ಬೆಂಗಳೂರು
ಬಾಣಸವಾಡಿಯಲ್ಲಿ ಪತಿಯಿಂದಲೇ ಮಹಿಳೆಯ ಕೊಲೆ
ಬೆಂಗಳೂರಿನ ಬಾಣಸವಾಡಿಯಲ್ಲಿ ಮಹಿಳೆಯೊಬ್ಬರನ್ನು ಪತಿಯೇ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಡೆಯಿತು. ಪತಿ ರಮೇಶ್ ಕೊಲೆ ಆರೋಪಿ, ಕಲೈವಾಣಿ ಕೊಲೆಯಾಗಿರುವ ಮಹಿಳೆ. ಇಬ್ಬರೂ ಕೆಲವು ವರ್ಷಗಳ ಹಿಂದೆ ಪರಸ್ಪರ ಎರಡನೇ ವಿವಾಹವಾಗಿದ್ದರು. ಮರಗೆಲಸ ಮಾಡಿಕೊಂಡಿದ್ದ ಆರೋಪಿ ಉಳಿಯಿಂದ ಹೊಡೆದು ಹತ್ಯೆ ಮಾಡಿದ್ದಾನೆ. ಆರೋಪಿ ರಮೇಶ್‌ಗೆ ಈ ಮಹಿಳೆಯನ್ನು ಮದುವೆಯಾಗುವಾಗಲೇ ಇಬ್ಬರು ಮಕ್ಕಳಿದ್ದರು. ಮಕ್ಕಳ ವಿಷಯವಾಗಿ ಒಂದು ವರ್ಷದಿಂದ ಇಬ್ಬರ ನಡುವೆ ಗಲಾಟೆಯಿತ್ತು ಎನ್ನಲಾಗಿದೆ. ಗಲಾಟೆ ಜೋರಾಗಿ ಪತ್ನಿಯನ್ನು ಕೊಲೆ ಮಾಡಿದ ಆರೋಪಿ,
ಬೆಂಗಳೂರು: ಪ್ರತ್ಯೇಕ ಅಪಘಾತ ಮೂವರ ಸಾವು
ಬೆಂಗಳೂರು: ನೆಲಮಂಗಲ ಹಾಗೂ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರತ್ಯೇಕ ಮೂರು ರಸ್ತೆ ಅಪಘಾತಗಳಲ್ಲಿ ಇಬ್ಬರು ಪಾದಚಾರಿಯರು ಸೇರಿ ಮೂವರು ಮೃತಪಟ್ಟಿದ್ದಾರೆ. ನೆಲಮಂಗಲ ಬಳಿಯ ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪಾದಚಾರಿ ಅಶೋಕ್ (27)
ಗ್ರೇಟರ್ ಅಲ್ಲ, ಕ್ವಾರ್ಟರ್ ಬೆಂಗಳೂರು: ಆರ್.ಅಶೋಕ
ಬೆಂಗಳೂರು: ಕಾಂಗ್ರೆಸ್‌ನಲ್ಲಿ ಒಬ್ಬರು ಯುದ್ಧ ಬೇಕು ಎಂದರೆ, ಮತ್ತೊಬ್ಬರು ಶಾಂತಿ ಬೇಕು ಎನ್ನುತ್ತಾರೆ. ಎಐಸಿಸಿಯಲ್ಲಿ ಈ ಬಗ್ಗೆ ಸರಿಯಾದ ನಿಲುವು ಪ್ರಕಟಿಸಲಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಆಡಳಿತದಲ್ಲಿದ್ದಾಗ ಅಮೆರಿಕದ ಬಳಿ ಹೋಗಿ ಭಿಕ್ಷೆ ಬೇಡಿದ್ದನ್ನು
