Menu

2ನೇ ವಿಮಾನ ನಿಲ್ದಾಣ: ಏ.7-9ರ ನಡುವೆ ಕೇಂದ್ರ ತಂಡದಿಂದ 3 ಸ್ಥಳಗಳ ಪರಿಶೀಲನೆ: ಸಚಿವ ಎಂ ಬಿ ಪಾಟೀಲ್

ಬೆಂಗಳೂರು: ರಾಜಧಾನಿಯಲ್ಲಿ 2ನೇ ಅಂತಾರಾಷ್ಟ್ರೀಯ ಹಸಿರು ವಿಮಾನ ನಿಲ್ದಾಣಕ್ಕೆ ಮೂರು ಸ್ಥಳಗಳನ್ನು ಆಖೈರು ಮಾಡಲಾಗಿದೆ. ಈ ಜಾಗಗಳ ಪೂರ್ವಕಾರ್ಯ ಸಾಧ್ಯತಾ ಅಧ್ಯಯನಕ್ಕೆಂದು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (ಎಎಐ) ಬಹುಶಿಸ್ತೀಯ ತಂಡವು ಏ.7ರಿಂದ 9ರೊಳಗೆ ರಾಜ್ಯಕ್ಕೆ ಆಗಮಿಸಲಿದೆ. ಈ ಸಂಬಂಧ ಈಗಾಗಲೇ ಪ್ರಾಧಿಕಾರಕ್ಕೆ ಕೆಎಸ್ಐಐಡಿಸಿ ವತಿಯಿಂದ ₹1.21 ಕೋಟಿ ಶುಲ್ಕವನ್ನು ಪಾವತಿಸಲಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಶನಿವಾರ ಹೇಳಿದ್ದಾರೆ. ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾಧ್ಯಮ

ಕಿರುಕುಳ ನೀಡಿ ಹಣ ವಸೂಲಿ ಮಾಡುತ್ತಿದ್ದ ನಕಲಿ ಪೊಲೀಸ್‌ ಅರೆಸ್ಟ್‌

ಪೊಲೀಸ್ ಎಂದು ಹೇಳಿಕೊಂಡು ಬೆಂಗಳೂರಿನಲ್ಲಿ ಯುವಕ ಯುವತಿಯರಿಗೆ ಕಿರುಕುಳ ನೀಡುತ್ತಿದ್ದ ಆಟೊ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಆಸೀಫ್ ಬಂಧಿತ ಆರೋಪಿ. ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದ ಆಸೀಫ್ ಪೊಲೀಸ್ ಎಂದು ಹೇಳಿಕೊಂಡು ಬಂದು ಹಣ ವಸೂಲಿ ಮಾಡುತ್ತಿದ್ದ. ಪಾರ್ಕ್‌ನಲ್ಲಿರುವವರನ್ನು ಬೆದರಿಸಿ ಹಣ ನೀಡುವಂತೆ

ಸ್ನೇಹಿತೆಯ ಭೇಟಿಯಾಗಲು ಬುರ್ಖಾ ಧರಿಸಿ ಹಾಸ್ಟೆಲ್‌ಗೆ ಬಂದ ಯುವಕ

ಬೆಂಗಳೂರಿನ ಜ್ಞಾನಭಾರತಿ ಕಾಲೇಜು ಆವರಣದಲ್ಲಿ ಸ್ನೇಹಿತೆಯನ್ನು ಭೇಟಿಯಾಗಲು ಯುವಕನೊಬ್ಬ ಬುರ್ಖಾ ಧರಿಸಿ ಹುಡುಗಿಯರ ಹಾಸ್ಟೆಲ್‌ಗೆ ನುಗ್ಗಿರುವ ಘಟನೆ ನಡೆದಿದೆ. ಕಾಲೇಜಿನ ರಮಾಬಾಯಿ ಹಾಸ್ಟೆಲ್‌ಗೆ ರಾತ್ರಿ 7 ಗಂಟೆಗೆ ಯುವಕ ಬುರ್ಖಾ ಧರಿಸಿ ಪ್ರವೇಶಿಸಿದ್ದ. ಬುರ್ಖಾ ಧರಿಸಿದ ಯುವಕ ಮಾಲೂರು ಮೂಲದವನು ಎನ್ನಲಾಗಿದೆ.

ಬೆಂಗಳೂರಿನಲ್ಲಿ ಮಧ್ಯರಾತ್ರಿ 1ರವರೆಗೆ ಪಬ್ ತೆರೆಯಲು ಚರ್ಚೆ ನಡೆಸಿ ಕ್ರಮ: ಡಿಕೆ ಶಿವಕುಮಾರ್

ಬೆಂಗಳೂರು: ಅಂತಾರಾಷ್ಟ್ರೀಯ ನಗರವಾಗಿರುವ ಬೆಂಗಳೂರಿನಲ್ಲಿ ರಾತ್ರಿ 1 ಗಂಟೆವರೆಗೆ ಪಬ್ ತೆರೆಯುವ ಬಗ್ಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ. ಕೆ ಶಿವಕುಮಾರ್ ವಿಧಾನಪರಿಷತ್ ಗೆ ತಿಳಿಸಿದ್ದಾರೆ. ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಹೆಚ್. ಎಸ್ ಗೋಪಿನಾಥ್

ಕಾವೇರಿ ಆರತಿ ರಾಜಕೀಯ ಕಾರ್ಯಕ್ರಮವಲ್ಲ: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಬೇಸಿಗೆ ಸಮಯದಲ್ಲಿ ನೀರಿನ ಸಂರಕ್ಷಣೆ ಅಭಿಯಾನದ ಜತೆಗೆ ಸ್ಯಾಂಕಿ ಕೆರೆಯಲ್ಲಿ ಕಾವೇರಿ ಆರತಿ ಮಾಡಲು ಸರ್ಕಾರ ತೀರ್ಮಾನಿಸಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದ ಆವರಣದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಗುರುವಾರ ಈ ವಿಚಾರ ತಿಳಿಸಿದ ಅವರು, ಇದು ಸರ್ಕಾರದ ಕಾರ್ಯಕ್ರಮವೇ

ಹೆಸರು ಬದಲಾವಣೆಗೆ ಕೇಂದ್ರ ನಕಾರ: ಕಾನೂನು ನಮಗೂ ಗೊತ್ತು ಎಂದ ಡಿಸಿಎಂ

ರಾಮನಗರ ಜಿಲ್ಲೆ ಹೆಸರು ಬದಲಾವಣೆಯನ್ನು ಕೆಂದ್ರ ತಿರಸ್ಕರಿಸಿರುವ ಬಗ್ಗೆ ಕೇಳಿದಾಗ, “ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ರಾಜ್ಯದ ವಿಚಾರ. ನಮಗೂ ಕಾನೂನು ಗೊತ್ತಿದೆ. ಇದನ್ನು ಹೇಗೆ ಜಾರಿಗೆ ತರಬೇಕು ಎಂಬುದು ನಮಗೆ ಗೊತ್ತಿದೆ” ಎಂದು  ಡಿಸಿಎಂ ಡಿಕೆ ಶಿವಕುಮಾರ್‌  ಹೇಳಿದರು. ದೆಹಲಿಯಲ್ಲಿ

ಕಾವೇರಿ ನೀರಿಗೆ ಮೊಬೈಲ್ ಆ್ಯಪ್‌ : ಬೆಂಗಳೂರು ಟ್ಯಾಂಕರ್ ಮಾಫಿಯಾಗೆ ಬ್ರೇಕ್‌

ಬೆಂಗಳೂರಿನಲ್ಲಿ ಬೇಸಿಗೆ ನೀರಿನ ಸಮಸ್ಯೆ ಮತ್ತು ಟ್ಯಾಂಕರ್ ಮಾಫಿಯಾ ತಡೆಯಲು ಜಲಮಂಡಳಿ ಮೊಬೈಲ್ ಆ್ಯಪ್ ಆರಂಭಿಸುತ್ತಿದೆ. ಮಾರ್ಚ್ ಅಂತ್ಯದ ವೇಳೆಗೆ  ಡಿಕೆ ಶಿವಕುಮಾರ್ ಈ ಪ್ರಾಯೋಗಿಕ ಯೋಜನೆಗೆ ಚಾಲನೆ ನೀಡಲಿದ್ದಾರೆ. ಸಾರ್ವಜನಿಕರು ಈ ಆ್ಯಪ್ ಮೂಲಕ ಕಾವೇರಿ ನೀರಿನ ಟ್ಯಾಂಕರ್‌ಗಳನ್ನು ಬುಕ್

