಣು ಹಾಕಿ ಆರೋಪಿಗಳು ತಲೆಮರೆಸಿಕೊಂಡಿದ್ದರು. ಈ ಕೃತ್ಯದಲ್ಲಿ ಭಾಗಿಯಾದ ಐವರೂ ಅಪ್ರಾಪ್ತ ವಯಸ್ಕರು
ಬೆಂಗಳೂರಿನಲ್ಲಿ ಅಧಿಕಾರಿಗಳೂ ಸೇರಿ ಹೆಣದಲ್ಲಿ ಹಣ ಮಾಡುವ ವ್ಯವಸ್ಥೆ: ಲಿಂಕ್ಡ್ಇನ್ ಪೋಸ್ಟ್ ವೈರಲ್
ಭಾರತ್ ಪೆಟ್ರೋಲಿಯಂ ನಿಗಮದ ನಿವೃತ್ತ ಸಿಎಫ್ಒ ಶಿವಕುಮಾರ್ ಅವರ ಮಗಳು ಇತ್ತೀಚೆಗೆ ಮೃತಪಟ್ಟಿದ್ದ ಸಂದರ್ಭದಲ್ಲಿ ಅವರು ಎದುರಿಸಿದ ಲಂಚದ ಪ್ರಪಂಚವನ್ನು ತೆರೆದಿಟ್ಟು ಲಿಂಕ್ಡ್ಇನ್ ಪೋಸ್ಟ್ ಮಾಡಿದ್ದಾರೆ, ಈ ಪೋಸ್ಟ್ ಎಲ್ಲೆಡೆ ವೈರಲ್ ಆಗಿದ್ದು, ಲಂಚ ಪಡೆದ ಆರೋಪದಲ್ಲಿ ಬೆಂಗಳೂರಿನ ಬೆಳ್ಳಂದೂರು ಪೊಲೀಸ್




