Menu

ಬೆಂಗಳೂರಿನಲ್ಲಿ ಡಿಜಿಟಲ್‌ ಅರೆಸ್ಟ್‌ ದಂಧೆ ಕಚೇರಿಗೆ ಪೊಲೀಸ್‌ ದಾಳಿ

ಐಟಿ ಹಬ್‌ ಆಗಿ ಗುರುತಿಸಿಕೊಂಡಿರುವ ಬೆಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ದಂಧೆ ಮಾಡುತ್ತಿದ್ದ ಸೈಬರ್ ಕಂಪನಿ ಪತ್ತೆಯಾಗಿದೆ. ಹೆಚ್ಎಸ್ಆರ್ ಲೇಔಟ್ ನಲ್ಲಿ ಪತ್ತೆಯಾಗಿರುವ ಕಚೇರಿಯ ಮೇಲೆ ಪೊಲೀಸರು ದಾಳಿ ನಡೆಸಿ 16 ಸಿಬ್ಬಂದಿಯನ್ನು ಬಂಧಿಸಿದ್ದಾರೆ. ಡಿಜಿಟಲ್ ಅರೆಸ್ಟ್ ಹೆಸರಲ್ಲಿ ಭಯ ಹುಟ್ಟಿಸಿ ಹಣ ದೋಚುತ್ತಿದ್ದ ಹಲವು ಪ್ರಕರಣಗಳು ನಗರದಲ್ಲಿ ಬೆಳಕಿಗೆ ಬಂದಿವೆ. ಇದೇ ಮೊದಲ ಬಾರಿ ಭಾರತದಲ್ಲಿ ಕುಳಿತು ಅಮೆರಿಕ ಮತ್ತು ಕೆನಡಾ ಪ್ರಜೆಗಳನ್ನು ಡಿಜಿಟಲ್ ಅರೆಸ್ಟ್ ಮಾಡುತ್ತಿದ್ದ ಕಚೇರಿ ಹೆಚ್ಎಸ್ಆರ್

ಜಿಬಿಎ ವ್ಯಾಪ್ತಿ ಬಿ ಖಾತಾ ನಿವೇಶನ ಆನ್‌ಲೈನ್‌ನಲ್ಲಿ ಎ ಖಾತೆಯಾಗಿ ಪರಿವರ್ತನೆ

ಜಿಬಿಎ ವ್ಯಾಪ್ತಿಯ ಬಿ-ಖಾತಾ ನಿವೇಶನ ಮಾಲೀಕರಿಗೆ ದೀಪಾವಳಿ ಸಂದರ್ಭದಲ್ಲಿ ಶುಭ ಸುದ್ದಿ ಸಿಕ್ಕಿದೆ, ಬಿಖಾತಾದಿಂದ ಎ ಖಾತಾಗೆ ಪರಿವರ್ತನೆ ಮತ್ತು ಹೊಸ ನಿವೇಶನಗಳಿಗೂ ಎ ಖಾತೆ ಲಭ್ಯವಾಗುವಂತೆ ಆನ್ ಲೈನ್ ವ್ಯವಸ್ಥೆಜಾರಿಗೊಳ್ಳುತ್ತಿದ್ದು, ಇಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್‌

ಅನುಪಯುಕ್ತ ವಸ್ತು ವಿಲೇವಾರಿಗೆ ಬೆಂಗಳೂರಲ್ಲಿ ಅಮೆರಿಕ ಮಾದರಿ ಕ್ರಮ

ಮನೆಯಲ್ಲಿರೋ ಅನುಪಯುಕ್ತ ವಸ್ತುಗಳ ವಿಲೇವಾರಿಗೆ ಬೆಂಗಳೂರಲ್ಲಿ ಅಮೆರಿಕ ಮಾದರಿಯ ಕ್ರಮವೊಂದನ್ನು ಅಳವಡಿಸಲು ಗ್ರೇಟರ್‌ ಪ್ರಾಧಿಕಾರ ಚಿಂತನೆ ನಡೆಸಿದೆ. ಈ ಮೂಲಕ ಬೆಂಗಳೂರಿನಲ್ಲಿ ಕಸದ ಸಮಸ್ಯೆಗೆ ಮುಕ್ತಿ ನೀಡಲು ಜಿಬಿಎ ಮಾಸ್ಟರ್‌ ಪ್ಲಾನ್‌ ರೂಪಿಸಿದೆ. ಹೊಸ ಪ್ಲಾನ್ ಮೂಲಕ ಕಸದ ಸಮಸ್ಯೆಗೆ ಮುಕ್ತಿ

