Menu

ಪತಿ ಹಲ್ಲೆ: ಪೀಣ್ಯದಲ್ಲಿ ಕೋಮಾದಲ್ಲಿದ್ದ ಮಹಿಳೆ ಸಾವು

ಪೀಣ್ಯ ಬಳಿಯ ಚೊಕ್ಕಸಂದ್ರದಲ್ಲಿ ನೆಲೆಸಿದ್ದ ವ್ಯಕ್ತಿಯೊಬ್ಬ ಇತ್ತೀಚೆಗೆ ಪತ್ನಿಯ ಮೇಲೆ ಹಲ್ಲೆ ನಡೆಸಿದ್ದು, ಕೋಮಾದಲ್ಲಿದ್ದ ಆಕೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಪ್ರೀತಿ ಸಿಂಗ್​ (26) ಮೃತ ಮಹಿಳೆ, ಆರೋಪಿ ಛೋಟೆಲಾಲ್ ಸಿಂಗ್​ನನ್ನು ಪೊಲೀಸರು ಬಂಧಿಸಿದ್ದಾರೆ. ಈ ದಂಪತಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ಮದ್ಯ ಸೇವಿಸಿ ಮನೆಗೆ ಬಂದಿದ್ದ ಛೋಟೆಲಾಲ್ ಹೆಂಡತಿ ಬಳಿ ಕುಡಿಯಲು ನೀರು ಕೇಳಿದ್ದ, ನಾನು ಈಗ ಕೆಲಸಕ್ಕೆ ಹೋಗಬೇಕು. ನೀನೇ ನೀರು ತೆಗೆದುಕೊಂಡು ಕುಡಿ ಎಂದು ಆಕೆ

ಬೆಂಗಳೂರಿನಲ್ಲಿ ಮರ ಬಿದ್ದು ಯುವತಿ ಸಾವು

ಬೆಂಗಳೂರು ಉತ್ತರ ತಾಲೂಕಿನ ಸೋಲದೇವನಹಳ್ಳಿ ಠಾಣೆ ಬಳಿ ಬೃಹತ್ ಮರ ಬಿದ್ದು ಯುವತಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಆರ್‌ಟಿ ನಗರದ ಕೀರ್ತನಾ (23) ಮೃತ ಯುವತಿ. ಕೀರ್ತನಾ ಅವರು ಆಚಾರ್ಯ ಕಾಲೇಜು ಮೈದಾನದಲ್ಲಿ ಸ್ಯಾಂಡಲ್ ವುಡ್ ಪ್ರೀಮಿಯರ್ ಲೀಗ್‌

ತಲಘಟ್ಟಪುರದಲ್ಲಿ ವರದಕ್ಷಿಣೆ ಕಿರುಕುಳ ಆರೋಪ: ಗೃಹಿಣಿ ಆತ್ಮಹತ್ಯೆ

ಬೆಂಗಳೂರಿನ ತಲಘಟ್ಟಪುರದ ಅವಲಹಳ್ಳಿಯಲ್ಲಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ವರದಕ್ಷಿಣೆ ಕಿರುಕುಳ ಆರೋಪ ಕೇಳಿ ಬಂದಿದೆ. ನವ್ಯಾ (28) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ನವ್ಯಾ ಮತ್ತು ಶೈಲೇಶ್ ದಂಪತಿ ನಾಲ್ಕು ವರ್ಷದ ಹಿಂದೆ ವಿವಾಹವಾಗಿದ್ದರು. ಶೈಲೇಶ್ ಸಾಫ್ಟ್ ವೇರ್ ಎಂಜಿನಿಯರ್. ನವ್ಯಾಗೆ ಪತಿ ಮತ್ತವರ

ಮುಂದಿನ ಪೀಳಿಗೆಗೆ ನ್ಯಾಯ ಒದಗಿಸಲು ಸಮೀಕ್ಷೆಯಲ್ಲಿ ಭಾಗವಹಿಸಿ: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: “ಎಲ್ಲಾ ಸಮಾಜದ ಮುಂದಿನ ಪೀಳಿಗೆಗೆ ನ್ಯಾಯ ಒದಗಿಸಲು ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸಲಾಗುತ್ತಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸಿ ಅಗತ್ಯ ಮಾಹಿತಿಗಳನ್ನು ನೀಡಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ ಮಾಡಿದರು. ಜಿಬಿಎ ವ್ಯಾಪ್ತಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ

ಭಾರತದ ಎಲೆಕ್ಟ್ರಾನಿಕ್ಸ್ ಉತ್ಪಾದನಾ ವೇಗ ಹೆಚ್ಚಳ: ಸೆಮಿ ಇಂಡಿಯಾ ಅಧ್ಯಕ್ಷ ಅಶೋಕ್ ಚಂದಕ್ 

ಇಸಿಎಂಎಸ್ (ECMS) ಪ್ರಯತ್ನದಿಂದ ಗುರಿಗಳು ದ್ವಿಗುಣ, ಸೆಮಿಕಾನ್ ಇಂಡಿಯಾ 2025 ರ ಯಶಸ್ಸಿಗೆ ಮತ್ತಷ್ಟು ಬಲ” “ಭಾರತದ ಎಲೆಕ್ಟ್ರಾನಿಕ್ಸ್ ಬೆಳವಣಿಗೆಯಲ್ಲಿ ಉದ್ಯಮ ಮತ್ತು ಸರ್ಕಾರದ ವಿಶ್ವಾಸವನ್ನು IESA ಶ್ಲಾಘಿಸುತ್ತದೆ”  ಎಂದು ಐಇಎಸ್‌ಎ (IESA) ಮತ್ತು ಸೆಮಿ ಇಂಡಿಯಾ (SEMI India) ಅಧ್ಯಕ್ಷ

ಬೆಂಗಳೂರಿನಲ್ಲಿ ಪತ್ನಿ ಜೊತೆಗಿನ ಸೆಕ್ಸ್‌ ವೀಡಿಯೊ ಸ್ನೇಹಿತರಿಗೆ ಶೇರ್‌: ವಿಕೃತ ಪತಿ ವಿರುದ್ಧ ಎಫ್‌ಐಆರ್‌

ಪತ್ನಿಗೆ ತಿಳಿಯದಂತೆ ಆಕೆ ಜತೆಗಿನ ಲೈಂಗಿಕ ಕ್ರಿಯೆಯ ವೀಡಿಯೊ ಮಾಡಿ ಸ್ನೇಹಿತರಿಗೆ ಕಳುಹಿಸುತ್ತಿದ್ದ ವಿಕೃತ ವ್ಯಕ್ತಿಯೊಬ್ಬನ ವಿರುದ್ಧ ಆತನ ಪತ್ನಿಯೇ ಬೆಂಗಳೂರಿನ ಪುಟ್ಟೇನಹಳ್ಳಿ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಿದ್ದಾರೆ. ಸೈಯದ್ ಇನಾಮುಲ್ ಎಂಬಾತನೊಂದಿಗೆ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಸಂತ್ರಸ್ತೆಯ ಮದುವೆಯಾಗಿದೆ. ಆತ ಮನೆಯ

ಜೈಲು ಅಧಿಕಾರಿಗಳ ವಿರುದ್ಧ ದರ್ಶನ್‌ ಅರ್ಜಿ ವಿಚಾರಣೆ: ಆದೇಶ ಅ. 9ಕ್ಕೆ ಕಾಯ್ದಿರಿಸಿದ ಕೋರ್ಟ್‌

ರೇಣುಕಾಸ್ವಾಮಿ ಕೊಲೆ ಪ್ರಕರಣದ ದೋಷಿಯಾಗಿ ಜೈಲಿನಲ್ಲಿರುವ ನಟ ದರ್ಶನ್‌ ಹೆಚ್ಚುವರಿ ಹಾಸಿಗೆ ದಿಂಬು ನೀಡದ ವಿಚಾರಕ್ಕೆ ಸಂಬಂಧಪಟ್ಟಂತೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ಬೆಂಗಳೂರಿನ 57ನೇ ಸೆಷನ್ಸ್ ಕೋರ್ಟ್‌ನಲ್ಲಿ ನಡೆದಿದ್ದು, ಅಕ್ಟೋಬರ್ 9ಕ್ಕೆ ಆದೇಶ ಕಾಯ್ದಿರಿಸಲಾಗಿದೆ. ಜೈಲಿನಲ್ಲಿ ತಮಗೆ ಬೇಕಾಗಿರುವ ವಸ್ತುಗಳನ್ನು ನೀಡದ

