Menu

ಹೈಕೋರ್ಟ್‌ ಜಡ್ಜ್‌ಗಳ ವರ್ಗಾವಣೆ ವಿರೋಧಿಸಿ ವಕೀಲರ ಪ್ರತಿಭಟನೆ

ಕರ್ನಾಟಕ ಹೈಕೋರ್ಟ್​ನ ನಾಲ್ವರು ನ್ಯಾಯಮೂರ್ತಿಗಳನ್ನು ವರ್ಗಾವಣೆ ಮಾಡಿರುವ ಸುಪ್ರೀಂ ಕೋರ್ಟ್‌ ಕೊಲಿಜಿಯಂ ಈ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಬೆಂಗಳೂರು ವಕೀಲರ ಸಂಘದ ಸದಸ್ಯರು ಹೈಕೋರ್ಟ್‌ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಹೈಕೋರ್ಟ್‌ನ ಗೋಲ್ಡನ್ ಗೇಟ್ ಮುಂಭಾಗ ಪ್ರತಿಭಟನೆ ನಡೆಸಿದ ವಕೀಲರು, ನ್ಯಾಯಮೂರ್ತಿಗಳನ್ನು ಹಠಾತ್ ವರ್ಗಾವಣೆ ಮಾಡಿರುವುದು ಸರಿಯಾದ ಕ್ರಮವಲ್ಲ. ಕೊಲಿಜಿಯಂ ಮರುಪರಿಶೀಲನೆ ಮಾಡಬೇಕು ಎಂದು ಒತ್ತಾಯಿಸಿದರು. ವಕೀಲರ ಸಂಘದ ಅಧ್ಯಕ್ಷ ವಿವೇಕ್‌ ಸುಬ್ಬಾರೆಡ್ಡಿ ಮಾತನಾಡಿ, ನ್ಯಾಯಮೂರ್ತಿಗಳ ವರ್ಗಾವಣೆಗೆ ಸಂಬಂಧಿಸಿದಂತೆ ಕೊಲಿಜಿಯಂ,

ಮಾಜಿ ಐಜಿಪಿ ಓಂ ಪ್ರಕಾಶ್ ಹತ್ಯೆ: ಪುತ್ರ ಕಾರ್ತಿಕೇಶ್ ದೂರಿನಲ್ಲಿ ಏನಿದೆ?

ಬೆಂಗಳೂರಿನಲ್ಲಿ ಪೊಲೀಸ್ ಇಲಾಖೆಯನ್ನೇ ದಂಗು ಬಡಿಸಿದ ನಿವೃತ್ತ ಡಿಜಿ ಹಾಗೂ ಐಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿ ರುವ ಪೊಲೀಸರು ಓಂ ಪ್ರಕಾಶ್‌ ಪತ್ನಿ ಪಲ್ಲವಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ..ತಾಯಿ ಪಲ್ಲವಿ ಹಾಗೂ ಸಹೋದರಿ ಕೃತಿ ವಿರುದ್ಧ

ಬಹುರಾಷ್ಟ್ರೀಯ ಕಂಪನಿಯಲ್ಲಿ ಕೆಲಸದ ಆಮಿಷವೊಡ್ಡಿ ರಾಮನಗರ ಯುವತಿಗೆ 2.70 ಲಕ್ಷ ರೂ. ವಂಚನೆ

ಬೆಂಗಳೂರಿನ ಪ್ರತಿಷ್ಠಿತ ಬಹುರಾಷ್ಟ್ರೀಯ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ಯುವತಿಯಿಂದ ₹2.70 ಲಕ್ಷ ಪಡೆದು ವಂಚಿಸಿದ ಆರೋಪದಡಿ ಇಬ್ಬರ ವಿರುದ್ಧ ಸಿಸಿಬಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಮನಗರ ಮೂಲದ ಯುವತಿ ನೀಡಿದ ದೂರಿನ ಅನ್ವಯ ಪತ್ನೋಲ್‌ ಕಲಾಂದರ್‌ ಖಾನ್‌ ಮತ್ತು ವೀರೇಶ್‌

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ವಿಮಾನಕ್ಕೆ ಟಿಟಿ ಡಿಕ್ಕಿ

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂಜಿನ್  ಕೆಟ್ಟಿರುವ ಕಾರಣ ಇಂಡಿಗೋ ವಿಮಾನಕ್ಕೆ ಟಿಟಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಹೊಡೆದ ರಭಸಕ್ಕೆ ಟಿಟಿ ವಾಹನ ಜಖಂಗೊಂಡಿದ್ದು, ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ವಿಮಾನ ನಿಲ್ದಾಣ ಒಳಭಾಗದ ಆಲ್ಪಾ ಪಾರ್ಕಿಂಗ್ ಬೇ 71 ರಲ್ಲಿ

ಮಂತ್ರಾಲಯ ಪ್ರವಾಸದಲ್ಲಿ ದೇವನಹಳ್ಳಿಯ ವಿದ್ಯಾರ್ಥಿಗಳಿಬ್ಬರು ತುಂಗಭದ್ರಾ ಪಾಲು

ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ ಬೆಂಗಳೂರಿನ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ರಾಯಚೂರಿನ ಯರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯ ಎಲೆಬಿಚ್ಚಾಲಿ ಗ್ರಾಮದ ಬಳಿ ನಡೆದಿದೆ. ಮಂತ್ರಾಲಯಕ್ಕೆ ಪ್ರವಾಸಕ್ಕೆ ತೆರಳಿದ್ದ ದೇವನಹಳ್ಳಿ ತಾಲೂಕಿನ ಚಿನವಂಡನಹಳ್ಳಿಯ ಮುತ್ತುರಾಜು(23) ಹಾಗೂ ಮದನ್(20) ಮೃತ ವಿದ್ಯಾರ್ಥಿಗಳು. ದೇವನಹಳ್ಳಿಯ