ಬೆಂಗಳೂರು ದಕ್ಷಿಣ ಹೆಸರು ಮರನಾಮಕರಣ ಪ್ರಸ್ತಾಪ ತಿರಸ್ಕರಿಸಿದ ಕೇಂದ್ರ

ರಾಮನಗರ ಜಿಲ್ಲೆಯಲ್ಲಿ ಬೆಂಗಳೂರು ದಕ್ಷಿಣ ಎಂದು ಮರು ನಾಮಕರಣ ಮಾಡುವ ರಾಜ್ಯ ಸರ್ಕಾರದ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಈ ಮೂಲಕ ಡಿಸಿಎಂ ಡಿಕೆ  ಶಿವಕುಮಾರ್ ಕನಸಿಗೆ ಕೇಂದ್ರ ತಣ್ಣೀರು ಎರಚಿದೆ. ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ

ಬೆಂಗಳೂರಿನಲ್ಲಿ ಕಾವೇರಿ ಆರತಿ ಪ್ರಶ್ನಿಸಿ ಹೈಕೋರ್ಟ್​ಗೆ ಮಧ್ಯಂತರ ಅರ್ಜಿ

ಬೆಂಗಳೂರು ನಗರದ ಸ್ಯಾಂಕಿ ಟ್ಯಾಂಕ್​ನ ಬಫರ್ ಝೋನ್​ನಲ್ಲಿ ರಾಜ್ಯ ಸರ್ಕಾರ ಮಾರ್ಚ್ 21ರಂದು ಹಮ್ಮಿಕೊಂಡಿರುವ ಕಾವೇರಿ ಆರತಿ ಕಾರ್ಯಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್​ಗೆ ಮಧ್ಯಂತರ ಅರ್ಜಿ ಸಲ್ಲಿಕೆಯಾಗಿದೆ. ಕಾವೇರಿ ಆರತಿ ಸಂಬಂಧ ಬೆಂಗಳೂರು ಜಲ ಮಂಡಳಿಯ ಅಧಿಕಾರಿಗಳು ಸಿದ್ದತೆಗಳನ್ನು ಮಾಡಿಕೊಳ್ಳುತ್ತಿರುವ ಸಂಬಂಧ ಮಾಧ್ಯಮಗಳಲ್ಲಿ

ಅತ್ತಿಬೆಲೆಯಲ್ಲಿ ವಿವಾಹೇತರ ಸಂಬಂಧ ಶಂಕೆಯಿಂದ ಪತ್ನಿಯ ಕೊಲೆ

ಆನೇಕಲ್‌ನ ಅತ್ತಿಬೆಲೆ ಠಾಣಾ ವ್ಯಾಪ್ತಿಯ ರಾಚಾಮಾನಹಳ್ಳಿಯಲ್ಲಿ ವಿವಾಹೇತರ ಸಂಬಂಧ ಹೊಂದಿರುವ ಶಂಕೆಯಿಂದ ಹಿಟ್ಟಿನ ದೊಣ್ಣೆಯಿಂದ ಹೊಡೆದು ಪತ್ನಿಯನ್ನು ಪತಿ ಕೊಲೆ ಮಾಡಿದ್ದಾನೆ. ಅನಿತಾ(27) ಕೊಲೆಯಾದ ಮಹಿಳೆ. ರಾಚಮಾನಹಳ್ಳಿಯ ವಾಸಿ ಬಾಬು(32) ಕೊಲೆ ಆರೋಪಿ. ಆರೋಪಿಗೆ ಇಬ್ಬರು ಪತ್ನಿಯರು, ನಾಲ್ಕು ಜನ ಮಕ್ಕಳಿದ್ದಾರೆ.