Menu

ಗೌರಿಬಿದನೂರಿನಲ್ಲಿ ತಂದೆಯ ಸಾವಿನಿಂದ ನೊಂದ ಮಗಳೂ‌ ಆತ್ಮಹತ್ಯೆ

ಚಿಕ್ಕಬಳ್ಳಾಪುರದ ಗೌರಿಬಿದನೂರು ನಗರದ ನಾಗಿರೆಡ್ಡಿ ಬಡಾವಣೆಯ ಯುವತಿ ಸ್ವರ್ಣ (22) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಕೆ ಬೆಂಗಳೂರಿನ ಮಹಾರಾಣಿ ಕಾಲೇಜಿನಲ್ಲಿ ಎಂಎಸ್ಸಿ ಪದವಿ ವ್ಯಾಸಂಗ ಮಾಡುತ್ತಿದ್ದರು. ಕಾಲೇಜಿನ ಹಾಸ್ಟೆಲ್‌ನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಮನೆಗೆ ಬಂದಿದ್ದ ಸ್ವರ್ಣರನ್ನು ತಾಯಿ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕಳೆದ ಮೂರು ತಿಂಗಳ ಹಿಂದೆ ಸ್ವರ್ಣರ ತಂದೆ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿದ್ದರು. ಅಂದಿನಿಂದಲೂ ಮಗಳು ಸ್ವರ್ಣ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಆತ್ಮಹತ್ಯೆ

ಹಣಕಾಸು ವ್ಯವಹಾರ: ವ್ಯಕ್ತಿಯ ಕಿಡ್ನ್ಯಾಪ್ ಮಾಡಿ ದೌರ್ಜನ್ಯ

ಬೆಂಗಳೂರಿನ ಕೋರಮಂಗಲದಲ್ಲಿ ಹಣಕಾಸು ವಿಚಾರಕ್ಕೆ ಸಂಬಂಧಿಸಿದ ಮನಸ್ತಾಪ ತೀವ್ರಗೊಂಡು ವ್ಯಕ್ತಿಯನ್ನು ಕಿಡ್ನ್ಯಾಪ್ ಮಾಡಿದ ಗ್ಯಾಂಗ್ ಮರ್ಮಾಂಗಕ್ಕೆ ಸಿಗರೇಟ್ ನಿಂದ ಸುಟ್ಟು ವಿಕೃತಿ ಮೆರೆದಿದೆ. ಗ್ಯಾಂಗ್‌ನಲ್ಲಿದ್ದವರು ಇಂಜೆಕ್ಷನ್ ಚುಚ್ಚಿ ವ್ಯಕ್ತಿಗೆ ಚಿತ್ರಹಿಂಸೆ ನೀಡಿದ್ದು, ಆತ ಕಾರಿನಲ್ಲಿ ಜೋರಾಗಿ ಕೂಗಿದ ಹಿನ್ನಲೆ ಬಚಾವಾಗಿದ್ದಾನೆ.  ಸಗಾಯ್

ಜೆಪಿ ಪಾರ್ಕ್‌ನಲ್ಲಿ ನಡಿಗೆ, ಸಾರ್ವಜನಿಕ ಅಹವಾಲು ಆಲಿಸಿದ ಡಿಕೆ ಶಿವಕುಮಾರ್‌, ನನಗೆ ಆಹ್ವಾನವಿಲ್ಲವೆಂದು ಮುನಿರತ್ನ ಕಿರಿಕ್‌

ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ನಾಗರಿಕರಿಗೆ ಸ್ಪಂದಿಸುವ ಉದ್ದೇಶದಿಂದ, ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿಕೆ ಶಿವಕುಮಾರ್  “ಬೆಂಗಳೂರು ನಡಿಗೆ” ಕಾರ್ಯಕ್ರಮದಡಿ ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಗೊಳಪಡುವ ಮತ್ತಿಕೆರೆಯ ಜಯಪ್ರಕಾಶ್ ನಾರಾಯಣ್ ಉದ್ಯಾನವನದಲ್ಲಿ ನಾಗರಿಕರ ಜೊತೆ ನಡಿಗೆಯಲ್ಲಿ ಪಾಲ್ಗೊಂಡರು.

