ಬೆಂಗಳೂರು
ಐದು ಜಿಲ್ಲೆಗಳ ಪೊಲೀಸ್ ಹುಡುಕುತ್ತಿದ್ದ ಕಳ್ಳನ ಬಂಧನ
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಹಾವೇರಿ, ದಾವಣಗೆರೆ ಜಿಲ್ಲೆಗಳ ಪೊಲೀಸರು ಹುಡುಕಾಡುತ್ತಿದ್ದ ಕುಖ್ಯಾತ ಕಳ್ಳನನ್ನು ಬೆಂಗಳೂರಿನ ವಿದ್ಯಾರಣ್ಯಪುರ ಪೊಲೀಸರು ಬಂಧಿಸಿದ್ದಾರೆ. ಸೈಯ್ಯದ್ ಅಸ್ಲಾಂ ಪಾಷಾ ಬಂಧಿತ ಆರೋಪಿಯಾಗಿದ್ದು, ಆತ 150 ಕಳ್ಳತನ ಕೇಸ್‌ಗಳಲ್ಲಿ ಪೊಲೀಸರಿಗೆ ಬೇಕಾಗಿದ್ದವ. ಆರೋಪಿ ಹಗಲೆಲ್ಲ ಐಷಾರಾಮಿ ಮನೆಗಳನ್ನ ಗುರುತಿಸುತ್ತಿದ್ದ. ರಾತ್ರಿಯಾಗುತ್ತಿದ್ದಂತೆ ಕಿಟಕಿ ತೆರೆದು ಮಹಿಳೆಯರು ನಿದ್ರೆಗೆ ಜಾರಿದ್ದರೆ ಕುತ್ತಿಗೆಯಲ್ಲಿರುವ ಸರಗಳನ್ನು ಎಗರಿಸಿ ಪರಾರಿಯಾಗುತ್ತಿದ್ದ, ಕಿಟಕಿ ಪಕ್ಕದಲ್ಲಿ ಮೇನ್ ಡೋರ್ ಇದ್ದರೆ ಕಿಟಕಿ ಗ್ಲಾಸ್ ಒಡೆದು ಡೋರ್
ಪೊಲೀಸರಿಗೆ ಚಾಕುವಿನಿಂದ ಹಲ್ಲೆಗೈದ ರೌಡಿಶೀಟರ್
ರೌಡಿಶೀಟರ್ ಬಂಧನಕ್ಕೆ ಹೋಗಿದ್ದ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿರುವ ಬೆಂಗಳೂರಿನ ತಿಲಕ್ ನಗರದಲ್ಲಿ ನಡೆದಿದೆ. ಕಲಾಸಿಪಾಳ್ಯ ರೌಡಿಶೀಟರ್ ಶಹಜದ್ ಜೊತೆ ಅನೀಷ್ ಚಾಕುವಿನಿಂದ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ. ತಲೆಮರೆಸಿಕೊಂಡಿದ್ದ ಶಹಜದ್‌ಗಾಗಿ ಕಲಾಸಿಪಾಳ್ಯ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ತಿಲಕನಗರ
ಬೀದಿನಾಯಿ ದಾಳಿ: ಚಿಕಿತ್ಸೆ ನೀಡದೆ ಮನೆಗೆ ಕಳಿಸಿದ ವಿಕ್ಟೋರಿಯಾ ವೈದ್ಯರು
ಬೆಂಗಳೂರಿನ ಕೆಂಪೇಗೌಡ ನಗರದಲ್ಲಿ ಯುವಕನ ಮೇಲೆ ಬೀದಿನಾಯಿ ದಾಳಿ ಮಾಡಿ ಗಾಯಗೊಳಿಸಿದ್ದು, ಚಿಕಿತ್ಸೆಗೆಂದು ಹೋದಾಗ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರು ವಾಪಸ್ ಕಳಿಸಿರುವ ಘಟನೆ ನಡೆದಿದೆ. ನಾಯಿ ದಾಳಿಗೆ ಒಳಗಾಗಿ ಯುವಕನ ದೇಹ ರಕ್ತಸಿಕ್ತವಾಗಿದ್ದರೂ ಯಾವುದೇ ಬ್ಯಾಂಡೆಜ್, ಚಿಕಿತ್ಸೆ ನೀಡದೆ ವೈದ್ಯರು ವಾಪಸ್
