Menu

ಖಾಸಗಿ ಸೈಬರ್ ಕೆಫೆಗಳಿಗೂ ಇ-ಖಾತಾ ಹಂಚಿಕೆಗೆ ಬಿಬಿಎಂಪಿ ಅವಕಾಶ

ಬೆಂಗಳೂರು ಒನ್ ಕೇಂದ್ರಗಳಲ್ಲಿ ಇ-ಖಾತಾ ಪಡೆಯಲು ಅವಕಾಶ ನೀಡಿದ್ದ ಬಿಬಿಎಂಪಿ, ಇ-ಖಾತಾ ಪಡೆಯಲು ಆಸ್ತಿ ಋಣಭಾರ ರಾಹಿತ್ಯ ಪ್ರಮಾಣ ಪತ್ರ ಬೇಡ ಎಂದು ಆದೇಶ ಹೊರಡಿಸಿದೆ. ಮತ್ತೊಂದೆಡೆ ಖಾಸಗಿ ಸೈಬರ್ ಕೆಫೆಗಳಿಗೂ ಇ-ಖಾತಾ ಹಂಚಿಕೆಗೆ ಅವಕಾಶ ನೀಡಲು ಹೊರಟಿದೆ. ಬೆಂಗಳೂರಿನಲ್ಲಿ ಆಸ್ತಿಗಳಿಗೆ ಇ-ಖಾತಾ ಕಡ್ಡಾಯ ಎಂದಿರುವ ಪಾಲಿಕೆ ಇ-ಖಾತಾ ಹಂಚಿಕೆಗೆ ಎಷ್ಟೇ ಯೋಜನೆ ರೂಪಿಸಿದರೂ ಒಂದಿಲ್ಲೊಂದು ಸಮಸ್ಯೆ ಎದುರಾಗುತ್ತಿದೆ. ಇದೀಗ ಖಾಸಗಿ ಸೈಬರ್ ಕೆಫೆಗಳಲ್ಲೂ ಇ-ಖಾತಾ ಹಂಚಿಕೆಗೆ ಅವಕಾಶ ನೀಡಲು

ನೆಲಮಂಗಲದಲ್ಲಿ ಉದ್ಯಮಿಯ ಅಪಹರಿಸಿ ಹಣ ದರೋಡೆ, ಚಿತ್ರಹಿಂಸೆ

ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳು ಅಪಹರಿಸಿ ಚಿತ್ರಹಿಂಸೆ ನೀಡಿ 28 ಲಕ್ಷ ರೂ. ದೋಚಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೊಲ್ವೆ ಗ್ರಾಮದ ಬಂಕ್ ಹಾಗೂ ಟ್ರಾನ್ಸ್ ಪೋರ್ಟ್ ಉದ್ಯಮಿ ಇಕ್ಬಾಲ್ ಅಪಹರಣಕ್ಕೆ ಒಳಗಾದವರು. ಜ.24ರಂದು

ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ ಯೋಜನೆ ಅನುಷ್ಠಾನಕ್ಕೆ ಸಂಪುಟ ಒಪ್ಪಿಗೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ 30-01-2025 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ  ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಬೆಂಗಳೂರು ಜನದಟ್ಟಣೆ ಕಡಿಮೆ ಮಾಡಲು ಬಿಡದಿ, ದೇವನಹಳ್ಳಿ, ಹೊಸಕೋಟೆ, ಮಾಗಡಿ, ನೆಲಮಂಗಲಗಳನ್ನು ರಸ್ತೆ ಸೌಲಭ್ಯಗಳನ್ನು ಸೇರಿದಂತೆ ಸ್ಯಾಟಿಲೈಟ್ ಟೌನ್ ಗಳಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ

ಮಹಾತ್ಮ ಗಾಂಧಿ ಒಪ್ಪದ ಬಿಜೆಪಿ ಅವರ ಪ್ರತಿಮೆ ಮುಂದೆ ಪ್ರತಿಭಟಿಸುತ್ತದೆ: ಡಿಕೆ ಶಿವಕುಮಾರ್

ಬೆಂಗಳೂರು: ಬಿಜೆಪಿ ಗಾಂಧಿಯವರ ಹೆಜ್ಜೆ ಗುರುತುಗಳನ್ನು ಅಳಿಸುವ ಕೆಲಸ ಮಾಡುತ್ತಿದ್ದಾರೆ. ನಾವು ಅದನ್ನು ಉಳಿಸುವ ಕೆಲಸ ಮಾಡಬೇಕು. ಮಹಾತ್ಮ ಗಾಂಧಿ ಅವರ ತತ್ವಗಳನ್ನು ಒಪ್ಪದ ಬಿಜೆಪಿಯವರು ಅವರ ಪ್ರತಿಮೆ ಕೆಳಗೆ ಕುಳಿತು ಪ್ರತಿಭಟನೆ ಮಾಡುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ಪೊಲೀಸ್‌ ದಾಳಿ: ನಾಲ್ವರ ಬಂಧನ

ಬೆಂಗಳೂರಿನ ನಾನಾ ಕಡೆ ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿ 9 ಮಹಿಳೆಯರನ್ನು ರಕ್ಷಿಸಿದ್ದಾರೆ. ಬಿಇಎಲ್ ಬಡಾವಣೆಯಲ್ಲಿ ಹೈಫೈ ಮನೆ ಬಾಡಿಗೆ ಪಡೆದಿದ್ದ ಆರೋಪಿಗಳು ಹೊರ ರಾಜ್ಯದಿಂದ ಕೆಲಸಕ್ಕೆ ಬರುವ ಯುವತಿಯರನ್ನೇ ಗುರಿಯಾಗಿಸಿಕೊಂಡು ಕೆಲಸದ

ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್‌ ಜಾರಿ ಚಿಂತನೆ: ಪರಮೇಶ್ವರ್‌

ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಮತ್ತೆ ಟೋಯಿಂಗ್ ವ್ಯವಸ್ಥೆ ಆರಂಭಿಸಲು ಚಿಂತನೆ ನಡೆಸಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರು ಟ್ರಾಫಿಕ್ ಪೊಲೀಸ್ ವಿಭಾಗವು ನಗರದ ಇನ್ಫೆಂಟ್ರಿ ರಸ್ತೆಯ ಸಂಚಾರ ನಿರ್ವಹಣಾ ಕೇಂದ್ರದಲ್ಲಿ ಆಯೋಜಿಸಿದ್ದ ನಗರ ಚಲನಶೀಲತೆ ಸವಾಲುಗಳು

ಹೊಸ ತಂತ್ರಾಂಶ ಅಳವಡಿಕೆ : ಬೆಸ್ಕಾಂ ಗ್ರಾಮಾಂತರ ಪ್ರದೇಶಗಳಲ್ಲಿ 3 ದಿನ ಸೇವೆ ಅಲಭ್ಯ

ಬೆಂಗಳೂರು: ಬೆಸ್ಕಾಂನ ಗ್ರಾಮಾಂತರ ಪ್ರದೇಶಗಳಲ್ಲಿ (ನಾನ್ ಆರ್ಎಪಿಡಿಆರ್ ಪಿ) ಸಮಗ್ರ ಕಂದಾಯ ನಿರ್ವಹಣಾ ಹೊಸ ತಂತ್ರಾಂಶ ಅಳವಡಿಕೆ ಕಾರ್ಯ ಕೈಗೆತ್ತಿಕೊಂಕೊಂಡಿದೆ. ಈ ಹಿನ್ನೆಲೆಯಲ್ಲಿ ದಿನಾಂಕ 30.01.2025 ರಿಂದ 01.02.2025 (3 ದಿನ)ರ ವರೆಗೆ ಬಿಲ್ಲಿಂಗ್, ಹೊಸ ಸಂಪರ್ಕ, ಕಂದಾಯ ಸಂಗ್ರಹ ಹಾಗೂ

ಬೆಂಗಳೂರಿನಲ್ಲಿ ಭೀಕರ ಅಗ್ನಿ ಅವಘಢ: 100ಕ್ಕೂ ಹೆಚ್ಚು ವಾಹನ ಭಸ್ಮ

ಪೊಲೀಸರು ಜಫ್ತಿ ಮಾಡಿದ 100ಕ್ಕೂ ಹೆಚ್ಚು ವಾಹನಗಳು ಬೆಂಕಿಗೆ ಆಹುತಿಯಾದ ಘಟನೆ ಬೆಂಗಳೂರಿನಲ್ಲಿ ಬುಧವಾರ ಸಂಭವಿಸಿದೆ. ಶೇಷಾದ್ರಿಪುರಂ ಬಳಿಯ ಜೆಡಿಎಸ್ ಕಚೇರಿ ಪಕ್ಕದಲ್ಲಿರುವ ಜಕ್ಕರಾಯನ ಕೆರೆ ಮೈದಾನದಲ್ಲಿಈ ದುರ್ಘಟನೆ ಸಂಭವಿಸಿದ್ದು, 100ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿಯಾಗಿದೆ. ಕಾರು, ಐದು ಆಟೋ, 50

ಕೋಚ್‌ ಕಡಿತ ಖಂಡಿಸಿ ಬಂಗಾರಪೇಟೆಯಲ್ಲಿ ಪ್ರಯಾಣಿಕರಿಂದ ರೈಲು ತಡೆ

ಕೋಲಾರದ ಬಂಗಾರಪೇಟೆ ರೈಲು ನಿಲ್ದಾಣದಲ್ಲಿ ಪ್ಯಾಸೆಂಜರ್ ರೈಲು ತಡೆದು ಪ್ರಯಾಣಿಕರು ಪ್ರತಿಭಟನೆ ನಡೆಸಿದ್ದಾರೆ. ಕೆಜಿಎಫ್‌ನಿಂದ ಬೆಂಗಳೂರಿಗೆ ತೆರಳುವ ರೈಲುಗಳಿಗೆ ಕೋಚ್ ಕಡಿಮೆ ಮಾಡಿರುವುದನ್ನು ವಿರೋಧಿಸಿ ಪ್ಯಾಸೆಂಜರ್ ರೈಲು ತಡೆದು ನಿತ್ಯ ಬೆಂಗಳೂರಿಗೆ ಪ್ರಯಾಣ ಬೆಳೆಸುವ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉದ್ಯೋಗ, ವಿದ್ಯಾಭ್ಯಾಸ

ಮೊಬೈಲ್‌ ಗೀಳು ಬಾಲಕನ ಆತ್ಮಹತ್ಯೆಗೆ ನೂಕಿತಾ?

ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಗೊಲ್ಲರಹಟ್ಟಿಯ ರತ್ನನಗರದಲ್ಲಿ ಮೊಬೈಲ್ ಗೀಳಿಗೆ ಒಳಗಾಗಿ 13 ವರ್ಷದ ಬಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಧ್ರುವ ಆತ್ಮಹತ್ಯೆ ಮಾಡಿಕೊಂಡ ಬಾಲಕ. 9 ವರ್ಷದ ತಂಗಿಯ ಮುಂದೆಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