Menu

ಡೇಟಿಂಗ್ ಆ್ಯಪ್ ಸುಂದರಿ ಆಸೆಗೆ 1.66 ಕೋಟಿ ರೂ. ಕಳೆದುಕೊಂಡ ಟೆಕ್ಕಿ

ಬೆಂಗಳೂರಿನಲ್ಲಿ ಡೇಟಿಂಗ್ ಆ್ಯಪ್ ಮೂಲಕ ಮಹಿಳೆಯ ಮಾತಿಗೆ ಮರುಳಾದ ಸಾಫ್ಟ್‌ವೇರ್ ಎಂಜಿನಿಯರ್ 1.66 ಕೋಟಿ ರೂಪಾಯಿ ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಡೇಟಿಂಗ್ ಆ್ಯಪ್ ವಂಚಕಿ ಟೆಕ್ಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಆನ್‌ಲೈನ್ ಟ್ರೇಡಿಂಗ್ ಹೆಸರಿನಲ್ಲಿ ಮೂರು ತಿಂಗಳಲ್ಲಿ ಟೆಕ್ಕಿಯಿಂದ 1.66 ಕೋಟಿ ರೂಪಾಯಿ ವಂಚಿಸಿದ್ದಾಳೆ.  ಸೌರವ್ ದುಬೆಗೆ ಎಂಬ ಟೆಕ್ಕಿ ಫೆಬ್ರವರಿ 15ರಂದು ಟಂಟನ್ ಡೇಟಿಂಗ್ ಆ್ಯಪ್‌ನಲ್ಲಿ ರಿಯಾ ಅಗರ್ವಾಲ್ ಎಂಬ ಯುವತಿಯ ಪರಿಚಯವಾಗಿತ್ತು. ಚಾಟಿಂಗ್ ಮೂಲಕ ಶುರುವಾದ ಪರಿಚಯ

ಉಗಾಂಡದ ಎಬೋಲಾ ಶಂಕಿತೆಯ ವರದಿ ನೆಗೆಟಿವ್‌: ಸಚಿವ ದಿನೇಶ್‌ ಗುಂಡೂ ರಾವ್‌

ಎಬೋಲಾ ವೈರಸ್‌ ಶಂಕಿತ ಉಗಾಂಡಾದ 28 ವರ್ಷದ ಮಹಿಳೆಯ ತಪಾಸಣಾ ವರದಿಯಲ್ಲಿ ಸೋಂಕು ಇಲ್ಲ ಎಂಬುದು ದೃಢಪಟ್ಟಿದೆ. ಜನರು ಈ ವಿಚಾರದಲ್ಲಿ ಆತಂಕಪಡಬೇಕಿಲ್ಲ ಎಂದು ಸಚಿವ ದಿನೇಶ್ ಗುಂಡೂ ರಾವ್ ಹೇಳಿದ್ದಾರೆ. ಎಬೋಲಾ ವೈರಸ್ ಪೀಡಿತ ಉಗಾಂಡದಿಂದ ಬಂದಿದ್ದ ಮಹಿಳೆಯೊಬ್ಬರಿಗೆ ಮಂಗಳವಾರ

ಉಗಾಂಡಾದಿಂದ ಬೆಂಗಳೂರಿಗೆ ಬಂದ ಮಹಿಳೆಗೆ ಎಬೋಲಾ ಸೋಂಕು?

ಉಗಾಂಡಾದಿಂದ ಬೆಂಗಳೂರಿಗೆ ಬಂದಿರುವ ಮಹಿಳೆಯಲ್ಲಿ ಎಬೋಲಾ ಸೋಂಕಿನ ಲಕ್ಷಣಗಳು ಪತ್ತೆಯಾಗಿದ್ದು, ಆರೋಗ್ಯ ಇಲಾಖೆ ತುರ್ತು ಕ್ರಮ ಕೈಗೊಂಡು ಆಕೆಯನ್ನು ಪ್ರತ್ಯೇಕ ವಾರ್ಡ್‌ಗೆ ದಾಖಲಿಸಿ ಕಟ್ಟುನಿಟ್ಟಿನ ವೈದ್ಯಕೀಯ ನಿಗಾ ತೆಗೆದುಕೊಂಡಿದೆ. ಮಹಿಳೆಯಲ್ಲಿ ಎಬೋಲಾ ವೈರಸ್‌ಗೆ ಹೋಲುವ ಲಕ್ಷಣಗಳು ಕಂಡುಬಂದಿವೆ, ಸೋಂಕು ದೃಢೀಕರಣಕ್ಕಾಗಿ ರಕ್ತದ