EPFO ಸ್ಟಾಫ್ ಕೋ ಆಪರೇಟಿವ್ ಸೊಸೈಟಿಯಲ್ಲಿ 70 ಕೋಟಿ ರೂ. ವಂಚನೆ
ಬೆಂಗಳೂರಿನ PFO ಸ್ಟಾಫ್ ಕೋ ಆಪರೇಟಿವ್ ಸೊಸೈಟಿಯಲ್ಲಿ 70 ಕೋಟಿ ರೂ .ವಂಚನೆ ಪ್ರಕರಣ ಬಯಲಾಗಿದ್ದು, ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೆರಡು ದಿನದಲ್ಲಿ ಪ್ರಕರಣದ ಪ್ರಾಥಮಿಕ ತನಿಖೆ ಬಳಿಕ ಸಿಐಡಿಗೆ ವರ್ಗಾವಣೆಯಾಗಲಿದೆ. ಸದ್ಯ ಪ್ರಕರಣದ ತನಿಖೆಯನ್ನು ಕೇಂದ್ರ ವಿಭಾಗ ಡಿಸಿಪಿ ಅಕ್ಷಯ್
ಆಹ್ವಾನ ಪತ್ರಿಕೆ ನೆಪ: ಆನೇಕಲ್‌ನಲ್ಲಿ ಮನೆಗೆ ಬಂದು ಮಹಿಳೆಯ ಕಟ್ಟಿ ಹಾಕಿ ದರೋಡೆ
ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ನೆರಳೂರು ಗ್ರಾಮದಲ್ಲಿ ಆಹ್ವಾನ ಪತ್ರಿಕೆ ನೀಡುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆಯನ್ನು ಕಟ್ಟಿಹಾಕಿ ಚಿನ್ನಾಭರಣ ದರೋಡೆ ಮಾಡಿರುವ ಘಟನೆ ನಡೆದಿದೆ. ರವಿಕುಮಾರ್, ನಾಗವೇಣಿ ದಂಪತಿ ಮನೆಗೆ ಆಹ್ವಾನ ಪತ್ರಿಕೆ ನೀಡುವ ನೆಪದಲ್ಲಿ ಮಧ್ಯಾಹ್ನ ಬಂದಿದ್ದ
ಮುಳಬಾಗಿಲು: ಪತ್ನಿ ಕಾಣೆಯಾಗಿದ್ದಕ್ಕೆ ಮಗುವನ್ನು ಕೊಂದು ಪತಿ ಆತ್ಮಹತ್ಯೆ
ಮುಳಬಾಗಿಲು ತಾಲೂಕಿನ ಮುಡಿಯನೂರು ಗ್ರಾಮದಲ್ಲಿ ಪತ್ನಿ ಕಾಣೆಯಾಗಿದ್ದಕ್ಕೆ ಮನನೊಂದ ಪತಿ ಐದು ವರ್ಷದ ಮಗಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮುಡಿಯನೂರು ಗ್ರಾಮದ ಲೋಕೇಶ್ (37) ಮಗಳು ನಿಹಾರಿಕಾ(5)ಳನ್ನು ಉಸಿರು ಗಟ್ಟಿಸಿ ಕೊಂದು ದೇಹವನ್ನು ಕಾರಿನಲ್ಲಿಟ್ಟು, ಅದೇ ಸ್ಥಳದಲ್ಲಿದ್ದ ತಾನು ಮರಕ್ಕೆ
ಬಿಹಾರದಲ್ಲಿ ಬದಲಾವಣೆಗಾಗಿ ತೇಜಸ್ವಿ ಯಾದವ್ ಸಿಎಂ ಆಗಬೇಕು: ಡಿಕೆ ಶಿವಕುಮಾರ್