ಗಾಂಧಿ ಜಯಂತಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ

ಅಕ್ಟೋಬರ್‌ 2 ಗಾಂಧಿ ಜಯಂತಿಯಂದು ಬೆಂಗಳೂರಿನ ಎಲ್ಲ ಕಸಾಯಿಖಾನೆಗಳಲ್ಲಿ ಪ್ರಾಣಿವಧೆಯನ್ನು ಮತ್ತು ಮಾಂಸ ಮಾರಾಟ ಮಳಿಗೆಗಳಲ್ಲಿ ಮಾಂಸದ ವ್ಯಾಪಾರವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಬಿಎ ಆರೋಗ್ಯ ಮತ್ತು ಶಿಕ್ಷಣ ವಿಭಾಗದ ವಿಶೇಷ ಆಯುಕ್ತರು ಆದೇಶ ಪ್ರಕಟಿಸಿದ್ದಾರೆ. ಭಾರತದ ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ತತ್ವಗಳಾದ

ಬೆಂಗಳೂರಿನಲ್ಲಿ ವಾಸವಿದ್ದ ಮೂವರು ಅಕ್ರಮ ಶ್ರೀಲಂಕಾ ವಲಸಿಗರು ಅರೆಸ್ಟ್‌

ಶ್ರೀಲಂಕಾದಿಂದ ಬಂದ ಮೂವರು ಅಕ್ರಮ ವಲಸಿಗರನ್ನು ಬೆಂಗಳೂರಿನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಾಕಿಸ್ತಾನ, ಬಾಂಗ್ಲಾದಿಂದ ಬಂದಿದ್ದ ಅಕ್ರಮ ವಲಸಿಗರನ್ನು ಕೆಲವು ತಿಂಗಳ ಹಿಂದೆ ಬಂಧಿಸಲಾಗಿತ್ತು. ಶ್ರೀಲಂಕಾ ಅಕ್ರಮ ವಲಸಿಗರ ವಿರುದ್ಧ ಸಿಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶ್ರೀಲಂಕಾದಿಂದ ಅಕ್ರಮವಾಗಿ ವಲಸೆ

ರಾಜ್ಯದಲ್ಲಿ ಹೆಚ್ಚುತ್ತಿದೆ ಡೆಂಗ್ಯು, ಬೆಂಗಳೂರಿನಲ್ಲಿ 2478 ಪ್ರಕರಣ

ರಾಜ್ಯದಲ್ಲಿ ಒಂದೆಡೆ ಮಳೆಯ ಅವಾಂತರವಾದರೆ ಮತ್ತೊಂದೆಡೆ ಡೆಂಗ್ಯು ಪ್ರಕರಣಗಳು ಹೆಚ್ಚುತ್ತಿದ್ದು, ಐದಕ್ಕಿಂತ ಹೆಚ್ಚು ಸಾವುಗಳಾಗಿವೆ. ಸತತ ಮಳೆಯಿಂದಾಗಿ ಡೆಂಗ್ಯು ಪ್ರಕರಣಗಳಲ್ಲಿ ಏರಿಕೆಯಾಗುತ್ತಿರುವುದು ಆತಂಕ ಸೃಷ್ಟಿಸಿದೆ. ರಾಜ್ಯದಲ್ಲಿ ಕಳೆದ ಒಂಭತ್ತು ತಿಂಗಳಲ್ಲಿ 5093 ಪ್ರಕರಣಗಳು ದೃಢಪಟ್ಟಿವೆ. ಬೆಂಗಳೂರಿನಲ್ಲಿ 2478 ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರು