ಬೆಂಗಳೂರು
ಮುಧೋಳದಲ್ಲಿ ಬಸ್‌ಗೆ ಬೈಕ್ ಡಿಕ್ಕಿ: ಯುವಕ ಸಜೀವ ದಹನ
ಮುಧೋಳ ತಾಲೂಕಿನ ಸೊರಗಾಂವ್ ಗ್ರಾಮದ ಬಳಿ ಬಸ್‌ಗೆ ಬೈಕ್ ಡಿಕ್ಕಿಯಾಗಿದ್ದು, ಬೈಕ್‌ಗೆ ಬೆಂಕಿ ತಗುಲಿ ಯುವಕ ಜೀವಂತವಾಗಿ ದಹನಗೊಂಡಿರುವ ಭೀಕರ ಘಟನೆ ನಡೆದಿದೆ. ಮುಧೋಳ ಪಟ್ಟಣದ ಜನತಾ ಪ್ಲಾಟ್ ನಿವಾಸಿ ನವೀನ್ ಹನುಮಂತ ಗೋರ್ಕ್ ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಬಾದಾಮಿಯಿಂದ ಇಚಲಕರಂಜಿ ಕಡೆಗೆ ತೆರಳುತ್ತಿದ್ದ ಬಸ್‌ಗೆ ಬೈಕ್ ಡಿಕ್ಕಿಯಾಗಿದೆ. ತಕ್ಷಣವೇ ಬೆಂಕಿ ಹೊತ್ತಿಕೊಂಡಿದ್ದು, ಬೈಕ್ ಸವಾರ ನವೀನ್ ಬೆಂಕಿಯಲ್ಲಿ ಸಿಲುಕಿ ಸ್ಥಳದಲ್ಲೇ ಸುಟ್ಟು ಕರಕಲಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಸ್ಥಳದಲ್ಲಿ
ಬೆಂಗಳೂರಿನಲ್ಲಿ ಉದ್ಯಮಿಗೆ 2.66 ಕೋಟಿ ವಂಚಿಸಿದ ಬ್ಯಾಂಕ್ ಮ್ಯಾನೇಜರ್ ಅರೆಸ್ಟ್
ದುರಾಸೆಯ ಬೆನ್ನು ಹತ್ತಿ ಉದ್ಯಮಿಯೊಬ್ಬರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಬ್ಯಾಂಕ್ ಮ್ಯಾನೇಜರ್ ಸೇರಿ ಮೂವರು ಆರೋಪಿಗಳನ್ನು ಬೆಂಗಳೂರಿನ ಬಾಗಲಗುಂಟೆ ಪೊಲೀಸರು ಬಂಧಿಸಿದ್ದಾರೆ. ಬಾಗಲಗುಂಟೆ ಶಾಖೆಯ ಆ್ಯಕ್ಸಿಸ್ ಬ್ಯಾಂಕ್ ಮ್ಯಾನೇಜರ್ ವಿನೋದ್ ಕುಮಾರ್, ಅರುಣ್ ಕುಮಾರ್ ಮತ್ತು ಕಿರಣ್ ಬಂಧಿತ ಆರೋಪಿಗಳು. 30
ಬೆಂಗಳೂರಿನಲ್ಲಿ ದಿನಕ್ಕೆ 1,775 ಟನ್ ಸಂಸ್ಕರಣೆಯಾಗದ ಕಸ ರಾಜಕಾಲುವೆಗೆ: ಆರ್ ಅಶೋಕ
ಬೆಂಗಳೂರಿನಲ್ಲಿ ಪ್ರತಿದಿನ 1,775 ಟನ್ ಕಸ ಸಂಸ್ಕರಣೆಯಾಗದೇ ರಸ್ತೆ, ರಾಜಕಾಲುವೆ ಸೇರುತ್ತಿದೆ. ನಿಮ್ಮ ಮುಖ್ಯಮಂತ್ರಿ @DKShivakumar ಅವರ “ಬ್ರ್ಯಾಂಡ್ ಬೆಂಗಳೂರು” ಅಂದರೆ ಸಾರ್ವಜನಿಕರು ಕಲುಷಿತ ನೀರು ಕುಡಿದು ಸಾಯಬೇಕಾ, ಕಸದ ರಾಶಿಯಲ್ಲಿ ನರಳಬೇಕಾ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಪ್ರಶ್ನಿಸಿದ್ದಾರೆ.
ಬೆಂಗಳೂರಿನಲ್ಲಿ ಶವ ಸಂಸ್ಕಾರ ಶುಲ್ಕ 250 ರೂ. ನಿಗದಿ ಸೇರಿ ಮಾರ್ಗಸೂಚಿ ಪ್ರಕಟ
ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಐದು ವಿದ್ಯುತ್ ಚಿತಾಗಾರಗಳಲ್ಲಿ ಶವಸಂಸ್ಕಾರ ನಡೆಸುವ ಸಂಬಂಧ ಪಾಲಿಕೆ ಸಾರ್ವಜನಿಕರಿಗೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಶವಸಂಸ್ಕಾರ ನಡೆಸುವವರು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕೃತ ಜಾಲತಾಣ www.bbmp.gov.in ನಲ್ಲಿ ಮಾತ್ರ ನೋಂದಾಯಿಸಿಕೊಳ್ಳಬೇಕು, ಪ್ರತಿ ಶವಸಂಸ್ಕಾರಕ್ಕೆ 250 ರೂ..ಶುಲ್ಕ
ಮಹಿಳೆಯ ನಗ್ನ ವೀಡಿಯೊ, ಬ್ಲ್ಯಾಕ್‌ಮೇಲ್: ಪ್ರಜ್ವಲ್ ರೇವಣ್ಣ ಕೇಸ್‌ನಲ್ಲಿ ಎಸ್‌ಐಟಿಗೆ ಹೈಕೋರ್ಟ್ ನೋಟಿಸ್
ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ವೀಡಿಯೊ ಚಿತ್ರೀಕರಿಸಿಕೊಂಡ ಆರೋಪ ಪ್ರಕರಣದಲ್ಲಿ ಜಾಮೀನು ಕೋರಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಅರ್ಜಿ ಸಂಬಂಧ ವಿಶೇಷ ತನಿಖಾ ತಂಡಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಜಾಮೀನು ಅರ್ಜಿ ವಿಚಾರಣೆ ವೇಳೆ ಪ್ರಜ್ವಲ್ ಪರ ವಕೀಲರು, ಈ ಪ್ರಕರಣದಲ್ಲಿ
ಜಾತಿ ನಿಂದನೆ ಸುಳ್ಳು ಕೇಸ್ ದಾಖಲಿಸಿ ಹಣಕ್ಕೆ ಕಿರುಕುಳ: ವ್ಯಕ್ತಿ ಆತ್ಮಹತ್ಯೆ
ಸುಳ್ಳು ಜಾತಿನಿಂದನೆ ಪ್ರಕರಣ ದಾಖಲಿಸಿ ಕಿರುಕುಳ ನೀಡುತ್ತಿರುವುದಾಗಿ ಆರೋಪಿಸಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕಾಡುಗೋಡಿ ಚನ್ನಸಂದ್ರದಲ್ಲಿ ನಡೆದಿದೆ. ಪಾಪಣ್ಣ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ವೀಡಿಯೊ ಮಾಡಿಟ್ಟು ನಯನಾ ಎಂಬಾಕೆ ವಿರುದ್ಧ ಹಣಕ್ಕೆ ಬೇಡಿಕೆಯಿಟ್ಟ ಆರೋಪ ಮಾಡಿದ್ದಾರೆ. ನಯನಾ ಎಂಬ
ಬೆಂಗಳೂರಿನ ಹಲವೆಡೆ ಇಂದು ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯ
ಬೆಂಗಳೂರಿನ ಹಲವೆಡೆ ಇಂದು (ಶನಿವಾರ) ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯ ಇರಲಿದೆ. KPTCL ಮತ್ತು BESCOM ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಿನ್ನೆಲೆ ಸೆಂಟ್ರಲ್, ಪೂರ್ವ, ಈಶಾನ್ಯ ಮತ್ತು ಉತ್ತರ ಬೆಂಗಳೂರಿನ ಪ್ರಮುಖ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು
50 ಲಕ್ಷ ರೂ. ಕೊಡದಿದ್ದರೆ ಏಡ್ಸ್ ಇದೆಯೆಂದು ಪ್ರಚಾರ: ವಿಚ್ಛೇದಿತ ಪತ್ನಿ ವಿರುದ್ಧ ಉದ್ಯಮಿ ದೂರು
ಐವತ್ತು ಲಕ್ಷ ರೂ. ಕೊಡದಿದ್ದರೆ ಎಚ್‌ಐವಿ/ಏಡ್ಸ್ ಸೋಂಕು ಇದೆ ಎಂಬ ಸುಳ್ಳು ಸುದ್ದಿ ಹಬ್ಬಿಸುವುದಾಗಿ ಬೆದರಿಸಿದ ವಿಚ್ಛೇದಿತ ಪತ್ನಿ ವಿರುದ್ಧ ಬೆಂಗಳೂರಿನ ಉದ್ಯಮಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ಬೆಂಗಳೂರಿನ ಉದ್ಯಮಿ ನೀಡಿರುವ ದೂರಿನ ಆಧಾರದಲ್ಲಿ ಮಾರತ್ತಹಳ್ಳಿ ಪೊಲೀಸರು 37 ವರ್ಷದ ಸ್ವಾತಿ
ಬ್ರಾಂಡ್ ಬೆಂಗಳೂರು ಅಲ್ಲ, ಇದು ‘ಸ್ಕ್ಯಾಮ್ ಬೆಂಗಳೂರು’: ಆರ್ ಅಶೋಕ
ನಮ್ಮ ಸಿಲಿಕಾನ್ ಸಿಟಿಯಲ್ಲಿ ಕೊನೆಗೆ ಕಸದ ಆಟೋಗಳ ಲೆಕ್ಕಾಚಾರದಲ್ಲೂ ಕೋಟ್ಯಂತರ ರೂಪಾಯಿ ಲೂಟಿ ಹೊಡೆಯುತ್ತಿರುವ ಮಹಾ ಹಗರಣ ಬಯಲಾಗಿದೆ. ಬಿಬಿಎಂಪಿ (BBMP) ಉತ್ತರ ವಲಯದ ಕಸ ಸಂಗ್ರಹಣೆಯಲ್ಲಿ ನಡೆದಿರುವ ಈ ತಂತ್ರಜ್ಞಾನ ಆಧಾರಿತ ದರೋಡೆ ಕಾಂಗ್ರೆಸ್ ಸರ್ಕಾರದ ಆಡಳಿತ ಯಾವ ಮಟ್ಟಕ್ಕೆ
ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಉದ್ಯಮಿಗಳ ಬೆದರಿಸಿ 20 ಲಕ್ಷ ರೂ. ಕಿತ್ತುಕೊಂಡ ಸಿಐಡಿ ಇನ್ಸ್‌ಪೆಕ್ಟರ್
ಸಿಐಡಿ ವಿಭಾಗದ ಇನ್ಸ್‌ಪೆಕ್ಟರ್ ತಂಡ ಕಟ್ಟಿಕೊಂಡು ಪೊಲೀಸ್ ಜೀಪ್‌ನಲ್ಲಿ ಬೆಂಗಳೂರಿನ ಮಡಿವಾಳದ ಖಾಸಗಿ ಹೋಟೆಲ್‌ನಲ್ಲಿ ತಂಗಿದ್ದ ಕೇರಳದ ಉದ್ಯಮಿಗಳನ್ನು ಬೆದರಿಸಿ 20 ಲಕ್ಷ ರೂಪಾಯಿ ದರೋಡೆ ಮಾಡಿದ್ದಾರೆ. ಸಿಐಡಿ ಇನ್ಸ್‌ಪೆಕ್ಟರ್ ಮಹೇಶ್ ಕನಕಗಿರಿ ದರೋಡೆಯ ಸಂಚು ರೂಪಿಸಿದ್ದು, ಪೊಲೀಸರ ತನಿಖೆ ತೀವ್ರಗೊಳ್ಳುತ್ತಿದ್ದಂತೆಯೇ




