ಬೆಂಗಳೂರು
ಬೆಂಗಳೂರಿನ ಸಂಚಾರ ದಟ್ಟಣೆಗೆ ಟನಲ್ ರಸ್ತೆ, ಡಬಲ್ ಡೆಕ್ಕರ್, ಬಫರ್ ರೋಡ್, ಎಲಿವೇಟೆಡ್ ಕಾರಿಡಾರ್ ಪರಿಹಾರ!
ಬೆಂಗಳೂರು: ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆ ನಿವಾರಣೆಗಾಗಿ ರಾಜ್ಯ ಸರ್ಕಾರವು ಟನಲ್ ರಸ್ತೆ, ಡಬಲ್ ಡೆಕ್ಕರ್ ಮೇಲ್ಸೇತುವೆ, ಬಫರ್ ರೋಡ್, ಎಲಿವೇಟೆಡ್ ಕಾರಿಡಾರ್, ಬೆಂಗಳೂರು ಬಿಸಿನೆಸ್ ಕಾರಿಡಾರ್ ಸೇರಿದಂತೆ ಅನೇಕ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯರಾದ ಸುಧಾಮ್ ದಾಸ್ ಅವರು ಬೆಂಗಳೂರಿನ ಸಂಚಾರಿ ದಟ್ಟಣೆ ಸಮಸ್ಯೆ ನಿವಾರಣೆಗೆ ಕೈಗೊಂಡಿರುವ ಯೋಜನೆಗಳ ಬಗ್ಗೆ ಗುರುವಾರ
ರನ್ಯಾ ಮನೆ ಮೇಲೆ ಇಡಿ ದಾಳಿ, ಪತಿ ಮನೆ ಮೇಲೆ ಡಿಆರ್ ಐ ದಾಳಿ!
ಬೆಂಗಳೂರು: ಚಿನ್ನ ಕಳ್ಳಸಾಗಾಣೆ ಮಾಡುವಾಗ ಸಿಕ್ಕಿಬಿದ್ದ ನಟಿ ರನ್ಯಾ ರಾವ್ ಮನೆ ಮೇಲೆ ಗುರುವಾರ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ರನ್ಯಾ ರಾವ್ ಜಾಮೀನು ಅರ್ಜಿಯ ತೀರ್ಪು ನಾಳೆ ಪ್ರಕಟವಾಗಲಿದ್ದು, ಈಗಾಗಲೇ ಡಿಆರ್ ಐ ಅಲ್ಲದೇ ಸಿಬಿಐ
ಬೆಂಗಳೂರಿನಲ್ಲಿ ಬಾಸ್ಕೆಟ್ ಬಾಲ್ ಕೋಚ್ ಆತ್ಮಹತ್ಯೆ
ಬೆಂಗಳೂರು ಪೋತ್ಲಪ್ಪ ಗಾರ್ಡನ್‌ನ ಮನೆಯಲ್ಲಿ ಬಾಸ್ಕೆಟ್ ಬಾಲ್ ಕೋಚ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋನಿಯಾ (26) ಆತ್ಮಹತ್ಯೆ ಮಾಡಿಕೊಂಡ ಬಾಸ್ಕೆಟ್ ಬಾಲ್ ಕೋಚ್. ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನು ಎಂಬುದು ಇನ್ನೂ ತಿಳಿದು ಬಂದಿಲ್ಲ. ಪೊಲೀಸರು ಪ್ರಕರಣದ ತನಿಖೆ ಮುಂದುವರಿಸಿದ್ದಾರೆ. ಸಾವಿನ ಬಗ್ಗೆ
ಮಹದೇವಪುರದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ, ಆರು ಮಂದಿಗೆ ಗಾಯ
ಬೆಂಗಳೂರು ಬೈಯಪ್ಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಮಹದೇವಪುರದ ನಾಗಪ್ಪ ರೆಡ್ಡಿ ಬ್ಲಾಕ್ ನಲ್ಲಿ ಗುರುವಾರ ಬೆಳಗ್ಗೆ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡು ಮನೆಯಲ್ಲಿದ್ದ ಆರು ಮಂದಿ ಗಾಯಗೊಂಡಿದ್ದಾರೆ. ಸ್ಫೋಟದ ತೀವ್ರತೆಗೆ ಮನೆಯ ಗೋಡೆ ಛಿದ್ರಗೊಂಡು ವಸ್ತುಗಳೆಲ್ಲ ಚೆಲ್ಲಾಪಿಲ್ಲಿಯಾಗಿವೆ. ನೀರು ಕಾಯಿಸಲು ಸಿಲಿಂಡರ್
ಚಾಮರಾಜಪೇಟೆಯಲ್ಲಿ ವಿದ್ಯುತ್ ತಗುಲಿ ಮಹಿಳೆ ಸಾವು, ಸ್ಥಳೀಯರ ಪ್ರತಿಭಟನೆ
ಬೆಂಗಳೂರಿನ ಚಾಮರಾಜಪೇಟೆ ವ್ಯಾಪ್ತಿಯ ಆನಂದಪುರದಲ್ಲಿ ನೀರು ಹಿಡಿಯುವಾಗ ವಿದ್ಯುತ್ ಶಾಕ್ ಹೊಡೆದು ಮಹಿಳೆ ಮೃತಪಟ್ಟಿದ್ದಾರೆ. ಸೆಲ್ವಿ ಮೃತ ಮಹಿಳೆ. ಕೆ.ಆರ್. ಮಾರ್ಕೆಟ್ ರಸ್ತೆಯ ಈ ಪ್ರದೇಶದಲ್ಲಿ ಯಾವ ಮನೆಗೂ ನೀರಿನ ಸಂಪರ್ಕ ಇಲ್ಲ. ದೊಡ್ಡ ಪೈಪ್‌ನಲ್ಲಿ ಅಲ್ಲಲ್ಲಿ ಮೋಟಾರ್ ಸಂಪರ್ಕ ನೀಡಲಾಗಿದೆ.
ಕಾಮಗಾರಿಗಳಲ್ಲಿ ಭ್ರಷ್ಟಾಚಾರ: ಸಿಎಂಗೆ ವರದಿ ಸಲ್ಲಿಸಿದ ನಾಗಮೋಹನ್ ದಾಸ್ ಆಯೋಗ
ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ ಮಾಡಿದ ಆರೋಪಗಳು ಹಾಗೂ ನಾರಾಯಣಪುರ ಬಲದಂಡೆ ಸೀಳು ಕಾಲುವೆಗಳ ಕಾಮಗಾರಿಗಳಲ್ಲಿ ಭ್ರಷ್ಟಾಚಾರ ನಡೆದಿದೆ ಎನ್ನುವ ಆರೋಪಗಳ ಕುರಿತು ನಿವೃತ್ತ ನ್ಯಾ. ಹೆಚ್.ಎನ್ ನಾಗಮೋಹನ್ ದಾಸ್ ಆಯೋಗವು ನಡೆಸಿದ ತನಿಖೆಯ ವರದಿಯನ್ನು ಮುಖ್ಯಮಂತ್ರಿ
ವಿಧಾನ ಪರಿಷತ್ತಿನಲ್ಲೂ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024’ ಅಂಗೀಕಾರ
ಆಡಳಿತ ವೀಕೆಂದ್ರಿಕರಣ ದೃಷ್ಟಿಯಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಂಖ್ಯೆಯನ್ನು ಹೆಚ್ಚು ಮಾಡುವ ಉದ್ದೇಶದ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024’ಕ್ಕೆ ವಿಧಾನ ಪರಿಷತ್ತಿನಲ್ಲಿ ಅಂಗೀಕಾರ ದೊರೆತಿದೆ. ವಿಧಾನಸಭೆಯಲ್ಲಿ ಅಂಗೀಕೃತವಾದ ರೂಪದಲ್ಲಿರುವ ʼಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024ʼ ಅನ್ನು ಬೆಂಗಳೂರು
ಬೆಂಗಳೂರಲ್ಲಿ ಆಟೊ ಪ್ರಯಾಣ ದರ ಹೆಚ್ಚಳ?
ಬೆಂಗಳೂರಿನಲ್ಲಿ ಇಂದು ಆಟೋ ದರ ಪರಿಷ್ಕರಣೆಯ ಬಗ್ಗೆ ಸಭೆ ನಡೆಯುತ್ತಿದ್ದು, ದರ ಪರಿಷ್ಕರಣೆ ಬಹುತೇಕ ಫೈನಲ್ ಆಗುವ ಸಾಧ್ಯತೆ ಇದೆ. ಸಾರಿಗೆ ಇಲಾಖೆ ಯು ಆಟೋ ಚಾಲಕ ಸಂಘಟನೆಯ ಈ ಸಭೆ ಕರೆದಿದೆ. ಇನ್ ಫೆಂಟ್ರಿ ರಸ್ತೆಯಲ್ಲಿರುವ ಸಂಚಾರ ಪೂರ್ವ ವಿಭಾಗದ
ಬೆಂಗಳೂರಿನಲ್ಲಿ ಬಿಜೆಪಿ ನಾಯಕಿ ಆತ್ಮಹತ್ಯೆ
ಬಿಜೆಪಿ ಸ್ಥಳೀಯ ನಾಯಕಿ ಮಂಜುಳಾ ಬೆಂಗಳೂರಿನ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿಜೆಪಿ ಮಂಡಲ ಕಾರ್ಯದರ್ಶಿ ಆಗಿದ್ದ ಮಂಜುಳಾ ಮತ್ತಿಕೆರೆಯ ತಮ್ಮ ಮನೆಯಲ್ಲಿ ಮಂಗಳವಾರ ಮಧ್ಯಾಹ್ನ ೨.೩೦ರ ಸುಮಾರಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಡಲ ಕಾರ್ಯದರ್ಶಿ ಆಗಿದ್ದ ಮಂಜುಳಾ ಅವರ
ಬೆಂಗಳೂರಿಗೆ ಈಗೊಬ್ಬ ಘಜ್ನಿ, ಘೋರಿ ವಕ್ಕರಿಸಿದ್ದಾನೆ ಅಂದಿದ್ದೇಕೆ ಹೆಚ್‌ಡಿಕೆ
ಹೋಳು ಮಾಡವುದು, ಒಡೆದಾಳುವುದರಲ್ಲಿ ಕಾಂಗ್ರೆಸ್ಸಿಗೆ ಕಾಂಗ್ರೆಸ್ಸೇ ಸಾಟಿ, 75 ವರ್ಷದಿಂದ ಇದನ್ನೇ ಮಾಡಿದೆ, ಮುಂದುವರಿಸಿದೆ. ಕಾಂಗ್ರೆಸ್ ನೀತಿಯೇ ಒಡೆದಾಳುವುದು ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಅಂದು ಅಖಂಡ ಭಾರತವನ್ನು ಹೋಳು ಮಾಡಿತು, ಇಂದು ಬೆಂಗಳೂರು ಮಹಾನಗರವನ್ನು




