Menu

ಸಿಬ್ಬಂದಿ ಸಮಸ್ಯೆ: ಸಾವಿರಕ್ಕೂ ಹೆಚ್ಚು ಇಂಡಿಗೊ ವಿಮಾನ ಹಾರಾಟ ರದ್ದು

ಸಿಬ್ಬಂದಿ ಸಮಸ್ಯೆಯಿಂದ 1000ಕ್ಕೂ ಹೆಚ್ಚು ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ಇದಕ್ಕಾಗಿ ಇಂಡಿಗೋ ಸಂಸ್ಥೆ ಪ್ರಯಾಣಿಕರಲ್ಲಿ ಕ್ಷಮೆ ಯಾಚಿಸಿ, ಫೆಬ್ರವರಿ ವೇಳೆಗೆ ಸಮಸ್ಯೆ ಸರಿಪಡಿಸುವುದಾಗಿ ಭರವಸೆ ನೀಡಿದೆ. ಇಂಡಿಗೋ ಡಿಜಿಸಿಎಗೆ ಮಾಹಿತಿ ನೀಡಿದ್ದು, ಸದ್ಯದಲ್ಲೇ ಸಮಸ್ಯೆಗೆ ಪರಿಹಾರ ಸಿಗದಿರಬಹುದು. ಆದರೆ ಫೆಬ್ರವರಿ 10ರ ವೇಳೆಗೆ ವಿಮಾನಗಳ ಹಾರಾಟ ಮತ್ತೆ ಆರಂಭಿಸುವುದಾಗಿ ಹೇಳಿದೆ. ಕಳೆದ ಮೂರು ದಿನಗಳಲ್ಲಿ ಸಾವಿರಕ್ಕೂ ಹೆಚ್ಚು ವಿಮಾನಗಳು ರದ್ದಾಗಿದ್ದು, ಅಂತಾರಾಷ್ಟ್ರೀಯ ಹಾಗೂ ದೇಶೀಯ ವಿಮಾನಗಳ ಹಾರಾಟದಲ್ಲಿ

ಲಿವ್‌ ಇನ್‌ ರಿಲೇಷನ್‌ಶಿಪ್‌: ಮತಾಂತರಗೊಳ್ಳದಿದ್ದರೆ ಕೊಲೆಗೈಯುವುದಾಗಿ ಯುವತಿಗೆ ಬೆದರಿಕೆ

ಬೆಂಗಳೂರಿನಲ್ಲಿ ಮುಸ್ಲಿಂ ಯುವಕ ಮತ್ತು ಹಿಂದೂ ಯುವತಿ ಲಿವಿಂಗ್‌ ಟುಗೆದರ್‌ ಸಂಗಾತಿಗಳಾಗಿದ್ದು, ಯುವತಿಯನ್ನು ಮದುವೆಯಾಗಲು ನಿರಾಕರಿಸಿದ ಯುವಕ ಮತಾಂತರಕ್ಕೆ ಒತ್ತಾಯಿಸಿ ಕೊಲೆ ಬೆದರಿಕೆಯೊಡ್ಡಿದ್ದಾನೆ. ಮತಾಂತರಕ್ಕೆ ಒಪ್ಪದಿದ್ದರೆ ದೆಹಲಿ ಪ್ರಕರಣದಂತೆ ಕೊಲೆಗೈದು ಪೀಸ್ ಪೀಸ್ ಮಾಡಿ ಎಸೆಯುವುದಾಗಿ ಬೆದರಿಸಿ, ಲಕ್ಷಾಂತರ ರೂ. ವಂಚಿಸಿದ್ದಾನೆಂದು

ಕೆಂಗೇರಿ ನಮ್ಮ ಮೆಟ್ರೋ ಹಳಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ, ರೈಲು ಸಂಚಾರ ವ್ಯತ್ಯಯ

ಬೆಂಗಳೂರಿನ ಕೆಂಗೇರಿ ನಮ್ಮ ಮೆಟ್ರೋ ನಿಲ್ದಾಣದಲ್ಲಿ ಶುಕ್ರವಾರ ಬೆಳಗ್ಗೆ ವ್ಯಕ್ತಿಯೊಬ್ಬರು ಹಳಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರಿಂದಾಗಿ ನೇರಳೆ ಮಾರ್ಗದಲ್ಲಿ ಮೆಟ್ರೋ ಸಂಚಾರ ಕೆಲಕಾಲ ವ್ಯತ್ಯಯಗೊಂಡಿತು. ಮೈಸೂರು ರಸ್ತೆ–ಚಲ್ಲಘಟ್ಟ ನಡುವೆ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದರಿಂದ ರೈಲುಗಳು ವೈಟ್‌ಫೀಲ್ಡ್​​ನಿಂದ ಮೈಸೂರು ರಸ್ತೆ