ಸುಗಮ ಸಂಚಾರ, ಸ್ವಚ್ಛತೆಗೆ ಆದ್ಯತೆ ನೀಡಿ: ಜಿಬಿಎ ಸಭೆಯಲ್ಲಿ ಸಿಎಂ ಸೂಚನೆ

ಬೆಂಗಳೂರು: ಅತಿ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರದ ಸಮಸ್ತ ಜನರಿಗೆ ಸುಗಮ ಆಡಳಿತ, ಸಮರ್ಪಕ‌ ಅಭಿವೃದ್ಧಿಗಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ ಬಂದು ಐದು ಕಾರ್ಪೋರೇಷನ್ ಗಳು ರಚನೆಯಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮೊದಲ

ಕೊಡಿಗೆಹಳ್ಳಿಯಲ್ಲಿ ಸಮೀಕ್ಷೆಗೆ ಹೋದ ಶಿಕ್ಷಕಿಯ ಕೂಡಿಹಾಕಿದ್ದವನ ಬಂಧನ

ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ಹೋಗಿದ್ದ ಶಿಕ್ಷಕಿಯ ಕರ್ತವ್ಯಕ್ಕೆ ಅಡ್ಡಿಪಡಿಸಿ ಮನೆಯ ಕಾಂಪೌಂಡ್​​​ನಲ್ಲಿ ಕೂಡಿ ಹಾಕಿದ್ದ ಆರೋಪಿಯನ್ನು ಕೊಡಿಗೆಹಳ್ಳಿ ಪೊಲೀಸರು ಬಂಧಿಸಿದ್ಧಾರೆ. ಕೊಡಿಗೆಹಳ್ಳಿಯ ಸಂದೀಪ್ (30) ಬಂಧಿತ ಆರೋಪಿ, ಶಿಕ್ಷಕಿ ಸುಶೀಲಮ್ಮ ನೀಡಿದ ದೂರಿನ ಮೇರೆಗೆ ಆರೋಪಿ ವಿರುದ್ಧ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ

ಯಲಹಂಕ ಲಾಡ್ಜ್‌ನಲ್ಲಿ ಮೂರು ಮಕ್ಕಳ ತಾಯಿ, ಯುವಕ ಬೆಂಕಿಗಾಹುತಿ: ಅಕ್ರಮ ಸಂಬಂಧ ಕಾರಣವಾಯ್ತಾ?

ಯಲಹಂಕ ನ್ಯೂಟೌನ್‌ನ ಕಿಚನ್ ಫ್ಯಾಮಿಲಿ ರೆಸ್ಟೋರೆಂಟ್ ಬಿಲ್ಡಿಂಗ್‌ನಲ್ಲಿರುವ ಲಾಡ್ಜ್‌ನಲ್ಲಿ ಗುರುವಾರ ಮೂರು ಮಕ್ಕಳ ತಾಯಿ ಕಾವೇರಿ ಮತ್ತು ರಮೇಶ್‌ ಬೆಂಕಿಗೆ ಆಹುತಿಯಾಗಿರುವ ಪ್ರಕರಣಕ್ಕೆ ಅಕ್ರಮ ಸಂಬಂಧ ಕಾರಣ ಎಂಬ ಅಂಶ ಪೊಲೀಸ್‌ ವಿಚಾರಣೆಯಲ್ಲಿ ಬಯಲಾಗಿದೆ. ಘಟನೆಯಲ್ಲಿ ಮೃತಪಟ್ಟವರನ್ನು ಹುನಗುಂದ ಮೂಲದ ಕಾವೇರಿ

ಬಾಗಲಗುಂಟೆಯಲ್ಲಿ ಇಬ್ಬರು ಮಕ್ಕಳ ಕೊಂದು ತಾಯಿ ಆತ್ಮಹತ್ಯೆ?

