ಬೆಂಗಳೂರು
ತಿಂಗಳುಗಟ್ಟಲೇ ಒಂದೇ ಕಡೆ ನಿಲ್ಲಿಸಿರುವ ವಾಹನಗಳ ಹರಾಜಿಗೆ ಜಿಬಿಎ ಸಿದ್ಧ
ಬೆಂಗಳೂರಿನಲ್ಲಿ ಅನಧಿಕೃತವಾಗಿ ತಿಂಗಳುಗಟ್ಟಲೇ ಒಂದೇ ಜಾಗದಲ್ಲಿ ನಿಲ್ಲಿಸಿರುವ ವಾಹನಗಳನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹರಾಜಿಗಿಡಲಿದೆ. ಎಷ್ಟೇ ಬಾರಿ ವಾಹನ ತೆರವು ಮಾಡಿ ಅಂದ್ರೂ ವಾಹನ ಮಾಲೀಕರು ಗಣನೆಗೆ ತೆಗೆದುಕೊಳ್ಳುತ್ತಿಲ್ಲ. ರಸ್ತೆ ಬದಿ ವಾಹನ ನಿಲ್ಲಿಸಿರುವುದರಿಂದ ಟ್ರಾಫಿಕ್ ಮತ್ತಷ್ಟು ಹೆಚ್ಚುತ್ತಿದೆ. ಹೀಗಾಗಿ ಸಂಚಾರ ಪೊಲೀಸ್ ಇಲಾಖೆ ಜೊತೆ ಟೋಯಿಂಗ್ ಮಾಡಿ ವಾಹನಗಳನ್ನು ಹರಾಜು ಹಾಕಲು ಜಿಬಿಎ ಎಲ್ಲ ಸಿದ್ಧತೆ ನಡೆಸುತ್ತಿದೆ. ಆಯಾ ಪಾಲಿಕೆಯಲ್ಲಿ ನಿಂತ ವಾಹನಗಳನ್ನು ಪಾಲಿಕೆ ಅಧಿಕಾರಿಗಳು ಹರಾಜು ಮಾಡಲಿದ್ದಾರೆ.
ಬೆಂಗಳೂರಿನಲ್ಲಿ ಮನೆ ಮುಂದೆ ಆಟವಾಡುತ್ತಿದ್ದ ಮಗು ತಂದೆಯ ಕಾರಿಗೆ ಸಿಲುಕಿ ಸಾವು
ಬೆಂಗಳೂರಿನ ತೋಟದಗುಡ್ಡದಹಳ್ಳಿ ಬೆನಕ ಲೇಔಟ್‌ನಲ್ಲಿ ತಂದೆಯ ಕಾರಿಗೆ ಸಿಲುಕಿ ಮಗು ಸ್ಥಳದಲ್ಲೇ ಮೃತಪಟ್ಟ ಗೃದಯವಿದ್ರಾವಕ ಘಟನೆಯೊಂದು ನಡೆದಿದೆ. ದೇವಿಕಾ ಹಾಗೂ ಮುನೇಶ್ ದಂಪತಿಯ ಒಂದು ವರ್ಷ ಹತ್ತು ತಿಂಗಳ ನೂತನ್ ಕಾರಿನಡಿ ಸಿಲುಕಿ ಅಸು ನೀಗಿದ ಮಗು. ಮಳವಳ್ಳಿ ತಾಲೂಕಿನ ಬೂವಿನದೊಡ್ಡಿಯ
ತಾಳಿ ಕಟ್ಟಿ ಲೈಂಗಿಕವಾಗಿ ಬಳಕೆ: ಜಾತಿ ಕಾರಣಕ್ಕೆ ಮದುವೆ ಬಹಿರಂಗಗೊಳಿಸದ ಪೇದೆ
ಮಹಿಳಾ ಪೇದೆಗೆ ತಾಳಿ ಕಟ್ಟಿ ಲೈಂಗಿಕವಾಗಿ ಬಳಸಿಕೊಂಡು ಬಳಿಕ ಆಕೆ ಪರಿಶಿಷ್ಟ ಜಾತಿ ಎಂಬ ಕಾರಣಕ್ಕೆ ಪತ್ನಿಯೆಂದು ಸಾರ್ವಜನಿಕವಾಗಿ ಹೇಳಿಕೊಳ್ಳಲು ನಿರಾಕರಿಸಿ ಮತ್ತೊಂದು ಹುಡುಗಿಯೊಂದಿಗೆ ವಿವಾಹ ನಿಶ್ಚಯಿಸಿಕೊಂಡು ವಂಚನೆ ಎಸಗಿದ ಆರೋಪದಡಿ ಪೇದೆಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದೆ. ಅಮೃತೂರು ಪೊಲೀಸ್
ಮೈಸೂರಿನಲ್ಲಿ ಲೈಂಗಿಕ ಕಿರುಕುಳ: ಉಪನ್ಯಾಸಕನ ವಿರುದ್ಧ ವಿದ್ಯಾರ್ಥಿನಿ ದೂರು
ಮೈಸೂರು ನಗರದ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನಲ್ಲಿ ಉಪನ್ಯಾಸಕ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಡಿ ಪ್ರಕರಣ ದಾಖಲಾಗಿದೆ. ಹೆಚ್ಚು ಮಾರ್ಕ್ಸ್ ನೀಡ್ತೇನೆ, ಒಳ್ಳೆಯ ಕೆಲಸ ಕೊಡಿಸುತ್ತೇನೆ. ಹೊರಗಡೆ ಪಬ್‌ಗೆ ಹೋಗಿ ಮಜಾ ಮಾಡೋಣ ಬಾ ಎಂದು ಉಪನ್ಯಾಸಕ ಭರತ್ ಭಾರ್ಗವ ಕಿರುಕುಳ
ಸರ್ಕಾರಿ ಗೌರವದೊಂದಿಗೆ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅಂತ್ಯಕ್ರಿಯೆ
ಬೆಂಗಳೂರು: ಸಹಸ್ರಾರು ಮರಗಳನ್ನು ನೆಟ್ಟು ಪರಿಸರ ಕಾಳಜಿ ತೋರಿ ಮಾದರಿಯಾಗಿದ್ದ ಸಾಲುಮರದ ತಿಮ್ಮಕ್ಕ ಅಂತ್ಯಕ್ರಿಯೆ ಸರ್ಕಾರಿ ಗೌರವಗಳೊಂದಿಗೆ ನೇರವೇರಿತು. ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿಯ ಕಲಾಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ಸಾಹಿತಿ ಸಿದ್ದಲಿಂಗಯ್ಯ ಅವರ ಸಮಾಧಿ ಪಕ್ಕದಲ್ಲಿ ಸಾಲುಮರದ ತಿಮ್ಮಕ್ಕನ ಅಂತ್ಯಕ್ರಿಯೆ ನೆರವೇರಿತು. ಅಂತ್ಯಕ್ರಿಯೆ
ಬೆಂಗಳೂರು ಹಾಸ್ಟೇಲ್ ಗಳಿಗೆ ಲೋಕಾಯುಕ್ತ ದಿಢೀರ್ ಭೇಟಿ: ಅವ್ಯವಸ್ಥೆ ಕಂಡು ಗರಂ
ಸಾಲು ಸಾಲು ದೂರು ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿರುವ ಹಾಸ್ಟೆಲ್‌ಗಳಿಗೆ ಲೋಕಾಯುಕ್ತ ಮತ್ತು ಉಪಲೋಕಾಯುಕ್ತರು ಗುರುವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಗರದ ಎಂಜಿ ರಸ್ತೆಯಲ್ಲಿರುವ ಸರ್ಕಾರಿ ವಿಜ್ಞಾನ ಕಾಲೇಜು ಬಾಲಕರ ಹಾಸ್ಟೆಲ್‌ಗೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಅವರು ಅನಿರೀಕ್ಷಿತ ಭೇಟಿ
ಬಿಡದಿಯ ಹೋಟೆಲ್‌ನಲ್ಲಿ ಯುವಕನ ಕೊಲೆ
