Friday, September 25, 2026
Menu

ಚಿನ್ನ, ನಗದು ದೋಚಿ ಮನೆ ಕೆಲಸದವರು ಪರಾರಿ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಹೊರವಲಯದ ಮನೆಯೊಂದರಲ್ಲಿ ಕೆಲಸಕ್ಕಿದ್ದ ನೇಪಾಳಿಗಳು ಚಿನ್ನ, ಬೆಳ್ಳಿ, ನಗದು ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ. ಹೊಸಕೋಟೆ ಹೊರವಲಯದ ಹೆದ್ದಾರಿ ಬದಿಯ 40 ಎಕರೆ ಪ್ರದೇಶದಲ್ಲಿರುವ ಪಾಲಮ್ ವಿಲ್ಲಾ ಬಡಾವಣೆಯಲ್ಲಿ ವಾಸವಿರುವ ರವಿ ರಾಜನ್ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದೆ. ಎರಡು ತಿಂಗಳ ಹಿಂದೆ ಬಡಾವಣೆಗೆ ನೇಪಾಳಿ ಕುಟುಂಬ ಬಂದಿತ್ತು. ಸೆಕ್ಯೂರಿಟಿ ಗಾರ್ಡ್ ಒಬ್ಬ ಪತ್ನಿಗೆ ಮನೆಯಲ್ಲಿ ಕೆಲಸವಿದ್ದರೆ ಕೊಡಿ. ನಿತ್ಯ ಕಾರು ತೊಳೆದು ಮನೆ

ಪಿಒಪಿ ಗಣೇಶ ಮೂರ್ತಿಗಳ ನಿಷೇಧಿಸಿದ ಜಿಬಿಎ

ಗಣೇಶ ಚತುರ್ಥಿ ಹಬ್ಬದ ವೇಳೆ ಸಾರ್ವಜನಿಕರು ಪರಿಸರ ಸ್ನೇಹಿ ಆಚರಣೆಗೆ ಒತ್ತು ನೀಡಬೇಕು ಎಂದು ಜಿಬಿಎ ಹೇಳಿದ್ದು, ಪ್ಲಾಸ್ಟರ್‌ ಆಫ್‌ ಪ್ಯಾರಿಸ್‌ ಗಣೇಶ ಮೂರ್ತಿ ತಯಾರಿ ಮತ್ತು ಮಾರಾಟ ನಿಷೇಧಿಸಿದೆ. ಜಿಬಿಎ, ಅರಣ್ಯ, ಪರಿಸರ ಮತ್ತು ಜೀವಿಪರಿಸ್ಥಿತಿ ಇಲಾಖೆಯು ಪಿಒಪಿಮೂರ್ತಿಗಳ ತಯಾರಿಕೆ

ಜ್ಞಾನಭಾರತಿ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿ ಸಾವು: ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ರೂ. ಪರಿಹಾರ

ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಆಟೋರಿಕ್ಷಾ ಡಿಕ್ಕಿ ಹೊಡೆದು ಗಾಯಗೊಂಡು, ಕಳೆದ ಗುರುವಾರ (ಆ.6) ಮೃತಪಟ್ಟ ವಿದ್ಯಾರ್ಥಿನಿ ಮಾನಸ ಅವರ ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ರೂ. ಪರಿಹಾರ ನೀಡಲಾಗಿದೆ. ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 3 ಲಕ್ಷ

ಬೆಂಗಳೂರಿನ ಸ್ಟಾರ್‌ ಹೋಟೆಲ್‌ಗಳಲ್ಲಿ ಅವಧಿ ಮೀರಿದ ಮಾಂಸ, ಹಾಲು, ಕೊಳೆತ ತರಕಾರಿ, ಅನೈರ್ಮಲ್ಯ

ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತಾ ವಿಭಾಗವು ನಡೆಸಿದ ವಿಶೇಷ ತಪಾಸಣೆ ವೇಳೆ ಹಲವು ಆಹಾರ ಸುರಕ್ಷತಾ ನಿಯಮಗಳ ಉಲ್ಲಂಘನೆ ಪತ್ತೆಯಾಗಿದ್ದು, ಬೆಂಗಳೂರಿನ ಹಲವು ತ್ರಿ-ಸ್ಟಾರ್ ಮತ್ತು ಫೈವ್‌ ಸ್ಟಾರ್ ಹೋಟೆಲ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಬೆಂಗಳೂರಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ ಕಾರ್ಯಾಚರಣೆ

ಬೆಂಗಳೂರಿನ ವೈಟ್‌ಫೀಲ್ಡ್ ವಿಭಾಗದ ಆರು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಏಕಕಾಲದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿಗಳ ಪತ್ತೆ ಕಾರ್ಯಾಚರಣೆ ನಡೆಸಲಾಗಿದ್ದು, 30 ಸ್ಥಳಗಳಲ್ಲಿ ಪೊಲೀಸರು  ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ವರ್ತೂರು ಸೇರಿದಂತೆ ವಿವಿಧ ಪ್ರದೇಶಗಳಲ್ಲಿರುವ ಶೆಡ್‌ಗಳು ಹಾಗೂ ಕಾರ್ಮಿಕರು ವಾಸಿಸುವ ಪ್ರದೇಶಗಳಲ್ಲಿ