ಬಾಗಲಗುಂಟೆ ಬಳಿಯ ಭುವನೇಶ್ವರಿ ನಗರದಲ್ಲಿ ಇಬ್ಬರು ಮಕ್ಕಳು ಮತ್ತು ತಾಯಿ ಮೃತಪಟ್ಟಿದ್ದು, ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಗುರುವಾರ ರಾತ್ರಿ ಮನೆಯಲ್ಲಿ ವಿಜಯಲಕ್ಷ್ಮಿ ಮತ್ತು ಇಬ್ಬರು ಮಕ್ಕಳಾದ ಭುವನ್ (1) ಬೃಂದ (4) ಮೃತದೇಹ ನೇಣು ಬಿಗಿದ

ಉಪ್ಪಿನ ಸೇವನೆಗೆ ಕಡಿವಾಣ: ಆಹಾರ ಸಂಬಂಧಿತ ಅಪಾಯ ತಡೆಗೆ ತಜ್ಞರ ಸಮಿತಿ

ಕರ್ನಾಟಕದಲ್ಲಿ ಆಹಾರ ಸಂಬಂಧಿತ ಅಪಾಯಗಳನ್ನು ತಡೆಗಟ್ಟುವ ಮೂಲಕ ರಕ್ತದೊತ್ತಡದ ಅಪಾಯವನ್ನು ಕಡಿಮೆ ಮಾಡುವ ಮಹತ್ವದ ಹೆಜ್ಜೆಯಾಗಿ, ದೇಶದಲ್ಲಿಯೇ ಮೊದಲ ಬಾರಿ ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಉಪ್ಪಿನ ಸೇವನೆ ಕಡಿತಗೊಳಿಸುವ ಕಾರ್ಯಯೋಜನೆಗೆ ಮಾರ್ಗದರ್ಶನ ನೀಡುವ ತಾಂತ್ರಿಕ ಸಲಹಾ ಸಮಿತಿಯನ್ನು

ಬೆಂಗಳೂರು ಟ್ರಾಫಿಕ್‌ ನಿರ್ವಹಣೆಗೆ ಟನಲ್ ರಸ್ತೆ ಹೊರತು ಪರ್ಯಾಯ ಏನಿದೆ: ಡಿಸಿಎಂ

ಸಾರ್ವಜನಿಕ ಸಾರಿಗೆ ಉತ್ತಮ ಆಯ್ಕೆಯೆಂಬುದು ನಿಜ. ಹಾಗಾದರೆ ಸಾರ್ವಜನಿಕ ಸಾರಿಗೆಗೆ ಇನ್ನು ಎಷ್ಟು ವಾಹನ ಸೇರಿಸಬೇಕು, 1 ಸಾವಿರ ಸಾಕೇ, ನಾನು ಸೇರಿಸಲು ಸಿದ್ಧ. ಜನರೆಲ್ಲರೂ ಬಸ್ ನಲ್ಲಿ ಪ್ರಯಾಣ ಆರಂಭಿಸುತ್ತಾರಾ, ಹೀಗಾಗಿ ಟನಲ್ ಹೊರತಾಗಿ ಪರ್ಯಾಯ ಪರಿಹಾರ ಏನಿದೆ, ಇದೇ

ಜಿಬಿಎ ಪಾಲಿಕೆಗಳಲ್ಲಿ ಶೇ.50 ಮಹಿಳಾ ಕಾರ್ಪೊರೇಟರ್‌ಗಳು: ಡಿಕೆ ಶಿವಕುಮಾರ್

ಜಿಬಿಎ ವ್ಯಾಪ್ತಿಯ ಐದು ಪಾಲಿಕೆಗಳ ಚುನಾವಣೆಯಲ್ಲಿ ಶೇ.50ರಷ್ಟು ಟಿಕೆಟ್ ಅನ್ನು ಮಹಿಳೆಯರಿಗೆ ನೀಡಲಾಗುವುದು. ಆ ಮೂಲಕ ಮುಂದಿನ ದಿನಗಳಲ್ಲಿ ಬೆಂಗಳೂರಿನ ಪಾಲಿಕೆಗಳಲ್ಲಿ ಅರ್ಧದಷ್ಟು ಮಹಿಳಾ ಕಾರ್ಪೊರೇಟರ್ ಗಳು ಇರುತ್ತಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA)