Menu

ಕೋರಮಂಗಲದಲ್ಲಿ ಬಿಎಂಟಿಸಿ ಬಸ್‌ಗೆ ಯುವಕ ಬಲಿ

ಬೆಂಗಳೂರಿನ ಕೋರಮಂಗಲದಲ್ಲಿ ಶುಕ್ರವಾರ ರಾತ್ರಿ ನಡೆದ ನಡೆದ ಬಿಎಂಟಿಸಿ ಬಸ್‌ ಅಪಘಾತದಲ್ಲಿ ಡೆಲಿವರಿ ಬಾಯ್ ಸ್ಥಳದಲ್ಲೇ ಮೃತಪಟ್ಟಿದ್ದು, ಯಶವಂತಪುರ ಸರ್ಕಲ್‌ನಲ್ಲಿ ಶನಿವಾರ ನಡೆದ ಅಪಘಾತದಲ್ಲಿ ಮಹಿಳೆ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಕೋರಮಂಗಲದ ನೆಕ್ಸಸ್ ಮಾಲ್ ಬಳಿ ಅಪಘಾತ ಸಂಭವಿಸಿದ್ದು, ಆಂಧ್ರಪ್ರದೇಶ ಮೂಲದ ಯುವಕ ಡೆಲಿವರಿ ಬಾಯ್ ಬೈಕ್‌ನಲ್ಲಿ ಹೋಗುತ್ತಿದ್ದಾಗ ಸಂಚರಿಸುತ್ತಿರುವಾಗ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ಯುವಕನ ತಲೆ ಮತ್ತು ದೇಹದ ವಿವಿಧ ಭಾಗಗಳಿಗೆ ಗಂಭೀರ ಗಾಯಗಳಾಗಿ ಸ್ಥಳದಲ್ಲೇ

ಬೆಂಗಳೂರಿನಲ್ಲಿ ಸ್ನೇಹಿತನ ಮನೆ ದರೋಡೆ ಮಾಡಿಸಿದ್ದ ಮೇಸ್ತ್ರಿ ಅರೆಸ್ಟ್‌

ಸ್ನೇಹಿತನ ಮನೆಯಲ್ಲೇ ಚಿನ್ನಾಬರಣ ಮತ್ತು ಹಣ ದರೋಡೆ ಮಾಡಿಸಿದ್ದ ಮೇಸ್ತ್ರಿಯೊಬ್ಬನನ್ನು ಚಿಕ್ಕಜಾಲದ ಹುಣಸಮಾರನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಗುರುಪ್ರಸಾದ್ ಬಂಧಿತ ಆರೋಪಿ. ತನ್ನ ಬಳಿ ಕೆಲಸ ಮಾಡಿಕೊಂಡಿದ್ದ ಇಬ್ಬರಿಗೆ ಸ್ನೇಹಿತ ಸುದರ್ಶನ್‌ ಎಂಬಾತನ ಮನೆ ಕಳವು ಮಾಡಲು ತರಬೇತಿ ನೀಡಿದ್ದ. ಏಪ್ರಿಲ್ 18ರಂದು

ಬೇರೆಯವರ ಹೆಸರಲ್ಲಿ ಬುಕ್‌ ಆಗಿದ್ದ ಲಾಡ್ಜ್‌ ರೂಂಗೆ ಬಂದಿದ್ದಾತ ಶವವಾಗಿ ಪತ್ತೆ

ಬೆಂಗಳೂರಿನ ಮಡಿವಾಳದ ಮಾರುತಿ ನಗರದಲ್ಲಿರುವ ಖಾಸಗಿ ಲಾಡ್ಜ್‌ನಲ್ಲಿ ತಮಿಳುನಾಡಿನ ವ್ಯಕ್ತಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಪುಳಿಯಂಪಟ್ಟಿ ನಿವಾಸಿ ಮುರಳಿ ಅಲಿಯಾಸ್ ಮಧು (38) ಎಂದು ಗುರುತಿಸಲಾಗಿದೆ. ಬುಧವಾರ ರಾತ್ರಿ ಲಾಡ್ಜ್‌ ರೂಂನ ಹಾಸಿಗೆಯ ಮೇಲೆ ಅಸ್ವಸ್ಥ ಸ್ಥಿತಿಯಲ್ಲಿ ಬಿದ್ದುಕೊಂಡು ಮೃತಪಟ್ಟಿದ್ದಾನೆ. ಪ್ರಕರಣದ ತನಿಖೆ

ಏರ್‌ಟೆಲ್‌ ನಿಂದ ಭಾರತದಲ್ಲಿ ಮುಂದಿನ ಹಂತದ 5G ತಂತ್ರಜ್ಞಾನ ಜಾರಿ

ಭಾರತೀಯ ಗ್ರಾಹಕರಿಗೆ ಅತ್ಯಾಧುನಿಕ ಜಾಗತಿಕ 5G ತಂತ್ರಜ್ಞಾನವನ್ನು ನೇರ ಅನುಭವಿಸಲು ಅವಕಾಶ ನೀಡಿದ ಭಾರ್ತಿ ಏರ್‌ಟೆಲ್ ಇದುವರೆಗೆ ಮುಖ್ಯವಾಗಿ ಅಮೆರಿಕಾ, ಯುನೈಟೆಡ್ ಕಿಂಗ್‌ಡಮ್ ಮತ್ತು ಸಿಂಗಾಪುರದಂತಹ ದೂರಸಂಪರ್ಕ ಮಾರುಕಟ್ಟೆಗಳಲ್ಲಿ ಮಾತ್ರ ಕಾಣಿಸಿಕೊಂಡಿದ್ದ ಅತ್ಯಾಧುನಿಕ 5G ತಂತ್ರಜ್ಞಾನ ಸಾಮರ್ಥ್ಯವನ್ನು ಈಗ ಭಾರತೀಯ ಮೊಬೈಲ್

ಜಿಬಿಎ ಚುನಾವಣೆ: ಗಡುವು ಆಗಸ್ಟ್ 31ರವರೆಗೆ ವಿಸ್ತರಿಸಿದ ಸುಪ್ರೀಂಕೋರ್ಟ್‌

ಗ್ರೇಟರ್​​ ಬೆಂಗಳೂರು ಪ್ರಾಧಿಕಾರ ಚುನಾವಣೆ ಸಂಬಂಧ ಸುಪ್ರೀಂಕೋರ್ಟ್ ಜೂನ್​​ 30ರವರೆಗೆ ನೀಡಿದ್ದ ಗಡುವನ್ನು ಆಗಸ್ಟ್ 31ರವರೆಗೆ ವಿಸ್ತರಿಸಿದೆ. ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗದ ಮನವಿಯಂತೆ ಕೋರ್ಟ್ ಈ ಕ್ರಮ ಕೈಗೊಂಡಿದೆ. ಇದೇ ಅಂತಿಮ ಅವಕಾಶ. ಮತ್ತಷ್ಟು ವಿಸ್ತರಣೆ ನೀಡಲಾಗುವುದಿಲ್ಲ

ಆಭರಣ ಖರೀದಿಸುವುದಾಗಿ ಉದ್ಯಮಿಯಿಂದ ಮೂರು ಕೋಟಿ ರೂ. ಮೌಲ್ಯದ ಚಿನ್ನ ದೋಚಿದ ವಂಚಕರು

ಬೆಂಗಳೂರಿನ ಮಲ್ಲೇಶ್ವರಂನ ಸಂಪಿಗೆ ರಸ್ತೆಯಲ್ಲಿ ಹೋಲ್‌ಸೇಲ್ ದರದಲ್ಲಿ ಚಿನ್ನ ಖರೀದಿಸುವುದಾಗಿ ನಂಬಿಸಿ ಮೂರು ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿ ಉದ್ಯಮಿಗೆ ವಂಚಿಸಿರುವ ಘಟನೆ ನಡೆದಿದೆ. ವಂಚಕರು ಒಂದು ಕೆಜಿ 850 ಗ್ರಾಂ ಚಿನ್ನಾಭರಣಗಳೊಂದಿಗೆ ಪರಾರಿಯಾಗಿದ್ದಾರೆ. ನಗರ್ತ ಪೇಟೆಯಲ್ಲಿರುವ ‘ಮೆಹ್ತಾ ಜ್ಯುವೆಲ್ಲರಿ’

ಅಮೆರಿಕದಿಂದ ಜೀವಂತ ಗುಂಡುಗಳನ್ನು ತಂದಿದ್ದಾತ ಬೆಂಗಳೂರಿನಲ್ಲಿ ಅರೆಸ್ಟ್‌

ವಿದೇಶದಿಂದ ಅಕ್ರಮವಾಗಿ ರಿವಾಲ್ವಾರ್‌ನ ಏಳು ಜೀವಂತ ಗುಂಡುಗಳನ್ನು ತಂದಿದ್ದ ಆರೋಪದಡಿ ಅನಿವಾಸಿ ಭಾರತೀಯನೊಬ್ಬನನ್ನು ಬೆಂಗಳೂರು ಜೆ.ಸಿ.ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರ್‌.ಟಿ.ನಗರದ ಮುತ್ತಾವರ್ ಅರ್ಮಾನ್ ಬಂಧಿತ. ಆರೋಪಿಯಿಂದ ರೂಗರ್ ಕಂಪನಿಯ ಏಳು ಜೀವಂತ ಗುಂಡುಗಳ ಮ್ಯಾಗ್ಜಿನ್‌ ಜಪ್ತಿ ಮಾಡಲಾಗಿದೆ. ಸ್ನೇಹಿತನ ಜತೆ

ಮನೆ ಲೀಸ್‌ ಆಫರ್‌ ಮುಂದಿಟ್ಟು ಗ್ರಾಹಕರಿಗೆ 200 ಕೋಟಿ ರೂ. ವಂಚನೆ

ಬೆಂಗಳೂರಿನಲ್ಲಿ ಮನೆ ಲೀಸ್​ಗೆ ನೀಡುವುದಾಗಿ ಗ್ರಾಹಕರಿಗೆ ಭರ್ಜರಿ ಆಫರ್‌ಗಳನ್ನು ನೀಡುವ ಮೂಲಕ ಕಂಪೆನಿಯೊಂದು 200 ಕೋಟಿ ರೂ.ಗೂ ಅಧಿಕ ಹಣ ವಂಚಿಸಿರುವ ಪ್ರಕರಣ ಬಹಿರಂಗವಾಗಿದೆ. ಜಾನ್ಸ್ ಅಸೆಟ್ ಹೆಸರಿನ ಮಿಡಿಯೇಟರ್ ಕಂಪನಿಯು 300ಕ್ಕೂ ಹೆಚ್ಚು ಜನರಿಗೆ ವಂಚಿಸಿದ್ದು, ಮಾಲೀಕ ಪರಾರಿಯಾಗಿದ್ದಾನೆ. ಕಂಪನಿ

ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ನಾಳೆ ಸಂಚಾರ ವ್ಯತ್ಯಯ

ನಾಳೆ ನಮ್ಮ ಮೆಟ್ರೋದ ನೇರಳೆ ಮಾರ್ಗದ ಕೆಲವು ಭಾಗಗಳಲ್ಲಿ ಬೆಳಗ್ಗೆ ಸಂಚಾರ ವ್ಯತ್ಯಯಗೊಳ್ಳಲಿದೆ ಎಂದು ಬಿಎಂಆರ್‌ಸಿಎಲ್‌ ತಿಳಿಸಿದೆ. ಅಗತ್ಯ ನಿರ್ವಹಣಾ ಕಾಮಗಾರಿಗಳ ಹಿನ್ನೆಲೆ ನೇರಳೆ ಮಾರ್ಗದ ಕೆಲವು ಭಾಗಗಳಲ್ಲಿ ಬೆಳಗ್ಗೆ ಎರಡು ಗಂಟೆ ಮೆಟ್ರೋ ಸಂಚಾರ ಸ್ಥಗಿತಗೊಳಿಸಲಾಗುತ್ತಿದೆ. ನಾಡಪ್ರಭು ಕೆಂಪೇಗೌಡ ಮೆಟ್ರೋ

ತಾಯಿಯ ನೋಡಿಕೊಳ್ಳಲಾಗದ ಮಗಳು ಆಸ್ತಿ ವಾಪಸ್‌ ನೀಡಬೇಕು: ಹೈಕೋರ್ಟ್‌ ಚಾಟಿ

ತಾಯಿಯನ್ನು ನೋಡಿಕೊಳ್ಳಲಾಗದ ಮಗಳು ತಾಯಿಯ ಆಸ್ತಿಯನ್ನು ಅವರಿಗೆ ವಾಪಸ್‌ ನೀಡುವಂತೆ ಹಿರಿಯ ನಾಗರಿಕರ ನಿರ್ವಹಣಾ ನ್ಯಾಯಮಂಡಳಿ ಮತ್ತು ಉಪವಿಭಾಗಾಧಿಕಾರಿಗಳು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್‌ ಪುರಸ್ಕರಿಸಿದೆ. ತಾಯಿಯಯನ್ನು ನೋಡಿಕೊಳ್ಳುವ ಕಾನೂನು, ನೈತಿಕ ಮತ್ತು ಸಾಮಾಜಿಕ ಜವಾಬ್ದಾರಿಯಿಂದ ಮಗಳು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿರುವ