Menu

ಮೇಕೆದಾಟು ವಿಚಾರ ನ್ಯಾಯಾಲಯದಲ್ಲಿ ನ್ಯಾಯ ಸಿಗುವ ವಿಶ್ವಾಸವಿದೆ: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಮೇಕೆದಾಟು ವಿಚಾರವಾಗಿ ನಾವು ನ್ಯಾಯಾಲಯದ ಮೊರೆ ಹೋಗಿದ್ದು, ನ್ಯಾಯ ಸಿಗುವ ವಿಶ್ವಾಸವಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಬೆಂಗಳೂರಿನ ಕುಮಾರಪಾರ್ಕ್ ನಲ್ಲಿರುವ ಸರಕಾರಿ ಗೃಹ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಜಲಸಂಪನ್ಮೂಲ ಸಚಿವರೂ ಆಗಿರುವ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. ಮೇಕೆದಾಟು ಯೋಜನೆಗೆ ಅವಕಾಶ ನೀಡುವುದಿಲ್ಲ ಎಂಬ ತಮಿಳುನಾಡು ಸಚಿವ ದೊರೈ ಮುರುಗನ್ ಹೇಳಿಕೆ ಬಗ್ಗೆ ಕೇಳಿದಾಗ, “ನಮ್ಮ ನೀರು ನಮ್ಮ ಹಕ್ಕು. ಅವರು ಅವರದೇ ಆದ

ಸ್ಮಾರ್ಟ್ ಮೀಟರ್ ಟೆಂಡರ್ ನಲ್ಲಿ 15,568 ಕೋಟಿ ರೂ. ಅವ್ಯವಹಾರ: ಡಾ.ಸಿಎನ್ ಅಶ್ವತ್ಥನಾರಾಯಣ್

ಬೆಂಗಳೂರು: ಬೆಸ್ಕಾಂ ಮತ್ತು ಇತರ ಎಸ್ಕಾಂಗಳ ಸ್ಮಾರ್ಟ್ ಮೀಟರ್ ಟೆಂಡರ್‍ನಲ್ಲಿ ಸುಮಾರು 15,568 ಕೋಟಿ ರೂಪಾಯಿಯ ಬೃಹತ್ ಪ್ರಮಾಣದ ಅವ್ಯವಹಾರ ನಡೆದಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ.ಸಿ.ಎನ್. ಅಶ್ವತ್ಥನಾರಾಯಣ್ ಆರೋಪಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ

ಒಂದೇ ದಿನ 17 ಬಿರ್ಲಾ ಒಪಸ್ ಪೇಂಟ್ಸ್ ಹೊಸ ಫ್ರಾಂಚೈಸಿ ಆರಂಭ

ಬೆಂಗಳೂರು: ಆದಿತ್ಯ ಬಿರ್ಲಾ ಸಮೂಹದ ಅಡಿಯಲ್ಲಿ ಗ್ರಾಸಿಂ ಇಂಡಸ್ಟ್ರೀಸ್ ಭಾಗವಾಗಿರುವ ಬಿರ್ಲಾ ಒಪಸ್ ಪೇಂಟ್ಸ್ ಕರ್ನಾಟಕದಲ್ಲಿ ಒಂದು ದಿನದಲ್ಲಿ 17 ಹೊಸ ಫ್ರಾಂಚೈಸಿ ಮಳಿಗೆಗಳನ್ನು ಉದ್ಘಾಟಿಸುವ ಮೂಲಕ ಪ್ರಮುಖ ಮೈಲಿಗಲ್ಲು ಸಾಧಿಸಿದ್ದು ಇದರಿಂದ ರಾಜ್ಯದಾದ್ಯಂತ ಒಟ್ಟು 45 ಫ್ರಾಂಚೈಸಿ ಮಳಿಗೆಗಳಾಗಿವೆ. ರಾಜ್ಯದಲ್ಲಿ

ರಾಜ್ಯದಲ್ಲಿ ಹೆಚ್ಚುತ್ತಿದೆ ವೈರಲ್‌ ಜ್ವರ ಪ್ರಕರಣಗಳು

ಬೇಸಿಗೆ ಮಧ್ಯೆ ಮಳೆಯೊಂದಿಗೆ ವಾತಾವರಣ ಬದಲಾಗುತ್ತಿದ್ದಂತೆ ಬೆಂಗಳೂರು ನಗರ ಒಳಗೊಂಡಂತೆ ರಾಜ್ಯದಲ್ಲಿ ವೈರಲ್‌ ಜ್ವರ ಕೇಸ್‌ಗಳು ಹೆಚ್ಚುತ್ತಿವೆ.  ರಾಜ್ಯ ಆರೋಗ್ಯ ಮತ್ತು ಕಲ್ಯಾಣ ಇಲಾಖೆಯ ನಿಗಾ ಘಟಕವು ಈ ಸಂಬಂಧ ಮಾಹಿತಿ ಪ್ರಕಟಿಸಿ ಅಂಕಿ ಅಂಶಗಳನ್ನು ನೀಡಿದೆ. ಮಾರ್ಚ್ ಆರಂಭದಲ್ಲಿ ಸಂಪೂರ್ಣ

ಬೀದಿ ಬದಿ ವ್ಯಾಪಾರಿಗಳಿಗೆ ತಳ್ಳುವಗಾಡಿ ವಿತರಣೆ: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಮನೆ ಬಾಗಿಲಿಗೆ ಉಚಿತವಾಗಿ ಖಾತೆ ವಿತರಣೆ, ಬೀದಿಬದಿ ವ್ಯಾಪಾರಿಗಳಿಗೆ ತಳ್ಳುವ ಗಾಡಿ ವಿತರಣೆ, ಅಕ್ರಮ ನಿರ್ಮಾಣಗಳ ಪತ್ತೆಗೆ ‘ಎಐʼ ತಂತ್ರಜ್ಞಾನದ ಬಳಕೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. 2025- 26 ನೇ ಸಾಲಿನ ಬಿಬಿಎಂಪಿ ಬಜೆಟ್ ಕುರಿತು

ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ವಿನಯ್ ಗೌಡ, ರಜತ್‌ ವಿರುದ್ಧ ಎಫ್‌ಐಆರ್‌

ಬಿಗ್ ಬಾಸ್ ಸೀಸನ್ ೧೧ರ ಸ್ಪರ್ಧಿಗಳಾದ ವಿನಯ್ ಗೌಡ ಮತ್ತು ರಜತ್ ವಿರುದ್ಧ ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ವಿನಯ್ ಗೌಡ ಹಾಗೂ ರಜತ್ ಇತ್ತೀಚೆಗೆ ಲಾಂಗ್ ಹಿಡಿದು ರೀಲ್ಸ್ ಮಾಡಿ ವೀಡಿಯೊವನ್ನು ಇನ್ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿದ್ದು,

ಬಿಜೆಪಿ, ಜೆಡಿಎಸ್ ಪಕ್ಷಗಳು ಟೂರಿಂಗ್ ಟಾಕೀಸ್ ನಂತೆ ದೇಶ ಬಿಟ್ಟು ತೊಲಗಲಿ: ಸಚಿವ ಬೈರತಿ ಸುರೇಶ್

ಬೆಂಗಳೂರು:  ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ ಯುಗಾದಿ ಮತ್ತು ರಂಜಾನ್ ಹಬ್ಬದ ಪ್ರಯುಕ್ತ 30000ಸಾವಿರ ಜನರಿಗೆ ದಿನಸಿ ಕಿಟ್ ಗಳನ್ನು ಸಚಿವ ಬೈರತಿ ಸುರೇಶ್, ಬಿಬಿಎಂಪಿ ವಿರೋಧ ಪಕ್ಷದ ಮಾಜಿ ನಾಯಕ, ಬೆಂಗಳೂರು ನಗರ ಉತ್ತರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಅಬ್ದುಲ್ ವಾಜಿದ್

ಎಚ್ಚರಿಕೆ, ಇದು ಕ್ಯಾಬ್, ಓಯೋ ಅಲ್ಲ; ಪ್ರೇಮಿಗಳಿಗೆ ಬೆಂಗಳೂರು ಚಾಲಕನ ವಾರ್ನಿಂಗ್‌ ವೈರಲ್‌

ಕೆಲವೊಂದು ಪ್ರೇಮಿಗಳು ಲೋಕದ ಪರಿವೆ ಇಲ್ಲದೆ ಕಿಸ್ಸಿಂಗ್-ರೊಮ್ಯಾನ್ಸ್‌ ಎಂದು ಅತಿರೇಕವಾಗಿ ವರ್ತಿಸುತ್ತಿರುವುದರಿಂದ ಬೇಸತ್ತ ಬೆಂಗಳೂರಿನ ಕ್ಯಾಬ್‌ ಚಾಲಕರೊಬ್ಬರು ಕೈಗೊಂಡ ಕ್ರಮ ವೈರಲ್‌ ಆಗ್ತಿದೆ. ಕ್ಯಾಬ್‌ ಚಾಲಕ ” ನೋ ರೊಮ್ಯಾನ್ಸ್, ಇದು ಕ್ಯಾಬ್‌ ಓಯೋ ಅಲ್ಲ, ನಡುವೆ ಅಂತರವಿರಲಿ,” ಎಂದು ತನ್ನ

ಬೆಂಗಳೂರಿನಲ್ಲಿ ರಿಕವರಿ ಚಿನ್ನ ಗುಳುಂ ಮಾಡಿದ ಪಿಎಸ್‌ಐಯಿಂದ ವ್ಯಾಪಾರಿಗೂ 950 ಗ್ರಾಂ ಚಿನ್ನ ವಂಚನೆ

ಪ್ರಕರಣವೊಂದರಲ್ಲಿ ವಶಪಡಿಸಿಕೊಂಡ ಚಿನ್ನವನ್ನು ದುರ್ಬಳಕೆ ಮಾಡಿಕೊಂಡು, ಬಳಿಕ ಚಿನ್ನದ ಅಂಗಡಿ ಮಾಲೀಕನ ಬಳಿ ರಿಕವರಿ ಚಿನ್ನ ತೋರಿಸಬೇಕಿದ್ದು ಫೋಟೋ ತೆಗೆಸಿ ವಾಪಸ್ ಕೊಡುತ್ತೇನೆ ಎಂದು ಹೇಳಿ 950 ಗ್ರಾಂ ಚಿನ್ನದ ಗಟ್ಟಿಯನ್ನು ಪಡೆದುಕೊಂಡು ವಂಚಿಸಿದ್ದ ಕಾಟನ್​​ಪೇಟೆ ಠಾಣೆ ಪಿಎಸ್​ಐ ಸಂತೋಷ್ ವಿರುದ್ಧ

ಹುಸ್ಕೂರು ಮದ್ದೂರಮ್ಮ ಜಾತ್ರೆ ತೇರು ಉರುಳಿ ಗಾಯಗೊಂಡಿದ್ದ ಯುವತಿ ಸಾವು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹುಸ್ಕೂರು ಮದ್ದೂರಮ್ಮ ಜಾತ್ರೆಯಲ್ಲಿ ಶನಿವಾರ ಕುರ್ಜುಗಳು (ತೇರು) ಉರುಳಿಬಿದ್ದಾಗ ಗಾಯಗೊಂಡಿದ್ದ ಯುವತಿ ಮೃತ ಪಟ್ಟಿದ್ದಾರೆ. ಕುರ್ಜು ಕೆಳಗೆ ಸಿಲುಕಿ28ರ ಯುವಕ ಲೋಹಿತ್‌ ಶನಿವಾರವೇ ಮೃತಪಟ್ಟಿದ್ದು, ಜ್ಯೋತಿ ಇಂದು ಅಸು ನೀಗಿದ್ದಾರೆ. ಗಂಭೀರವಾಗಿ ಗಾಯಗೊಂಡಿ ರುವ ಮತ್ತೊಬ್ಬ ಯುವಕ