ಬೆಂಗಳೂರು
35,000 ಅಡಿ ಮೇಲೆ ವಿಮಾನದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹುಟ್ಟುಹಬ್ಬ ಆಚರಣೆ
ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಜನ್ಮದಿನವನ್ನು ಏರ್ ಇಂಡಿಯಾ ಸಿಬ್ಬಂದಿ ವಿಮಾನದಲ್ಲಿ ಆಚರಿಸುವ ಮೂಲಕ ಸಂಭ್ರಮಿಸಿದ್ದಾರೆ. ಮೇ 18ರಂದು 92 ವರ್ಷ ಪೂರೈಸಿ 93ನೇ ವಸಂತಕ್ಕೆ ಕಾಲಿಡಲಿರುವ ಎಚ್.ಡಿ. ದೇವೇಗೌಡರಿಗೆ ಏರ್ ಇಂಡಿಯಾ ಸಿಬ್ಬಂದಿ ವಿಮಾನದಲ್ಲಿಯೇ ಹುಟ್ಟುಹಬ್ಬ ಆಚರಿಸಿತು. ದೆಹಲಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಮರಳುತ್ತಿದ್ದಾಗ ಏರ್ ಇಂಡಿಯಾ ಸಿಬ್ಬಂದಿ ವಿಶೇಷವಾಗಿ ಸಿದ್ಧಪಡಿಸಿದ ಕೇಕ್ ಕತ್ತರಿಸುವ ಮೂಲಕ ದೇವೇಗೌಡರು ಹುಟ್ಟುಹಬ್ಬ ಆಚರಿಸಿಕೊಂಡರು. ವಿಮಾನ 35 ಸಾವಿರ ಅಡಿ ಎತ್ತರದಲ್ಲಿ ಹಾರಾಡುತ್ತಿದ್ದಾಗ
ಪಕ್ಷದ ಮುಖಂಡರ ಒತ್ತಾಯದ ಮೇರೆಗೆ ಬಮುಲ್ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧೆ: ಡಿಕೆ ಸುರೇಶ್
ಬೆಂಗಳೂರು: ಪಕ್ಷದ ಮುಖಂಡರ ಒತ್ತಾಯದ ಮೇರೆಗೆ ಬೆಂಗಳೂರು ಹಾಲು ಒಕ್ಕೂಟದ ಕನಕಪುರ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಿದ್ದೇನೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ತಿಳಿಸಿದರು. ಸದಾಶಿವನಗರದ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಶನಿವಾರ ಪ್ರತಿಕ್ರಿಯೆ ನೀಡಿದ ಅವರು, ವಿಶ್ರಾಂತಿ ಅವಧಿ ಮುಗಿಸಿದ ಮೇಲೆ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ
ಬಿಡದಿ ಟೌನ್ ಶಿಪ್ ಯೋಜನೆ ಕಾಂಗ್ರೆಸ್ ನಾಯಕರು ಲೂಟಿ ಮಾಡಲು ರೂಪಿಸಿದ ಯೋಜನೆ: ಆರ್.ಅಶೋಕ
ಬೆಂಗಳೂರು: ಬಿಡದಿ ಟೌನ್ ಶಿಪ್ ಯೋಜನೆ ಎಂಬುದು ಕಾಂಗ್ರೆಸ್ ನಾಯಕರು ಲೂಟಿ ಮಾಡಲು ರೂಪಿಸಿದ ಯೋಜನೆ. ಇದರಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಯಾವುದೇ ಪಾತ್ರವಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಗ್ರೇಟರ್ ಬೆಂಗಳೂರು ಪ್ರಾಧಿಕಾರದಿಂದ ಮಾಡುತ್ತಿರುವ ಭೂ ಸ್ವಾಧೀನ ವಿರೋಧಿಸಿ
ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿ.ಕೆ.ಶಿವಕುಮಾರ್
ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ ನಡೆಸಲಾಗುವುದು. ಮೊದಲು ಮೀಸಲಾತಿ ಹಾಗೂ ವಲಯವಾರು ವಿಭಾಗಗಳನ್ನು ರಚಿಸಲಾಗುವುದು. ಚುನಾವಣೆ ವಿಳಂಬ ಮಾಡುವುದರಲ್ಲಿ ಯಾವುದೇ ಅರ್ಥ ವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ
ಬೆಂಗಳೂರು ಬ್ಲಡ್ ಬ್ಯಾಂಕ್ಗಳಲ್ಲಿ ಅಕ್ರಮ: ಆರೋಗ್ಯ ಇಲಾಖೆ ತನಿಖೆ ಚುರುಕು
ಬೆಂಗಳೂರಿನ ರಕ್ತನಿಧಿ ಘಟಕಗಳಲ್ಲಿ ನಿಗದಿಗಿಂತ ಹೆಚ್ಚಿನ ಹಣ ವಸೂಲಿ, ಅನೈರ್ಮಲ್ಯ ಹಾಗೂ ಅಕ್ರಮಗಳ ಕುರಿತು ಆರೋಪಗಳು ಕೇಳಿಬಂದಿದ್ದು, ಕರ್ನಾಟಕ ಆರೋಗ್ಯ ಇಲಾಖೆ ತನಿಖೆಗೆ ಮುಂದಾಗಿದೆ. ರಕ್ತದ ಮಾದರಿಗಳನ್ನು ಸಂಗ್ರಹ, ಸ್ವಚ್ಛತೆ, ಸಂಗ್ರಹಣಾ ಕ್ರಮಮತ್ತು ಶುಚಿತ್ವದ ಮಾನದಂಡಗಳನ್ನು ಡ್ರಗ್ ಕಂಟ್ರೋಲ್ ಬೋರ್ಡ್ ತಂಡಗಳು
ಜಾತಕದೋಷವೆಂದು ಮಹಿಳಾ ಪೊಲೀಸ್ಗೆ 5 ಲಕ್ಷ ವಂಚಿಸಿದ್ದ ಜ್ಯೋತಿಷಿ ಅರೆಸ್ಟ್
ಜಾತಕದಲ್ಲಿ ದೊಡ್ಡ ದೋಷವಿದೆ, ಪೂಜೆ ಮಾಡಿ ಸರಿ ಮಾಡುವುದಾಗಿ ಹೇಳಿ ನಂಬಿಸಿ ಮಹಿಳಾ ಪೊಲೀಸ್ಗೆ 5 ಲಕ್ಷ ವಂಚಿಸಿದ್ದ ಜ್ಯೋತಿಷಿಯನ್ನು ಬೆಂಗಳೂರಿನ ಆಡುಗೋಡಿ ಪೊಲೀಸರು ಬಂಧಿಸಿದ್ದಾರೆ. ಆಡುಗೋಡಿಯ ಪೊಲೀಸ್ ಕ್ವಾಟ್ರಸ್ನಲ್ಲಿದ್ದ ಮಹಿಳಾ ಕಾನ್ಸ್ಟೇಬಲ್ ಅನಾರೋಗ್ಯಕ್ಕೆ ಒಳಗಾದಾಗ ಸ್ನೇಹಿತರ ಮೂಲಕ ಕಲಬುರಗಿಯ ಜ್ಯೋತಿಷಿ
ಬೆಂಗಳೂರಿನಲ್ಲಿ ಟರ್ಕಿಯ ಸೆಲೆಬಿ ಏವಿಯೇಷನ್ ಸರ್ವಿಸ್ ಸ್ಥಗಿತ
ಕೇಂದ್ರ ಸರ್ಕಾರದ ಆದೇಶದಂತೆ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟರ್ಕಿಯ ಸೆಲೆಬಿ ಏವಿಯೇಷನ್ ಏರ್ಪೋರ್ಟ್ ಸೇವೆಗಳನ್ನು ಸ್ಥಗಿತಗೊಳಿಸುವ ಮೂಲಕ ಬೆಂಗಳೂರಿನಲ್ಲಿಯೂ ಟರ್ಕಿ ಕಂಪನಿಗೆ ಭಾರಿ ಹೊಡೆತ ನೀಡಿದಂತಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿನಿತ್ಯ 15 ಅಂತಾರಾಷ್ಟ್ರೀಯ ವಿಮಾನಗಳು ಮತ್ತು
ಬೆಂಗಳೂರು ಹರೇ ಕೃಷ್ಣ ದೇವಸ್ಥಾನ ಬೆಂಗಳೂರು ಇಸ್ಕಾನ್ ಸೊಸೈಟಿಗೆ ಸೇರಿದ್ದು: ಸುಪ್ರೀಂ
ಬೆಂಗಳೂರಿನಲ್ಲಿರುವ ಹರೇ ಕೃಷ್ಣ ದೇವಸ್ಥಾನ ಮತ್ತು ಶೈಕ್ಷಣಿಕ ಸಂಕೀರ್ಣದ ಒಡೆತನವು ಬೆಂಗಳೂರು ಇಸ್ಕಾನ್ ಸೊಸೈಟಿಗೆ ಸೇರಿದ್ದು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಈ ಸಂಬಂಧ ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಬೆಂಗಳೂರು ಇಸ್ಕಾನ್ ಸೊಸೈಟಿ ಕರ್ನಾಟಕ ಹೈಕೋರ್ಟ್
ಬಾಣಸವಾಡಿಯಲ್ಲಿ ಪತಿಯಿಂದಲೇ ಮಹಿಳೆಯ ಕೊಲೆ
ಬೆಂಗಳೂರಿನ ಬಾಣಸವಾಡಿಯಲ್ಲಿ ಮಹಿಳೆಯೊಬ್ಬರನ್ನು ಪತಿಯೇ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಡೆಯಿತು. ಪತಿ ರಮೇಶ್ ಕೊಲೆ ಆರೋಪಿ, ಕಲೈವಾಣಿ ಕೊಲೆಯಾಗಿರುವ ಮಹಿಳೆ. ಇಬ್ಬರೂ ಕೆಲವು ವರ್ಷಗಳ ಹಿಂದೆ ಪರಸ್ಪರ ಎರಡನೇ ವಿವಾಹವಾಗಿದ್ದರು. ಮರಗೆಲಸ ಮಾಡಿಕೊಂಡಿದ್ದ ಆರೋಪಿ ಉಳಿಯಿಂದ ಹೊಡೆದು ಹತ್ಯೆ ಮಾಡಿದ್ದಾನೆ. ಆರೋಪಿ
ಬೆಂಗಳೂರು: ಪ್ರತ್ಯೇಕ ಅಪಘಾತ ಮೂವರ ಸಾವು
ಬೆಂಗಳೂರು: ನೆಲಮಂಗಲ ಹಾಗೂ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರತ್ಯೇಕ ಮೂರು ರಸ್ತೆ ಅಪಘಾತಗಳಲ್ಲಿ ಇಬ್ಬರು ಪಾದಚಾರಿಯರು ಸೇರಿ ಮೂವರು ಮೃತಪಟ್ಟಿದ್ದಾರೆ. ನೆಲಮಂಗಲ ಬಳಿಯ ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪಾದಚಾರಿ ಅಶೋಕ್ (27)