ಬೆಂಗಳೂರು ಪಬ್‌ನಲ್ಲಿ ಶಾರುಖ್ ಮಗ ಆರ್ಯನ್ ಖಾನ್ ದುರ್ವರ್ತನೆ: ಮುಂದುವರಿದ ತನಿಖೆ

ಬೆಂಗಳೂರು ಪಬ್‌ನಲ್ಲಿ ಶಾರುಖ್ ಮಗ ಆರ್ಯನ್ ಖಾನ್ ದುರ್ವರ್ತನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಕಬ್ಬನ್ ಪಾರ್ಕ್ ಎಸಿಪಿ ಪ್ರಿಯದರ್ಶಿನಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು, ಪಬ್ ಗೆ ಭೇಟಿ ನೀಡಿ ಸಿಸಿಟಿವಿ ಪರಿಶೀಲನೆ ನಡೆಸಲಾಗಿದೆ. ಪಬ್ ಮ್ಯಾನೇಜರ್‌ ಅನ್ನು ಕೂಡ

ಆಯುಕ್ತರ ಕಚೇರಿ ಆವರಣದಲ್ಲಿ ಕಳವುಗೈದ ಪೊಲೀಸ್‌

ಸಿದ್ದಾಪುರ ದರೋಡೆ ಪ್ರಕರಣದಲ್ಲಿ ಪೊಲೀಸ್‌ ಸಿಬ್ಬಂದಿ ಭಾಗಿಯಾಗಿದ್ದ ಘಟನೆ ಕೆಲವೇ ದಿನಗಳ ಹಿಂದೆ ಬೆಂಗಳೂರಿನಲ್ಲಿ ನಡೆದಿದ್ದು, ಇದೀಗ ಪೊಲೀಸ್ ಆಯುಕ್ತರ ಕಚೇರಿಯ ಆವರಣದಲ್ಲಿಯೇ ಪೊಲೀಸ್‌ ಸಿಬ್ಬಂದಿ ಕಳ್ಳತನ ಮಾಡಿರುವುದು ಬಯಲಾಗಿದೆ. ಆರೋಪಿಯನ್ನು ವಿಚಾರಣೆಗೆ ಕರೆ ತಂದ ಪೊಲೀಸ್‌ ಸಿಬ್ಬಂದಿ ಕಳ್ಳನ ಕಾರ್‌ನಲ್ಲಿದ್ದ

10 ತಿಂಗಳು ಮನೆ ಬಾಡಿಗೆ ಮುಂಗಡ ಪಡೆಯುವಂತಿಲ್ಲ: ಹೊಸ ಗೃಹ ಬಾಡಿಗೆ ನಿಯಮ ಜಾರಿ

ಬೆಂಗಳೂರು: ಬಾಡಿಗೆಗೆ ಮನೆ ಕೊಡುವಾಗ ಸೇಫ್ಟಿ ಡೆಪಾಸಿಟ್ (Home rental advance) ಆಗಿ 10 ತಿಂಗಳ ಬಾಡಿಗೆ ಮೊತ್ತವನ್ನು ಮುಂಗಡವಾಗಿ ಪಡೆಯುವಂತಿಲ್ಲ ಎಂದು ಹೊಸ ಗೃಹ ಬಾಡಿಗೆ ನಿಯಮಗಳನ್ನು ಜಾರಿ ಮಾಡಲಾಗಿದೆ. ಹೊಸ ಗೃಹ ಬಾಡಿಗೆ ನಿಯಮಗಳ ಪ್ರಕಾರ ಮನೆ ಮಾಲೀಕರು

