ಬೆಂಗಳೂರು
ಮುಷ್ಕರಕ್ಕೆ ಮುಂದಾಗಿದ್ದ ಸಾರಿಗೆ ನೌಕರರಿಗೆ ಎಸ್ಮಾ ಬಿಸಿ
ಬೇಡಿಕೆ ಈಡೇರಿಕೆಗಾಗಿ ಕೆಎಸ್ಆರ್ಟಿಸಿ, ಬಿಎಂಆರ್ಟಿಸಿ ಸೇರಿ ನಾಲ್ಕು ಸಾರಿಗೆ ನಿಗಮದ ಸಿಬ್ಬಂದಿ ಆಗಸ್ಟ್ 5ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದರೆ ಇದೀಗ ಪ್ರತಿಭಟನೆ ನಡೆಸದಂತೆ ಕಾರ್ಮಿಕ ಇಲಾಖೆ ಎಸ್ಮಾ ಜಾರಿ ಮಾಡಿದೆ. ಬೇಡಿಕೆಗಳಿಗೆ ಆಗ್ರಹಿಸಿ ನಾಲ್ಕು ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಆಗಸ್ಟ್ 5ರಂದು ಬೆಳಿಗ್ಗೆ 6 ಗಂಟೆಯಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ. ಆದರೆ ಕೆಎಸ್ಆರ್ಟಿಸಿ ಸಾರಿಗೆ ನೌಕರರು ಪ್ರತಿಭಟನೆ ನಡೆಸದಂತೆ ಎಸ್ಮಾ ಜಾರಿ ಮಾಡಲಾಗಿದೆ.
ರೌಡಿಶೀಟರ್ ಶಿವಪ್ರಕಾಶ್ ಕೊಲೆ: ತಾವೇ ಕೊಲೆ ಮಾಡಿರುವುದಾಗಿ ಐವರು ಪೊಲೀಸ್‌ಗೆ ಶರಣು
ರೌಡಿಶೀಟರ್ ಶಿವಪ್ರಕಾಶ್/ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತಿ ನಗರ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ತಾವೇ ಕೊಲೆ ಮಾಡಿರುವುದಾಗಿ ಹೇಳಿ ಐವರು ಬಂದು ಪೊಲೀಸರಿಗೆ ಶರಣಾಗಿದ್ದಾರೆ.ಪೊಲೀಸರು ಆರೋಪಿಗಳಾದ ಕಿರಣ್, ವಿಮಲ್ ಸೇರಿ ಐವರನ್ನ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಆರೋಪಿ ಕಿರಣ್ ಹಾಗೂ
ಕೋವಿಡ್ ಸೋಂಕು, ಲಸಿಕೆಯಿಂದ ನರಮಂಡಲ, ಮೆದುಳು ಮೇಲೆ ನೇರ ಪರಿಣಾಮ: ನಿಮ್ಹಾನ್ಸ್ ವರದಿ
ಕೋವಿಡ್-19 ಸೋಂಕು ಮತ್ತು ಕೋವಿಡ್ ಲಸಿಕೆಯಿಂದ ಮಾನವನ ನರಮಂಡಲ ಮತ್ತು ಮೆದುಳಿನ ಮೇಲೆ ನೇರ ಪರಿಣಾಮ ಆಗಿರುವುದು ವೈದ್ಯಕೀಯ ಸಂಶೋಧನೆಗಳಿಂದ ಪತ್ತೆಯಾಗಿದೆ ಎಂದು ನಿಮ್ಹಾನ್ಸ್ ವೈದ್ಯರ ಸಂಶೋಧನಾ ವರದಿ ಹೇಳಿದೆ. ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್)ನ ಡಾ.
ಇಂದಿನಿಂದ ಜುಲೈ 24 ರವರೆಗೆ ಬೆಂಗಳೂರು ನಗರದ ಹಲವೆಡೆ ವಿದ್ಯುತ್ ವ್ಯತ್ಯಯ
ಇಂದಿನಿಂದ (ಜುಲೈ 17) ಜುಲೈ 24 ರವರೆಗೆ ಬೆಂಗಳೂರು ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ. ದೊಡ್ಡಬಳ್ಳಾಪುರ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ವಿದ್ಯುತ್ ತಂತಿಗಳ ಬದಲಾವಣೆ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ದೊಡ್ಡಬಳ್ಳಾಪುರ ವಿದ್ಯುತ್
ರೌಡಿ ಕೊಲೆಗೂ ನನಗೂ ಸಂಬಂಧವಿಲ್ಲ: ಬಿಜೆಪಿ ಶಾಸಕ ಭೈರತಿ ಬಸವರಾಜ್ ಸ್ಪಷ್ಟನೆ
ಬೆಂಗಳೂರಿನಲ್ಲಿ ನಡೆದ ರೌಡಿ ಕೊಲೆ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಈ ಬಗ್ಗೆ ಕಾನೂನು ಹೋರಾಟ ನಡೆಸುವೆ ಎಂದು ಬಿಜೆಪಿ ಶಾಸಕ ಬೈರತಿ ಬಸವರಾಜ್ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೂ ಕೊಲೆ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ.
ರೌಡಿ ಕೊಲೆ ಹಿಂದೆ ಬಿಜೆಪಿ ಶಾಸಕ ಬೈರತಿ ಬಸವರಾಜ್: ಎಫ್ ಐಆರ್ ನಲ್ಲಿ ಎ-5 ಆರೋಪಿ!