ಬೃಹತ್ ತ್ರಿವರ್ಣ ಧ್ವಜದಡಿ ಒಗ್ಗೂಡಿದ ಜನತೆ
ಬೆಂಗಳೂರು: ನಗರದಲ್ಲಿ ಇಂದು ನಡೆದ ತಿರಂಗ ಯಾತ್ರೆಯು ವೀರಸೇನಾನಿಗಳಿಗೆ ಧನ್ಯವಾದವನ್ನು ಸಲ್ಲಿಸಿತು. ನಗರದ ಮಲ್ಲೇಶ್ವರ ಮಂತ್ರಿಮಾಲ್‍ನ ಸಂಪಿಗೆ ರಸ್ತೆಯ ಸಿರೂರು ಆಟದ ಮೈದಾನದಿಂದ ಮಲ್ಲೇಶ್ವರ 18ನೇ ಕ್ರಾಸ್‍ನವೆರೆಗೂ ನಡೆದ ಯಾತ್ರೆಯಲ್ಲಿ ನೂರಾರು ನಾಯಕರು, ಬೆಂಗಳೂರಿನ ನಾಗರೀಕರು, ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಮತ್ತು ಮಹಿಳೆಯರು
ಗ್ರೇಟರ್ ಬೆಂಗಳೂರಿನಲ್ಲಿ ಕನಿಷ್ಠ ಮೂರು ಪಾಲಿಕೆ ರಚನೆ
ಇನ್ನು ಮುಂದೆ ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಆಗಲಿದೆ. ಗ್ರೇಟರ್ ಬೆಂಗಳೂರು ಪ್ರದೇಶದಲ್ಲಿ ಕನಿಷ್ಠ ಮೂರು ಪಾಲಿಕೆ ರಚನೆಯಾಗುವ ಸಾಧ್ಯತೆಯಿದೆ. ರಾಜ್ಯದ ಮುಖ್ಯಮಂತ್ರಿಗಳು ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದು, ಮುಂದಿನ ದಿನಗಳಲ್ಲಿ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು
ಬಿಬಿಎಂಪಿ ಇಂದಿನಿಂದ ಗ್ರೇಟರ್ ಬೆಂಗಳೂರು: ಆದೇಶ ಜಾರಿ
ಬಿಬಿಎಂಪಿಯಾಗಿದ್ದ ಬೆಂಗಳೂರನ್ನು ಗ್ರೇಟರ್ ಬೆಂಗಳೂರನ್ನಾಗಿ ಪರಿವರ್ತನೆ ಮಾಡಿರುವ ಆದೇಶ ಹೊರ ಬಿದ್ದಿದ್ದು, ಆದೇಶದಲ್ಲಿ ಗುರುವಾರ (ಇಂದು)ದಿಂದಲೇ ಗ್ರೇಟರ್ ಬೆಂಗಳೂರು (ಜಿಬಿಎ)ಆಡಳಿತ ಜಾರಿಗೆ ಬರುತ್ತಿದೆ . ನಗರ ಪಾಲಿಕೆ, ಮಹಾನಗರ ಪಾಲಿಕೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಾಗಿದ್ದ ಬೆಂಗಳೂರು ಗುರುವಾರದಿಂದ ಗ್ರೇಟರ್ ಬೆಂಗಳೂರಾಗುತ್ತಿದೆ.