ಲಿವ್‌ ಇನ್‌ ಟುಗೆದರ್‌: ಬೆಂಗಳೂರಿನಲ್ಲಿ ಮಹಿಳೆಯ ಕೊಂದು ವ್ಯಕ್ತಿ ಸುಸೈಡ್‌

ಲಿವ್‌ ಇನ್‌ ಟುಗೆದರ್‌ನಲ್ಲಿದ್ದ ಮಹಿಳೆಯನ್ನು ಕೊಂದ ಬಳಿಕ ವ್ಯಕ್ತಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಇಂದಿರಾ ಪ್ರಿಯದರ್ಶಿನಿ ನಗರದ ಮನೆಯೊಂದರಲ್ಲಿ ನಡೆದಿದೆ. 51 ವರ್ಷದ ಲಕ್ಷ್ಮೀನಾರಾಯಣ 49 ವರ್ಷದ ಲಲಿತಾ ಎಂಬಾಕೆಯನ್ನು ಕೊಂದು ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಬೀಡಿ, ಸಿಗರೇಟ್‌, ಮೊಬೈಲ್‌ ಬಂದ್‌: ಊಟ ಬಿಟ್ಟು ಕೈದಿಗಳ ಪ್ರತಿಭಟನೆ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೆಲವೊಂದು ನಿಯಮಗಳನ್ನು ಕಠಿಣವಾಗಿ ಜಾರಿಗೆ ತರುತ್ತಿದ್ದು, ಅಕ್ರಮವಾಗಿ ಸಿಗುತ್ತಿದ್ದ ಬೀಡಿ, ಸಿಗರೇಟ್‌ ಬಂದ್‌ ಆಗಿದೆ. ಮೊಬೈಲ್‌ ಕೂಡ ಸಿಗದಂತೆ ಮಾಡಲಾಗಿದೆ. ಇದರಿಂದ ರೊಚ್ಚಿಗೆದ್ದಿರುವ ಕೈದಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಕಳೆದ ಮೂರು ದಿನಗಳಿಂದ ಜೈಲಿನಲ್ಲಿ ಕೈದಿಗಳು ಊಟ, ತಿಂಡಿ

ನೆಲಮಂಗಲ ಹೋಟೆಲ್‌ನಲ್ಲಿ ಕುಕ್‌ ಆತ್ಮಹತ್ಯೆ

ನೆಲಮಂಗಲದಲ್ಲಿರುವ ಉಡುಪಿ ಹೋಟೆಲ್‌ ಬಾಣಸಿಗ ಮೇಲ್ಭಾಗದ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಛತ್ತೀಸ್‌ಗಢದ ಆಶಿಶ್ ಕುಮಾರ್(43) ಆತ್ಮಹತ್ಯೆ ಮಾಡಿಕೊಂಡವರು. ಅವರು ಹೋಟೆಲ್‌ ನ್ಲಿ ಕಳೆದೊಂದು ವರ್ಷದಿಂದ ಚೈನೀಸ್‌ ಫಾಸ್ಟ್ ಫುಡ್ ಮಾಡುತ್ತಿದ್ದರು. ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ತಿಳಿದು ಬಂದಿಲ್ಲ, ನೆಲಮಂಗಲ ಪೊಲೀಸ್

ಲೈಂಗಿಕ ಸಮಸ್ಯೆಗೆ ಔಷಧಿ: ಬೆಂಗಳೂರು ಟೆಕ್ಕಿಗೆ 48 ಲಕ್ಷ ರೂ. ವಂಚಿಸಿದ್ದ ನಕಲಿ ಗುರೂಜಿ ಅರೆಸ್ಟ್‌

ಲೈಂಗಿಕ ಸಮಸ್ಯೆಯ ಪರಿಹಾರಕ್ಕೆ ಆಯುರ್ವೇದ ಔಷಧಿ ನೀಡುವುದಾಗಿ ನಂಬಿಸಿ ಬೆಂಗಳೂರಿನ ಟೆಕ್ಕಿಗೆ ೪೮ ಲಕ್ಷ ರೂ. ವಂಚಿಸಿದ್ದ ನಕಲಿ ಗುರೂಜಿಯನ್ನು ಜ್ಞಾನ ಭಾರತಿ ಪೊಲೀಸರು ಬಂಧಿಸಿದ್ದಾರೆ. ಲೈಂಗಿಕ ಸಮಸ್ಯೆ ಸೇರಿದಂತೆ ನಾನಾ ಕಾಯಿಲೆಗಳಿಗೆ ಔಷಧಿ ನೀಡುವುದಾಗಿ ನಂಬಿಸಿ ಈ ಗುರೂಜಿ ಸಾರ್ವಜನಿಕರನ್ನು