ಬಿಟೆಕ್‌ ವಿದ್ಯಾರ್ಥಿ ಡೆತ್‌ನೋಟ್‌ ಬರೆದಿಟ್ಟು ಹಾಸ್ಟೆಲ್‌ನಲ್ಲಿ ಸುಸೈಡ್‌

ಬೆಂಗಳೂರು ನಗರದ ಹಾಸ್ಟೆಲ್‌ವೊಂದರಲ್ಲಿ ಬಿಟೆಕ್‌ ವಿದ್ಯಾರ್ಥಿ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಚಿಕ್ಕಬಳ್ಳಾಪುರದ ರಕ್ಷನ್ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಆ.6 ರಂದು ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ನಾನು ಒಳ್ಳೆ ಮಗನಾಗಲಿಲ್ಲ ಎಂದು ಡೆತ್‌ನೋಟ್ ಬರೆದಿಟ್ಟಿದ್ದಾನೆ.  ರಕ್ಷನ್ ಮೃತದೇಹವನ್ನು ಪೊಲೀಸರು ಪೋಷಕರಿಗೆ

ರೀಲ್ಸ್‌ ಹುಚ್ಚಿನಲ್ಲಿದ್ದ ಪತ್ನಿ ಊಟ ಹಾಕುತ್ತಿಲ್ಲವೆಂದು ಕೊಲೆಗೈದ ಪತಿ ಅರೆಸ್ಟ್‌

ಬೆಂಗಳೂರಿನ ಕುಂಬಳಗೋಡು ಬಳಿ ಪತ್ನಿಯನ್ನು ಕೊಲೆ ಮಾಡಿ ಮೃತದೇಹವನ್ನು ಬೆಡ್‌ಶೀಟ್‌ನಲ್ಲಿ ಮುಚ್ಚಿಟ್ಟು ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಧೀರಜ್ ಕುಮಾರ್ (24)ನನ್ನು ಬಿಹಾರದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕುಂಬಳಗೋಡು ಗೇರುಪಾಳ್ಯದಲ್ಲಿ ಜುಲೈ 27ರಂದು ಪತ್ನಿ ರೀಮಾ ಕುಮಾರಿಯನ್ನು ಕೊಲೆ ಮಾಡಿ

ಲಾಲ್‌ಬಾಗ್‌ನಲ್ಲಿ ಆಗಸ್ಟ್‌ 17ರವರೆಗೆ ಫಲಪುಷ್ಪ ಪ್ರದರ್ಶನ: ಚಾಲನೆ ನೀಡಿದ ಸಿಎಂ

ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ಇಂದಿನಿಂದ (ಆ.6) 17ರವರೆಗೆ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಧಿಕೃತವಾಗಿ ಉದ್ಘಾಟಿಸಿದರು. 220ನೇ ಫಲಪುಷ್ಪ ಪ್ರದರ್ಶನ ಇದಾಗಿದ್ದು, ಸಾವಿರ ವರ್ಷಗಳ ಗಂಗ ಸಾಮ್ರಾಜ್ಯದ ಇತಿಹಾಸ, ಸಂಸ್ಕೃತಿ ಹಾಗೂ ಪರಂಪರೆಯನ್ನು ಪುಷ್ಪಗಳ ಕಲಾಕೃತಿ ಮೂಲಕ

ಬ್ಯಾಂಕ್‌ ಸಿಬ್ಬಂದಿ ವಂಚನೆ: 1.5 ಕೋಟಿ ರೂ. ಕಳೆದುಕೊಂಡ ಉದ್ಯಮಿ

ಬೆಂಗಳೂರಿನ ಪೀಣ್ಯದಲ್ಲಿರುವ ಬ್ಯಾಂಕ್‌ ಶಾಖೆಯ ಉದ್ಯೋಗಿ ಎಸಗಿದ ವಂಚನೆಯಲ್ಲಿ ಸಿಲುಕಿಕೊಂಡ ಉದ್ಯಮಿಯೊಬ್ಬರು 1.5 ಕೋಟಿ ರೂ. ಕಳೆದುಕೊಂಡಿದ್ದಾರೆ. ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬ್ಯಾಂಕ್‌ನಲ್ಲಿ ಅಪ್ರೈಸರ್‌ ಆಗಿ ಕೆಲಸ ಮಾಡಿಕೊಂಡಿದ್ದ ನಾಗೇಶ್‌ ವಂಚನೆಯ ಆರೋಪಿ. ಆತ ಸ್ನೇಹಿತರ ಮೂಲಕ ನಕಲಿ

ಬೆಂಗಳೂರಿನಲ್ಲಿ ಒಂದೇ ಮರಕ್ಕೆ, ಒಂದೇ ಸೀರೆಯಿಂದ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಇಬ್ಬರು ಯುವತಿಯರು

ಬೆಂಗಳೂರಿನ ಜಕ್ಕೂರು ಕೃಷ್ಣ ರೆಸ್ಟೋರೆಂಟ್‌ ಬಳಿಯ ಮರವೊಂದರಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ನೇಪಾಳದ ಯುವತಿಯರಿಬ್ಬರು ಪತ್ತೆಯಾಗಿದ್ದಾರೆ.  ನೇಪಾಳ ಮೂಲದ ಸಿರ್ಜನಾ (22), ರಿತಾ (23) ಶವವಾಗಿ ಪತ್ತೆಯಾಗಿರುವ ಯುವತಿಯರು. ಬೆಳಗ್ಗೆ ಸಾರ್ವಜನಿಕರು ವಾಕಿಂಗ್ ಬಂದಾಗ ಈ ದುರಂತ ಬೆಳಕಿಗೆ ಬಂದಿದೆ. ಯಲಹಂಕ