ಬೆಂಗಳೂರು
ಬಿಜೆಪಿ ಮುಖ್ಯಮಂತ್ರಿಗಳು ಸಿಟಿ ರೌಂಡ್ ಮಾಡಿದ್ದು ಫೋಟೋಶೂಟಿಗಾ: ಡಿಕೆ ಶಿವಕುಮಾರ್ ತಿರುಗೇಟು
ಬೆಂಗಳೂರು: ಈ ಹಿಂದೆ ಬಿಜೆಪಿಯ ಮುಖ್ಯಮಂತ್ರಿಗಳು ಬೆಂಗಳೂರು ಪ್ರದರ್ಶನ ಹಾಕಿದ್ದು, ಫೋಟೋಶೂಟ್ ಮಾಡಲಿಕ್ಕಾ? ಆಗ ಅಶೋಕ್ ಅವರ ಕಾರಿನಲ್ಲಿ ಕೂತು ಹೋಗುತ್ತಿದ್ದರಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. ನಿಮ್ಮ ಬೆಂಗಳೂರು ಸಿಟಿ ರೌಂಡ್ ಅನ್ನು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಫೋಟೋ ಶೂಟ್ ಎಂದು ಟೀಕಿಸಿರುವ ಬಗ್ಗೆ ಕೇಳಿದಾಗ, “ಬಿಜೆಪಿವರು
ಫೋಟೋ ಶೂಟಿಂಗ್ ಮಾಡಿದರೆ ಸಮಸ್ಯೆಗಳು ಪರಿಹಾರ ಆಗಲ್ಲ: ಡಿಸಿಎಂಗೆ ಆರ್. ಅಶೋಕ್ ಟಾಂಗ್
ವೈಟ್ ಟಾಪಿಂಗ್ ಕಾಮಗಾರಿ ಹೆಸರಿನಲ್ಲಿ ಫೋಟೋ ಶೂಟಿಂಗ್ ಮಾಡಿದರೆ ಬೆಂಗಳೂರಿನ ಸಮಸ್ಯೆಗಳು ಪರಿಹಾರ ಆಗುತ್ತಾ ಡಿಸಿಎಂ ಡಿ.ಕೆ. ಶಿವಕುಮಾರ್ ಅವರೇ ಎಂದು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪ್ರತಿಪಕ್ಷ ನಾಯಕ ಆರ್. ಅಶೋಕ್ ಕಾಲೆಳೆದಿದ್ದಾರೆ. ಬೆಂಗಳೂರು ಅಭಿವೃದ್ಧಿ ಸಚಿವರಾಗಿ ನಿಮಗೆ ಬ್ರ್ಯಾಂಡ್ ಬೆಂಗಳೂರಿನ
ಅಂತಾರಾಷ್ಟ್ರೀಯ ಗುಣಮಟ್ಟದ ಶಾಶ್ವತ ರಸ್ತೆಗಾಗಿ ವೈಟ್ ಟ್ಯಾಪಿಂಗ್: ಡಿಸಿಎಂ
ಬ್ರ್ಯಾಂಡ್ ಬೆಂಗಳೂರು ಸುಗಮ ಸಂಚಾರ ಯೋಜನೆ ಅಡಿ ನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲು ವೈಟ್ ಟ್ಯಾಪಿಂಗ್ ಮಾಡಲಾಗುತ್ತಿದೆ. 30 ವರ್ಷ ಬಾಳಿಕೆ ಬರುವ ಶಾಶ್ವತ ರಸ್ತೆ ನಿರ್ಮಿಸುವ ಈ ಯೋಜನೆಗೆ ₹ 1700 ಕೋಟಿ ಹಣ ವೆಚ್ಚ ಮಾಡಲಾಗುತ್ತಿದೆ ಎಂದು
ಯಾವುದೇ ಕ್ಷಣದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ, ಸಿದ್ಧರಾಗಿ: ಡಿಕೆ ಶಿವಕುಮಾರ್
ಯಾವುದೇ ಕ್ಷಣದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಬಹುದು. ಹೀಗಾಗಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಸಜ್ಜಾಗಬೇಕು. ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ವಿಚಾರವಾಗಿ ನ್ಯಾಯಾಲಯದಿಂದ ಸ ದ್ಯದಲ್ಲೇ ಸೂಚನೆ ಬರುವ ಸಾಧ್ಯತೆ ಇದೆ. ಬೆಂಗಳೂರು ನಗರ ಪಾಲಿಕೆ ಚುನಾವಣೆ ಯನ್ನು ನಡೆಸಬೇಕಾಗಿದ್ದು
ಮೆಟ್ರೊ ದರ ಏರಿಕೆಗೆ ರಾಜ್ಯ ಸರ್ಕಾರವೇ ಶಿಫಾರಸು ಮಾಡಿದೆ: ಬೊಮ್ಮಾಯಿ
ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿರುವುದರಿಂದ ಎಲ್ಲದರ ಏರಿಕೆ ಮಾಡುತ್ತಿದೆ. ಮೆಟ್ರೊ ದರ ಏರಿಕೆಗೆ ರಾಜ್ಯ ಸರ್ಕಾರವೇ ಶಿಫಾರಸು ಮಾಡಿದೆ. ಮುಖ್ಯಮಂತ್ರಿಗಳು ದರ ಏರಿಕೆ ವಿಚಾರವಾಗಿ ನಿರ್ದೇಶನ ಕೊಟ್ಟಿರುವುದೇ ಅದಕ್ಕೆ ಸಾಕ್ಷಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ
ಕುಮಾರಸ್ವಾಮಿಗೆ ಅಭಿವೃದ್ಧಿಗಿಂತ ದ್ವೇಷ ರಾಜಕಾರಣವೇ ಹೆಚ್ಚು: ಡಿಕೆ ಶಿವಕುಮಾರ್ ಕಿಡಿ
ಬೆಂಗಳೂರು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಗೆ ಅಭಿವೃದ್ಧಿಗಿಂತ ದ್ವೇಷ ರಾಜಕಾರಣವೇ ಹೆಚ್ಚು ಎಂದು ಡಿಸಿಎಂ ಡಿಕೆ ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕನಕಪುರದಲ್ಲಿ ಶನಿವಾರ ಕಾಂಗ್ರೆಸ್ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆಗೆ ಆಯ್ಕೆಯಾದ ಒಂದೇ ದಿನದಲ್ಲಿ ಮೋದಿಯಿಂದ ಮೇಕೆದಾಟು ಯೋಜನೆಗೆ
ಬೆಂಗಳೂರಿನಲ್ಲಿ ಮೊಬೈಕ್ ತಯಾರಿಕಾ ಘಟಕ ಆರಂಭ: ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್
ಬೆಂಗಳೂರಿನಲ್ಲಿ 40ರಿಂದ 50 ಸಾವಿರ ಜನರಿಗೆ ಉದ್ಯೋಗ ಕೊಡುವ ಮೊಬೈಲ್ ತಯಾರಿಕಾ ಘಟಕ ಆರಂಭವಾಗಲಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ ಬಾರಿ ಬೆಂಗಳೂರಿಗೆ ಬಂದಾಗ ಮೊಬೈಲ್
ಯಾರು ಏನೇ ಮಾಡಿದರೂ ಇದು ಬೆಂಗಳೂರು ದಕ್ಷಿಣ ಜಿಲ್ಲೆ ಮಾಡ್ತೀವಿ: ಡಿಕೆ ಶಿವಕುಮಾರ್
ಬೆಂಗಳೂರು: ಈ ಪ್ರದೇಶ ಬೆಂಗಳೂರಿನ ಭಾಗ. ಈ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರದ ಬಳಿ ಕುಮಾರಸ್ವಾಮಿ ತಕರಾರು ಸಲ್ಲಿಸಿದ್ದಾರೆ. ಯಾರು ಏನೇ ಮಾಡಿದರೂ ಇದನ್ನು ಬೆಂಗಳೂರು ದಕ್ಷಿಣ ಎಂದು ಮಾಡುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಡಿಸಿಎಂ
ಬಿಬಿಎಂಪಿ ವ್ಯಾಪ್ತಿಯಲ್ಲಿ 1.84 ಲಕ್ಷ ಬೀದಿ ನಾಯಿಗಳಿಗೆ “ಸಂಯುಕ್ತ ಲಸಿಕೆ” ಹಾಕುವ ಗುರಿ: ತುಷಾರ್ ಗಿರಿ ನಾಥ್
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ 1.84 ಲಕ್ಷ ಬೀದಿ ನಾಯಿಗಳಿಗೆ “ಸಂಯುಕ್ತ ಲಸಿಕೆ” ಹಾಕುವ ಗುರಿ ಹೊಂದಲಾಗಿದೆ ಎಂದು ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ತಿಳಿಸಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಸಮುದಾಯ ನಾಯಿಗಳಿಗೆ “ಸಂಯುಕ್ತ ಲಸಿಕೆ”(Combined Vaccine) ಅಳವಡಿಸುವ ಕಾರ್ಯಕ್ರಮಕ್ಕೆ ಪಾಲಿಕೆ ಕೇಂದ್ರ
ವಿಶ್ವವಿದ್ಯಾಲಯ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಂಪುಟ ಉಪ ಸಮಿತಿ ತೀರ್ಮಾನ: ಡಿಕೆ ಶಿವಕುಮಾರ್
ಬೆಂಗಳೂರು: ರಾಜ್ಯದ ವಿಶ್ವವಿದ್ಯಾನಿಲಯಗಳ ಕಾರ್ಯವೈಖರಿ ಹಾಗೂ ಆರ್ಥಿಕ ಪರಿಸ್ಥಿತಿಗಳ ಅಧ್ಯಯನಕ್ಕೆ ಸಂಬಂಧಿಸಿದಂತೆ ರಚಿಸಲಾಗಿರುವ ಸಚಿವ ಸಂಪುಟ ಉಪ ಸಮಿತಿಯು ರಾಜ್ಯ, ವಿಶ್ವವಿದ್ಯಾಲಯ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೀರ್ಮಾನ ಮಾಡಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ




