Menu

ಸಂಚಾರಿ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ.50ರಷ್ಟು ರಿಯಾಯಿತಿ ಮತ್ತೆ ಘೋಷಣೆ

ಸಂಚಾರಿ ನಿಯಮ ಉಲ್ಲಂಘಿಸುವ ವಾಹನ ಸವಾರರ ದಂಡ ಪಾವತಿಗೆ ಶೇ.50ರಷ್ಟು ರಿಯಾಯಿತಿಯನ್ನು ರಾಜ್ಯ ಸರ್ಕಾರ ಘೋಷಿಸಿ ಮತ್ತೊಮ್ಮೆ ಈ ಅವಕಾಶ ಬಳಸಿಕೊಳ್ಳಲು ಸುವರ್ಣಾವಕಾಶ ನೀಡಿದೆ. ರಾಜ್ಯ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ರಂಗಪ್ಪ ಕರಿಗಾರ ಗುರುವಾರ ವಾಹನ ಸವಾರರು ದಂಡ ಪಾವತಿಗೆ ಶೇ.50ರಷ್ಟು ರಿಯಾಯಿತಿ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಈ ಸೌಲಭ್ಯವು ನಾಳೆಯಿಂದ ಅಂದರೆ ನವೆಂಬರ್ 21 ರಿಂದ ಡಿಸೆಂಬರ್ 12 ರವರೆಗೆ ಜಾರಿಯಲ್ಲಿರಲಿದ್ದು, ಈ ಅವಧಿಯಲ್ಲಿ ಚಾಲಕರು ತಮ್ಮ

ಮುಂಬೈ ಪೊಲೀಸ್ ಹೆಸರಲ್ಲಿ ಬೆದರಿಕೆ: 56.05 ಲಕ್ಷ ರೂ. ಕಳೆದುಕೊಂಡ ನಿವೃತ್ತ ಕರ್ನಲ್

ಮುಂಬೈ ಪೊಲೀಸ್ ಅಧಿಕಾರಿಗಳ ಹೆಸರಿನಲ್ಲಿ ಕರೆ ಮಾಡಿ ಬಂಧಿಸುವ ಬೆದರಿಕೆ ಹಾಕಿದ್ದರಿಂದ ಭಯಗೊಂಡ ಬೆಂಗಳೂರಿನ ನಿವೃತ್ತ ಸೇನಾ ಕರ್ನಲ್ 56.05 ಲಕ್ಷ ರೂ. ಕಳೆದುಕೊಂಡಿದ್ದಾರೆ. ನವೆಂಬರ್ 18 ರಂದು ಕೇಂದ್ರ ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ ಎಂದು ಅಧಿಕಾರಿಗಳು

ಸ್ವಿಗ್ಗಿಯಲ್ಲಿ ತರಿಸಿದ್ದ ಸ್ಯಾಂಡ್‌ವಿಚ್‌ನಲ್ಲಿ ಸೀಗಡಿ: ಗ್ರಾಹಕಿಗೆ ಒಂದು ಲಕ್ಷ ರೂ. ಪರಿಹಾರಕ್ಕೆ ಕೋರ್ಟ್‌ ಆದೇಶ

ಸ್ವಿಗ್ಗಿಯಲ್ಲಿ ಸಸ್ಯಾಹಾರ ಆರ್ಡರ್ ಮಾಡಿದ್ದ ಗ್ರಾಹಕಿಗೆ ಸ್ಯಾಂಡ್‌ವಿಚ್‌ನಲ್ಲಿ ಸೀಗಡಿ ಸಿಕ್ಕಿದ್ದು, ಆಕೆ ಕೋರ್ಟ್‌ ಮೊರೆ ಹೋಗಿ ಒಂದು ಲಕ್ಷ ರೂ. ಪರಿಹಾರ ಪಡೆದುಕೊಂಡಿದ್ದಾರೆ. ಪ್ರಕರಣದ ವಿಚಾರಣೆ ನಡೆಸಿದ ಬೆಂಗಳೂರಿನ ಗ್ರಾಹಕರ ನ್ಯಾಯಾಲಯ ಮಹಿಳೆಗೆ ಒಂದು ಲಕ್ಷ ರೂ. ಪರಿಹಾರ ನೀಡುವಂತೆ ಸ್ವಿಗ್ಗಿ

ಬಾಲಕಿ ಹೊಟ್ಟೆಯಲ್ಲಿತ್ತು ಮೂರು ಕೆಜಿ ಕೂದಲು

ಬೆಂಗಳೂರಿನಲ್ಲಿ ವೈದ್ಯರೇ ಅಚ್ಚರಿಪಡುವಂತೆ ಎಂಟು ವರ್ಷದ ಬಾಲಕಿಯ ಹೊಟ್ಟೆಯೊಳಗೆ ಮೂರು ಕೆಜಿ ಕೂದಲು ಪತ್ತೆಯಾಗಿದೆ. ಬೆಂಗಳೂರಿನ ನಾಯಂಡಹಳ್ಳಿಯ ನೇಟಸ್‌ ಮಹಿಳೆ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಿ ಹೊಟ್ಟೆಯೊಳಗಿದ್ದ ಮೂರು ಕೆಜಿ ತೂಕದ ಕೂದಲು ಗಂಟನ್ನು ಹೊರ ತೆಗೆದಿದ್ದಾರೆ.

ಬೆಂಗಳೂರಿನಲ್ಲಿ ಏಳು ಕೋಟಿ ದರೋಡೆ: ರೂವಾರಿ ಎನ್ನಲಾದ ಪಿಸಿ ಅರೆಸ್ಟ್‌

ಬೆಂಗಳೂರಿನ ಜಯನಗರದಲ್ಲಿ ಎಟಿಎಂಗೆ ಸಾಗಿಸುತ್ತಿದ್ದ ಹಣವಿದ್ದ ವಾಹನವನ್ನು ದರೋಡೆ ಮಾಡಿ ಏಳು ಕೋಟಿ ರೂ. ಒಯ್ದು ಪರಾರಿಯಾಗಿರುವ ಪ್ರಕರಣದ ಮಾಸ್ಟರ್‌ ಮೈಂಡ್‌ ಎನ್ನಲಾದ ಪೊಲೀಸ್ ಕಾನ್ಸ್‌ಟೇಬಲ್‌ವೊಬ್ಬರನ್ನು ದಕ್ಷಿಣ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ತಿರುಪತಿಯಲ್ಲಿ ಇಬ್ಬರನ್ನು ಬಂಧಿಸಿ ವಿಚಾರಣೆ

ಕೊಳಗೇರಿ ನಿವಾಸಿಗಳಿಗೆ ಕಡಿಮೆ ವೆಚ್ಚದಲ್ಲಿ ವಸತಿ ಸೌಕರ್ಯ: ಸಚಿವ ಕೆಜೆ ಜಾರ್ಜ್

ಬೆಂಗಳೂರು, ನವೆಂಬರ್ 20, 2025: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಕೊಳಗೇರಿ ನಿವಾಸಿಗಳಿಗೆ ಸರ್ಕಾರದ ವತಿಯಿಂದ ಕಡಿಮ ವೆಚ್ಚದಲ್ಲಿ ವಸತಿ ಸೌಕರ್ಯ ಕಲ್ಪಿಸುವ ಕುರಿತು ಪರಿಶೀಲಿಸಲು ಕ್ಷೇತ್ರದ ಶಾಸಕರೂ ಆಗಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ವಸತಿ ಸಚಿವ ಬಿ.ಝಡ್ ಜಮೀರ್

ಬೆಂಗಳೂರಿನಲ್ಲಿ 7 ಕೋಟಿ ರೂ. ದರೋಡೆ: ತಿರುಪತಿಯಲ್ಲಿ ಆರೋಪಿಗಳ ಬಂಧನ

ಬೆಂಗಳೂರಿನಲ್ಲಿ ಬುಧವಾರ ಎಟಿಎಂಗೆ ಹಣ ಹಾಕುವ ಕಾರು ತಡೆದು 7 ಕೋಟಿ ರೂ. ದರೋಡೆ ಪ್ರಕರಣದ ಇಬ್ಬರು ಆರೋಪಿಗಳನ್ನು ಪೊಲೀಸರು ತಿರುಪತಿಯಲ್ಲಿ ಬಂಧಿಸಿದ್ದಾರೆ.  ಹೇಮಂತ್, ಸುನೀಲ್  ಬಂಧಿತ ಆರೋಪಿಗಳಾಗಿದ್ದು, ದರೋಡೆಗೆ ಬಳಸಿದ್ದಾರೆ ಎನ್ನಲಾದ ಕಾರನ್ನು ಕೂಡ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜಯನಗರದ ಅಶೋಕ