ಜಿಬಿಎ ಪ್ರಶ್ನಿಸಿ ಅರ್ಜಿ: ಹೈಕೋರ್ಟ್‌ಗೆ ಸಲ್ಲಿಸಿ ಎಂದ ಸುಪ್ರೀಂ

ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಕುರಿತು ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌, ಹೈಕೋರ್ಟ್‌ಗೆ ಸಲ್ಲಿಸುವಂತೆ ಅರ್ಜಿದಾರರಿಗೆ ನಿರ್ದೇಶನ ನೀಡಿದೆ. ಜಿಬಿಎ ರಚನೆ ಕಾನೂನುಬಾಹಿರ ಎಂದು ಆರೋಪಿಸಿ ಪ್ರಕಾಶ ಬೆಳವಾಡಿ ಹಾಗೂ ಇತರರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್

ಸಿಎಂ ಡಿಸಿಎಂ ನಿವಾಸಗಳಿಗೆ ಬಾಂಬ್‌ ಬೆದರಿಕೆ ಸಂದೇಶ: ತನಿಖೆಗೆ ಎಸ್‌ಐಟಿ ರಚನೆ

ಸಿಎಂ ಮತ್ತು ಡಿಸಿಎಂ ಮನೆಗಳಲ್ಲಿ 4 ಕೆಜಿಯಷ್ಟು ಆರ್‌ಡಿಎಕ್ಸ್ ಮತ್ತು ಐಇಡಿ ಸ್ಫೋಟಕ ಇರಿಸಲಾಗಿದೆ. ಅವುಗಳನ್ನು ದೂರದಿಂದಲೇ ಸ್ಫೋಟಿಸಲಾಗುತ್ತದೆ ಎಂದು ಕಳೆದ ಶನಿವಾರ ಇ-ಮೇಲ್‌ ಮೂಲಕ ಹುಸಿ ಬೆದರಿಕೆ ಬಂದಿತ್ತು. ಈ ಹಿನ್ನೆಲೆ ಪೊಲೀಸ್‌ ಇಲಾಖೆ ಇಂಥ ಪ್ರಕರಣಗಳನ್ನು ಭೇದಿಸಲು ಎಸ್‌ಐಟಿ

ಸಿಎಂ, ಡಿಸಿಎಂ ಮನೆಗೆ ಬಾಂಬ್ ಬೆದರಿಕೆ: ಎಸ್ ಐಟಿ ತನಿಖೆಗೆ ಆದೇಶ

ಸಿಎಂ, ಡಿಸಿಎಂ ಮನೆಗಳಿಗೆ ಬಾಂಬ್ ಬೆದರಿಕೆ ಕರೆಗಳು ಬಂದಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಎಸ್ ಐಟಿ ತನಿಖೆಗೆ ಆದೇಶಿಸಿದೆ. ಕಳೆದ ಒಂದೂವರೆ ವರ್ಷದಿಂದ ನಿರಂತರವಾಗಿ ಕೆಲ ಶಾಲೆಗಳು, ಸರ್ಕಾರಿ ಕಚೇರಿ ಹಾಗೂ ದೇವಸ್ಥಾನಗಳಿಗೆ ಬಾಂಬ್‌ ಬೆದರಿಕೆ ಬರುತ್ತಿವೆ. ಬೆಂಗಳೂರಿನಲ್ಲೇ ಇಂತಹ 34