ಜೊತೆಯಲ್ಲಿದ್ದ ಅಂಧ ಮಹಿಳೆಯ ಚಿನ್ನ, ನಗದು ದೋಚಿದ್ದ ದಂಪತಿ ಸೆರೆ

ಎಂಟು ವರ್ಷಗಳಿಂದ ಜೊತೆಯಲ್ಲೇ ವಾಸವಿದ್ದು ಅಂಧ ಮಹಿಳೆಯ ಮನೆಯಲ್ಲಿ ಚಿನ್ನಾಭರಣ ಹಾಗೂ ನಗದು ದೋಚಿದ್ದ ದಂಪತಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.  ಎಂಬಿಎ ಪದವೀಧರೆ ಶರ್ಮಿಳಾ ಶೇಷಾದ್ರಿ ಮತ್ತು ಪತಿ ಡಿಪ್ಲೊಮಾ ಪದವೀಧರ ಗಣೇಶ್ ಕುಮಾರ್ ಬಂಧಿತರು. ಅಂಧ ಸಂತ್ರಸ್ತೆ ಕಳೆದ ಎಂಟು

ಬೆಂಗಳೂರಿನಲ್ಲಿ ಲಿವ್‌ ಇನ್‌ ರಿಲೇಷನ್‌ನಲ್ಲಿದ್ದ ರೇಡಿಯೊ ಜಾಕಿ ಸುಸೈಡ್‌

ರೇಡಿಯೋ ಜಾಕಿಯಾಗಿದ್ದ ಮುಂಬೈನ ಮಹಿಳೆ ಮನಿಷಾ ಎಂಬವರು ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ಬಳಿ ಇರುವ ಅಪಾರ್ಟ್ಮೆಂಟ್‌ನ ಫ್ಲಾಟ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ನೇಹಿತನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಡೆತ್‌ನೋಟ್‌ ಪತ್ತೆಯಾಗಿದ್ದು, ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಡಿಜಿಟಲ್‌ ಅರೆಸ್ಟ್‌ ವಂಚನೆ: ಮಹಿಳೆಯಿಂದ ದೋಚಿದ್ದು 24 ಕೋಟಿ ರೂ.

ಡಿಜಿಟಲ್​​ ಅರೆಸ್ಟ್​​ ಎಂದು ಬೆದರಿಸಿದ ಸೈಬರ್‌ ವಂಚಕರು ಬೆಂಗಳೂರಿನ ಮಹಿಳೆಯೊಬ್ಬರಿಂದ 24 ಕೋಟಿ ರೂಪಾಯಿ ಸುಲಿಗೆ ಮಾಡಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ತನ್ನ ಬಳಿ ಇದ್ದ ಬಂಗಾರದ ಒಡವೆಗಳನ್ನು ಬ್ಯಾಂಕ್​​ನಲ್ಲಿ ಅಡ ಇಡಲು ಬಂದ ಕಾರಣ ಮಹಿಳೆ ಮತ್ತಷ್ಟು ವಂಚನೆಯಿಂದ ಪಾರಾಗಿದ್ದಾರೆ.

ನಕಲಿ ಸುಪ್ರೀಂ ಆದೇಶ: 8 ವರ್ಷದ ಹಿಂದೆ ಜೈಲಿಂದ ಬಿಡುಗಡೆಯಾದ ಆರೋಪಿಗಾಗಿ ಶೋಧ

ನಕಲಿಯಾಗಿ ಸುಪ್ರೀಂ ಕೋರ್ಟ್‌ನ ಆದೇಶವನ್ನು ಸೃಷ್ಟಿಸಿ, ಜೈಲು ಅಧಿಕಾರಿಗಳನ್ನೇ ಯಾಮಾರಿಸಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿದ್ದ ಕೈದಿಯೊಬ್ಬನ ವಂಚನೆ ಎಂಟು ವರ್ಷದ ಬಳಿಕ ಬಯಲಾಗಿದೆ. ಈಗ ಪೊಲೀಸರು ಆತನಿಗಾಗಿ ಹುಟುಕಾಟ ನಡೆಸುತ್ತಿದ್ದಾರೆ. ತಮಿಳುನಾಡು ಮೂಲದ ಶಂಕರ್ ಆರ್ಮುಗಮ್ ಎಂಬ ಅಪರಾಧಿ 2001ರಲ್ಲಿ

ಬೆಂಗಳೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಬೀದಿ ನಾಯಿ ಹಿಂಡು ದಾಳಿ

ಬೆಂಗಳೂರಿನ ರಾಮಮೂರ್ತಿ ನಗರದ ಸಮೀಪ ಹೊಯ್ಸಳ ನಗರದಲ್ಲಿ ಏಕಾಏಕಿ 15ಕ್ಕೂ ಹೆಚ್ಚು ನಾಯಿಗಳ ಹಿಂಡು ವಿದ್ಯಾರ್ಥಿನಿ ಮೇಲೆ ದಾಳಿ ಮಾಡಿದೆ. ಮೇಘನಾ ಬೀದಿನಾಯಿಗಳ ದಾಳಿಗೆ ಒಳಗಾದ ವಿದ್ಯಾರ್ಥಿನಿ. ವಿದ್ಯಾರ್ಥಿನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೀದಿನಾಯಿಗಳ ದಾಳಿಗೆ ವಿದ್ಯಾರ್ಥಿನಿ ಭಯಗೊಂಡಿದ್ದು,

ಮಳೆ ಬಂದರೆ ಅಂಡರ್‌ಪಾಸ್ ಬಂದ್ ಇದು “ಬ್ರಾಂಡ್ ಬೆಂಗಳೂರು”: ಆರ್‌ ಅಶೋಕ

ಉತ್ತರಹಳ್ಳಿ ನ್ಯಾಯಾಂಗ ಬಡಾವಣೆಯಲ್ಲಿ ನಿರ್ಮಾಣವಾದ ಅಂಡರ್‌ಪಾಸ್ ಸ್ವಲ್ಪ ಮಳೆಯಾದರೂ ನೀರಿನಿಂದ ತುಂಬಿ ವಾಹನ ಸಂಚಾರವೇ ಸ್ಥಗಿತಗೊಳ್ಳುತ್ತಿರುವುದು ಕಾಂಗ್ರೆಸ್ ಸರ್ಕಾರದ ದೂರದೃಷ್ಟಿಯಿಲ್ಲದ ಯೋಜನೆಗಳಿಗೆ ಸ್ಪಷ್ಟ ಸಾಕ್ಷಿ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಕುಟುಕಿದ್ದಾರೆ. “ನಾನು ಟನಲ್ ಮಾಡುತ್ತೇನೆ, ಬ್ರಾಂಡ್ ಬೆಂಗಳೂರು ನಿರ್ಮಿಸುತ್ತೇನೆ”

ಜೈಲಿನಲ್ಲಿ ದರ್ಶನ್‌ ಆತ್ಮಹತ್ಯೆ ಯತ್ನ: ಕೇವಲ ವದಂತಿ ಎಂದ ಗೃಹ ಸಚಿವ ಪರಮೇಶ್ವರ್‌

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿ ಜೈಲು ಸೇರಿರುವ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ವದಂತಿಯನ್ನು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅಧಿಕೃತವಾಗಿ ನಿರಾಕರಿಸಿದ್ದಾರೆ. ದರ್ಶನ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ವದಂತಿ ಗಮನಕ್ಕೆ ಬಂದ