Menu

ಆಚಾರ್ಯ ಕಾಲೇಜಿಗೆ ಬಾಂಬ್‌, ಪ್ರಾಂಶುಪಾಲರ ಕತ್ತರಿಸಿ ಫ್ರಿಡ್ಜ್​ನಲ್ಲಿಡುವ ಬೆದರಿಕೆ ಸಂದೇಶ

ಬೆಂಗಳೂರಿನ ಸೋಲದೇವನಹಳ್ಳಿಯಲ್ಲಿರುವ ಆಚಾರ್ಯ ಕಾಲೇಜಿನಲ್ಲಿ ಬಾಂಬ್ ಇಟ್ಟಿರುವುದಾಗಿ ಅಪರಿಚಿತ ವ್ಯಕ್ತಿ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಕಳುಹಿಸಿ ಆತಂಕ ಸೃಷ್ಟಿಸಿದ್ದಾನೆ. ಕಾಲೇಜು ಪ್ರಾಂಶುಪಾಲರನ್ನು ಕತ್ತರಿಸಿ ಫ್ರಿಡ್ಜ್​ನಲ್ಲಿಡುವುದಾಗಿ ಬೆದರಿಕೆ ಹಾಕಿದ್ದಾನೆ. ಆಚಾರ್ಯ ಕಾಲೇಜಿನ ಅಧಿಕೃತ ಇ-ಮೇಲ್ ಪರಿಶೀಲನೆ ವೇಳೆ ಈ ಸಂದೇಶ ಗಮನಕ್ಕೆ ಬಂದಿದೆ. ಕಾಲೇಜಿನ ಆಡಳಿತ ಮಂಡಳಿ ಸೋಲದೇವನಹಳ್ಳಿ ಠಾಣೆಗೆ ದೂರು ನೀಡಿದೆ, ಪೊಲೀಸರು ನ್ಯಾಯಾಲಯದ ಅನುಮತಿ ಪಡೆದು ಎಫ್ಐಆರ್ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ. ಎರಡು ದಿನಗಳ ಮೊದಲು ಬೆಂಗಳೂರು-ವಾರಾಣಸಿ

ಚಾಲಕನಿಗೆ ರುದ್ರಾಕ್ಷಿ ನೀಡಿ ಚಿನ್ನದುಂಗುರ ಎಗರಿಸಿ ನಕಲಿ ನಾಗಾಸಾಧು ಪರಾರಿ

ಬೆಂಗಳೂರಿನಲ್ಲಿ ನಕಲಿ ನಾಗಸಾಧುವೊಬ್ಬರು ಕಾರು ಚಾಲಕನಿಗೆ ಮಂಕುಬೂದಿ ಎರಚಿ ರುದ್ರಾಕ್ಷಿ ಕೊಟ್ಟು ಕೈಯಲ್ಲಿದ್ದ 10 ಗ್ರಾಂ ಚಿನ್ನದ ಉಂಗುರವನ್ನು ಕಸಿದುಕೊಂಡು ಪರಾರಿಯಾಗಿರುವ ಘಟನೆ ಬಹಿರಂಗಗೊಂಡಿದೆ. ವೈಯಾಲಿಕಾವಲ್ ನಿವಾಸಿ ವೆಂಕಟಕೃಷ್ಣಯ್ಯ ಎಂಬವರು ಇತ್ತೀಚೆಗೆ ಖಾಸಗಿ ಹೋಟೆಲ್ ಬಳಿ ಮಾಲೀಕರನ್ನು ಡ್ರಾಪ್ ಮಾಡಿ ರಸ್ತೆ