ಸೈಟ್‌ ಕೊಡಿಸುವುದಾಗಿ ನಂಬಿಸಿ ಕಿರುತೆರೆ ಕಲಾವಿದರಿಗೆ ವಂಚನೆ: ಐವರ ವಿರುದ್ಧ ಎಫ್‌ಐಆರ್‌

ಬೆಂಗಳೂರಿನಲ್ಲಿ ಕಿರುತೆರೆ ಕಲಾವಿದರಿಗೆ ಸೈಟ್ ಕೊಡಿಸುವುದಾಗ ನಂಬಿಸಿ 1.6 ಕೋಟಿ ರೂಪಾಯಿ ವಂಚನೆ ಮಾಡಿದ್ದಾರೆಂದು ಬಿಲ್ಡರ್ ಸೇರಿದಂತೆ ಐವರು ಆರೋಪಿಗಳ ವಿರುದ್ಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಭಗೀರಥ , ಸಂಜೀವ್ ತಗಡೂರು, ಗುರುಪ್ರಸಾದ್, ರವೀಂದ್ರ, ಮತ್ತು ಉಮಾಕಾಂತ್

ಬೆಂಗಳೂರಿನಲ್ಲಿ ಪಿಯು ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಜಿಗಿದು ಆತ್ಮಹತ್ಯೆ

ಬೆಂಗಳೂರಿನ ಕ್ಲಾರೆನ್ಸ್ ಪ್ರೌಢಶಾಲೆಯ 12ನೇ ತರಗತಿಯ ವಿದ್ಯಾರ್ಥಿ, ರಾಜ್ಯ ಮಟ್ಟದಲ್ಲಿ ಡೈವಿಂಗ್ ಚಾಂಪಿಯನ್ ಶಾಲೆಯ ಕಟ್ಟಡದ ಎರಡನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ರಿಚರ್ಡ್ಸ್ ಟೌನ್‌ನ ಪಾಟರಿ ರಸ್ತೆಯಲ್ಲಿರುವ ಶಾಲೆಗೆ ವಿದ್ಯಾರ್ಥಿಯನ್ನು ಬಿಟ್ಟು ತಂದೆ ಕೆಲಸಕ್ಕೆ ಹೋದ 10 ನಿಮಿಷಗಳಲ್ಲಿ

ಬೆಂಗಳೂರು ಸೇರಿ ರಾಜ್ಯದ ನಾನಾ ಕಡೆ ಭ್ರಷ್ಟ ಅಧಿಕಾರಿಗಳ ನಿವಾಸ , ಕಚೇರಿಗಳಿಗೆ ಲೋಕಾಯುಕ್ತ ದಾಳಿ

ರಾಜ್ಯದ ನಾನಾ ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಆದಾಯಕ್ಕೂ ಮೀರಿ ಅಧಿಕ ಆಸ್ತಿ ಗಳಿಕೆ ಆರೋಪದಡಿ ರಾಜ್ಯಾದ್ಯಂತ 12 ಕಡೆ ಲೋಕಾಯುಕ್ತ ದಾಳಿಯಾಗಿದೆ. ಹಾಸನ, ಕಲಬುರ್ಗಿ, ಚಿತ್ರದುರ್ಗ, ಉಡುಪಿ, ದಾವಣಗೆರೆ, ಹಾವೇರಿ, ಬಾಗಲಕೋಟೆ ಮತ್ತು ಬೆಂಗಳೂರು ನಗರದಲ್ಲಿ

ಕನಕಪುರದಲ್ಲಿ ಜಮೀನು ಜಗಳ: ಯುವಕನ ಕೊಲೆ

ಕನಕಪುರ ತಾಲೂಕಿನ ಗೆಂಡೆಕೆರೆ ಗ್ರಾಮದಲ್ಲಿ ಜಮೀನು ವಿಚಾರಕ್ಕೆ ನಡೆದ ಎರಡು ಕುಟುಂಬಗಳ ಗಲಾಟೆಯು ಕೊಲೆಯಲ್ಲಿ ಅಂತ್ಯಗೊಂಡಿದೆ. ಸುನಿಲ್ (27) ಕೊಲೆಯಾದ ಯುವಕ. ತುಂಗಣಿ ಗ್ರಾಮದ ನಿವಾಸಿ ಸುನಿಲ್‌ನ ತಂದೆಯಿಂದ ಪಾರ್ಥಸಾರಥಿ ಎಂಬಾತ ಎರಡು ಎಕರೆ ಜಮೀನನ್ನು ಕುಟುಂಬಸ್ಥರಿಗೆ ಮಾಹಿತಿ ನೀಡದೆ ಬರೆಸಿಕೊಂಡಿದ್ದಾರೆ