ಡಿಸಿಎಂ ನಿರ್ದೇಶನದಂತೆ ಪರಂಪರೆ ಮುಂದುವರಿಯುವ ಕಾರ್ಯಕ್ರಮವಾಗಿ ಕಾವೇರಿ ಆರತಿ: ಡಾ.ವಿ.ರಾಮ್ ಪ್ರಸಾತ್ ಮನೋಹರ್
ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಅವರ ನಿರ್ದೇಶನದಂತೆ ಕಾಶಿಯಲ್ಲಿ ನಡೆಯುವ ಗಂಗಾ ಆರತಿಯಂತೆ ಮಂಡ್ಯ ಜಿಲ್ಲೆಯ KRS ನಲ್ಲಿ ಕಾವೇರಿ ಆರತಿಯನ್ನು ಶಾಶ್ವತವಾಗಿ ಮುಂದುವರಿಸುವುದರ ಜತೆಗೆ ಅದನ್ನು ಧಾರ್ಮಿಕ, ಸಾಂಸ್ಕೃತಿಕ ಮತ್ತು ಪ್ರವಾಸೋದ್ಯಮ ಕಾರ್ಯಕ್ರಮವಾಗಿ ಆಯೋಜಿಸಲು ನಿರ್ಧರಿಸಲಾಗಿದೆ. ಕಾವೇರಿ ಆರತಿ ಕುರಿತಂತೆ
ಬ್ಯಾಲಾಳು ಇಸ್ರೋ ಕೇಂದ್ರಕ್ಕೆ ಪೊಲೀಸ್ ಸರ್ಪಗಾವಲು
ಬೆಂಗಳೂರು: ಪಾಕಿಸ್ತಾನದ ಮೇಲೆ ದಾಳಿ ನಡೆಸಿ, ಉಗ್ರರ ನೆಲೆಗಳನ್ನು ಧ್ವಂಸ ಮಾಡುವಲ್ಲಿ ಭಾರತೀಯ ಸೇನೆಗೆ ನೆರವು ನೀಡಿದ್ದ ಭಾರತೀಯ ಬಾಹ್ಯಾಕಾಶ ಕೇಂದ್ರ (ಇಸ್ರೋ)ದ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ನಗರದ ಹೊರವಲಯದ ತಾವರೆಕೆರೆ ಬಳಿಯ ಬ್ಯಾಲಾಳುವಿನ 120 ಎಕರೆ ಪ್ರದೇಶದಲ್ಲಿರುವ ಇಸ್ರೋದ ಭಾರತೀಯ
ಬೆಂಗಳೂರು ಸೇರಿದಂತೆ ದೇಶದ 13 ನಗರಗಳಲ್ಲಿ ಇ-ಪಾಸ್‌ಪೋರ್ಟ್
ದೇಶಾದ್ಯಂತ ಚಿಪ್ ಆಧಾರಿತ ಇ-ಪಾಸ್‌ಪೋರ್ಟ್‌ಗಳನ್ನು ನೀಡಲು ಆರಂಭಿಸಲಾಗಿದೆ. ಕಳೆದ ವರ್ಷ ಪ್ರಾಯೋಗಿಕವಾಗಿ ಜಾರಿಗೊಂಡಿದ್ದ ಈ ಯೋಜನೆ ಈಗ ದೇಶದ 13 ಪ್ರಮುಖ ನಗರಗಳಲ್ಲಿ ಲಭ್ಯವಿದೆ. ಪಾಸ್‌ಪೋರ್ಟ್ ಸೇವಾ ಕಾರ್ಯಕ್ರಮಡಿ ಜಾರಿಗೊಳಿಸಲಾದ ಈ ವ್ಯವಸ್ಥೆಯು ಭದ್ರತೆಯನ್ನು ದ್ವಿಗುಣಗೊಳಿಸುವು ದರ ಜೊತೆಗೆ ಅಂತರರಾಷ್ಟ್ರೀಯ ಪ್ರಯಾಣವನ್ನು
ಆಪರೇಷನ್ ಸಿಂಧೂರ ವಿಜಯೋತ್ಸವದಲ್ಲಿ ಪಾಕ್ ಪರ ಘೋಷಣೆ: ಟೆಕ್ಕಿ ಜೈಲುಪಾಲು
ಉಗ್ರರ ವಿರುದ್ಧ ಭಾರತದ ವಾಯುಪಡೆಯು ನಡೆಸಿದ ʻಆಪರೇಷನ್ ಸಿಂಧೂರʼ ವಿಜಯೋತ್ಸವ ಆಚರಣೆ ವೇಳೆ ಬೆಂಗಳೂರಿನ ವೈಟ್ ಫೀಲ್ಡ್‌ನ ಪ್ರಶಾಂತ್ ಲೇಔಟ್‌ನಲ್ಲಿ ಪಾಕ್ ಪರ ಘೋಷಣೆ ಕೂಗಿದ ಆರೋಪದಡಿ ಟೆಕ್ಕಿಯೊಬ್ಬನನ್ನು ಪೊಲೀಸರು ಬಂಧಿಸಿರುವುದು ಐದು ದಿನಗಳ ಬಳಿಕ ಬಹಿರಂಗಗೊಂಡಿದೆ. ಶುಭಾಂಶು ಶುಕ್ಲಾ (26)