ರಾಜ್ಯದಲ್ಲಿ ಅಕ್ರಮ ಶಾಲೆಗಳಿಗೆ ಸಕ್ರಮ ಅವಕಾಶ

ಬೆಂಗಳೂರು: ರಾಜ್ಯದಲ್ಲಿ ಅನಧಿಕೃತವಾಗಿ ನಡೆಯುತ್ತಿರುವ ಖಾಸಗಿ ಶಾಲೆಗಳನ್ನು ಸಕ್ರಮಗೊಳಿಸಲು ಸರ್ಕಾರವು ಅವಕಾಶ ಕಲ್ಪಿಸಿದೆ. 2023-24 ಮತ್ತು ಅದಕ್ಕೂ ಹಿಂದಿನ ವರ್ಷಗಳಲ್ಲಿ ಮಾನ್ಯತೆಯೇ ಇಲ್ಲದೆ ಅಥವಾ ಮಾನ್ಯತೆ ನವೀಕರಣ ಮಾಡಿಕೊಳ್ಳದೆ ನಡೆಯುತ್ತಿರುವ ಖಾಸಗಿ ಶಾಲೆಗಳು ಬಾಕಿ ಇರುವ ಹಿಂದಿನ ಎಲ್ಲ ವರ್ಷಗಳಿಗೆ ಮತ್ತೆ

ಕಸ್ತೂರಿ ರಂಗನ್ ನಿಧನದಿಂದ ಅಪಾರ ಜ್ಞಾನ ಸಂಪತ್ತು ಮರೆಯಾದತಾಂಗಿದೆ: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: “ಖ್ಯಾತ ವಿಜ್ಞಾನಿ ಡಾ. ಕಸ್ತೂರಿ ರಂಗನ್ ಅವರ ನಿಧನದಿಂದ ಅಪಾರ ಜ್ಞಾನ ಸಂಪತ್ತನ್ನು ಕಳೆದುಕೊಂಡಿದ್ದೇವೆ. ಇವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಬೇಡಿಕೊಳ್ಳುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕಸ್ತೂರಿ ರಂಗನ್ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ

ಇಸ್ರೋದ ಮಾಜಿ ಅಧ್ಯಕ್ಷ ಕೆ. ಕಸ್ತೂರಿರಂಗನ್ ನಿಧನ

ಇಸ್ರೋದ ಮಾಜಿ ಅಧ್ಯಕ್ಷ ಕೃಷ್ಣಸ್ವಾಮಿ ಕಸ್ತೂರಿರಂಗನ್ ಶುಕ್ರವಾರ ಬೆಂಗಳೂರಿನಲ್ಲಿ ನಿಧನರಾದರು. ಡಾ. ಕೆ. ಕಸ್ತೂರಿರಂಗನ್ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಅಧ್ಯಕ್ಷರಾಗಿ, ಬಾಹ್ಯಾಕಾಶ ಆಯೋಗದ ಅಧ್ಯಕ್ಷರಾಗಿ ಮತ್ತು ಭಾರತ ಸರ್ಕಾರದ ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿಯಾಗಿ 9 ವರ್ಷಗಳಿಗೂ ಹೆಚ್ಚು ಕಾಲ ಭಾರತೀಯ

ಓಂ ಪ್ರಕಾಶ್ ಹತ್ಯೆ: ಮಗಳ ವಿಚಾರಣೆ, ಪ್ರಕರಣ ಸಿಸಿಬಿಗೆ

ಮಾಜಿ ಡಿಜಿ ಹಾಗೂ ಐಜಿಪಿ ಓಂ ಪ್ರಕಾಶ್ ಕೊಲೆ ಪ್ರಕರಣ ಸಂಬಂಧ ಅವರ ಪತ್ನಿ ಪಲ್ಲವಿ ಮತ್ತು ಮಗಳು ಕೃತಿಯನ್ನು ಹೆಚ್​ಎಸ್​ಆರ್ ಲೇಔಟ್ ಪೊಲೀಸರು ಅದೇ ದಿನ ವಶಕ್ಕೆ ಪಡೆದುಕೊಂಡಿದ್ದರು. ವಿಚಾರಣೆ ಬಳಿಕ ಪಲ್ಲವಿಯನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಮಗಳು ಕೃತಿಯ