“ಬಿಹಾರದಲ್ಲಿ ಬದಲಾವಣೆ ತರಲು ಮಹಾಘಟಬಂಧನಕ್ಕೆ ಮತ ಹಾಕಿ, ತೇಜಸ್ವಿ ಯಾದವ್ ಮುಖ್ಯಮಂತ್ರಿಯಾಗಬೇಕು ಎಂದು ಮತದಾರರಿಗೆ ಮನವಿ ಮಾಡಿದ್ದೇನೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಬೆಂಗಳೂರು ಕೌಶಲ್ಯ ಶೃಂಗಸಭೆ 2025 ಕಾರ್ಯಕ್ರಮ ನಡೆದ ಖಾಸಗಿ ಹೊಟೇಲ್ ಬಳಿ ಶಿವಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ
ದುಬಾರಿ ಬ್ರ್ಯಾಂಡ್ ಬೆಂಗಳೂರು ಬೇಡ, ಸಾಮಾನ್ಯ ಜನರ ಬಗ್ಗೆ ಚಿಂತಿಸುವ ಬೆಂಗಳೂರು ಬೇಕಿದೆ: ಆರ್ ಅಶೋಕ
ಜನರಿಗೆ ಇಂತಹ ದುಬಾರಿ ಬ್ರ್ಯಾಂಡ್ ಬೆಂಗಳೂರು ಬೇಕಿಲ್ಲ. ಸಾಮಾನ್ಯ ಜನರ ಬಗ್ಗೆ ಚಿಂತಿಸುವ ಬೆಂಗಳೂರು ಬೇಕಿದೆ ಎಂದು ಪ್ರತಿ ಪಕ್ಷ ನಾಯಕ ಆರ್.ಅಶೋಕ ಕಿಡಿ ಕಾರಿದ್ದಾರೆ. ಎ ಖಾತಾ, ಬಿ ಖಾತಾ ವಿಚಾರವಾಗಿ ಜನರ ಅಭಿಪ್ರಾಯ ಸಂಗ್ರಹಿಸಲಾ ಗುವುದು. ಇದರಲ್ಲಿ ಸರ್ಕಾರ
ವಿಜ್ಞಾನ, ಅನ್ವೇಷಣೆ, ಮಾನವ ಸಂಪನ್ಮೂಲ, ವಿಫುಲ ಅವಕಾಶದ ಸುರಕ್ಷಿತ ಜಾಗ ಬೆಂಗಳೂರು: ಡಿಕೆ ಶಿವಕುಮಾರ್
“ಕರ್ನಾಟಕ ರಾಜ್ಯವು ಜ್ಞಾನ, ಸಹಕಾರ, ಚರ್ಚೆ ಮತ್ತು ಸಂಯೋಜನೆಗೆ ಮುಕ್ತ ಹಾಗೂ ಸೂಕ್ತ ಸ್ಥಳವಾಗಿದೆ. ನಮ್ಮ ಮೇಲೆ ವಿಶ್ವಾಸ ಇಟ್ಟು ಬಂದಿರುವುದಕ್ಕೆ ನಿಮ್ಮೆಲ್ಲರಿಗೂ ಧನ್ಯವಾದ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ‘ಬೆಂಗಳೂರು ಕೌಶಲ್ಯ
ಶೂನ್ಯ ಬಡ್ಡಿ ಆಮಿಷ: ಅಡಮಾನ ಚಿನ್ನದೊಂದಿಗೆ ಕಂಪೆನಿಯವರು ಪರಾರಿ
ಬೆಂಗಳೂರಿನಲ್ಲಿ ಶೂನ್ಯ ಬಡ್ಡಿ ಆಸೆ ತೋರಿಸಿ ಗ್ರಾಹಕರಿಗೆ ಚಿನ್ನ ಅಡಮಾನ ಸಾಲ ನೀಡಿದ ನಕಲಿ ಕಂಪನಿಯು ಅಡಮಾನವಿಟ್ಟಿದ್ದ ಚಿನ್ನದ ಸಮೇತ ನಾಪತ್ತೆಯಾಗಿದೆ. ಗ್ರಾಹಕರು ಅಡಮಾನ ಇಟ್ಟಿದ್ದ ಚಿನ್ನ, ಬೆಳ್ಳಿಯೊಂದಿಗೆ ನಕಲಿ ಕಂಪನಿಯವರು ಪರಾರಿಯಾಗಿದ್ದು, ಅಪರಾಧ ಪತ್ತೆ ದಳ ವಿಭಾಗದ ಪೊಲೀಸರು ಇಬ್ಬರು