ರಿಕ್ಕಿ ರೈ ಮೇಲೆ ಗುಂಡಿನ ದಾಳಿ: ಮುತ್ತಪ್ಪ ರೈ 2ನೇ ಪತ್ನಿ ಸೇರಿ ನಾಲ್ವರ ವಿರುದ್ಧ ಕೇಸ್‌

ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುತ್ತಪ್ಪ ರೈ ಅವರ 2ನೇ ಪತ್ನಿ ಅನುರಾಧಾ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ರಾಕೇಶ್‌ಮಲ್ಲಿ, 2ನೇ ಪತ್ನಿ ಅನುರಾಧ, ನಿತೇಶ್ ಶೆಟ್ಟಿ, ವೈದ್ಯನಾಥನ್

50 ಕೋಟಿಯ ಶ್ವಾನ ಖರೀದಿಸಿದ ಬೆಂಗಳೂರಿನ ಸತೀಶ್ ಇಡಿ ವಶಕ್ಕೆ

ಬೆಂಗಳೂರು: ಬರೋಬರಿ 50 ಕೋಟಿ ರೂ ನೀಡಿ ವಿಶ್ವದಲ್ಲೇ ದುಬಾರಿಯಾಗಿರುವ ಶ್ವಾನ ನಾಯಿಯೊಂದನ್ನು ಖರೀದಿ ಮಾಡಿದ್ದೇನೆ ಎಂದು ಹೇಳುತ್ತಿದ್ದ ನಗರದ ಶ್ವಾನಪ್ರೇಮಿ ಸತೀಶ್‌ ಅವರ ನಗರದ ಮನೆ ಮೇಲೆ ಗುರುವಾರ ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜೆಪಿ ನಗರ ಮೂರನೇ

ಟಿಸಿಎಸ್ ಕಂಪನಿಗೆ 99 ಪೈಸೆಗೆ 21.6 ಎಕರೆ: ಬೆಂಗಳೂರಿಂದ ಸೆಳೆಯಲು ಆಂಧ್ರ ಸರ್ಕಾರ ತಂತ್ರ

ಆಂಧ್ರಪ್ರದೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಐಟಿ ಕಂಪನಿಗಳನ್ನು ಆಕರ್ಷಿಸಲು ಅಲ್ಲಿನ ಸರ್ಕಾರ ಮುಂದಾಗಿದ್ದು, ಟಾಟಾ ಸಮೂಹದ ಟಿಸಿಎಸ್ ಕಂಪನಿಗೆ ವಿಶಾಖಪಟ್ಟಣದಲ್ಲಿ ಕಚೇರಿ ತೆರೆಯಲು ಕೇವಲ 99 ಪೈಸೆಗೆ 21.6 ಎಕರೆ ಭೂಮಿಯನ್ನು ನೀಡಿದೆ. ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಈ

ಬೆಂಗಳೂರಿನಲ್ಲಿ ಪೆಡ್ಲರ್‌ಗಳ ಬಂಧನ: ಎರಡು ಕೋಟಿ ರೂ. ಮೌಲ್ಯದ ಡ್ರಗ್ಸ್‌ ವಶ

ಬೆಂಗಳೂರಿನಲ್ಲಿ ಮಾದಕ ವಸ್ತು ಮಾರಾಟ ಜಾಲವನ್ನು ಬೇಧಿಸಿರುವ ಸಿಸಿಬಿ ತಂಡವು, ಸಿವಿಲ್ ಎಂಜಿನಿಯರ್ ಸೇರಿದಂತೆ ಇಬ್ಬರನ್ನು ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿಸಿ 6 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದೆ. ಜಿಗಣಿ ನಿವಾಸಿ ಕ್ರಿಸ್ಟೋಫರ್‌ ಹಾಗೂ ಬೊಮ್ಮಸಂದ್ರದ ನಿವಾಸಿ ಜಿಜೋ ಪ್ರಸಾದ್

ಹಿರಿಯ ಪತ್ರಕರ್ತ ಶ್ಯಾಮ್ ಸುಂದರ್ ಇನ್ನಿಲ್ಲ

ಬೆಂಗಳೂರು: ಕನ್ನಡ ಮಾಧ್ಯಮದ ಡಿಜಿಟಲ್ ಮಾಧ್ಯಮದ ಹಿರಿಯ ಪತ್ರಕರ್ತ ಎಸ್‌.ಕೆ. ಶ್ಯಾಮ್‌ಸುಂದರ್‌ ಅನಾರೋಗ್ಯದಿಂದಾಗಿ ನಿಧನರಾಗಿದ್ದಾರೆ. ಕೆಲ ದಿನಗಳ ಹಿಂದೆ ಅನಾರೋಗ್ಯಕ್ಕೆ ತುತ್ತಾಗಿದ್ದ ಶ್ಯಾಮ್‌ಸುಂದರ್‌ ಅವರನ್ನು ವಿದ್ಯಾಪೀಠ ಸರ್ಕಲ್‌ನಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಆದರೆ ಸೋಮವಾರ ರಾತ್ರಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಸುವರ್ಣ ನ್ಯೂಸ್,