ಬೆಂಗಳೂರು
ಜಿಎಸ್ಟಿ ಅಧಿಕಾರಿಗಳ ಹೆಸರಲ್ಲಿ ವ್ಯಾಪಾರಿಯ ಬೆದರಿಸಿ ಲಂಚ ಪಡೆದ ಇಬ್ಬರ ಬಂಧನ
ಜಿಎಸ್‌ಟಿ ಅಧಿಕಾರಿಗಳ ಹೆಸರಿನಲ್ಲಿ ಗುಟ್ಕಾ ವ್ಯಾಪಾರಿಯನ್ನು ಬೆದರಿಸಿ ಐದು ಲಕ್ಷ ರೂಪಾಯಿ ಸುಲಿಗೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬೆಂಗಳೂರಿನ ಬನಶಂಕರಿ ಪೊಲೀಸರು ಬಂಧಿಸಿ ದ್ದಾರೆ. ಆರೋಪಿಗಳು ಕೇಂದ್ರ ಸರ್ಕಾರದ ಜಿಎಸ್‌ಟಿ ಕಚೇರಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಹೌಸ್‌ಕೀಪಿಂಗ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಬನಶಂಕರಿಯ ಬಿಎಂಟಿಸಿ ಬಸ್ ನಿಲ್ದಾಣದ ಕಟ್ಟಡದಲ್ಲಿರುವ ಜಿಎಸ್‌ಟಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ದಾದಾಪೀರ್ ಮತ್ತು ನಾಗರಾಜ್ ಬಂಧಿತ ಆರೋಪಿಗಳು. ಆರೋಪಿಗಳು ಜಿಎಸ್‌ಟಿ ಇಂಟೆಲಿಜೆನ್ಸ್ ಅಧಿಕಾರಿಗಳ ಹೆಸರಿನಲ್ಲಿ ನಕಲಿ
ತಾಯಿ ಕಣ್ಣೆದುರೇ ರೌಡಿಶೀಟರ್‌ನ ಕೊಚ್ಚಿ ಕೊಲೆ
ಬೆಂಗಳೂರು ನಗರದ ಥಣಿಸಂದ್ರ ವ್ಯಾಪ್ತಿಯ ಅಮರಜ್ಯೋತಿ ಲೇಔಟ್‌ನಲ್ಲಿ ರೌಡಿಶೀಟರ್‌ನನ್ನು ಆತನ ತಾಯಿಯ ಕಣ್ಣೆದುರೇ ದುಷ್ಕರ್ಮಿಗಳು ಕೊಚ್ಚಿ ಕೊಲೆಗೈದಿರುವ ಘಟನೆ ನಡೆದಿದೆ. ಡಿಜೆ ಹಳ್ಳಿ ಪೊಲೀಸ್ ಠಾಣೆಯ ರೌಡಿಶೀಟರ್ ಪವನ್ ಕುಮಾರ್ (25) ಎಂಬಾತನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಯಲಹಂಕದಲ್ಲಿ ಬೈಕ್ ಮರಕ್ಕೆ ಡಿಕ್ಕಿಯಾಗಿ ಸವಾರರಿಬ್ಬರ ಸಾವು
ಯಲಹಂಕ ನ್ಯೂ ಟೌನ್ ಉನ್ನಿಕೃಷ್ಣನ್ ಜಂಕ್ಷನ್ ಬಳಿ ಬೈಕ್‌ನಲ್ಲಿ ತ್ರಿಬಲ್ ರೈಡ್ ಹೋಗುತ್ತಿದ್ದಾಗ ಮರಕ್ಕೆ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದಾರೆ.ಕಿರಣ್ (25) ಮತ್ತು ಯಶವಂತ್ (25) ಮೃತಪಟ್ಟವರು. ಬೈಕ್‌ನಲ್ಲಿದ್ದ ಹಿಂಬದಿ ಸವಾರ ಗೌತಮ್ ಎಂಬವರು ಗಾಯಗೊಂಡಿದ್ದಾರೆ. ಮಂಗಳವಾರ ಮಧ್ಯರಾತ್ರಿ ಮೂವರು ಬುಲೆಟ್ ಬೈಕ್‌ನಲ್ಲಿ
ಮಾಜಿ ಐಪಿಎಸ್ ಭಾಸ್ಕರ್ ರಾವ್ ಸೋದರಳಿಯ ನಾಪತ್ತೆ
ಬೆಂಗಳೂರು ಮಾಜಿ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರ ಸೋದರ ಅಳಿಯ ಅನಿರುದ್ಧ್ ರಮೇಶ್ ನಾಪತ್ತೆಯಾಗಿದ್ದು, ಅವರ ಪತ್ತೆಗೆ ಸಾಮಾಜಿಕ ಜಾಲತಾಣಗಳ ಬಳಕೆದಾರರಿಂದ ಸಹಾಯ ಕೋರಿದ್ದಾರೆ. ಭಾಸ್ಕರ್ ರಾವ್ ಅವರು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದು, ಅನಿರುದ್ಧ್ ದಕ್ಷಿಣ ಬೆಂಗಳೂರಿನ ಪ್ರತಿಷ್ಠಿತ
ವಿದ್ಯಾರ್ಥಿಯ ಬ್ಯಾಂಕ್ ಡಿಟೇಲ್ಸ್ ಪಡೆದು ಸ್ನೇಹಿತ ವಂಚಿಸಿದ್ದು ಏಳು ಕೋಟಿ ರೂ.
ಸ್ನೇಹಿತನನ್ನು ನಂಬಿದ್ದ ವಿದ್ಯಾರ್ಥಿಯೊಬ್ಬ ಸೈಬರ್ ವಂಚನೆಯ ಸುಳಿಗೆ ಸಿಲುಕಿ ಏಳು ಕೋಟಿ ರೂಪಾಯಿ ಕಳೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಒಂದು ವರ್ಷದ ಗೆಳೆತನದಲ್ಲಿದ್ದ ವಿದ್ಯಾರ್ಥಿ ತನ್ನ ಬ್ಯಾಂಕ್ ಖಾತೆಯ ವಿವರವನ್ನು ಸ್ನೇಹಿತನೊಂದಿಗೆ ಹಂಚಿಕೊಂಡಿದ್ದರಿಂದ ಇಂಥದ್ದೊಂದು ಸಂಕಷ್ಟಕ್ಕೆ ಸಿಲುಕಿದ್ದಾನೆ. ಒಂದು ವರ್ಷದ ಹಿಂದೆ
ಸಿಎಸ್ ವಿರುದ್ಧ ಆರೋಪ: ಸ್ನೇಹಮಯಿ ಕೃಷ್ಣ ಬಹಿರಂಗ ಕ್ಷಮೆ ಯಾಚನೆ
ಮುಡಾದ ಮಾಜಿ ಆಯುಕ್ತ ಡಿ.ಬಿ ನಟೇಶ್ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಒಂದೂವರೆ ಕೋಟಿ ರೂ. ನೀಡಿ ಮುಂಬಡ್ತಿ ತೆಗೆದುಕೊಂಡಿದ್ದಾರೆ ಎಂದು ಆರೋಪಿಸಿರುವ ಪ್ರಕರಣ ಸಂಬಂಧ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮಾಧ್ಯಮಗಳ ಮುಂದೆ ಬಹಿರಂಗವಾಗಿ ಕ್ಷಮೆ
ಬೆಂಗಳೂರಿನಲ್ಲಿ ಶಂಕಿತ ಉಗ್ರನ ಸೆರೆ ಹಿಡಿದ ಎನ್‌ಐಎ
2023ರ ಗ್ರನೇಡ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೋಸ್ಟ್ ವಾಂಟೆಡ್ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ತಂಡದ ಪೊಲೀಸರು ಬಂಧಿಸಿದ್ದಾರೆ. ಅರ್ಷದ್ ಖಾನ್ ಬಂಧಿತ ಉಗ್ರ, ಈ ಹಿಂದೆ ಆತ ಜಾಮೀನು ಪಡೆದು ತಲೆಮರೆಸಿಕೊಂಡಿದ್ದ. ಈಗ ಆರ್.ಟಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ
ಸಿಎಸ್‌ಗೆ ಒಂದೂವರೆ ಕೋಟಿ ರೂ. ಲಂಚ ಆರೋಪ: ಸ್ನೇಹಮಯಿ ಕೃಷ್ಣ ಅರೆಸ್ಟ್
ಆರ್‌ಟಿಐ ಕಾರ್ಯಕರ್ತ, ಮುಡಾ ಪ್ರಕರಣದ ರೂವಾರಿ ಆಗಿರುವ ಸ್ನೇಹಮಯಿ ಕೃಷ್ಣ ಅವರನ್ನು ಬೆಂಗಳೂರಿನ ಸೈಬರ್ ಪೊಲೀಸರು ಬಂಧಿಸಿದ್ದಾರೆ. ಮುಡಾದ ಮಾಜಿ ಆಯುಕ್ತ ಡಿ.ಬಿ ನಟೇಶ್ ನೀಡಿದ ದೂರು ಆಧರಿಸಿ ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗಷ್ಟೇ ಸ್ನೇಹಮಯಿ ಕೃಷ್ಣ ನಟೇಶ್ ವಿರುದ್ಧ ಗಂಭೀರ ಆರೋಪ
ಹಳಿ ತಪ್ಪಿದ ನಮ್ಮ ಮೆಟ್ರೊ ಚಾಲಕ ರಹಿತ ರೈಲು
ಬೆಂಗಳೂರಿನಲ್ಲಿ ‘ನಮ್ಮ ಮೆಟ್ರೋ’ ಚಾಲಕ ರಹಿತ ರೈಲು ಪರೀಕ್ಷಾರ್ಥ ಸಂಚಾರದ ವೇಳೆ ಹಳಿ ತಪ್ಪಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ನಮ್ಮ ಮೆಟ್ರೋದ ಅತ್ಯಾಧುನಿಕ ತಂತ್ರಜ್ಞಾನದ ಯೆಲ್ಲೋ ಲೈನ್ ನಲ್ಲಿ ಸಂಚರಿಸಬೇಕಾದ ಚಾಲಕ ರಹಿತ ರೈಲು ಪರೀಕ್ಷಾರ್ಥ ಸಂಚಾರದ ವೇಳೆ ಹಳಿ
ಮತದಾರರ ಪಟ್ಟಿ ದೋಷ: ಮನೆವಾರು ಮ್ಯಾಪಿಂಗ್ ಮಾಡಲು ಇಸಿಗೆ ಡಿಕೆ ಶಿವಕುಮಾರ್ ಮನವಿ
“ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಅನೇಕ ಕಡೆಗಳಲ್ಲಿ ಚುನಾವಣಾ ಮತದಾರರ ಪಟ್ಟಿಯಲ್ಲಿ ಲೋಪದೋಷಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ಇದನ್ನು ಸರಿಪಡಿಸಲು ಬೀದಿವಾರು, ಮನೆವಾರು ಮ್ಯಾಪಿಂಗ್ ಮಾಡಿ” ಎಂದು ಡಿಸಿಎಂ ಡಿಕೆ ಶಿವಕುಮಾರ್ ರಾಜ್ಯ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ. “ಮತದಾರರ ಪಟ್ಟಿಯಲ್ಲಿ ಒಂದೇ