ಕೆಲಸ ಮಾಡಲು ಯೋಗ್ಯತೆ ಇಲ್ಲದವರಿಂದ ಪ್ರತಿಭಟನೆ: ಜೆಡಿಎಸ್ ವಿರುದ್ಧ ಡಿಸಿಎಂ ವಾಗ್ದಾಳಿ

“ಜೆಡಿಎಸ್‌ನವರ  ಯೋಗ್ಯತೆಗೆ ಒಂದು ಕೆಲಸ ಮಾಡಿಲ್ಲ. ತುಂಗಭದ್ರಾ ಅಣೆಕಟ್ಟಿನ ಗೇಟ್ ಕಿತ್ತು ಹೋದಾಗ ಒಂದೇ ವಾರದಲ್ಲಿ ಗೇಟ್ ದುರಸ್ತಿ ಮಾಡಲಾಗಿದೆ. ಜೆಡಿಎಸ್ ಅವರಿಗೆ ಏನೂ ಮಾಡಲು ಆಗಿಲ್ಲ. ಈಗ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ” ಎಂದು ಡಿಸಿಎಂ ಡಿಕೆಶಿವಕುಮಾರ್  ಹರಿಹಾಯ್ದರು.

ಬೆಂಗಳೂರಿಗೆ ಟನಲ್ ರಸ್ತೆ ಅಗತ್ಯ: ಭಾರತೀಯ ಇಂಜಿನಿಯರ್ ಗಳ ಸಂಸ್ಥೆ ರಾಜ್ಯ ಸರ್ಕಾರಕ್ಕೆ ಬೆಂಬಲ

ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಣೆಗೆ ಟನಲ್ ರಸ್ತೆ ಅಗತ್ಯವಿದ್ದು, ಈ ಯೋಜನೆಯನ್ನು ಮುಂದುವರಿಸಬೇಕು ಎಂದು ಭಾರತೀಯ ಇಂಜಿನಿಯರ್ ಗಳ ಸಂಸ್ಥೆ (ಐಐಇ) ಡಿಸಿಎಂ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿತು. ಅಲಿ ಆಸ್ಕರ್ ರಸ್ತೆಯಲ್ಲಿ ಬುಧವಾರ ನಡೆದ ಬೆಂಗಳೂರು

ಚಳಿ ತಡೆಯಲಾಗುತ್ತಿಲ್ಲ, ಬೆಡ್‌ಶೀಟ್‌ ಕೊಡಿಸಿ: ನಟ ದರ್ಶನ್‌ ಜಡ್ಜ್‌ಗೆ ಮನವಿ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿ ಜೈಲಿನಲ್ಲಿರುವ ನಟ ದರ್ಶನ್‌ ಬೆಡ್‌ಶೀಟ್‌ಗಾಗಿ ಕೋರ್ಟ್‌ನಲ್ಲಿ ಬೇಡಿಕೆ ಇಟ್ಟಿದ್ದಾರೆ. ಚಳಿ ತಡೆಯಲಾಗುತ್ತಿಲ್ಲ, ಈ ಕಾರಣ ನಿದ್ದೆ ಬರುತ್ತಿಲ್ಲ, ಬೆಡ್‌ಶೀಟ್‌ ಕೊಡಿಸಿ ಎಂದು ನ್ಯಾಯಾಧೀಶರ ಮುಂದೆ ಮನವಿ ಮಾಡಿಕೊಂಡಿದ್ದಾರೆ. ಪ್ರಕರಣದ ವಿಚಾರಣೆ ಸಂಬಂಧ ಪರಪ್ಪನ ಅಗ್ರಹಾರ