ಬೆಂಗಳೂರಿನಲ್ಲಿ ತನ್ನ ಹೊಸ ಬಿರ್ಲಾ ಓಪಸ್ ಪೇಂಟ್ ಸ್ಟುಡಿಯೊ ಪ್ರಾರಂಭ

ಏಪ್ರಿಲ್ 22, 2025, ಬೆಂಗಳೂರು: ಆದಿತ್ಯ ಬಿರ್ಲಾ ಗ್ರೂಪ್ ಅಡಿಯಲ್ಲಿ ಗ್ರಾಸಿಂ ಇಂಡಸ್ಟ್ರೀಸ್ ಭಾಗವಾಗಿರುವ ಬಿರ್ಲಾ ಓಪಸ್ ಪೇಂಟ್ಸ್ ಇಂದು ಬೆಂಗಳೂರಿನಲ್ಲಿ ತನ್ನ ಹೊಸ ಬಿರ್ಲಾ ಓಪಸ್ ಪೇಂಟ್ ಸ್ಟುಡಿಯೊ (ಕಂಪನಿ ಮಾಲೀಕತ್ವದ ಮತ್ತು ಕಂಪನಿ ನಿರ್ವಹಣೆಯ ಎಕ್ಸ್ಪೀರಿಯೆನ್ಸ್ ಸ್ಟೋರ್) ಪ್ರಾರಂಭಿಸಿದೆ.

ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ ಮಂಜುನಾಥ್ ಕುಟುಂಬಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಸಾಂತ್ವನ

ಬೆಂಗಳೂರು: ಜಮ್ಮು ಕಾಶ್ಮೀರದ ಪಹಲ್ಗಾಮ್ ಜಿಲ್ಲೆಯಲ್ಲಿ ಮಂಗಳವಾರ ನಡೆದ ಭಯೋತ್ಪಾದಕ ದಾಳಿಯಲ್ಲಿ ಹತ್ಯೆಯಾದ ಶಿವಮೊಗ್ಗದ ನಿವಾಸಿ ಮಂಜುನಾಥ್ ಅವರ ಕುಟುಂಬ ಸದಸ್ಯರಿಗೆ ದೂರವಾಣಿ ಕರೆ ಮಾಡಿ ಡಿಸಿಎಂ ಡಿ.ಕೆ. ಶಿವಕುಮಾರ್ ಸಾಂತ್ವನ ಹೇಳಿದರು. “ಮಂಜುನಾಥ್ ಅವರ ಭಾವಮೈದ ಡಾ. ರವಿಕಿರಣ್ ಅವರನ್ನು ಬುಧವಾರ

ಜಾಹೀರಾತು ನೋಡಿ ಆನ್​​ಲೈನ್​ನಲ್ಲಿ ಸೀರೆ ಬುಕ್: ಬೆಂಗಳೂರು ಐಎಎಸ್ ಅಧಿಕಾರಿಗೆ ವಂಚನೆ

ಯುಟ್ಯೂಬ್ ಚಾನಲ್​​ವೊಂದರಲ್ಲಿ ಬಂದ ಜಾಹೀರಾತು ನೋಡಿ ಆನ್​​ಲೈನ್​ನಲ್ಲಿ ಸೀರೆ ಬುಕ್ ಮಾಡಿದ್ದ ಮಹಿಳಾ ಐಎಎಸ್ ಅಧಿಕಾರಿಯೊಬ್ಬರು ವಂಚನೆಗೊಳಗಾಗಿ ಪೊಲೀಸ್‌ಗೆ ದೂರು ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಜಾಹೀರಾತು ನೋಡಿ ವಸ್ತುಗಳನ್ನು ಕೊಂಡುಕೊಳ್ಳುವ ಮುನ್ನ ಎಚ್ಚರ ವಹಿಸುವಂತೆ ಸಕಾಲ ಮಿಷನ್ ನಿರ್ದೇಶಕಿ ಪಲ್ಲವಿ

ಕೆರೆ ಒತ್ತುವರಿ ಮುಲಾಜಿಲ್ಲದೆ ತೆರವುಗೊಳಿಸಿ: ಸಿಎಂ ಸೂಚನೆ

ಬೆಂಗಳೂರು: ಖಾಸಗಿಯವರಿಂದ ಒತ್ತುವರಿಯಾಗಿರುವ ಕೆರೆ ಪ್ರದೇಶವನ್ನು ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಮಂಗಳವಾರ ನಡೆದ ಕರ್ನಾಟಕ ಕೆರೆ ಸಂರಕ್ಷಣಾ ಅಭಿವೃದ್ಧಿ ಪ್ರಾಧಿಕಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ವಿವಿಧ ಇಲಾಖಾವಾರು