ಬಿಡದಿ ಬಳಿಯ ಕದಂಬ ಹೋಟೆಲ್‌ನಲ್ಲಿ ಮಾರಕಾಸ್ತ್ರದಿಂದ ಕೊಚ್ಚಿ ಯುವಕನೊಬ್ಬನ ಕೊಲೆ ಮಾಡಲಾಗಿದೆ. ಚನ್ನಪಟ್ಟಣ ತಾಲೂಕಿನ ಕೊಂಡಾಪುರ ಗ್ರಾಮದ ನಿವಾಸಿ ನಿಶಾಂತ್ (25) ಕೊಲೆಯಾದ ಯುವಕ. ಎರಡೂವರೆ ತಿಂಗಳಿನಿಂದ ನಿಶಾಂತ್ ಕದಂಬ ಹೋಟೆಲ್‌ನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದು, ಹಳೆ ದ್ವೇಷಕ್ಕೆ
ಸಾಲು ಮರದ ತಿಮ್ಮಕ್ಕ ನಿಧನಕ್ಕೆ ಸಿಎಂ ಸಂತಾಪ
ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರ ನಿಧನದ ಸುದ್ದಿ ತಿಳಿದು ದುಃಖಿತನಾಗಿದ್ದೇನೆ. ನಮ್ಮನ್ನು ಅಗಲಿದರೂ ಅವರ ಪರಿಸರ ಪ್ರೇಮ ಅವರನ್ನು ಚಿರಸ್ಥಾಯಿಯಾಗಿಸಿದೆ. ಅಗಲಿದ ಮಹಾಚೇತನಕ್ಕೆ ನನ್ನ ನಮನಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದಾರೆ. ಸಾವಿರಾರು ಗಿಡಗಳನ್ನು ನೆಟ್ಟು, ಅವುಗಳನ್ನು ಮಕ್ಕಳಂತೆ ಸಲಹಿದ ತಿಮ್ಮಕ್ಕನವರು
ಯುವಪೀಳಿಗೆ ಸಹಕಾರ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಳ್ಳಿ: ಮುಖ್ಯಮಂತ್ರಿ
ಬಿ.ಎಸ್.ವಿಶ್ವನಾಥ್ ಅವರ ಆದರ್ಶಗಳನ್ನು ಪಾಲಿಸುವ ಜೊತೆಗೆ ಯುವಪೀಳಿಗೆ ಸಹಕಾರ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಯುವಜನತೆಗೆ ಕರೆ ನೀಡಿದರು. ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು ವತಿಯಿಂದ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಆವರಣದಲ್ಲಿ ಆಯೋಜಿಸಲಾಗಿದ್ದ ಶ್ರೀ
ಸರ್ಕಾರ ಕೃಷಿ ವಿವಿಗಳಿಗೆ ಎಲ್ಲ ಸೌಲಭ್ಯ ಒದಗಿಸಲು ಬದ್ಧ: ಸಚಿವ ಚಲುವರಾಯಸ್ವಾಮಿ
ಸರ್ಕಾರವು ಕೃಷಿ ವಿಶ್ವವಿದ್ಯಾಲಯಗಳಿಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಲು ಬದ್ಧವಾಗಿದೆ. ಕೃಷಿ ಸಂಶೋಧಕರು ಮತ್ತು ಕೃಷಿಕರು ಹೊಸ ಹೊಸ ಸಂಶೋಧನೆಗಳ ಅವಿಷ್ಕಾರಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ವತಿಯಿಂದ ಜಿ.ಕೆ.ವಿ.ಕೆ ಯಲ್ಲಿ ಹಮ್ಮಿಕೊಳ್ಳಲಾದ “ಕೃಷಿ