ಭಾರತಿನಗರ ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಬೈರತಿ ಬಸವರಾಜ್ ಹೆಸರು ತಳುಕು ಹಾಕಿಕೊಂಡಿದ್ದು ರಾಜಕೀಯ ಬಣ್ಣ ಪಡೆದಿದೆ. ಕೆಲವು ದಿನಗಳ ಹಿಂದೆ ಮನೆಯ ಮುಂದೆ ಭೀಕರವಾಗಿ ಕೊಲೆಯಾದ ಶಿವಪ್ರಕಾಶ್ ಅವರ
ದಿನನಿತ್ಯ 1.05 ಕೋಟಿ ಲೀಟರ್ ಹಾಲು ಸಂಗ್ರಹ: ಕೆಎಂಎಫ್ ದಾಖಲೆಯ ಸಾಧನೆ
ಈ ಬಾರಿ ದಿನನಿತ್ಯ 1.05 ಕೋಟಿ ಲೀಟರ್ ಹಾಲು ಸಂಗ್ರಹದೊಂದಿಗೆ ರಾಜ್ಯದಲ್ಲಿ ಕೆಎಂಎಫ್ ಹೊಸ ದಾಖಲೆ ಬರೆದಿದೆ, ಕಳೆದ ಒಂದು ತಿಂಗಳಿಂದ ರಾಜ್ಯದಲ್ಲಿ ಮಳೆಯಾಗುತ್ತಿದ್ದು, ವಾತಾವರಣ ತಂಪಾದ ಕಾರಣ ಹಸಿರು ಮೇವು ಸಿಗುತ್ತಿದೆ. ಹೀಗಾಗಿ ಹಾಲು ಸಂಗ್ರಹದಲ್ಲಿ ಹೆಚ್ಚಳವಾಗಿದೆ. ರಾಜ್ಯದಲ್ಲಿ ಕಳೆದ
ಕುಡಿತಕ್ಕಾಗಿ ಪತ್ನಿಗೆ ನೇಣು ಬಿಗಿದು ಕೊಲೆಗೆ ಯತ್ನಿಸಿದ ಪತಿ
ರಾಜರಾಜೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕುಡಿತದ ಚಟಕ್ಕೆ ದಾಸನಾಗಿದ್ದ ವ್ಯಕ್ತಿ ಹಣಕ್ಕಾಗಿ ಪತ್ನಿಯನ್ನು ಪೀಡಿಸಿ ಆಕೆಗೆ ನೇಣು ಬಿಗಿದು ಕೊಲೆ ಮಾಡಲು ಮುಂದಾಗಿದ್ದ, ಅದೃಷ್ಟವಷಾತ್ ಪತ್ನಿ ಪಾರಾಗಿದ್ದಾಳೆ. ಅಪ್ರಾಪ್ತ ವಯಸ್ಕ ಮಗಳನ್ನು ಅಂಗಡಿಗೆ ಕಳಿಸಿ ಪತ್ನಿಯ ಕೊಲೆಗೆ ಮುಂದಾಗಿದ್ದ. ಅಕ್ಕಪಕ್ಕದವರು
ಜಿಎಸ್ಟಿ ಕಾಟ: ಸಣ್ಣ ವ್ಯಾಪಾರಿಗಳ ಪ್ರತಿಭಟನೆ ಜುಲೈ 23ಕ್ಕೆ
ದೊಡ್ಡ ಮೊತ್ತ ಜಿಎಸ್ಟಿ ಪಾವತಿಸಲು ತೆರಿಗೆ ಇಲಾಖೆಯಿಂದ ನೋಟಿಸ್ ಪಡೆದಿರುವ ಸಣ್ಣ ವ್ಯಾಪಾರಿಗಳು ಸರ್ಕಾರದ ವಿರುದ್ಧ ಸಮರಕ್ಕೆ ಮುಂದಾಗಿದ್ದಾರೆ. ಸಣ್ಣಪುಟ್ಟ ವರ್ತಕರು, ಬೇಕರಿ, ಟೀ ಸ್ಟಾಲ್, ಹಣ್ಣು-ತರಕಾರಿ ಅಂಗಡಿಗಳನ್ನಿಟ್ಟುಕೊಂಡು ಜೀವನ ನಡೆಸುತ್ತಿರುವವರು ಜುಲೈ 23 ರಂದು ಪ್ರತಿಭಟನೆ ನಡೆಸಲಿದ್ದಾರೆ. ಮುನ್ಸೂಚನೆ ನೀಡದೆ
ಆಗಸ್ಟ್ 5 ಕೆಎಸ್ಆರ್ಟಿಸಿ, ಬಿಎಂಟಿಸಿ ನೌಕರರ ಮುಷ್ಕರ
ಆಗಸ್ಟ್ 5ರಂದು ಬೆಳಿಗ್ಗೆ 6 ಗಂಟೆಯಿಂದ ರಾಜ್ಯ ರಸ್ತೆ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದಾರೆ. ಸಾರಿಗೆ ನೌಕರರಿಗೆ 38 ತಿಂಗಳ ಭತ್ಯೆ ಮತ್ತು ವೇತನ ಹೆಚ್ಚಳ ಸೇರಿದಂತೆ ಬೇಡಿಕೆಗಳಿಗೆ ಆಗ್ರಹಿಸಿ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